ಕುಂದಾಪುರ ತಾಲೂಕು: ನೆರೆ ಸಂತ್ರಸ್ತರಿಗೆ ಸಹಾಯ ಮಾಡಿ: ಡಾ| ಮಧುಕೇಶ್ವರ್‌

Team Udayavani, Aug 16, 2019, 5:24 AM IST

1508KDLM4PH1

ಕುಂದಾಪುರ: ಕೇಸರಿ, ಬಿಳಿ, ಹಸಿರು ಬಣ್ಣದ ತ್ರಿವರ್ಣ ಧ್ವಜ ನೋಡಲು ಹೆಮ್ಮೆ. ಆದರೆ ಇದನ್ನು ಪಡೆಯಲು ಹಲವರ ತ್ಯಾಗ ಬಲಿದಾನವಿದೆ. ಬ್ರಿಟಿಷರ ದಾಸ್ಯದಿಂದ ಹೊರತಂದು ದೇಶಕ್ಕೆ ಸ್ವಾತಂತ್ರ್ಯ ತಂದುಕೊಡಲು ಶ್ರಮಿಸಿದ ಹಲವು ಮಹಾನ್‌ ನಾಯಕರ ತ್ಯಾಗವನ್ನು ಸ್ಮರಿಸುವ ಮೂಲಕ ಅವರು ಹಾಕಿಕೊಟ್ಟ ಉತ್ತಮ ಹೆಜ್ಜೆಯಲ್ಲಿ ನಾವು ಸಾಗಬೇಕು. ನಮಗೆ ಸಿಕ್ಕ ಸ್ವಾತಂತ್ರ್ಯವನ್ನು ಉಳಿಸಿಕೊಳ್ಳುವುದು ನಮ್ಮೆಲ್ಲರ ಜವಾಬ್ದಾರಿ ಮತ್ತು ಕರ್ತವ್ಯ. ದೇಶದ ಸಮಗ್ರತೆ, ಭದ್ರತೆ, ಏಕತೆಯನ್ನು ಛಿದ್ರಗೊಳಿಸಲು ಮುಂದಾಗುವ ಶಕ್ತಿಗಳ ವಿರುದ್ಧ ನಾವೆಲ್ಲರೂ ಒಗ್ಗೂಡಿ ಹೋರಾಡಬೇಕಿದೆ. ಕುಂದಾಪುರ ಈ ಹಿಂದೆ ಮದ್ರಾಸ್‌ ಪ್ರಾಂತ್ಯಕ್ಕೆ ಸೇರಿದ್ದು, ಕರಾವಳಿ ಭಾಗದ ಸ್ವಾತಂತ್ರ್ಯ ಕಲಿಗಳು ತಮ್ಮ ಕಿಚ್ಚನ್ನು ಬ್ರಿಟಿಷರಿಗೆ ಮುಟ್ಟಿಸಿ ಅವರನ್ನು ಹಿಮ್ಮೆಟ್ಟಿಸಿದ ಕಾರ್ಯವನ್ನು ನೆನೆಯಬೇಕು. ರಾಜ್ಯದ ವಿವಿಧೆಡೆ ನೆರೆ ಸಮಸ್ಯೆಯಿದ್ದು ಕೈಲಾದಷ್ಟು ಸಹಕಾರವನ್ನು ಚೆಕ್‌ ಮುಖಾಂತರ ಮುಖ್ಯಮಂತ್ರಿ ಪರಿಹಾರ ನಿಧಿಗೆ ನೀಡಬಹುದಾಗಿದೆ ಎಂದು ಕುಂದಾಪುರ ಉಪವಿಭಾಗದ ಸಹಾಯಕ ಕಮಿಷನರ್‌ ಡಾ| ಎಸ್‌. ಎಸ್‌. ಮಧುಕೇಶ್ವರ್‌ ಹೇಳಿದರು.

ಅವರು ಗುರುವಾರ ಕುಂದಾಪುರದ ಗಾಂಧಿ ಮೈದಾನ ದಲ್ಲಿ 73ನೇ ಸ್ವಾತಂತ್ರ್ಯ ದಿನಾಚರಣೆಯ ಧ್ವಜಾರೋಹಣ ಗೈದು ಸ್ವಾತಂತ್ರ್ಯೋತ್ಸವ ಸಂದೇಶ ನೀಡಿದರು.

ಇದೇ ಸಂದರ್ಭ ಕಳೆದ ಸಾಲಿನ ಎಸೆಸೆಲ್ಸಿ ಪರೀಕ್ಷೆಯಲ್ಲಿ ಅತ್ಯಧಿಕ ಅಂಕ ಗಳಿಸಿದ ಕುಂದಾಪುರ ವಲಯದ ಸರಕಾರಿ ಪ್ರೌಢಶಾಲೆಯ ಐದು ಮಂದಿ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್‌ ನೀಡಲಾಯಿತು.

ಕುಂದಾಪುರ ತಾಲೂಕು ಪಂಚಾಯತ್‌ ಉಪಾಧ್ಯಕ್ಷ ರಾಮಕಿಶನ್‌ ಹೆಗ್ಡೆ ಅಧ್ಯಕ್ಷತೆ ವಹಿಸಿದ್ದರು.ಕುಂದಾಪುರ ಡಿವೈಎಸ್ಪಿ ಬಿ.ಪಿ. ದಿನೇಶ್‌ ಕುಮಾರ್‌, ತಹಶೀಲ್ದಾರ್‌ ತಿಪ್ಪೇಸ್ವಾಮಿ, ಕುಂದಾಪುರ ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌, ಕುಂದಾಪುರ ಪುರಸಭೆ ಮುಖ್ಯಾಧಿಕಾರಿ ಗೋಪಾಲಕೃಷ್ಣ ಶೆಟ್ಟಿ, ಕುಂದಾಪುರ ಸರ್ಕಲ್‌ ಇನ್‌ಸ್ಪೆಕ್ಟರ್‌ ಮಂಜಪ್ಪ, ಎಸ್‌ಐ ಹರೀಶ್‌ ನಾಯ್ಕ, ತಾ.ಪಂ. ಪ್ರಭಾರ ಕಾರ್ಯನಿರ್ವಹಣಾಧಿಕಾರಿ ಡಾ| ನಾಗಭೂಷಣ್‌ ಉಡುಪ, ಯುವಜನ ಸೇವಾ ಮತ್ತು ಕ್ರೀಡಾಧಿಕಾರಿ ಕುಸುಮಾಕರ್‌ ಶೆಟ್ಟಿ, ತೋಟಗಾರಿಕೆ ಇಲಾಖೆ ಸಹಾಯಕ ನಿರ್ದೇಶಕ ಸಂಜೀವ ನಾಯ್ಕ, ತಾಲೂಕು ಸರಕಾರಿ ನೌಕರರ ಸಂಘದ ಅಧ್ಯಕ್ಷ ಅಂಪಾರು ದಿನಕರ ಶೆಟ್ಟಿ, ಪುರಸಭೆ ಸದಸ್ಯರಾದ ದೇವಕಿ ಸಣ್ಣಯ್ಯ, ಪ್ರಭಾಕರ್‌, ಜಿ.ಕೆ. ಗಿರೀಶ್‌, ಶ್ರೀಧರ ಸೇರಿಗಾರ್‌, ಸಂತೋಷ್‌ ಶೆಟ್ಟಿ, ಮಾಜಿ ಪುರಸಭಾಧ್ಯಕ್ಷರಾದ ವಸಂತಿ ಸಾರಂಗ, ಗುಣರತ್ನಾ, ಮಾಜಿ ಉಪಾಧ್ಯಕ್ಷ ರಾಜೇಶ್‌ ಕಾವೇರಿ ಮತ್ತಿತರರಿದ್ದರು.ದೈಹಿಕ ಶಿಕ್ಷಣ ಶಿಕ್ಷಕ ಚಂದ್ರಶೇಖರ್‌ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಪರೇಡ್‌ಗೆ ಮಳೆ ಅಡಚಣೆ
ರಾಜ್ಯದ ಹಲವೆಡೆ ನೆರೆ ಹಿನ್ನೆಲೆಯಲ್ಲಿ ಸರಳ ಸ್ವಾತಂತ್ರ್ಯೋತ್ಸವ ಆಚರಿಸಲಾಯಿತು. ಗುರುವಾರ ಬೆಳಗ್ಗೆ ಎಡೆಬಿಡದೆ ಮಳೆ ಸುರಿದಿದ್ದು ಪರೇಡ್‌ ಮಾಡಲು ಅಡಚಣೆಯಾಗಿತ್ತು. ಕುಂದಾಪುರ ಠಾಣಾಧಿಕಾರಿ ಹರೀಶ್‌ ಆರ್‌. ನಾಯ್ಕ ಅವರ ನೇತೃತ್ವದಲ್ಲಿ ಪೊಲೀಸ್‌, ಗೃಹರಕ್ಷಕ, ಎನ್‌ಸಿಸಿ, ಸ್ಕೌಟ್ಸ್‌ ಆ್ಯಂಡ್‌ ಗೈಡ್ಸ್‌, ಭಾರತ್‌ ಸೇವಾದಳ ತಂಡ, ವಿವಿಧ ಶಾಲೆಗಳ ವಿದ್ಯಾರ್ಥಿಗಳು ಪಥ ಸಂಚಲನಕ್ಕೆ ಸಿದ್ಧತೆ ಮಾಡಿಕೊಂಡಿದ್ದರೂ ಕೂಡ ಮಳೆ ಹಿನ್ನೆಲೆ ಅದನ್ನು ರದ್ದುಗೊಳಿಸಿ ಧ್ವಜವಂದನೆ ಮಾತ್ರ ನಡೆಸಲಾಯಿತು. ವಿವಿಧ ಶಾಲಾ ವಿದ್ಯಾರ್ಥಿಗಳ ಸಾಂಸ್ಕೃತಿಕ ಕಾರ್ಯಕ್ರಮ ಕೂಡಾ ರದ್ದಾಯಿತು. ಮಳೆಯ ನಡುವೆಯೂ ಮಕ್ಕಳು ಕೊಡೆ ಹಿಡಿದು ಕಾರ್ಯಕ್ರಮದಲ್ಲಿ ಭಾಗವಹಿಸಿದರು.

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

accident

Bramavara; ಹೆದ್ದಾರಿಯಲ್ಲಿ ಭೀಕರ ಅಪಘಾತ: ಲಾರಿಗೆ ಸಿಲುಕಿ ಬೈಕ್ ಸವಾರ ದುರ್ಮರಣ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

1-wqeqwew

BJP ನುಡಿದಂತೆ ನಡೆಯದ ಕೇಂದ್ರ ಸರಕಾರ, 15 ಲ.ರೂ. ಬಂದಿದೆಯೇ?: ಜೆ.ಪಿ. ಹೆಗ್ಡೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.