ಮಳೆಯ ಅಬ್ಬರ : ಉಡುಪಿ, ದ.ಕನ್ನಡದಲ್ಲಿ ನಾಳೆಯೂ ಶಾಲಾ – ಕಾಲೇಜುಗಳಿಗೆ ರಜೆ
Team Udayavani, Jul 5, 2022, 7:56 PM IST
ಉಡುಪಿ : ಜಿಲ್ಲೆಯಲ್ಲಿ ಮಳೆಯ ಅಬ್ಬರ ಜೋರಾದ ಕಾರಣ ತಾಲೂಕಿನ ಉಡುಪಿ ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಶಾಲಾ ಕಾಲೇಜುಗಳಿಗೆ ಬುಧವಾರವೂ ರಜೆ ಘೋಷಿಸಿದ್ದಾರೆ.
ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಕೂರ್ಮಾರಾವ್ ಎಂ ರಜೆ ಘೋಷಿಸಿ ಆದೇಶ ಹೊರಡಿಸಿದ್ದಾರೆ.
ಭಾರಿ ಮಳೆಯ ಕಾರಣ ಉಡುಪಿ ಜಿಲ್ಲೆಯಲ್ಲಿ ಮಂಗಳವಾರವೂ ರಜೆ ಘೋಷಿಸಲಾಗಿತ್ತು.
ಜಿಲ್ಲೆಯ ಹಲವೆಡೆ ಪ್ರವಾಹದ ಭೀತಿಯಿದ್ದು ರಜೆಯ ಸಮಯದಲ್ಲೂ ಮಕ್ಕಳು ತಮ್ಮ ಸುರಕ್ಷತೆಯನ್ನು ಗಮನದಲ್ಲಿರಿಸಿಕೊಳ್ಳಲು ತಿಳಿಸಲಾಗಿದೆ.
ಶಾಲಾ ಕಾಲೇಜು ಗಳಿಗೆ ರಜೆ ಘೋಷಿಸಲಾಗಿದೆ ಎಂಬ ನಕಲಿ ಸುತ್ತೋಲೆಯೊಂದು ಸೋಮವಾರ ವೈರಲ್ ಆಗಿದ್ದು ಈ ಕುರಿತು ಉಡುಪಿ ಜಿಲ್ಲಾಧಿಕಾರಿ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಚರ್ಚಿಸಿ ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ವಹಿಸುವಂತೆ ಆದೇಶಿಸಿದ್ದಾರೆ.
ದಕ್ಷಿಣ ಕನ್ನಡದ ಶಾಲಾ ಕಾಲೇಜುಗಳಿಗೂ ರಜೆ
ದಕ್ಷಿಣಕನ್ನಡ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೂ ಬುಧವಾರ ರಜೆ ಘೋಷಿಸಿ ಜಿಲ್ಲಾಧಿಕಾರಿ ರಾಜೇಂದ್ರ ಕೆ.ವಿ ಆದೇಶ ಹೊರಡಿಸಿದ್ದಾರೆ.
ದಕ್ಷಿಣ ಕನ್ನಡ ಜಿಲ್ಲೆಯಲ್ಲೂ ಮಳೆಯ ಅಬ್ಬರ ಜೋರಾಗಿದ್ದು ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲಾ ಶಾಲಾ ಕಾಲೇಜುಗಳಿಗೆ ರಜೆ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ : ಅಂಜನಾದ್ರಿಯನ್ನು ಹೈಜಾಕ್ ಮಾಡಲು ಬಿಜೆಪಿ-ಸಂಘಪರಿವಾರದವರಿಗೆ ಬಿಡಲ್ಲ: ಎಚ್.ಆರ್.ಶ್ರೀನಾಥ