Kaup: ಅಪರಿಚಿತ ವ್ಯಕ್ತಿಯಿಂದ ಅಕ್ರಮವಾಗಿ ಹಣ ವರ್ಗಾವಣೆ
Team Udayavani, Aug 4, 2024, 6:45 AM IST
ಕಾಪು: ಉದ್ಯಾವರದ ವ್ಯಕ್ತಿಯೋರ್ವರಿಗೆ ಸೇರಿದ ಫ್ಲ್ಯಾಟ್ ಅನ್ನು ಬಾಡಿಗೆ ಪಡೆಯುವುದಾಗಿ ನಂಬಿಸಿ ಅಪರಿಚಿತ ವ್ಯಕ್ತಿಯೊಬ್ಬ ಬ್ಯಾಂಕ್ ಖಾತೆ ವಿವರ ಪಡೆದು 84,999 ರೂಪಾಯಿ ಹಣವನ್ನು ವರ್ಗಾವಣೆ ಮಾಡಿ ವಂಚಿಸಿದ ಘಟನೆ ಆ.2ರಂದು ಬೆಳಕಿಗೆ ಬಂದಿದೆ.
ನರೇಂದ್ರ ಬಾಬು ಎಂಬವರು ಫ್ಲ್ಯಾಟ್ ಅನ್ನು ಬಾಡಿಗೆ ಕೊಡುವ ಸಲುವಾಗಿ ವೆಬ್‌ಸೈಟ್‌ನಲ್ಲಿ ಜಾಹೀರಾತು ಹಾಕಿದ್ದರು. ಇದನ್ನು ನೋಡಿ ಆ.2ರಂದು ಬೆಳಗ್ಗೆ ಅವರ ಮೊಬೈಲ್‌ಗೆ ರಣದೀಪ್ ಸಿಂಗ್ ಎಂಬ ಅಪರಿಚಿತ ವ್ಯಕ್ತಿ ಕರೆ ಮಾಡಿ ತಾನು ಭಾರತೀಯ ಸೇನೆಯಲ್ಲಿ ಕೆಲಸ ಮಾಡಿಕೊಂಡಿದ್ದು, ಕಾನ್ಪುರದಿಂದ ಉಡುಪಿಗೆ ವರ್ಗಾವಣೆಯಾಗಿರುತ್ತದೆ. ತಮ್ಮ ಜಾಹೀರಾತಿನಲ್ಲಿ ತಿಳಿಸಿರುವ ಫ್ಲ್ಯಾಟ್ ಇಷ್ಟವಾಗಿದ್ದು, ಬ್ಯಾಂಕ್ ಖಾತೆ ವಿವರವನ್ನು ಅವರಿಗೆ ಕಳುಹಿಸಿದ್ದ. ಅಪರಿಚಿತ ವ್ಯಕ್ತಿಯು ಆರ್ಮಿಯ ನಿಯಮದಂತೆ ಅಕೌಂಟ್‌ನಲ್ಲಿ ಕನಿಷ್ಟ ಬ್ಯಾಲೆನ್ಸ್ ಒಂದು ಲಕ್ಷ ರೂ. ಇದ್ದಲ್ಲಿ ಮಾತ್ರ ನಿಮ್ಮ ಖಾತೆಗೆ ಹಣ ವರ್ಗಾಯಿಸಲು ಸಾಧ್ಯವಾಗುತ್ತದೆ ಎಂದು ತಿಳಿಸಿದ್ದನು.
ಅದರಂತೆ ನರೇಂದ್ರ ಬಾಬು ಅವರು ಒಮ್ಮೆ 60 ಸಾವಿರ, ಮತ್ತೂಮ್ಮೆ 24,999 ರೂಪಾಯಿ ಹಣವನ್ನು ಖಾತೆಗೆ ವರ್ಗಾಯಿಸಿದ್ದರು. ಆ ಬಳಿಕ ಅಪರಿಚಿತ ವ್ಯಕ್ತಿ ಕರೆ ಮಾಡಿ ಒಂದು ಅಕೌಂಟ್ ನಂಬ್ರ ಹಾಗೂ ಐಎಫ್‌ಸಿ ನಂಬ್ರವನ್ನು ನೀಡಿದ್ದು ಆ ಖಾತೆಯಿಂದ ನರೇಂದ್ರ ಬಾಬು ಖಾತೆಗೆ ಹಣ ಹಾಕುವುದಾಗಿ ಗೂಗಲ್ ಪೇ ಓಪನ್ ಮಾಡುವಂತೆ ತಿಳಿಸಿದ್ದನು. ಅದರಂತೆ ಗೂಗಲ್ ಪೇ ಓಪನ್ ಮಾಡಿದಾಗ ಬ್ಯಾಂಕ್ ಖಾತೆಯಲ್ಲಿದ್ದ 60 ಸಾವಿರ ರೂ. ಮತ್ತು 24,999 ರೂ. ಹಣವನ್ನು ವರ್ಗಾವಣೆ ಮಾಡಿದ್ದು ಅನಂತರ ಅಪರಿಚಿತ ವ್ಯಕ್ತಿಗೆ ಕರೆ ಮಾಡಿದಾಗ ಕರೆ ಸ್ವೀಕರಿಸದೇ ವಂಚನೆ ಮಾಡಿದ್ದಾನೆ.
ಈ ಬಗ್ಗೆ ವಂಚನೆಗೊಳಗಾದ ನರೇಂದ್ರ ಬಾಬು ನೀಡಿದ ದೂರಿನಂತೆ ಕಾಪು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Katapady:ಚಾಲಕನ ನಿಯಂತ್ರಣ ತಪ್ಪಿ ಡಿವೈಡರ್ ಮೇಲೇರಿ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ವಾಹನ
Udupi: ಭಿಕ್ಷುಕರ ಪರಿಹಾರ ಕೇಂದ್ರಕ್ಕೆ ಜಿಲ್ಲಾಡಳಿತದಲ್ಲಿ ಭಿಕ್ಷೆ ಬೇಡಬೇಕಾದ ಸ್ಥಿತಿ
ISPRL Programme: ಪಾದೂರು ಜಲ್ಲಿ ಕ್ರಷರ್: ಸರ್ವೆಗೆ ಬಂದ ಅಧಿಕಾರಿಗಳಿಗೆ ತಡೆ
MAHE University: ವಾಗ್ಶಾ ವಿದ್ಯಾರ್ಥಿಗೆ ವಿಶ್ವ ಪಾಕಶಾಲೆ ಶ್ರೇಷ್ಠತೆ ಗರಿ
Konkani Movie: “ತರ್ಪಣ’ ಚಲನಚಿತ್ರಕ್ಕೆ ಅಂತಾರಾಷ್ಟ್ರೀಯ ಪ್ರಶಸ್ತಿ
MUST WATCH
Kaljigaದಲ್ಲಿ ದೈವದ ಅಪಪ್ರಚಾರ ನಡೆದಿಲ್ಲ, ಸಿನಿಮಾ ನೋಡಿದ ಬಳಿಕ ಈ ಬಗ್ಗೆ ಪ್ರತಿಕ್ರಿಯಿಸಿ
ನವಜಾತ ಶಿಶುಗಳಲ್ಲಿ ಶ್ರವಣ ಶಕ್ತಿ ಸಮಸ್ಯೆ ಕುರಿತು ಸಂಪೂರ್ಣ ಮಾಹಿತಿ
ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ತಾಲೂಕು ಮಟ್ಟದ ಮಾನವ ಸರಪಳಿ ಕಾರ್ಯಕ್ರಮ
ಈಟ್ ರಾಜಾ ಶಾಪ್ ನಲ್ಲಿ ಜ್ಯೂಸ್ ಕುಡಿಯೋದಷ್ಟೇ ಅಲ್ಲ ತಿನ್ನಲೂ ಬಹುದು
ಅಯ್ಯೋ…ಸಂತೆಕಟ್ಟೆ ಅಂಡರ್ ಪಾಸ್ ಪ್ರಯಾಣ ನಿತ್ಯ ನರಕ!
ಹೊಸ ಸೇರ್ಪಡೆ
Lokesh Kanagaraj: ʼಕೂಲಿʼ ಸಿನಿಮಾದ ದೃಶ್ಯ ಲೀಕ್; ಬೇಸರ ಹೊರ ಹಾಕಿದ ನಿರ್ದೇಶಕ ಲೋಕೇಶ್
Kundapura: ಗಾಂಧಿ ಮೈದಾನದಲ್ಲಿ ಸಮಸ್ಯೆಗಳದ್ದೇ ಆಟ!
ರಸ್ತೆ ಪಕ್ಕ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಲಾರಿ ಹರಿದು ಇಬ್ಬರು ಸಾವು
Chikkaballapura; ಶಾಸಕ ಪ್ರದೀಪ್ ಈಶ್ವರ್ ವಿರುದ್ಧ ದಲಿತ ಸಂಘಟನೆಗಳ ಪ್ರತಿಭಟನೆ
Bajpe ಬಸ್ ನಿಲ್ದಾಣ ಕಟ್ಟಡ ಪೂರ್ಣ; 90 ಲಕ್ಷ ರೂ. ವೆಚ್ಚದಲ್ಲಿ ನಿರ್ಮಾಣ
Thanks for visiting Udayavani
You seem to have an Ad Blocker on.
To continue reading, please turn it off or whitelist Udayavani.