ಸ್ವಾತಂತ್ರ್ಯಹೋರಾಟಗಾರ, ಶೈಕ್ಷಣಿಕ ಹರಿಕಾರ: ಪಂಡಿತ್‌ ಸಂಸ್ಮರಣೆ


Team Udayavani, Dec 19, 2018, 3:20 AM IST

sk-suvarna-18-12.jpg

ಶಿರ್ವ: ಎಳವೆಯಲ್ಲೇ ಮುಂಬಯಿಗೆ ತೆರಳಿ, ದಿನವಿಡೀ ದುಡಿದು, ರಾತ್ರಿ ಶಾಲೆಯಲ್ಲಿ ಕಲಿತು, ಸ್ವಾತಂತ್ರ್ಯ ಹೋರಾಟಗಾರನಾಗಿ ಕ್ವಿಟ್‌ ಇಂಡಿಯಾ ಸಹಿತ ವಿವಿಧ ಚಳುವಳಿಗಳಲ್ಲಿ ಭಾಗವಹಿಸಿ, ಕೃಷ್ಣ ಮೆನನ್‌ ಅವರ ಆಪ್ತ ಸಹಾಯಕರಾಗಿ, ಮುಂದೆ ಭೂಗತರಾಗಿ ದೊಡ್ಡ ಮಟ್ಟದ ಹೋರಾಟಗಳನ್ನು ಸಂಘಟಿಸಿದ ಮೂಡುಬೆಳ್ಳೆಯ ದಿ|ಪಂಡಿತ್‌ ಡಾ|ಎಸ್‌.ಕೆ. ಸುವರ್ಣ ಅವರ 25ನೇ ಸಂಸ್ಮರಣೆ ಕಾರ್ಯಕ್ರಮ ಅವರ ಕರ್ಮಭೂಮಿ ಮುಂಬಯಿ ಮತ್ತು ಹುಟ್ಟೂರು ಬೆಳ್ಳೆಯಲ್ಲಿ ವಿವಿಧ ಕಾರ್ಯಕ್ರಮಗಳೊಂದಿಗೆ ಜರಗಲಿದೆ.

ಸ್ವಾತಂತ್ರ್ಯಾನಂತರ ಸನ್ಯಾಸಿಯಾಗಿ ವಜ್ರೇಶ್ವರಿಯ ನಿತ್ಯಾನಂದರು ಮತ್ತು ಕೊಲ್ಕತ್ತಾದ ಗಂಗಾಪ್ರಸಾದರ ಶಿಷ್ಯತ್ವ ಸ್ವೀಕರಿಸಿದ್ದ ಸುವರ್ಣರು, ಧಾರ್ಮಿಕ ರಂಗದ ಪಂಡಿತ ಗುರುವಾಗಿ, ಪಾರಂಪರಿಕ ವೈದ್ಯನಾಗಿ, ಉದ್ಯಮಿಯಾಗಿ ಮುಂಬಯಿ ಹಾಗೂ ಬೆಳ್ಳೆಯಲ್ಲಿ ಜನಹಿತ ಕಾರ್ಯ ನಡೆಸಿದ್ದಾರೆ. ಮುಂಬಯಿ ಬಿಲ್ಲವರ ಅಸೋಸಿಯೇಶನ್‌ನ ಭಾಂಡುಪ್‌ ಶಾಖಾ ಅಧ್ಯಕ್ಷರಾಗಿ, ಭಾರತ್‌ ಕೋ ಆಪರೇಟಿವ್‌ ಬ್ಯಾಂಕ್‌ನ ಸ್ಥಾಪಕ ನಿರ್ದೇಶಕರಾಗಿ, ಬೆಳ್ಳೆ ಬಿಲ್ಲವ ಸಂಘದ ಸ್ಥಾಪಕರಾಗಿ, ಆದಿ ಉಡುಪಿಯ ಶ್ರೀ ಬ್ರಹ್ಮಬೈದರ್ಕಳ ಅಧ್ಯಯನ ಪ್ರತಿಷ್ಠಾನ, ಬೆಳ್ಳೆ ಗೀತಾ ಮಂದಿರದ ಸ್ಥಾಪಕ ಟ್ರಸ್ಟಿ ಮತ್ತು ಸಲಹೆಗಾರರಾಗಿ ಸೇವೆ ಸಲ್ಲಿಸಿದ್ದಾರೆ. ಮುಂಬಯಿ, ಉಡುಪಿ, ದ.ಕ. ಜಿಲ್ಲೆಯ ಶಿಕ್ಷಣ ಸಂಸ್ಥೆಗಳಿಗೆ, ಧಾರ್ಮಿಕ, ಸಾಮಾಜಿಕ ಸಂಘ ಸಂಸ್ಥೆಗಳಿಗೆ ಪಂಡಿತರು ಕೊಡುಗೈ ದಾನಿಯಾಗಿ ಬೆಂಬಲವಿತ್ತವರು.

1950ರ ದಶಕದಲ್ಲಿ ಮುಂಬಯಿಯ ಭಾಂಡುಪ್‌ನಲ್ಲಿ ಶ್ರೀ ನಿತ್ಯಾನಂದ ಆಶ್ರಮ ಸ್ಥಾಪಿಸಿದರು. ಅದೇ ಆಶ್ರಮ ಇಂದು ಮುಂಬಯಿಯ ಖ್ಯಾತ ಮಂದಿರಗಳಲ್ಲಿ ಒಂದಾದ ಭಾಂಡುಪ್‌ನ ಸ್ವಾಮಿ ನಿತ್ಯಾನಂದ ಮಂದಿರವಾಗಿದೆ. ಮೂಡುಬೆಳ್ಳೆ ಕಪ್ಪಂದಕರಿಯದಲ್ಲಿ 1960ರಲ್ಲಿ ಶ್ರೀ ನಿತ್ಯಾನಂದ ಆಶ್ರಮ ಸ್ಥಾಪಿಸಿದರು. ಮೂಡುಬೆಳ್ಳೆಗೆ ವಿದ್ಯುತ್‌, ಟೆಲಿಫೋನ್‌ ಸೌಕರ್ಯ ಒದಗಿಸುವಲ್ಲಿಯೂ ಪಂಡಿತರದ್ದು ಪ್ರಮುಖ ಪಾತ್ರ. ಬೆಳ್ಳೆ ವ್ಯವಸಾಯ ಸಹಕಾರಿ ಬ್ಯಾಂಕ್‌ನ ಅಧ್ಯಕ್ಷರಾಗಿ ಸೇವೆ ಸಲ್ಲಿಸಿದ್ದಾರೆ. ಪಡುಬೆಳ್ಳೆಯ ಶ್ರೀ ನಾರಾಯಣ ಗುರು ಶಿಕ್ಷಣ ಸಂಸ್ಥೆ ಸ್ಥಾಪನೆಗೆ ಶ್ರಮಿಸಿದವರಲ್ಲಿ ಸುವರ್ಣರು ಅಗ್ರಮಾನ್ಯರು.

1993ರ ಡಿ. 20ರಂದು ಮುಂಬಯಿಯಲ್ಲಿ ಇಹಲೋಕ ತ್ಯಜಿಸಿದ ಅವರ 25ನೇ ಸಂಸ್ಮರಣೆ ಕಾರ್ಯಕ್ರಮವು ಬೆಳ್ಳೆ ಹಾಗೂ ಮುಂಬಯಿಯಲ್ಲಿ ವೈವಿಧ್ಯಮಯ ಕಾರ್ಯಕ್ರಮಗಳೊಂದಿಗೆ ಜರಗಲಿವೆ. ಡಿ. 20, 21 ಮತ್ತು 22ರಂದು ಅವರೇ ಸ್ಥಾಪಿಸಿದ ಮುಂಬಯಿ ಭಾಂಡುಪ್‌ನ ಶ್ರೀ ನಿತ್ಯಾನಂದ ಮಂದಿರದಲ್ಲಿ ವಿವಿಧ ಧಾರ್ಮಿಕ, ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಲಿದ್ದು, ಡಿಸೆಂಬರ್‌ ಕೊನೆಯ ವಾರದಲ್ಲಿ ಪಡುಬೆಳ್ಳೆ ನಾರಾಯಣ ಗುರು ಶಾಲೆಯಲ್ಲಿ ಸಂಸ್ಮರಣಾ ಸಪ್ತಾಹ ಜರಗಲಿಕ್ಕಿದೆ.

ಟಾಪ್ ನ್ಯೂಸ್

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Vijayapura; ಬಂಜಾರರನ್ನು ಅವಮಾನಿಸಿಲ್ಲ, ವೋಟ್ ಬೇಡ ಎಂದಿಲ್ಲ: ಜಿಗಜಿಣಗಿ

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Kalaburagi; ಶೋಕಿಗಾಗಿ ನಕಲಿ‌ ಪಿಸ್ತೂಲ್ ಹಿಡಿದ ಪೋಟೋ ವೈರಲ್: ಪ್ರಕರಣ ದಾಖಲು

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

Noida; ಪ್ರೇಯಸಿಯನ್ನು ಕೊಂದು ಆತ್ಮಹತ್ಯೆಗೆ ಯತ್ನಿಸಿದ ಪ್ರಿಯಕರ!

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

11-

Inspiration: ಸ್ವಾಮಿ ಸ್ಮರಣಾನಂದ ಸೇವೆ ಎಲ್ಲರಿಗೂ ಸ್ಫೂರ್ತಿದಾಯಕ

ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ

Sandalwood: ಸ್ಟಾರ್‌ ಸಿನ್ಮಾಗಳ ರಿಲೀಸ್‌ ಟೆನ್ಶನ್‌: ಬಿಡುಗಡೆ ದಿನಾಂಕ ಘೋಷಣೆಗೂ ಮೀನಮೇಷ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

9-tmpl

Malpe: ವಡಭಾಂಡೇಶ್ವರ ಭಕ್ತವೃಂದ; ಉತ್ತಿಷ್ಠ ಭಾರತ, ಸಾಧಕರಿಗೆ ಸಮ್ಮಾನ

8-pernankila

Pernankila ದೇವಾಲಯ ಬ್ರಹ್ಮಕುಂಭಾಭಿಷೇಕ ಸಂಪನ್ನ

6-good-friday

Good Friday: ಕ್ರೈಸ್ತರಿಂದ ಕೊನೆಯ ಭೋಜನದ ಸ್ಮರಣೆ

5-toll-gate

Toll Gate: ಎ.1ರಿಂದ ಟೋಲ್‌ ದರದಲ್ಲಿ ಹೆಚ್ಚಳ

Udupi: ನೇಣು ಬಿಗಿದು ಆತ್ಮಹತ್ಯೆ

Udupi: ನೇಣು ಬಿಗಿದು ಆತ್ಮಹತ್ಯೆ

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

Sathish Ninasam- Rachita Ram: ಮ್ಯಾಟ್ನಿಯಲ್ಲಿ ಹಾರರ್‌ ಶೋ

17

ಕೋರ್ಟ್‌ ಮೇಲೆ ಪಟ್ಟಭದ್ರರ ಒತ್ತಡ: ವಕೀಲರ ಪತ್ರ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

Income Tax; ಕಾಂಗ್ರೆಸ್ ಗೆ ಐಟಿ ಶಾಕ್; 1700 ಕೋಟಿ ರೂ ನೋಟಿಸ್ ನೀಡಿದ ಆದಾಯ ತೆರಿಗೆ ಇಲಾಖೆ

16-

ನಟ, ಕಾಂಗ್ರೆಸ್‌ ಮಾಜಿ ಸಂಸದ ಗೋವಿಂದ “ಶಿಂಧೆ ಸೇನೆ’ ಸೇರ್ಪಡೆ

15-

ಕಂಗನಾ ವಿರುದ್ಧ ಪೋಸ್ಟ್: ಕೈ ನಾಯಕಿಗೆ‌ ಟಿಕೆಟ್‌ ಡೌಟ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.