ಇಂದ್ರಾಳಿ ವಿಭುದಪ್ರಿಯ ಹೊಂಡಗಳಿಗೆ ಬೇಕಿದೆ ಮುಕ್ತಿ

Team Udayavani, Sep 12, 2019, 5:20 AM IST

ಉಡುಪಿ: ಇಂದ್ರಾಳಿ ಬಳಿ ವಿಭುದಪ್ರಿಯ ನಗರದ 1ನೇ ಮುಖ್ಯರಸ್ತೆ ಹಾಗೂ 2ನೇ ಮುಖ್ಯರಸ್ತೆಯು ಹೊಂಡ- ಗುಂಡಿಗಳಿಂದ ತುಂಬಿಹೋಗಿದ್ದು, ಸಂಚಾರ ದುಸ್ತರವಾಗಿದೆ.

ಈ ರಸ್ತೆಯು ಬಹಳಷ್ಟು ಇಳಿಜಾರಾಗಿದ್ದು, ರಸ್ತೆಯ ಇಕ್ಕೆಲಗಳಲ್ಲಿ ಚರಂಡಿ ವ್ಯವಸ್ಥೆ ಕಲ್ಪಿಸಿಲ್ಲ. ಇದರಿಂದಾಗಿ ಈ ಭಾಗದಲ್ಲಿ ತೆರಳುವ ಶಾಲಾ ವಾಹನ, ಆಟೋರಿಕ್ಷಾಗಳು, ದ್ವಿಚಕ್ರ ವಾಹನ, ಶಾಲಾ ಮಕ್ಕಳು, ವೃದ್ಧರ ಸಹಿತ ಸಾರ್ವಜನಿಕರಿಗೆ ತೊಂದರೆಯುಂಟಾಗುತ್ತಿದೆ. ಈ ಬಗ್ಗೆ ಈ ವರ್ಷಾರಂಭದಲ್ಲೇ ಜಿಲ್ಲಾಧಿಕಾರಿಗಳ ಸಹಿತ ನಗರಸಭೆಯ ಅಧಿಕಾರಿಗಳಿಗೆ ಮಾಹಿತಿ ನೀಡಲಾಗಿತ್ತು. ಆದರೆ ಯಾವುದೇ ಕಾಮಗಾರಿ ನಡೆಸಿಲ್ಲ. ಈ ರಸ್ತೆಯಲ್ಲಿ ಈಗಾಗಲೇ ಹಲವು ಅವಘಡ ನಡೆದಿದ್ದು, ಕೂಡಲೇ ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸಬೇಕು ಎಂದು ಇಲ್ಲಿನ ಸ್ಥಳೀಯರು ಆಗ್ರಹಿಸಿದ್ದಾರೆ.

ಆಯುಕ್ತರ ಭೇಟಿ
ಈ ರಸ್ತೆಯ ದುಸ್ಥಿತಿಯ ಬಗ್ಗೆ ಹಲವು ಬಾರಿ ಮನವಿ ಸಲ್ಲಿಸಿದ ಅನಂತರ ಇತ್ತೀಚೆಗೆ ನಗರಸಭೆಯ ಪೌರಾಯುಕ್ತ ಆನಂದ್‌ ಕಲ್ಲೋಳಿಕರ್‌ ಅವರು ಭೇಟಿ ನೀಡಿ ಪರಿಶೀಲನೆ ನಡೆಸಿ, ಶೀಘ್ರದಲ್ಲೇ ಇದಕ್ಕೆ ಪರಿಹಾರ ಕಲ್ಪಿಸುವ ಭರವಸೆ ನೀಡಿದ್ದಾರೆ.

ಕ್ರಮ ಅಗತ್ಯ
ಈಗಾಗಲೇ ಈ ರಸ್ತೆಯಲ್ಲಿ ಹಲವು ವಾಹನಗಳು ಅವಘಡಕ್ಕೀಡಾಗಿವೆ. ಈ ಬಗ್ಗೆ ಹಲವಾರು ಬಾರಿ ನಗರಸಭೆಗೆ ಮನವಿಯನ್ನೂ ಸಲ್ಲಿಸಲಾಗಿದೆ. ಆದರೆ ಕಾಮಗಾರಿ ಆರಂಭವಾಗಿಲ್ಲ. ವಾಹನ ಸವಾರರು, ಪಾದಚಾರಿಗಳು ಇದರಿಂದಾಗಿ ಹಲವಾರು ರೀತಿಯ ತೊಂದರೆ ಅನುಭವಿಸುತ್ತಿದ್ದಾರೆ. ಶೀಘ್ರದಲ್ಲೇ ಈ ಸಮಸ್ಯೆಗೆ ಮುಕ್ತಿ ನೀಡುವ ಕೆಲಸ ಆಗಬೇಕಿದೆ.
ಯು.ದಿನೇಶ್‌ ಪೈ , ಸ್ಥಳೀಯರು

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ