ದಾನದಿಂದ ಸುಖ ಪ್ರಾಪ್ತಿ: ಸತೀಶ್‌ ಕಿಣಿ ಬೆಳ್ವೆ

Team Udayavani, Sep 12, 2017, 7:55 AM IST

1109side4-Helth-Camp.jpg

ಸಿದ್ದಾಪುರ: ಸಮಾಜದಿಂದ ಸಾಕಷ್ಟು ಪಡೆದಿದ್ದೇವೆ. ಸಮಾಜದಿಂದ ಪಡೆದುದರಲ್ಲಿ ಸ್ವಲ್ಪವಾದರೂ ಸಮಾಜಕ್ಕೆ ಕೊಡಬೇಕು. ಕೊಡುವುದರಲ್ಲಿ ಇರುವ ಸುಖ ಪಡೆಯುವುದರಲ್ಲಿ ಇಲ್ಲ ಎಂದು ಎಂದು ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌ ಅಧ್ಯಕ್ಷ ಬಿ. ಸತೀಶ್‌ ಕಿಣಿ ಬೆಳ್ವೆ ಅವರು ಹೇಳಿದರು.

ಅವರು ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌, ಲಯನ್ಸ್‌ ಕ್ಲಬ್‌ ಸಂತೆಕಟ್ಟೆ, ಕಸ್ತೂರ್ಬಾ ಹಾಸ್ಪಿಟಲ್‌ ಮಣಿಪಾಲ ಇವರ ಜಂಟಿ ಆಶ್ರಯದಲ್ಲಿ ಫೌಂಡೇಶನ್‌ ಸಭಾಂಗಣದಲ್ಲಿ  ನಡೆದ ಬೃಹತ್‌ ಉಚಿತ ಆರೋಗ್ಯ ತಪಾಸಣೆ ಶಿಬಿರದಲ್ಲಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ಸಂತೆಕಟ್ಟೆ ಲಯನ್ಸ್‌ ಕ್ಲಬ್‌ನ ಅಧ್ಯಕ್ಷ ಜೀಸನ್‌ ಡಯಾಸ್‌ ಬೃಹತ್‌ ಉಚಿತ ಆರೋಗ್ಯ ತಪಾಸಣಾ ಶಿಬಿರವನ್ನು ಉದ್ಘಾಟಿಸಿ ಮಾತನಾಡಿ, ಸಂಘ- ಸಂಸ್ಥೆಗಳು ಹಮ್ಮಿಕೊಳ್ಳು ವ ವೈದ್ಯಕೀಯ ಚಿಕಿತ್ಸೆಯ ಉಚಿತ ಸೇವೆಗಳು ಗ್ರಾಮೀಣ ಭಾಗದ ಜನತೆಗೆ ಪ್ರಯೋಜನವಾಗಲಿದೆ. ಸಂಸ್ಥೆಗಳ ಉತ್ತಮ ಸೇವೆಯು, ಗೌರವವನ್ನು ಹೆಚ್ಚಿಸುವುದರೊಂದಿಗೆ ಸಮಾಜದ ಅಭಿವೃದ್ಧಿಗೆ ಸಹಕಾರಿಯಾಗಲಿವೆ ಎಂದರು.

ಬೆಳ್ವೆ ಸಂದೇಶ್‌ ಕಿಣಿ ಮೆಮೋರಿಯಲ್‌ ಚಾರಿಟೆಬಲ್‌ ಫೌಂಡೇಶನ್‌ ಟ್ರಸ್ಟಿ ಬಿ. ಉಮೇಶ್‌ ಕಿಣಿ ಬೆಳ್ವೆ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದರು.

ಮುಖ್ಯ ಅತಿಥಿಗಳಾಗಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್‌ ಕಣ್ಣಿನ ತಜ್ಞ ಡಾ| ಕಿರಣ್‌, ಸಮುದಾಯ ಆರೋಗ್ಯ ವಿಭಾಗದ ಡಾ| ಅರ್ಪಣಾ, ಮಧುಮೇಹ ವಿಭಾಗದ ಡಾ| ಶುಭಾ ಜಿ. ಮಯ್ಯ, ಡಾ| ಅನ್ನಾ, ಸಂತೆಕಟ್ಟೆ ಲಯನ್ಸ್‌ ಕ್ಲಬ್‌ ಪ್ರಾಂತೀಯ ಅಧ್ಯಕ್ಷ ಅಶೋಕ ಕುಮಾರ್‌ ಶೆಟ್ಟಿ, ಸುದರ್ಶನ ನಾಯಕ್‌, ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರದ ಆರೋಗ್ಯ ಸಹಾಯಕ ಹರಿಶ್ಚಂದ್ರ ಆಚಾರ್ಯ, ಆವರ್ಸೆ ಪ್ರಾಥಮಿಕ ಆರೋಗ್ಯ ಕೇಂದ್ರದ ಉಮೇಶ್‌ ಶೆಟ್ಟಿ, ಶಿಬಿರದ ಸಂಯೋಜಕ ನೀತಿನ್‌, ನಿರ್ದೇಶಕರಾದ ಬಿ. ಗೋಪಾಲಕೃಷ್ಣ ಕಿಣಿ, ಬಿ. ಹರೀಶ ಕಿಣಿ, ಬಿ. ಗೋಕುಲ್‌ ಕಿಣಿ ಮತ್ತಿತತರು ಉಪಸ್ಥಿತರಿದ್ದರು.

ಶಿಬಿರದಲ್ಲಿ ಮಣಿಪಾಲ ಕಸ್ತೂರ್ಬಾ ಹಾಸ್ಪಿಟಲ್‌ನ ನುರಿತ ವೈದ್ಯರಿಂದ ಕಣ್ಣಿನ ತಪಾಸಣೆ, ಮಧುಮೇಹ, ಆಹಾರ ಮತ್ತು ಪತ್ಯೆ, ಮಹಿಳೆಯರಿಗೆ ಆರೋಗ್ಯ ತಪಾಸಣೆ ಮತ್ತು ವೈದ್ಯಕೀಯ ಸಲಹೆಗಳನ್ನು ನೀಡಲಾಯಿತು. ಸುಮಾರು 400ಕ್ಕೂ ಹೆಚ್ಚು ಜನರು ಶಿಬಿರದಿಂದ ಪ್ರಯೋಜನ ಪಡೆದರು. ಕಣ್ಣಿನ ತಪಾಸಣೆಯಲ್ಲಿ ಸುಮಾರು 250ಕ್ಕೂ ಹೆಚ್ಚು ಜನರು ಚಿಕಿತ್ಸೆ ಪಡೆದರು. ಇದರಲ್ಲಿ 110 ಜನರಿಗೆ ಕನ್ನಡಕದ ಆವಶ್ಯಕತೆ ಇದ್ದು, ಫೌಂಡೇಶನ್‌ ಉಚಿತವಾಗಿ ಕನ್ನಡಕವನ್ನು ನೀಡುವ ಭರವಸೆ ನೀಡಿದರು.

ಬಿ. ಗೋಕುಲ್‌ ಕಿಣಿ ಸ್ವಾಗತಿಸಿ, ಮಂಜುನಾಥ ಹಿಲಿಯಾಣ ಕಾರ್ಯಕ್ರಮ ನಿರೂಪಿಸಿದರು. ಬಿ. ಹರೀಶ ಕಿಣಿ ವಂದಿಸಿದರು.

ಟಾಪ್ ನ್ಯೂಸ್

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

arrested

Chamarajanagar: ಅಪ್ರಾಪ್ತೆಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದವನಿಗೆ 20 ವರ್ಷ ಜೈಲು

1-qewqeqwe

Ambedkar ಬರೆದ ಸಂವಿಧಾನ ಬದಲಿಸಲು ಅಷ್ಟು ಸುಲಭವಾಗಿ ಬಿಡುತ್ತೇವಾ: ಪ್ರಕಾಶ್ ರಾಜ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

PM ಮೋದಿ ಮಾತು ನಂಬಿ ಮತ ಹಾಕಬೇಡಿ: ಸಿಎಂ ಸಿದ್ದರಾಮಯ್ಯ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

Neha Case: ಬೇಜವಾಬ್ದಾರಿ ಹೇಳಿಕೆಗಳು ತನಿಖೆ ದಾರಿ ತಪ್ಪಿಸುತ್ತವೆ: ಜ್ಯೋತಿ ಪ್ರಕಾಶ್ ಮಿರ್ಜಿ

ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

Kerala ವಯನಾಡಲ್ಲಿ ರಾಹುಲ್‌ ಅಡಗಿ ಕುಳಿತಿದ್ದಾರೆ: ಬಿ.ವೈ. ವಿಜಯೇಂದ್ರ

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

ಸಂಸದ ಶ್ರೀನಿವಾಸ್‌ ಪ್ರಸಾದ್‌ ಆರೋಗ್ಯ ಗಂಭೀರ; ಆಸ್ಪತ್ರೆಗೆ ದಾಖಲು

Modi (2)

Belgavi; ಪ್ರಧಾನಿ ಮೋದಿ ವಾಸ್ತವ್ಯ: ಸಂಭ್ರಮದ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.