ಐಸ್‌ಕ್ಯಾಂಡಿ ಪ್ರಕರಣ: ಕೇಸು ದಾಖಲಿಸಲು ಡಿಸಿ ಸೂಚನೆ

Team Udayavani, Jul 12, 2019, 5:36 AM IST

dc

ಕುಂದಾಪುರ: ಜಿಲ್ಲೆಯಾದ್ಯಂತ ಸಂಚಲನ ಮೂಡಿಸಿದ್ದ ಐಸ್‌ಕ್ಯಾಂಡಿ ತಿಂದ ಮಕ್ಕಳ ಅಸ್ವಸ್ಥ ಪ್ರಕರಣಕ್ಕೆ ಸಂಬಂಧಿಸಿದಂತೆ ಸಂಬಂಧಪಟ್ಟವರ ವಿರುದ್ಧ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ ಎಂದು ಜಿಲ್ಲಾ ಆಹಾರ ಸುರಕ್ಷತಾ ಅಧಿಕಾರಿಗೆ ಜಿಲ್ಲಾಧಿಕಾರಿ ಹೆಪ್ಸಿಬಾ ರಾಣಿ ಕೊರ್ಲಪಾಟಿ ಅವರು ಸೂಚಿಸಿದರು.

ಮಂಗಳವಾರ ಉಡುಪಿ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ, ಜಿಲ್ಲಾ ಮಟ್ಟದ ಆಹಾರ ಸುರಕ್ಷತಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದರು.

ಕುಂದಾಪುರ, ಉಡುಪಿ ಹಾಗೂ ಕಾರ್ಕಳ ತಾಲೂಕಿನಲ್ಲಿ ಕೆಲ ತಿಂಗಳ ಹಿಂದೆ ಕಲುಷಿತ ನೀರಿನಿಂದ ತಯಾರಿಸಿದ ಐಸ್‌ಕ್ಯಾಂಡಿ ಸೇವಿಸಿ ನೂರಾರು ಮಕ್ಕಳು ಅಸ್ವಸ್ಥರಾಗಿದ್ದರು. ಮನೆ ಮನೆಗೆ ತಂದು ಐಸ್‌ ಕ್ಯಾಂಡಿ ಮಾರಾಟ ಮಾಡಿದ್ದನ್ನು ಖರೀದಿಸಿ ತಿಂದದ್ದೇ ಈ ಅವಾಂತರಕ್ಕೆ ಕಾರಣವಾಗಿತ್ತು.

ಪೊಲೀಸರು ಸ್ವಯಂಪ್ರೇರಿತರಾಗಿ ಪ್ರಕರಣ ದಾಖಲಿಸಿದ್ದರೂ ತಯಾರಕರ ಮೇಲೆ ಕಾನೂನು ಕ್ರಮ ಕೈಗೊಳ್ಳಲು ತಾಂತ್ರಿಕ ಅಡಚಣೆಗಳಿದ್ದವು. ಪ್ರಯೋಗಾಲಯ ವರದಿ ಬರದೇ ಪ್ರಕರಣ ದಾಖಲಿಸುವಂತಿರಲಿಲ್ಲ. ಹಾಗಿದ್ದರೂ ಪೊಲೀಸರು ಐಸ್‌ಕ್ಯಾಂಡಿ ತಯಾರಕ ಸಂಸ್ಥೆಯನ್ನು ಪತ್ತೆ ಹಚ್ಚಿದ್ದರು. ಆದರೆ ಈ ಕುರಿತು ಆಹಾರ ಸುರಕ್ಷತಾ ಇಲಾಖೆ ಯಾವುದೇ ಪ್ರಕರಣ ದಾಖಲಿಸಿರಲಿಲ್ಲ. ಈ ನಿಟ್ಟಿನಲ್ಲಿ ಜಿಲ್ಲಾಧಿಕಾರಿಗಳ ಸೂಚನೆ ಮಹತ್ವ ಪಡೆದಿದೆ. ಘಟನೆ ನಡೆದ ಸಂದರ್ಭ ಆರೋಗ್ಯ ಇಲಾಖೆ ಹಾಗೂ ಪೊಲೀಸರು ಕೈಗೊಂಡ ಸಕಾಲಿಕ ಕ್ರಮ ವ್ಯಾಪಕ ಮೆಚ್ಚುಗೆಗೆ ಕಾರಣವಾಗಿತ್ತು.

ಜಿಲ್ಲೆಯಲ್ಲಿ ಕಲುಷಿತ ನೀರಿನಿಂದ ತಯಾರಿಸಿದ ಐಸ್‌ಕ್ಯಾಂಡಿ ಸೇವಿಸಿ ಸುಮಾರು 78 ಮಕ್ಕಳು ಅಸ್ವಸ್ಥಗೊಂಡಿದ್ದು, ಈ ಕುರಿತಂತೆ ಐಸ್‌ಕ್ಯಾಂಡಿ ತಯಾರಕರ ವಿರುದ್ಧ ಇದುವರೆಗೆ ಸೂಕ್ತ ಕ್ರಮ ಕೈಗೊಳ್ಳದ ಕುರಿತು ತಮ್ಮ ಅಸಮಾಧಾನ ವ್ಯಕ್ತಪಡಿಸಿದ ಜಿಲ್ಲಾಧಿಕಾರಿ, ಈ ಕುರಿತಂತೆ ಕೂಡಲೇ ಪ್ರಕರಣ ದಾಖಲಿಸಿ ಕ್ರಮ ಕೈಗೊಳ್ಳಿ, ಇದು ಕಲುಷಿತ ಆಹಾರ ಉತ್ಪನ್ನ ತಯಾರಿಕರಿಗೆ ಎಚ್ಚರಿಕೆ ನೀಡಿದಂತಾಗುತ್ತದೆ ಎಂದು ಅಧಿಕಾರಿಗಳಿಗೆ ಸೂಚಿಸಿದರು.

ಆಹಾರ ತಯಾರಿಕಾ ಘಟಕಗಳಿಗೆ ಸುರಕ್ಷತಾ ಅಧಿಕಾರಿಗಳು ನಿಯಮಿತವಾಗಿ ಭೇಟಿ ನೀಡಿ, ಅಲ್ಲಿನ ಶುಚಿತ್ವ ಸೇರಿದಂತೆ, ಆಹಾರ ತಯಾರಿಕೆಗೆ ಕೈಗೊಂಡಿರುವ ಸುರಕ್ಷತಾ ಕ್ರಮಗಳ ಬಗ್ಗೆ ಪರಿಶೀಲನೆ ನಡೆಸಬೇಕು, ಈ ಕುರಿತು ಪ್ರತಿ ತಿಂಗಳು ವೇಳಾಪಟ್ಟಿ ಸಿದ್ಧಪಡಿಸಿಕೊಂಡು ಕಾರ್ಯನಿರ್ವಹಿಸಿ ಎಂದರು.

ಜಿಲ್ಲೆಯ ಪ್ರವಾಸಿ ತಾಣಗಳು ಮತ್ತು ಬೀಚ್ ಪ್ರದೇಶದಲ್ಲಿನ ಗೂಡಂಗಡಿಗಳಲ್ಲಿ ತಯಾರಿಸುವ ಆಹಾರದ ಗುಣಮಟ್ಟ ಪರಿಶೀಲಿಸಿ ಮತ್ತು ಅಲ್ಲಿ ಐಸ್‌ ಕ್ರೀಂ ಮತ್ತು ಇತರ ಆಹಾರ ಸ್ವೀಕರಿಸಲು ಪ್ಲಾಸ್ಟಿಕ್‌ ಚಮಚ ಮತ್ತು ಇತರೆ ಪ್ಲಾಸ್ಟಿಕ್‌ ಉತ್ಪನ್ನಗಳನ್ನು ಬಳಸುತ್ತಿರುವ ಕುರಿತಂತೆ ದೂರುಗಳಿದ್ದು, ಸಂಬಂಧಪಟ್ಟ ನಗರಸಭೆ ಮತ್ತು ಪುರಸಭೆಯ ಅಧಿಕಾರಿಗಳು ಮತ್ತು ಆಹಾರ ಸುರಕ್ಷತಾ ಅಧಿಕಾರಿಗಳು ಪರಿಶೀಲಿಸಿ ವರದಿ ನೀಡುವಂತೆ ಸೂಚಿಸಿದ್ದಾರೆ.

ಜಿಲ್ಲೆಯ ಮೀನುಗಳಲ್ಲಿ ಫಾರ್ಮಾಲಿನ್‌ ಸಿಂಪಡಣೆ ಕುರಿತಂತೆ ಪರಿಶೀಲಿಸಲಾಗಿ ನೆಗೆಟಿವ್‌ ವರದಿ ಬಂದಿದೆ, 68 ಮೀನು ಸಾಗಾಟ ವಾಹನಗಳಿಗೆ ಆಹಾರ ಸುರಕ್ಷತಾ ಪರವಾನಗಿ ನೀಡಲಾಗಿದೆ.

ಜಿಲ್ಲೆಯಲ್ಲಿ 15 ಕುಡಿಯುವ ನೀರು ಘಟಕಗಳಿದ್ದು, ಯಾವುದೇ ಅನಧಿಕೃತ ಘಟಕಗಳು ಇಲ್ಲ ಎಂದು ಜಿಲ್ಲಾ ಸವೇಕ್ಷಣಾಧಿಕಾರಿ ಡಾ| ವಾಸುದೇವ್‌ ಮಾಹಿತಿ ನೀಡಿದರು.

ಸಭೆಯಲ್ಲಿ ಎಎಸ್ಪಿ ಕುಮಾರಚಂದ್ರ, ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ| ಎಂ. ಜಿ. ರಾಮ, ಜಿಲ್ಲಾ ಸರ್ಜನ್‌ ಡಾ| ಮಧುಸೂದನ್‌ ಹಾಗೂ ವಿವಿಧ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

ಟಾಪ್ ನ್ಯೂಸ್

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Nomination: ಸರಳ ರೀತಿಯಲ್ಲಿ ನಾಮಪತ್ರ ಸಲ್ಲಿಸಿದ ಪ್ರಿಯಂಕಾ ಜಾರಕಿಹೊಳಿ‌

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

Lok Sabha Election 2024; ಚಿಕ್ಕಬಳ್ಳಾಪುರಕ್ಕೆ ನಾನೇ ಪವನ್‌ ಕಲ್ಯಾಣ್‌!

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

ಚಿಕ್ಕಮಗಳೂರು-ಉಡುಪಿ ಕ್ಷೇತ್ರ: ಜನಹಿತ ಕಾರ್ಯಕ್ಕೆ ಸದಾ ಬದ್ಧ: ಹೆಗ್ಡೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Jadkal: ಬೈಕ್‌ಗಳ ಢಿಕ್ಕಿ, ಸವಾರರಿಗೆ ಗಂಭೀರ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

Gangolli ರಿಕ್ಷಾಗೆ ಕಾರು ಢಿಕ್ಕಿ ; ಚಾಲಕನಿಗೆ ಗಾಯ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

kejriwal 2

Diabetes ಇದ್ದರೂ ಕೇಜ್ರಿವಾಲ್ ಸಿಹಿ ಹೆಚ್ಚೆಚ್ಚು ತಿನ್ನುತ್ತಿದ್ದಾರೆ!: ಕೋರ್ಟ್ ಗೆ ಇಡಿ

Devon Conway ruled out of IPL 2024

CSK; ಐಪಿಎಲ್ ನಿಂದ ಹೊರಬಿದ್ದ ಕಾನ್ವೆ; ಚೆನ್ನೈ ಪಾಳಯಕ್ಕೆ ಇಂಗ್ಲೆಂಡ್ ವೇಗಿ ಸೇರ್ಪಡೆ

1—-wewewqe

Kalaburagi;ಆನೆ ಪ್ರತಿಮೆ ಏರಿ ನಾಮಪತ್ರ ಸಲ್ಲಿಸಲು ಬಂದ ಹುಚ್ಚಪ್ಪ

raj k shilpa

ED; ರಾಜ್ ಕುಂದ್ರಾ ಅವರ 97 ಕೋಟಿ ರೂ. ಮೌಲ್ಯದ ಆಸ್ತಿ ಜಪ್ತಿ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

LokSabha Election; ಕಾಂಗ್ರೆಸ್ ಪರ ನಟ ದರ್ಶನ್ ಪ್ರಚಾರಕ್ಕೆ ಕುಮಾರಸ್ವಾಮಿ ಪ್ರತಿಕ್ರಿಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.