ಮನೆ ಮನೆಗೆ ಪಿಂಚಣಿ ಯೋಜನೆ ಅಭಿಯಾನಕ್ಕೆ ಚಾಲನೆ

Team Udayavani, Mar 1, 2020, 5:17 AM IST

Pension-Scheme-Campaign

ಕಾಪು: ಸರಕಾರದ ಸಾಮಾಜಿಕ ಭದ್ರತಾ ಯೋಜನೆಯಡಿ ಪಿಂಚಣಿ ಪಡೆಯಲು ಅರ್ಹರಾಗಿದ್ದೂ ಪಿಂಚಣಿ ಸೌಲಭ್ಯದಿಂದ ವಂಚಿತರಾಗಿರುವ ಅರ್ಹ ಫಲಾನುಭವಿಗಳನ್ನು ಗುರುತಿಸುವ ಮನೆ ಮನೆ ಪಿಂಚಣಿ ಯೋಜನೆ ಈಗ ಕಾಪು ತಾಲೂಕಿನಲ್ಲೂ ಶುರುವಾಗಿದೆ.

ಕಂದಾಯ ಅಧಿಕಾರಿಗಳು ಉಪ ತಹಶೀಲ್ದಾರ್‌ ನೇತೃತ್ವದಲ್ಲಿ ಮನೆ ಮನೆ ಭೇಟಿ ನೀಡಲಿದ್ದಾರೆ. ತಾಲೂಕಿನ 30 ಗ್ರಾಮಗಳಲ್ಲಿ ಈ ಯೋಜನೆ ನಡೆಯಲಿದೆ. ಗ್ರಾಮ ಕರಣಿಕರು ಮತ್ತು ಗ್ರಾಮ ಸಹಾಯಕರು ಹಾಗೂ ಕಾಪು ಹೋಬಳಿಯ ಕಂದಾಯ ನಿರೀಕ್ಷಕರು ಇದರಲ್ಲಿ ಭಾಗಿಯಾಗಲಿದ್ದಾರೆ.

ಈವರೆಗೆ 75 ಮಂದಿಯನ್ನು ಗುರುತಿಸಲಾಗಿದೆ. ಫೆ.26ರಂದು ಒಂದೇ ದಿನ ಕಾಪು ಪಡುಗ್ರಾಮದ 13 ಮಂದಿಯನ್ನು ಫಲಾನುಭವಿಗಳ ಪಟ್ಟಿಗೆ ಸೇರ್ಪಡೆಗೊಳಿಸಲಾಗಿದೆ.

ಬೇಕಾದ ದಾಖಲೆಗಳು
ಅಧಿಕಾರಿಗಳು ಭೇಟಿ ನೀಡುವ ಸಂದರ್ಭದಲ್ಲಿ ಫಲಾನುಭವಿಗಳು ತಮ್ಮ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌, ವಯಸ್ಸಿನ ದಾಖಲೆ, ಪಾಸ್‌ ಬುಕ್‌ ಜೆರಾಕ್ಸ್‌ ಮತ್ತು 3 ಫೊಟೋಗಳನ್ನು ನೀಡಬೇಕಿದೆ.

9,684 ಫಲಾನುಭವಿಗಳು
ಕಾಪು ತಾಲೂಕಿನಲ್ಲಿ ಸಾಮಾಜಿಕ ಭದ್ರತಾ ಯೋಜನೆಯಡಿ ಈವರೆಗೆ 9,684 ಫಲಾನುಭವಿಗಳಿದ್ದಾರೆ. ಸಂಧ್ಯಾ ಸುರಕ್ಷಾ ಯೋಜನೆ – 5,933, ವಿಧವಾ ವೇತನ – 1,833, ಇಂದಿರಾ ಗಾಂಧಿ ಪಿಂಚಣಿ ಯೋಜನೆ (ವೃದ್ಧಾಪ್ಯ ವೇತನ)- 724, ಅಂಗವಿಕಲ ವೇತನ – 375 + 256, ಮನಸ್ವಿನಿ – 563 ಫಲಾನುಭವಿಗಳು ಪಿಂಚಣಿ ಸೌಲಭ್ಯ ಪಡೆಯುತ್ತಿದ್ದಾರೆ.

ಸಮಸ್ಯೆಯಾದರೆ ಕಚೇರಿಗೆ ತೆರಳಬಹುದು
ಆಧಾರ್‌ ಲಿಂಕ್‌ ಆಗದೇ ಇರುವುದು, ದಾಖಲೆಗಳ ಸಮಸ್ಯೆ ಇತ್ಯಾದಿ ಕಾರಣ ಪಿಂಚಣಿ ಹಣ ತಲುಪದೇ ಇದ್ದರೆ ಕಚೇರಿಗೆ ಬರಲು ತಹಶೀಲ್ದಾರ್‌ ನಾಗರಿಕರಿಗೆ ಮನವಿ ಮಾಡಿದ್ದಾರೆ. ಅಲ್ಲದೇ ಈವರೆಗೆ 927 ಫ‌ಲಾನುಭವಿಗಳ ದಾಖಲೆ ಪರಿಶೀಲಿಸಿ ತಿದ್ದುಪಡಿ ಮಾಡಲಾಗಿದೆ ಎಂದಿದ್ದಾರೆ.

ಸಂಪೂರ್ಣ ಉಚಿತ ಸೇವೆ
ಪಿಂಚಣಿ ಪಡೆಯಲು ಅರ್ಹರಾದವರನ್ನು ಗುರುತಿಸಿ ಅವರ ಓಟಿಸಿ – ರೇಷನ್‌ ಕಾರ್ಡ್‌ ಡಾಟಾವನ್ನು ಸಂಗ್ರಹಿಸಿ ಅಟಲ್‌ ಜೀ ಸೇವಾ ಕೇಂದ್ರದ ಮೂಲಕ ಎಂಟ್ರಿ ಮಾಡಿಸಲಾಗುತ್ತದೆ. ನೇರವಾಗಿ ಮನೆಗೇ ತೆರಳಿ ಎಂಟ್ರಿ ಇತ್ಯಾದಿ ಮಾಡುವುದರಿಂದ ಕನಿಷ್ಠ 10 ದಿನಗಳ ಒಳಗೆ ಫಲಾನುಭವಿಗಳಿಗೆ ಪಿಂಚಣಿ ಆದೇಶ ಪತ್ರವನ್ನು ನೀಡಲಾಗುತ್ತದೆ. ಈ ಸೇವೆ ಸಂಪೂರ್ಣ ಉಚಿತ.
-ಮಹಮ್ಮದ್‌ ಇಸಾಕ್‌,
ತಹಶೀಲ್ದಾರ್‌, ಕಾಪು

ಟಾಪ್ ನ್ಯೂಸ್

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್‌ ಗಾಂಧಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

Sirsi: ಏ. 28ಕ್ಕೆ ಶಿರಸಿಗೆ ಪ್ರಧಾನಿ ಮೋದಿ… ಸಿದ್ಧತೆ ಆರಂಭ: ಕಾಗೇರಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

20-shirva-1

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Lok Sabha Election-2024; ಬಿಜೆಪಿ ನಾಯಕರಿಂದ ಅಸಹಕಾರ: ದೇವೇಗೌಡ

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆKundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್‌ ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Subramanya ಏನೆಕಲ್ಲು: ಕಾರಿಗೆ ಗೂಡ್ಸ್‌ ಆಟೋ ಢಿಕ್ಕಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.