ಹೊಂಡಗುಂಡಿ ರಸ್ತೆ: ವಾಹನ ಸಂಚಾರಕ್ಕೆ ತೀವ್ರ ಅಡಚಣೆ

Team Udayavani, May 31, 2019, 6:13 AM IST

hondagundi

ಬೆಳ್ಮಣ್‌: ಕಾರ್ಕಳ ತಾಲೂಕಿನ ನಂದಳಿಕೆ ಗ್ರಾ.ಪಂ. ವ್ಯಾಪ್ತಿಯ ಕೆದಿಂಜೆಯಿಂದ ಉರ್ಕಿದೊಟ್ಟು ಶ್ರೀ ಅಬ್ಬಗ ದಾರಗ ದೇವಸ್ಥಾನವನ್ನು ಸಂಪರ್ಕಿಸುವ ಈ ರಸ್ತೆ ತೀರ ಹದಗೆಟ್ಟಿದ್ದು ಬೃಹತ್‌ ಗಾತ್ರದ ಹೊಂಡಗಳು ನಿರ್ಮಾಣಗೊಂಡು ಜಲ್ಲಿ ಟಾರು ಎದ್ದು ಹೋಗಿ ವಾಹನ ಸಂಚಾರದ ಜತೆ ನಡೆದಾಡಲೂ ಅಸಾಧ್ಯವಾಗಿದೆ.

ಈ ರಸ್ತೆಗೆ ಡಾಮರುಗೊಂಡು ಹಲವು ವರ್ಷಗಳು ಕಳೆದರೂ ನಿರ್ವಹಣೆಯ ಕೊರತೆಯಿಂದಾಗಿ ದುರಸ್ತಿಯಾಗಿಲ್ಲ. ಇದರ ಪರಿಣಾಮ ಇದೀಗ ಈ ರಸ್ತೆಯಲ್ಲಿ ಸಣ್ಣ ಪುಟ್ಟ ವಾಹನಗಳು ಕೂಡ ಸಂಚಾರ ನಡೆಸುವುದೇ ಅಸಾಧ್ಯವಾಗಿದೆ.

ದೇಗುಲದ ಪ್ರಮುಖ ರಸ್ತೆ

ಸುಮಾರು 2 ಕಿ.ಮೀ. ಉದ್ದದ ಈ ರಸ್ತೆಯನ್ನು ಪ್ರಮುಖವಾಗಿ ದೇಗುಲಕ್ಕೆ ಬರುವ ಭಕ್ತರ ಉಪಯೋಗಕ್ಕಾಗಿ ನಿರ್ಮಿಸಲಾಗಿತ್ತು. ಇದೀಗ ಈ ರಸ್ತೆ ಬರುವ ಭಕ್ತರಿಗೆ ಸಮಸ್ಯೆಯುಂಟು ಮಾಡಿದೆ. ಈ ರಸ್ತೆಯನ್ನು ಸಂಪರ್ಕಿಸುವ ಎರಡು ಪುಣ್ಯ ಕ್ಷೇತ್ರಗಳು ಮುಜಲೊಟ್ಟು ಶ್ರೀ ಬ್ರಹ್ಮಲಿಂಗೇಶ್ವರ ದೇಗುಲ ಹಾಗೂ ಉರ್ಕಿದೊಟ್ಟು ಅಬ್ಬಗ ದಾರಗ ದೇಗುಲ. ಆದರೆ ಈ ದೇಗುಲಕ್ಕೆ ಸಂಪರ್ಕ ಕಲ್ಪಿಸುವ ಈ ರಸ್ತೆ ಸಂಪೂರ್ಣ ಹದಗೆಟ್ಟ ಪರಿಣಾಮ ಭಕ್ತರ ಸಹಿತ ಇತರರೂ ಸಂಕಟ ಅನುಭವಿಸುವಂತಾಗಿದೆ ಹಾಗೂ ಈ ಭಾಗದಲ್ಲಿ ಸುಮಾರು 50ಕ್ಕೂ ಅಧಿಕ ಮನೆಗಳಿದ್ದು ಇಲ್ಲಿನ ಗ್ರಾಮಸ್ಥರು ನಿತ್ಯ ನರಕ ಯಾತನೆ ಪಡುವಂತಾಗಿದೆ.

ಘನವಾಹನದ ಸಂಚಾರ ರಸ್ತೆ ಹದಗೆಡಲು ಕಾರಣ

ಈ ಭಾಗದಲ್ಲಿ ಕಲ್ಲು ಕೋರೆ ಕಾರ್ಯಾಚರಿಸುತ್ತಿದ್ದು ಅಲ್ಲಿಗೆ ಬರುವ ಭಾರೀ ಘನ ವಾಹನಗಳ ಆರ್ಭಟಕ್ಕೆ ಈ ರಸ್ತೆ ಸಂಪೂರ್ಣ ಹದಗೆಟ್ಟಿದೆ ಮತ್ತು ರಸ್ತೆ ಸಂಪೂರ್ಣ ಹೊಂಡ ಗುಂಡಿಗಳಿಂದ ಕೂಡಿದೆ ಎಂದು ಗ್ರಾಮಸ್ಥರು ಆರೋಪಿಸಿದ್ದಾರೆ.

ಬಸ್‌ ಸಂಚಾರವೇ ಇಲ್ಲ

ಈ ಭಾಗದಲ್ಲಿ ಬಸ್‌ ಸಂಚಾರವಿಲ್ಲದ ಕಾರಣ ಈ ಭಾಗದ ಗ್ರಾಮಸ್ಥರು ತಮ್ಮ ಸ್ವಂತ ವಾಹನ ಅಥವಾ ಬಾಡಿಗೆ ವಾಹನವನ್ನೇ ನಂಬಿ ಸಾಗಬೇಕಾಗುತ್ತದೆ. ಅದರಲ್ಲೂ ರಿಕ್ಷಾ ಚಾಲಕರು ಈ ರಸ್ತೆಯಲ್ಲಿ ಬರಲು ಹಿಂದೇಟು ಹಾಕುತ್ತಾರೆ ಎನ್ನುವುದು ಬಹುತೇಕ ಗ್ರಾಮಸ್ಥರ ಆರೋಪ. ತೀರ ಹದಗೆಟ್ಟ ರಸ್ತೆಯುದ್ದಕ್ಕೂ ಜಲ್ಲಿ ಕಲ್ಲು ಎದ್ದು ಬೃಹತ್‌ ಗಾತ್ರದ ಹೊಂಡಗಳೂ ನಿರ್ಮಾಣಗೊಂಡಿದ್ದು ಇನ್ನೇನು ಮಳೆಗಾಲ ಆರಂಭಗೊಂಡರೆ ಶಾಲಾ ಮಕ್ಕಳು, ದಾರಿಹೋಕರು ಕೆಸರು ನೀರನ್ನೇ ತಮ್ಮ ಮೈಮೇಲೆ ಎರಚಿಕೊಳ್ಳುವ ಸಾಧ್ಯತೆ ಹೆಚ್ಚಿವೆ. ಕೂಡಲೇ ಸಂಬಂಧಿಸಿದ ಅಧಿಕಾರಿಗಳು, ಈ ಭಾಗದ ಶಾಸಕರು, ಜನಪ್ರತಿನಿಧಿಗಳು ಈ ರಸ್ತೆಗೆ ಕಾಯಕಲ್ಪ ನೀಡಬೇಕಾಗಿದೆ.

ಡಾಮರು, ಕಾಂಕ್ರೀಟ್ ಕಾಮಗಾರಿ ಅಗತ್ಯ

2004ರಲ್ಲಿ ಡಾಮರು ನಡೆದಿದ್ದು ಆ ಬಳಿಕ ಮತ್ತೆ ತೇಪೆ ಕಾರ್ಯಮಾತ್ರ ನಡೆದಿದೆ, ಭಕ್ತರ ಅನುಕೂಲಕ್ಕಾಗಿ ಈ ರಸ್ತೆಗೆ ಸಂಪೂರ್ಣ ಡಾಮರು ಅಥವಾ ಕಾಂಕ್ರೀಟ್ ಅಗತ್ಯವಿದೆ.
-ಕೆದಿಂಜೆ ಸುಪ್ರೀತ್‌ ಶೆಟ್ಟಿ,, ಜಿಲ್ಲಾ ಪಂ. ಮಾಜಿ ಸದಸ್ಯ
– ಶರತ್‌ ಶೆಟ್ಟಿ ಮುಂಡ್ಕೂರು

ಟಾಪ್ ನ್ಯೂಸ್

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

Delhi Police: ಮಾರುತಿ ಸ್ವಿಫ್ಟ್‌ ಕಾರಿನಲ್ಲಿ 30ಕ್ಕೂ ಅಧಿಕ ಕುರಿ, ಮೇಕೆ ಸಾಗಾಟ!

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

BJP 2025ರಲ್ಲಿ ಹಿಂದುಳಿದ ಸಮುದಾಯಗಳ ಮೀಸಲಾತಿ ತೆಗೆದು ಹಾಕಲಿದೆ: ರೇವಂತ್ ರೆಡ್ಡಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

ಜ.26ರಂದು 2ನೇ ಹಂತದ ಚುನಾವಣೆ;ರಾಹುಲ್‌, ತರೂರ್‌, ಹೇಮಾ ಮಾಲಿನಿ ಹಲವು ಘಟಾನುಘಟಿಗಳು ಕಣದಲ್ಲಿ

18-aranthodu

Aranthodu: ಜೀಪ್-ಬೈಕ್ ಅಪಘಾತ; ಗಂಭೀರ ಗಾಯಗೊಂಡಿದ್ದ ಬೈಕ್ ಸವಾರ ಸಾವು

17-voting

Vote: ಮತದಾನದ ಮಹತ್ವ

Siddaramaiah

Haveri; ದೇಶ ಬಿಡುತ್ತೇನೆ ಎಂದಿದ್ದ ದೇವೇಗೌಡರು ಮೋದಿ ಜತೆ ಸೇರಿದ್ದಾರೆ: ಸಿದ್ದರಾಮಯ್ಯ

16-adu-jeevitham

Movie Review: ಆಡು ಜೀವಿದಂ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.