ಜುಲೈ ಅಂತ್ಯದೊಳಗೆ ಗ್ರಾಪಂ ಕೆಡಿಪಿ ಸಭೆ

Team Udayavani, Jul 17, 2019, 5:56 AM IST

kdp-sabhe

ಉಡುಪಿ: ಗ್ರಾಮ ಪಂಚಾಯತ್‌ಗಳಲ್ಲಿಯೂ ಕೆಡಿಪಿ ಸಭೆಗಳನ್ನು ನಡೆಸುವಂತೆ ಸರಕಾರದ ಸೂಚನೆ ಇದ್ದು, ಅದರಂತೆ ಜಿಲ್ಲೆಯ ಎಲ್ಲ ಗ್ರಾ.ಪಂ.ಗಳು ಜುಲೈ ಅಂತ್ಯದೊಳಗೆ ಕೆಡಿಪಿ ಸಭೆ ನಡೆಸಿ ವರದಿ ಸಲ್ಲಿಸಬೇಕು ಎಂದು ಜಿ.ಪಂ. ಸಿಇಒ ಸಿಂಧೂ ಬಿ. ರೂಪೇಶ್‌ ಸೂಚಿಸಿದ್ದಾರೆ.

ಮಂಗಳವಾರ ಜಿ.ಪಂ. ಸಭಾಂಗಣದಲ್ಲಿ ನಡೆದ ಜಿ.ಪಂ. ಮಾಸಿಕ ಕೆಡಿಪಿ ಸಭೆಯಲ್ಲಿ ಅವರು ಮಾತನಾಡಿದರು.

ಗ್ರಾ.ಪಂ. ಕೆಡಿಪಿ ಸಭೆಯಲ್ಲಿ ಭಾಗವಹಿಸುವ ತಾಲೂಕು ಮಟ್ಟದ ಅಧಿಕಾರಿಗಳನ್ನು ನಿಯೋಜಿಸಿ ಅವರ ಪಟ್ಟಿಯನ್ನು ಸಂಬಂಧಪಟ್ಟ ತಾ.ಪಂ. ಇಒಗಳಿಗೆ ನೀಡಬೇಕು ಎಂದೂ ತಿಳಿಸಿದರು.

ಹಾಜರಾತಿ ಕಡ್ಡಾಯ
ಗ್ರಾ.ಪಂ. ಸಭೆಗೆ ನಿಯೋಜಿಸಲ್ಪಡುವ ಎಲ್ಲ ತಾಲೂಕು ಮಟ್ಟದ ಅಧಿಕಾರಿಗಳು ಕಡ್ಡಾಯವಾಗಿ ಸಭೆಗೆ ಹಾಜರಾಗಿ ಅಲ್ಲಿನ ಸಮಸ್ಯೆಗಳ ನಿವಾರಣೆ ಬಗ್ಗೆ ಗಮನಹರಿಸಬೇಕು. ಅಕ್ಟೋಬರ್‌ ಮೊದಲ ವಾರದಲ್ಲಿ ಗ್ರಾ.ಪಂ. ಕೆಡಿಪಿ ಸಭೆಗಳನ್ನು ಆಯೋಜಿಸಬೇಕು ಎಂದು ಸಿಇಒ ಹೇಳಿದರು.

40 ತ್ಯಾಜ್ಯ ಘಟಕ ಗುರಿ
ಗ್ರಾ.ಪಂ.ಗಳಲ್ಲಿ ತ್ಯಾಜ್ಯ ವಿಲೇವಾರಿ ಘಟಕ ಪ್ರಾರಂಭಿಸಲು ಜಿಲ್ಲೆಗೆ 40 ಗುರಿ ನೀಡಲಾಗಿದೆ. ಈಗಾಗಲೇ 10 ಪ್ರಸ್ತಾವನೆಗಳನ್ನು ಸಲ್ಲಿಸಲಾಗಿದೆ. ಘಟಕ ಪ್ರಾರಂಭಿಸಲು ಗ್ರಾ.ಪಂ.ಗಳು ಪ್ರಸ್ತಾವನೆ ಸಲ್ಲಿಸಬೇಕು. ಗ್ರಾ.ಪಂ. ವ್ಯಾಪ್ತಿಯ ಜನನಿಬಿಡ ಪ್ರದೇಶದಲ್ಲಿ ಸಮುದಾಯ ಶೌಚಾಲಯದ ಅಗತ್ಯವಿರುವ ಪಂಚಾಯತ್‌ಗಳು ಕೂಡ ಪ್ರಸ್ತಾವನೆ ಸಲ್ಲಿಸಬೇಕು ಎಂದು ಸಿಇಒ ತಿಳಿಸಿದರು.

ಅಲೆವೂರು ಗ್ರಾ.ಪಂ.ಗೆ 45 ಲ.ರೂ.
ಅಲೆವೂರು ಗ್ರಾ.ಪಂ. ಕಟ್ಟಡ ಕಾಮಗಾರಿಗಾಗಿ 45 ಲ.ರೂ. ಅನುದಾನ ಮಂಜೂರಾಗಿದ್ದು, ಕೂಡಲೇ ಕಾಮಗಾರಿ ಕೈಗೊಳ್ಳಬೇಕು ಎಂದು ಜಿ.ಪಂ. ಅಧ್ಯಕ್ಷ ದಿನಕರ ಬಾಬು ಸೂಚಿಸಿದರು.

ಶೇ. 99 ಪಠ್ಯಪುಸ್ತಕ ಪೂರೈಕೆ
ಜಿಲ್ಲೆಯಲ್ಲಿ ಶೇ 99.8 ಪಠ್ಯಪುಸ್ತಕ ಪೂರೈಕೆಯಾಗಿದೆ. ಸಮವಸ್ತ್ರ ವಿತರಣೆ ಬಾಕಿ ಇದೆ. ಶೂ ಮತ್ತು ಸಾಕ್ಸ್‌ ಎಸ್‌ಡಿಎಂಸಿ ಮೂಲಕ ಖರೀದಿಸುವಂತೆ ಆದೇಶವಿದೆ. ಅನುದಾನ ಬಿಡುಗಡೆಯಾಗಿಲ್ಲ ಎಂದು ಡಿಡಿಪಿಐ ಶೇಷಶಯನ ಕೆ. ಮಾಹಿತಿ ನೀಡಿದರು.

ಶೇ.50 ಬಿತ್ತನೆ ಪೂರ್ಣ
ಜಿಲ್ಲೆಯಲ್ಲಿ ಜುಲೈ ತಿಂಗಳಲ್ಲಿ ಮಳೆಯ ಪ್ರಮಾಣದಲ್ಲಿ ಸುಧಾರಣೆಯಾಗಿದೆ. ಶೇ.50ರಷ್ಟು ಬಿತ್ತನೆ ಪೂರ್ಣಗೊಂಡಿದೆ. ಪಿಎಂ ಕಿಸಾನ್‌ ಯೋಜನೆಯಡಿ 1,26,600 ರೈತರು ನೋದಾಯಿಸಿದ್ದಾರೆ ಎಂದು ಕೃಷಿ ಇಲಾಖೆ ಜಂಟಿ ನಿರ್ದೇಶಕ ಕೆಂಪೇಗೌಡ ಮಾಹಿತಿ ನೀಡಿದರು.

ಸಾಮಾಜಿಕ ಅರಣ್ಯ ಇಲಾಖೆಯಿಂದ 3.7 ಲಕ್ಷ ಸಿಸಿ ವಿತರಣೆ ಗುರಿ ಇದ್ದು, 1.69 ಲಕ್ಷ ಸಸಿ ವಿತರಿಸಲಾಗಿದೆ ಎಂದು ಅರಣ್ಯ ಇಲಾಖೆ ಅಧಿಕಾರಿಗಳು ಹೇಳಿದರು.
ಸ್ವತ್ಛ ಮೇವ ಜಯತೇ ಅಂಗವಾಗಿ ಜಿಲ್ಲೆಯ ಆಯೋಜಿಸಿದ್ದ ಪ್ರಬಂಧ ಸ್ಪರ್ಧೆ ಮತ್ತು ಚಿತ್ರಕಲಾ ಸ್ಪರ್ಧೆಯಲ್ಲಿ ವಿಜೇತರಾದ ವಿದ್ಯಾರ್ಥಿಗಳಿಗೆ ಸಭೆಯಲ್ಲಿ ಬಹುಮಾನ ವಿತರಿಸಲಾಯಿತು.

ಸಭೆಯಲ್ಲಿ ಜಿ.ಪಂ. ಉಪಾಧ್ಯಕ್ಷೆ ಶೀಲಾ ಕೆ. ಶೆಟ್ಟಿ, ಸ್ಥಾಯೀ ಸಮಿತಿ ಅಧ್ಯಕ್ಷರಾದ ಬಾಬು ಶೆಟ್ಟಿ, ಉದಯ ಕೋಟ್ಯಾನ್‌, ಜಿ.ಪಂ. ಉಪ ಕಾರ್ಯದರ್ಶಿ ನಾಗೇಶ್‌ ರಾಯ್ಕರ್‌, ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಉಪಸ್ಥಿತರಿದ್ದರು.

ತೆರಿಗೆ ಸಂಗ್ರಹ: ಉಡುಪಿ ದ್ವಿತೀಯ
ಗ್ರಾ.ಪಂ.ಗಳ ತೆರಿಗೆ ಸಂಗ್ರಹದಲ್ಲಿ 2018-19ನೇ ಸಾಲಿನಲ್ಲಿ ಉಡುಪಿ ಜಿಲ್ಲೆ ರಾಜ್ಯದಲ್ಲೇ 2ನೇ ಸ್ಥಾನ ಪಡೆದಿದೆ. ಎಲ್ಲ ಗ್ರಾ.ಪಂ. ವ್ಯಾಪ್ತಿಯಲ್ಲಿನ ಮೊಬೈಲ್‌ ಟವರ್‌ಗಳ ತೆರಿಗೆ ಕೂಡ ಸಂಗ್ರಹಿಸಬೇಕು ಎಂದು ಸಿಇಒ ಸೂಚಿಸಿದರು.

ಟಾಪ್ ನ್ಯೂಸ್

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

ಲೋಕಸಭೆ ಚುನಾವಣೆ ಫಲಿತಾಂಶ ರಾಜ್ಯ ರಾಜಕಾರಣದ ಮೇಲೆ ದೊಡ್ಡ ಪರಿಣಾಮ ಬೀರಲಿದೆ: ಬೊಮ್ಮಾಯಿ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

LS polls: ನಾಳೆ ಸಿಎಂ, ಡಿಸಿಎಂ ಭೇಟಿಯಾಗಿ ಕಾಂಗ್ರೆಸ್ ಸೇರ್ಪಡೆ ಬಗ್ಗೆ ತೀರ್ಮಾನ; ಸಂಗಣ್ಣ

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

Davanagare: ಚುನಾವಣಾ ತರಬೇತಿಗೆ ಚಕ್ಕರ್; ಅನುಚಿತ ವರ್ತನೆಗೆ ಶಿಕ್ಷಕ ಅಮಾನತು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

ಕಾಲರಾ ರೋಗ ತಡೆಗೆ ಸಕಲ ಮುನ್ನೆಚ್ಚರಿಕೆ; ತೆರೆದ ಸ್ಥಿತಿಯಲ್ಲಿ ಆಹಾರೋತ್ಪನ್ನ ಮಾರಾಟ ಅಪಾಯಕಾರಿ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

Former Prime Minister ಇಂದಿರಾ ಗಾಂಧಿಗೆ ಪುನರ್‌ಜನ್ಮ ನೀಡಿ, ಪ್ರಧಾನಿಯಾಗಿಸಿದ ಕ್ಷೇತ್ರ

ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Udupi; ಶ್ರೀಕೃಷ್ಣನಿಗೆ ಪಾರ್ಥಸಾರಥಿ ಸುವರ್ಣ ರಥ: ಪುತ್ತಿಗೆ ಶ್ರೀ ಸಂಕಲ್ಪ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Manipal ಮಾಹೆ ವಿ.ವಿ.ಗೆ ಕ್ವಾಕ್ವರೆಲಿ ಸಿಮಾಂಡ್ಸ್‌ ಶ್ರೇಯಾಂಕ ಗರಿ

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

Udupi-Chikmagalur Constituency; ಈವರೆಗಿನ ಅಭ್ಯರ್ಥಿ, ಸಂಸದರು ಕರಾವಳಿಗರೇ ಆಗಿದ್ದರು!

MUST WATCH

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

udayavani youtube

ಕೇಕ್ ಪ್ರಿಯರಿಗೆ ಹೇಳಿ ಮಾಡಿಸಿದ ಜಾಗ ಔರಾ .

udayavani youtube

ಶ್ರೀ ವೈಷ್ಣವಿ ದುರ್ಗಾ ದೇವಾಲಯ

udayavani youtube

ಟೈಟನ್ ಕಂಪೆನಿಯ Xylys ವಾಚ್ ವಿಶೇಷತೆಗಳೇನು ?

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

ಹೊಸ ಸೇರ್ಪಡೆ

ಸಿ.ಟಿ.ರವಿ

Vijayapura; ವಿಕಸಿತ ಭಾರತಕ್ಕೆ ವಿಶ್ವನಾಯಕ ಮೋದಿ ನಾಯಕತ್ವ ಅನಿವಾರ್ಯ: ಸಿ.ಟಿ.ರವಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

ಶಿಕಾರಿಪುರದಲ್ಲೇ ಅಪ್ಪ ಮಕ್ಕಳ ಶಿಕಾರಿ ಮಾಡುತ್ತೇನೆ… ವಿಜಯೇಂದ್ರ ವಿರುದ್ಧ ಈಶ್ವರಪ್ಪ ಕಿಡಿ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

Bengaluru: ಸೆ*ಕ್ಸ್‌ ವಿಡಿಯೋ ಮಾದರಿ ಲೈಂಗಿಕ ಕ್ರಿಯೆಗೆ ಒತ್ತಾಯ

ಯತ್ನಾಳ್

Loksabha Election; ಈಶ್ವರಪ್ಪ ಬಂಡಾಯವನ್ನು ರಾಜಾಹುಲಿ ಶಮನ ಮಾಡಲಿ: ಯತ್ನಾಳ್

15

ವೃದ್ಧಾಶ್ರಮ ಸ್ವಚ್ಛತೆ ಬಂದು ಮಾಲೀಕರ ಮನೆಗೇ ಕನ್ನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.