ಹಳ್ಳಿಹೊಳೆ: ಸೌಲಭ್ಯ ಸಿಗದಿದ್ದರೆ ಮತ ಬಹಿಷ್ಕಾರ! ಗ್ರಾಮಸ್ಥರ ಎಚ್ಚರಿಕೆ

Team Udayavani, Jul 13, 2021, 7:20 AM IST

ಹಳ್ಳಿಹೊಳೆ: ಸೌಲಭ್ಯ ಸಿಗದಿದ್ದರೆ ಮತ ಬಹಿಷ್ಕಾರ! ಗ್ರಾಮಸ್ಥರ ಎಚ್ಚರಿಕೆ

ಕುಂದಾಪುರ: ಹಳ್ಳಿಹೊಳೆ ಗ್ರಾಮಕ್ಕೆ ರಸ್ತೆ, ಸೇತುವೆ, ನೆಟ್‌ವರ್ಕ್‌ನಂತಹ ಸೌಲಭ್ಯ ಗಳನ್ನು ಆದಷ್ಟು ಬೇಗ ಕಲ್ಪಿಸ ದಿದ್ದರೆ ಮುಂಬರುವ ಜಿಲ್ಲಾ ಮತ್ತು ತಾಲೂಕು ಪಂಚಾಯತ್‌ ಚುನಾವಣೆಗಳನ್ನು ಬಹಿಷ್ಕರಿ ಸುವುದಾಗಿ ಗ್ರಾಮಸ್ಥರು ಎಚ್ಚರಿಕೆ ನೀಡಿದ್ದಾರೆ.

ಈ ಸಂಬಂಧ ಕಲ್ಸಂಕ, ಇರಿಗೆ, ವಾಟೆಬಚ್ಚಲು ಮತ್ತಿತರ ಪ್ರದೇಶಗಳ ಗ್ರಾಮಸ್ಥರು ರವಿವಾರ ಸಂಜೆ ಇರಿಗೆ ಶಾಲೆಯ ಆವರಣದಲ್ಲಿ ಸಭೆ ನಡೆಸಿದ್ದಾರೆ. ಸಭೆಯಲ್ಲಿ 35ರಿಂದ 40ಕ್ಕೂ ಹೆಚ್ಚು ಮನೆಗಳ ಜನರು ಸೇರಿದ್ದು, ನೆಟ್‌ವರ್ಕ್‌, ರಸ್ತೆ, ಸೇತುವೆ ಮತ್ತಿತರ ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಸೂಕ್ತ ಕ್ರಮ ಕೈಗೊಳ್ಳದಿದ್ದರೆ, ಪ್ರತೀ ಮನೆಯವರು “ನಮ್ಮ ಬೇಡಿಕೆ ಈಡೇರಿಸದಿದ್ದಕ್ಕೆ ಮತದಾನ ಬಹಿಷ್ಕರಿಸುತ್ತೇವೆ’ ಎನ್ನುವ ಫಲಕವನ್ನು ಮನೆ ಮುಂದೆ ಹಾಕಿಕೊಳ್ಳುವ ನಿರ್ಧಾರ ಕೈಗೊಂಡಿದ್ದಾರೆ.

ಉದಯವಾಣಿ ವರದಿ
ಹಳ್ಳಿಹೊಳೆ ಗ್ರಾಮದ ಹಳ್ಳಿಹೊಳೆ ಗ್ರಾಮದ ಹತ್ತು ಹಲವು ಸಮಸ್ಯೆಗಳ ಬಗ್ಗೆ “ಉದಯವಾಣಿ’ ಪತ್ರಿಕೆಯು “ಇಳಿದಷ್ಟೂ ಸಮಸ್ಯೆ ಆಳ’ ಮತ್ತು “ಸಾಗರದಷ್ಟು ಸಮಸ್ಯೆಗಳಿಗೆ ಸಾಸಿವೆಯಷ್ಟೇ ಪರಿಹಾರ !’ ಶೀರ್ಷಿಕೆಯಡಿ ಜು. 2ರಂದು “ಗ್ರಾಮ ಭಾರತ’ ಸರಣಿಯಲ್ಲಿ ಸಮಗ್ರ ವರದಿಯನ್ನು ಪ್ರಕಟಿಸಿ ಗಮನ ಸೆಳೆದಿತ್ತು. ಈ ವರದಿಗೆ ಸ್ಪಂದಿಸಿ ಹಳ್ಳಿಹೊಳೆ ಗ್ರಾಮಕ್ಕೆ ಶಿವಮೊಗ್ಗ ಸಂಸದ ಬಿ.ವೈ. ರಾಘವೇಂದ್ರ ಅವರ ಕಚೇರಿ ತಂಡ, ಬೈಂದೂರು ತಹಶೀಲ್ದಾರ್‌ ಶೋಭಾಲಕ್ಷ್ಮೀ ಭೇಟಿ ನೀಡಿ, ಗ್ರಾಮಸ್ಥರ ಸಮಸ್ಯೆಗಳನ್ನು ಆಲಿಸಿದ್ದರು.

ಸಂಸದರು ಸೇತುವೆ, ನೆಟ್‌ವರ್ಕ್‌ ಒದಗಿವ ಸಂಬಂಧ ಎಲ್ಲ ರೀತಿಯ ಪ್ರಯತ್ನಗಳನ್ನು ಮಾಡುವುದಾಗಿ ಭರವಸೆ ನೀಡಿದ್ದರು. ಜತೆಗೆ ಜಿಯೋ ಖಾಸಗಿ ಮೊಬೈಲ್‌ ಸಂಸ್ಥೆಯವರನ್ನು ಹಳ್ಳಿಹೊಳೆಗೆ ಕಳುಹಿಸಿ ಅಧ್ಯಯನ ನಡೆಸಿ, ಟವರ್‌ ಮಾಡಿಕೊಡುವ ಬಗ್ಗೆ ಪರಿಶೀಲಿಸಲು ಸೂಚಿಸಿದ್ದರು. ಆದರೆ ಕೆಲವು ದಿನಗಳಿಂದ ಜಿಯೋ ಸಂಸ್ಥೆಯವರು ಇಲ್ಲಿ ನೆಟ್‌ವರ್ಕ್‌ ಸೇವೆ ನೀಡಲು ಹಿಂದೇಟು ಹಾಕಿದ್ದಾರೆ ಎನ್ನಲಾಗಿದ್ದು, ಅದಕ್ಕಾಗಿ ಗ್ರಾಮಸ್ಥರೆಲ್ಲ ಒಟ್ಟಾಗಿ ಸಭೆ ನಡೆಸಿ, ಈ ತೀರ್ಮಾನಕ್ಕೆ ಬಂದಿದ್ದಾರೆ.

ಟಾಪ್ ನ್ಯೂಸ್

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

arrested

Bangaluru cafe ಸ್ಫೋಟದ ಸಂಚುಕೋರ ಎನ್‌ಐಎ ಬಲೆಗೆ: ಯಾರಿದು ಷರೀಫ್?

1-qeqewqeqwe

IPL ಉದ್ಘಾಟನ ಸಮಾರಂಭ ವೀಕ್ಷಣೆ: ಹೊಸ ದಾಖಲೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Udupi: ಕರ್ತವ್ಯದಲ್ಲಿದ್ದ ಪೊಲೀಸ್‌ಗೆ ಹಲ್ಲೆ, ಜೀವಬೆದರಿಕೆ: ಪ್ರತ್ಯೇಕ ಪ್ರಕರಣ ದಾಖಲು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

Belapu: ರೈಲ್ವೇ ಹಳಿ ಬಳಿ ಬಿದ್ದು ಸಾವು

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

ಕನ್ನಡಕುದ್ರು: ತೆಂಗಿನ ಮರಗಳಿಗೆ ಕೀಟ ಬಾಧೆ: ಕೃಷಿ ವಿಜ್ಞಾನಿಗಳ ತಂಡ ಭೇಟಿ; ಪರಿಶೀಲನೆ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

“ಆಟ’ಕ್ಕೆ ಅಂತಾರಾಷ್ಟ್ರೀಯ ದಿನ ನಿಗದಿಗೆ ಹಕ್ಕೊತ್ತಾಯ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

2-mukthar-ansari

Mukhtar Ansari: ಕುಖ್ಯಾತ ಗ್ಯಾಂಗ್‌ಸ್ಟರ್‌, 5 ಬಾರಿ ಶಾಸಕ ಅನ್ಸಾರಿ ಸಾವು

1-24-friday

Horoscope: ಉದ್ಯೋಗ ಸ್ಥಾನದಲ್ಲಿ ಮೇಲಿನವರಿಂದ ಶ್ಲಾಘನೆ, ಮಹಿಳಾ ಉದ್ಯಮಿಗಳಿಗೆ ಯಶಸ್ಸು

ಸಂಸದ ಡಿ.ಕೆ.ಸುರೇಶ್‌ ಆಸ್ತಿ ಮೌಲ್ಯ 593 ಕೋಟಿ ರೂ.!

Kohli IPL 2024

IPL; ಇಂದು ಚಿನ್ನಸ್ವಾಮಿಯಲ್ಲಿ ಆರ್‌ಸಿಬಿ ಬಲೆಗೆ ಬೀಳುತ್ತಾ ಕೋಲ್ಕತಾ?

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Raichur Lok Sabha Constituency: ಎಸ್ಟಿ ಮೀಸಲು ಕ್ಷೇತ್ರದಲ್ಲಿ 14 ಸಲ ಗೆದ್ದ ಕಾಂಗ್ರೆಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.