ದ್ವೇಷ ಭಾವನೆ, ಸುಳ್ಳು ಮಾಹಿತಿ; ಮಲ್ಪೆ ಪೊಲೀಸ್‌ ಠಾಣೆಗೆ ದೂರು

Team Udayavani, Jan 28, 2023, 1:35 AM IST

ದ್ವೇಷ ಭಾವನೆ, ಸುಳ್ಳು ಮಾಹಿತಿ; ಮಲ್ಪೆ ಪೊಲೀಸ್‌ ಠಾಣೆಗೆ ದೂರು

ಮಲ್ಪೆ: ಈ ಹಿಂದೆ ಉಡುಪಿಯಲ್ಲಿ ನಡೆದ ಎಸ್‌ಡಿಪಿಐ ಘಟನೆ ಮತ್ತು ಸೈಂಟ್‌ಮೇರಿಸ್‌ನಲ್ಲಿರುವ ಕೆಲಸಗಾರರ ಜತೆ ನನಗೆ ಯಾವುದೇ ಸಂಬಂಧ ಇಲ್ಲದಿದ್ದರೂ ಹಿಂದೂ-ಮುಸ್ಲಿಂ ಧರ್ಮದ ಜನರ ಮಧ್ಯೆ ದೇÌಷ ಭಾವನೆ ಹುಟ್ಟುವಂತೆ ಮಾಡಿ ಸಮಾಜದಲ್ಲಿ ಅಶಾಂತಿ ಸೃಷ್ಟಿಸಿ ಸುಳ್ಳು ಮಾಹಿತಿಯನ್ನು ಪ್ರಕಾಶ್‌ ಮಲ್ಪೆ ಅವರು ಸಾಮಾಜಿಕ ಜಾಲತಾಣದಲ್ಲಿ ಹರಿಯಬಿಟ್ಟು ನನ್ನ ತೆಜೋವಧೆಗೆ ಪ್ರಯತ್ನಿದ್ದಾರೆ ಎಂದು ಮಂಜುನಾಥ ವಿ. ಸಾಲ್ಯಾನ್‌ ಅವರು ಮಲ್ಪೆ ಠಾಣೆಗೆ ದೂರು ನೀಡಿದ್ದಾರೆ.

ಈ ಹಿಂದೆ ಎಸ್‌ಡಿಪಿಐ ಸಂಘಟನೆ ನಡೆಸಿದ ಕಾನೂನು ವಿರೋಧಿ ಪ್ರತಿಭಟನೆಯ ವಿಡಿಯೋ ಮತ್ತು ಸೈಂಟ್‌ಮೇರಿಸ್‌ ದ್ವೀಪದಲ್ಲಿ ನಡೆದ ಘಟನೆಯ ವಿಡಿಯೋವನ್ನು ಎಡಿಟ್‌ ಮಾಡಲಾಗಿದೆ. ಈ ಬಗ್ಗೆ ಮಲ್ಪೆ ಕೊಳದಲ್ಲಿ ಪ್ರಕಾಶ್‌ ಮಲ್ಪೆ ಅವರಲ್ಲಿ ಈ ಬಗ್ಗೆ ಪ್ರಶ್ನೆ ಮಾಡಿದಾಗ ವಿಡಿಯೋ ಮಾಡಿರುವುದು ನನ್ನ ಮೊಬೈಲ್‌ನಲ್ಲಿ, ಇದು ನನ್ನ ಇಷ್ಟ. ಮಲ್ಪೆ ಪರಿಸರದಲ್ಲಿ ಜೀವ ಸಹಿತ ಬಿಡುವುದಿಲ್ಲ ಬೆದರಿಕೆ ಹಾಕಿದ್ದಾರೆ. ಅವರ ಬಗ್ಗೆ ಸೂಕ್ತ ಕಾನೂನು ಕ್ರಮ ತೆಗೆದುಕೊಳ್ಳಬೇಕು ಎಂದು ದೂರಿನಲ್ಲಿ ತಿಳಿಸಲಾಗಿದೆ.

ಎದೆ ನೋವು: ಸಾವು
ಮಲ್ಪೆ: ಎದೆನೋವು ಕಾಣಿಸಿ ಕೊಂಡು ಕೇರಳದ ಕೊಲ್ಲಂನ ಸುರೇಶ್‌ (45) ಅವರು ಮೃತಪಟ್ಟಿದ್ದಾರೆ. ಕಲ್ಮಾಡಿಯಲ್ಲಿ ಬಾವಿ ರಿಂಗಿನ ಕೆಲಸ ಮಾಡಿಕೊಂಡಿದ್ದರು. ವಾರದ ಹಿಂದೆ ಅವರಿಗೆ ಎದೆನೋವು ಕಾಣಿಸಿ ಕೊಂಡಿದೆನ್ನಲಾಗಿದೆ. ಜ. 25ರಂದು ರಾತ್ರಿ ರಕ್ತವಾಂತಿ ಮಾಡುತ್ತಿದ್ದು, ತತ್‌ಕ್ಷಣ ಅವರನ್ನು ಆಸ್ಪತ್ರೆಗೆ ಸಾಗಿಸಲಾಗಿದೆ. ಪರೀಕ್ಷಿಸಿದ ವೈದರು ಸುರೇಶ್‌ ಅದಾಗಲೇ ಮೃತಪಟ್ಟಿರುವ ಬಗ್ಗೆ ತಿಳಿಸಿದ್ದಾರೆ.

ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿ; ಗಂಭೀರ
ಸಿದ್ದಾಪುರ: ಹೊಸಂಗಡಿ ಗ್ರಾಮದ ಶ್ರೀ ವೀರಾಂಜನೆಯ ದೇವಸ್ಥಾನದ ಎದುರಿನ ರಾ. ಹೆದ್ದಾರಿಯಲ್ಲಿ ಅರುಣ್‌ಕುಮಾರ್‌ ಅವರು ಅತೀ ವೇಗವಾಗಿ ಚಲಾಯಿಸಿ, ವಿದ್ಯುತ್‌ ಕಂಬಕ್ಕೆ ಬೈಕ್‌ ಢಿಕ್ಕಿ ಹೊಡೆಸಿದ್ದಾರೆ. ಅನಂತರ ಮಲ್ಯ ಕಾಂಪೌಂಡಿಗೆ ಢಿಕ್ಕಿ ಹೊಡೆದು, ಗಂಭೀರವಾಗಿ ಗಾಯಗೊಂಡಿದ್ದಾರೆ. ಅಮಾಸೆಬೈಲು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ತೆಂಗಿನ ಮರದಿಂದ ಬಿದ್ದು ಸಾವು
ಸಿದ್ದಾಪುರ: ಕೊಂಜಾಡಿ ರಾಜೀವ ಶೆಟ್ಟಿ ಅವರ ಮನೆಯ ತೆಂಗಿನ ತೋಟದಲ್ಲಿ ಮರದಿಂದ ಕಾಯಿ ಕೊಯ್ಯುತ್ತಿರುವಾಗ ಮರದಿಂದ ಬಿದ್ದು ಕುಚ್ಚಾರು ಕಾನ್ವೆಟ್ಟು ಚನ್ನಕೇಶವ (43) ಅವರು ಜ. 26ರಂದು ಮೃತಪಟ್ಟಿದ್ದಾರೆ. ಅವರನ್ನು ಕೂಡಲೆ ಬೆಳ್ವೆ ಪ್ರಾಥಮಿಕ ಆರೋಗ್ಯ ಕೇಂದ್ರಕ್ಕೆ ಕರೆದುಕೊಂಡು ಹೋಗಿದ್ದು, ಹೆಚ್ಚಿನ ಚಿಕಿತ್ಸೆಗಾಗಿ ಹೆಬ್ರಿ ತಾಲೂಕು ಸರಕಾರಿ ಆಸ್ಪತ್ರೆಗೆ ಕರೆದುಕೊಂಡು ಹೋದಾಗ ಅಲ್ಲಿ ಪರೀಕ್ಷಿಸಿದ ವೈದ್ಯರು ಮೃತಪಟ್ಟಿರುವುದಾಗಿ ತಿಳಿಸಿದ್ದಾರೆ. ಶಂಕರನಾರಾಯಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಟಾಪ್ ನ್ಯೂಸ್

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ

ಮಂಗಳೂರು: ಲಾಡ್ಜ್ ವೊಂದರಲ್ಲಿ ನಾಲ್ಕು ಮಂದಿ ಆತ್ಮಹತ್ಯೆ!

donald-trump

ಟ್ರಂಪ್ ವಿರುದ್ಧ ಕ್ರಿಮಿನಲ್ ಅರೋಪ: ಏನಿದು ಟ್ರಂಪ್- ಪಾರ್ನ್ ಸ್ಟಾರ್ ಡೇನಿಯಲ್ಸ್ ಹಣದ ವಿಚಾರ?

poli

ಡೈಲಿ ಡೋಸ್‌: ಎತ್ತಿನ ಗಾಡಿ ಬದಲಾಗೋದಿಲ್ಲ – ಬರೋರು ಬದಲಾಗ್ತಾರೆ !

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ವರುಣಾ ಕ್ಷೇತ್ರದಲ್ಲಿ ಸಿದ್ದು ವಿರುದ್ಧ ವಿಜಯೇಂದ್ರ ಸ್ಪರ್ಧಿಸಲಿದ್ದಾರಾ ?

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಶಾಲಾರಂಭಕ್ಕೂ ಮುನ್ನವೇ ಕೈಸೇರಲಿದೆ ಸಮವಸ್ತ್ರ, ಪುಸ್ತಕ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಇಂದು ಹೊಸದಿಲ್ಲಿಯಲ್ಲಿ ರಾಷ್ಟ್ರಪತಿಗಳ ಜತೆ ಸಂವಾದ : ಬಂಟ್ವಾಳ, ಉಡುಪಿಯ ಆರು ಮಂದಿ ಭಾಗಿ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಮೀಸಲಾತಿ ಹಂಚಿಕೆಯಿಂದ ಯಾವುದೇ ಸಮುದಾಯಕ್ಕೂ ಅನ್ಯಾಯವಾಗಿಲ್ಲ: ಕೋಟ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

ಇಂದಿನಿಂದ ಎಸೆಸೆಲ್ಸಿ ವಾರ್ಷಿಕ ಪರೀಕ್ಷೆ

arrest 3

ಮಟ್ಕಾ ಹಣ ಸಂಗ್ರಹ: ಬಂಧನ

MUST WATCH

udayavani youtube

ಸ್ನೇಕ್ ಶಾಮ್ ಹಾವುಗಳ ರಕ್ಷಣೆಗೆ ಮುಂದಾಗಲು ಇದೇ ಕಾರಣ | ಸ್ನೇಕ್ ಶ್ಯಾಮ್ ಮನದಾಳದ ಮಾತು

udayavani youtube

ಎವರೆಸ್ಟ್ ಹತ್ತುವವರ ಊಟ ತಿಂಡಿ ಕ್ರಮ ಹೇಗಿರುತ್ತೆ ನೋಡಿ !

udayavani youtube

ಮೈಸೂರಿಗೆ ಬಂದವರು ಇಲ್ಲಿಗೊಮ್ಮೆ ಭೇಟಿ ಕೊಡಲೇಬೇಕು

udayavani youtube

ಜಗತ್ತಿನ ಅಳಿವಿನಂಚಿನಲ್ಲಿರುವ ಪ್ರಾಣಿಗಳನ್ನೊಮ್ಮೆ ನೋಡಿಬಿಡಿ | Udayavani

udayavani youtube

ಎವರೆಸ್ಟ್ ತುದಿಯಲ್ಲಿ 14 ವರ್ಷಗಳಿಂದಲೂ ಇದೇ ಆ ಒಂದು ಮೃತ ದೇಹ

ಹೊಸ ಸೇರ್ಪಡೆ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

ಗುಜರಾತ್ ನಲ್ಲಿ ಪ್ರಧಾನಿ ಮೋದಿ ವಿರುದ್ಧ ಪೋಸ್ಟರ್ ಅಭಿಯಾನ; 8 ಮಂದಿ ಬಂಧನ: ವರದಿ

3–hunsur

ಹುಣಸೂರು: ಇಂದಿನಿಂದ ಎಸ್.ಎಸ್.ಎಲ್.ಸಿ. ಪರೀಕ್ಷೆ

elephant

ಕಾಡಾನೆಯ ಹನಿಟ್ರ್ಯಾಪ್: ತೀರ್ಥಹಳ್ಳಿ ಪಟ್ಟಣಕ್ಕೆ ನುಗ್ಗಿದ್ದ ಕಾಡಾನೆಯ ಸೆರೆಯಾಗಿಸಿದ ಭಾನುಮತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

ಅಗ್ನಿ ಆಕಸ್ಮಿಕ: ಲಕ್ಷಾಂತರ ರೂಪಾಯಿ ಮೌಲ್ಯದ ಪೀಠೋಪಕರಣಗಳು ಬೆಂಕಿಗಾಹುತಿ

Gurudev hoysala

ಚಿತ್ರ ವಿಮರ್ಶೆ: ‘ಹೊಯ್ಸಳ’ ಸಾಮ್ರಾಜ್ಯದಲ್ಲಿ ಆ್ಯಕ್ಷನ್‌ ಅಬ್ಬರ