ಹೊರರಾಜ್ಯದ ದೋಣಿಗಳಿಂದ ಅಕ್ರಮ ಮೀನುಗಾರಿಕೆ

ಅನುಮತಿಯಿಲ್ಲದೆ ಅನ್ಯ ರಾಜ್ಯದ ದೋಣಿ ಪ್ರವೇಶಿಸುವಂತಿಲ್ಲ ; ಸೂಕ್ತ ಕ್ರಮಕ್ಕೆ ಗಂಗೊಳ್ಳಿ ಮೀನುಗಾರರ ಆಗ್ರಹ

Team Udayavani, Oct 13, 2019, 5:37 AM IST

1210KDPP2

ಗಂಗೊಳ್ಳಿ: ಹೊರರಾಜ್ಯದ ಗಿಲ್‌ನೆಟ್‌ ದೋಣಿಗಳ ಮೀನುಗಾರರು ಗಂಗೊಳ್ಳಿ ಬಂದರು ಪ್ರದೇಶ ವ್ಯಾಪ್ತಿಯಲ್ಲಿ ಮೀನುಗಾರಿಕೆ ನಡೆಸಿ ಗಂಗೊಳ್ಳಿ ಮೀನುಗಾರಿಕಾ ಬಂದರಿಗೆ ಬರುತ್ತಿವೆ ಎನ್ನಲಾಗಿದ್ದು, ಇತರ ರಾಜ್ಯಗಳ ಮೀನುಗಾರರ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಮೀನುಗಾರರು ಆಗ್ರಹಿಸಿದ್ದಾರೆ.

ಕೇರಳ ರಾಜ್ಯದ ಅನೇಕ ಗಿಲ್‌ನೆಟ್‌ ದೋಣಿಗಳು ನಿಯಮ ಮೀರಿ ಗಂಗೊಳ್ಳಿ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿವೆ. ಮೀನುಗಾರಿಕೆ ಮಾಡುತ್ತಲೆ ಅರಿವಿಲ್ಲದೆ ಗಡಿ ದಾಟಿದರೆ ಅಥವಾ ದುರಸ್ತಿ ಉದ್ದೇಶ ದಿಂದ ಇತ್ತ ಕಡೆ ಬರುವುದು ನಡೆಯುತ್ತಿರುತ್ತದೆ. ಆದರೆ ಇತ್ತೀಚೆಗೆ ಕೇರಳದ ಗಿಲ್‌ನೆಟ್‌ ದೋಣಿಗಳು ನಮ್ಮ ಬಂದರಿನಲ್ಲಿ ಮೀನು ಇಳಿಸು ತ್ತಿರುವುದು ಸಹ ನಡೆಯುತ್ತಿದ್ದು ಸಂಬಂಧಿತ ಇಲಾಖೆಗಳು ಪರಿಶೀಲನೆ ನಡೆಸುವಂತೆ ಮೀನುಗಾರರು ಒತ್ತಾಯಿಸಿದ್ದಾರೆ.

ಅನುಮತಿಯಿಲ್ಲದೆ ಪ್ರವೇಶವಿಲ್ಲ
ಹೊರರಾಜ್ಯದ ಮೀನುಗಾರಿಕಾ ದೋಣಿಗಳು ರಾಜ್ಯದ ಮೀನುಗಾರಿಕೆ ಬಂದರು ಪ್ರವೇಶಿಸಬೇಕಾದರೆ ಕೆಲವೊಂದು ನಿಬಂಧನೆಗೆ ಒಳಪಡಬೇಕಾಗಿದೆ. ರಾಜ್ಯದ ಕರಾವಳಿ ಪ್ರದೇಶದಲ್ಲಿ ಮೀನುಗಾರಿಕೆ ಮಾಡುವಂತಿಲ್ಲ. ಅನುಮತಿ ಪಡೆಯದೆ ಬಂದರಿನಲ್ಲಿ ಮೀನು ಇಳಿಸುವಂತಿಲ್ಲ. ಏನಾದರೂ ಅನಾಹುತ ಸಂಭವಿಸಿದಾಗ ಅಥವಾ ಇನ್ನು ಯಾವುದಾದರೂ ತುರ್ತು ಸಂದರ್ಭಗಳಲ್ಲಿ ಮಾತ್ರ ಪ್ರವೇಶಿಸಲು ಅವಕಾಶ ಇರುತ್ತದೆ. ಜಿಲ್ಲೆಯ ಮೀನುಗಾರಿಕೆ ಉಪನಿರ್ದೇಶಕರ ಹಾಗೂ ಕರಾವಳಿ ಕಾವಲು ಪಡೆಯ ಅನುಮತಿ ಪಡೆಯಬೇಕು. ಅನುಮತಿ ಪಡೆದು ಪ್ರವೇಶಿಸುವ ದೋಣಿಗಳು ಮೀನುಗಾರಿಕೆ ಚಟುವಟಿಕೆ ಮತ್ತು ಮೀನು ಮಾರಾಟ ಪ್ರಕ್ರಿಯೆಯಲ್ಲಿ ತೊಡಗುವಂತಿಲ್ಲ. ಆದರೆ ಗಂಗೊಳ್ಳಿ ವ್ಯಾಪ್ತಿಯಲ್ಲಿ ಕೇರಳ ವ್ಯಾಪ್ತಿಯ ಗಿಲ್‌ನೆಟ್‌ ದೋಣಿಗಳು ಹೆಚ್ಚಿನ ಸಂಖ್ಯೆಯಲ್ಲಿ ಮೀನುಗಾರಿಕೆಯಲ್ಲಿ ಪಾಲ್ಗೊಂಡಿರುವುದಲ್ಲದೆ ಮೀನು ಮಾರಾಟವನ್ನು ಸಹ ನಡೆಸುತ್ತಿವೆ ಎನ್ನುವುದು ಮೀನುಗಾರರ ಆರೋಪವಾಗಿದೆ.

ಯಾರು ಹೊಣೆ?
ಅನ್ಯರಾಜ್ಯದ ದೋಣಿಗಳು ನಮ್ಮ ಬಂದರು ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿರುವುದು ಬೆಳಕಿಗೆ ಬಂದಿದೆ. ಅನುಮತಿ ಪಡೆಯದೆ ನಮ್ಮಲ್ಲಿ ಮೀನುಗಾರಿಕೆ ನಡೆಸುತ್ತಿರುವುದು ಕಾನೂನು ಬಾಹಿರ. ಏಜೆಂಟರ ಮೂಲಕ ಕೆಲವು ದೋಣಿಗಳು ಮೀನು ಇಳಿಸುವಿಕೆ ಸಹ ಮಾಡುತ್ತಿವೆ. ನಮ್ಮ ಭಾಗದಲ್ಲಿ ಅನ್ಯರಾಜ್ಯದ ಮೀನುಗಾರಿಕೆ ದೋಣಿಗಳು ಎಷ್ಟಿವೆ. ಅವುಗಳು ನಿಯಮ ಪಾಲಿಸುತ್ತಿವೆಯೇ ಎಂಬುದರ ಬಗ್ಗೆ ಸಂಬಂಧಿಸಿದ ಇಲಾಖೆ ಗಮನಹರಿಸಬೇಕು. ಮೀನುಗಾರಿಕೆ ಹೆಸರಿನಲ್ಲಿ ಇನ್ನೇನಾದರೂ ಘಟನೆ ಸಂಭವಿಸಿದರೆ ಅದಕ್ಕೆ ಹೊಣೆಯಾಗುವವರು ಯಾರು ಎಂಬುದು ಆಲೋಚಿಸಬೇಕಾಗಿದೆ. ಈ ನಿಟ್ಟಿನಲ್ಲಿ ಸಂಬಂಧಿತ ಇಲಾಖೆಯವರು ತುರ್ತು ತಪಾಸಣೆ ನಡೆಸಬೇಕಾಗಿದೆ ಎಂದು ಸ್ಥಳೀಯ ಮೀನುಗಾರರು ಸಂಬಂಧಪಟ್ಟ ಇಲಾಖಾಧಿಕಾರಿಗಳನ್ನು ಒತ್ತಾಯಿಸಿದ್ದಾರೆ.

ಈ ಬಗ್ಗೆ ಗಮನವಹಿಸಲಿ
ಕೇರಳ ರಾಜ್ಯದ ಅನೇಕ ಗಿಲ್‌ನೆಟ್‌ ದೋಣಿಗಳು ನಿಯಮ ಮೀರಿ ಗಂಗೊಳ್ಳಿ ವ್ಯಾಪ್ತಿಯಲ್ಲಿ ಕಾರ್ಯಾಚರಿಸುತ್ತಿದ್ದು, ದೋಣಿ ದುರಸ್ತಿ ಮತ್ತಿತರ ಉದ್ದೇಶದಿಂದ ಗಂಗೊಳ್ಳಿ ಮೀನುಗಾರಿಕಾ ಬಂದರು ಕಡೆ ಬರುವುದು ನಡೆಯುತ್ತಿರುತ್ತದೆ. ಆದರೆ ಇತ್ತೀಚೆಗೆ ಕೇರಳದ ಗಿಲ್‌ನೆಟ್‌ ದೋಣಿಗಳು ನಮ್ಮ ಬಂದರಿನಲ್ಲಿ ಮೀನು ಇಳಿಸುತ್ತಿರುವುದು ಸಹ ನಡೆಯುತ್ತಿದ್ದು ಸಂಬಂಧಿತ ಇಲಾಖೆಗಳು ಪರಿಶೀಲನೆ ನಡೆಸಬೇಕು.
ಎಚ್‌.ಮಂಜು ಬಿಲ್ಲವ, ಅಧ್ಯಕ್ಷರು ಗಂಗೊಳ್ಳಿ ವಲಯ ನಾಡಾದೋಣಿ ಮೀನುಗಾರರ ಸಂಘ

ಶೀಘ್ರ ಕಾರ್ಯಾಚರಣೆ
ಅನ್ಯರಾಜ್ಯದ ಗಿಲ್‌ನೆಟ್‌ ದೋಣಿಗಳು ಕಾರ್ಯಾಚರಿಸುತ್ತಿವೆ ಎಂಬ ಬಗ್ಗೆ ಮಾಹಿತಿ ಬಂದಿದೆ. ಅನುಮತಿಯಿಲ್ಲದೆ ಅಕ್ರಮ ಪ್ರವೇಶಿಸಿದ ದೋಣಿಗಳಿಗೆ ಕರ್ನಾಟಕ ಕರಾವಳಿ ಮೀನುಗಾರಿಕೆ ಅಧಿನಿಯಮ ಪ್ರಕಾರ ದಂಡ ವಿಧಿಸಲು ಅವಕಾಶವಿದೆ. ಈಗಾಗಲೇ ಅನ್ಯರಾಜ್ಯದ ಮೀನುಗಾರರಿಗೆ ಎಚ್ಚರಿಕೆ ನೀಡಲಾಗಿದ್ದು, ಶೀಘ್ರ ಕಾರ್ಯಾಚರಣೆ ನಡೆಸಲಾಗುವುದು. ಅನ್ಯರಾಜ್ಯದ ದೋಣಿಗಳಿಂದ ಅಶಾಂತಿ ಉಂಟಾದರೆ ಕರಾವಳಿ ಕಾವಲು ಭದ್ರತಾ ಪಡೆಯ ನೆರವು ಪಡೆದು ಕಾನೂನು ಕ್ರಮ ತೆಗೆದುಕೊಳ್ಳಲಾಗುವುದು.
ದಿವಾಕರ ಖಾರ್ವಿ,
ಮೀನುಗಾರಿಕೆ ಇಲಾಖೆ ತಪಾಸಣಾಧಿಕಾರಿ

ಅಧಿಕೃತ ಮಾಹಿತಿಯಿಲ್ಲ
ಈ ಬಗ್ಗೆ ನಮಗೆ ಯಾವುದೇ ಅಧಿಕೃತ ಮಾಹಿತಿ ಬಂದಿಲ್ಲ. ಬಂದಲ್ಲಿ ಸೂಕ್ತ ಕ್ರಮ ತೆಗೆದುಕೊಳ್ಳಲಾಗುವುದು. ತುರ್ತು ಸಂದರ್ಭ ಹೊರತುಪಡಿಸಿ ಅನುಮತಿ ಪಡೆಯದೆ ಅನ್ಯರಾಜ್ಯದ ದೋಣಿಗಳು ಪ್ರವೇಶಿಸುವಂತಿಲ್ಲ. ಅನ್ಯರಾಜ್ಯದ ದೋಣಿಗಳು ಗಂಗೊಳ್ಳಿ ವ್ಯಾಪ್ತಿಯಲ್ಲಿ ಮೀನುಗಾರಿಕೆ ಚಟುವಟಿಕೆ ನಡೆಸುತ್ತಿದ್ದರೆ ಸ್ಥಳೀಯ ಮೀನುಗಾರರು ಮಾಹಿತಿ ನೀಡಬೇಕು.
– ಸಂದೀಪ ಜಿ.ಎಸ್‌., ಇನ್‌ಸ್ಪೆಕ್ಟರ್‌,
ಕರಾವಳಿ ಕಾವಲು ಪಡೆ, ಗಂಗೊಳ್ಳಿ ಠಾಣೆ

ಟಾಪ್ ನ್ಯೂಸ್

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

Udupi-Chikmagalur Poll: ಬ್ರಹ್ಮಾವರ ಬ್ಲಾಕ್‌ ಕಾಂಗ್ರೆಸ್‌ ಸಮಿತಿ- ಇಂದು ಸಾರ್ವಜನಿಕ ಸಭೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಅಡಕೆ-ಕಾಫಿ ಬೆಳೆಗಾರರ ಸಂಕಷ್ಟಕ್ಕೆ ಬಿಜೆಪಿ ಏಕೆ ಸ್ಪಂದಿಸಿಲ್ಲ: ಜಯಪ್ರಕಾಶ್‌ ಹೆಗ್ಡೆ

ಉಡುಪಿಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Udupiಗೆ ಸರಕಾರಿ ವೈದ್ಯಕೀಯ ಕಾಲೇಜು, ಎಂಜಿನಿಯರಿಂಗ್‌ ಕಾಲೇಜು: ಜಯಪ್ರಕಾಶ್‌ ಹೆಗ್ಡೆ

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

Lok Sabha Election 2024 ಕೊಡುವವನ ಪಾತ್ರ ನಿರ್ವಹಿಸಲು ಮತದಾರ ಸಜ್ಜು

13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

Theft; 13 ರಾಜ್ಯಗಳಿಗೆ ಬೇಕಾಗಿದ್ದ ಕಳ್ಳ ಕೋಟದಲ್ಲಿ ಪೊಲೀಸರ ಬಲೆಗೆ!

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Neha Hiremath ತಂದೆ ಜತೆ ಮಾತನಾಡಿ ಸಾಂತ್ವನ ಹೇಳಿದ ಸಿಎಂ ಸಿದ್ದು

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Congress ಗೆದ್ದರೆ ಸಿದ್ದರಾಮಯ್ಯ ಕೆಳಗಿಳಿಸಿ ಡಿಕೆಶಿ ಸಿಎಂ: ಯತ್ನಾಳ್

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ,

Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್‌ಗೆ ಜೀವ ಬೆದರಿಕೆ

9-aranthodu

Aranthodu: ಬೆಂಕಿ ಅವಘಡ; ತಪ್ಪಿದ ಭಾರೀ ಅನಾಹುತ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Gajendragad; ದಕ್ಷಿಣ ಕಾಶಿ ಕಾಲಕಾಲೇಶ್ವರ ಅದ್ದೂರಿ ರಥೋತ್ಸವ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.