ಸೋಂಕು ನಿಯಂತ್ರಣ: ಹೆಚ್ಚಿದ ಗ್ರಾ.ಪಂ. ಹೊಣೆ

Team Udayavani, May 2, 2021, 4:40 AM IST

Infection control

ಉಡುಪಿ: ಕೊರೊನಾ ಸೋಂಕು ಹೆಚ್ಚಳವಾಗುತ್ತಿರುವುದರಿಂದ ಕೊರೊನಾ ನಿಯಂತ್ರಣಕ್ಕೆ ಗ್ರಾ.ಪಂ.ಗಳ ಜವಾಬ್ದಾರಿ ಹೆಚ್ಚಿದೆ. ಗ್ರಾ.ಪಂ.ಗಳು ತಳ ಮಟ್ಟದ ಆಡಳಿತ ವ್ಯವಸ್ಥೆಯಾಗಿರು ವುದರಿಂದ ಸರಕಾರ ಇಲ್ಲಿಂದಲೇ ನಿಯಂತ್ರಣ ಸಾಧಿಸಲು ಸರಕಾರ ಚಿಂತನೆ ನಡೆಸಿದೆ.

ಹಿಂದಿನ ವರ್ಷ ರಚಿಸಲಾದ ಗ್ರಾ.ಪಂ. ಮಟ್ಟದ ಕಾರ್ಯಪಡೆ ಮತ್ತು ಗ್ರಾಮ ಮಟ್ಟದ ಕಾರ್ಯಪಡೆಯನ್ನು ಮತ್ತೆ ಚುರುಕುಗೊಳಿಸಲಾಗಿದೆ. ಗ್ರಾಮಾಂತರ ಪ್ರದೇಶಕ್ಕೆ ನಗರಗಳಿಂದ ಹಿಂದಿರುಗುವ ವಲಸೆ, ಮಹಿಳಾ ಕಾರ್ಮಿಕರು ಮತ್ತು ದುರ್ಬಲ ವರ್ಗ ದವರಿಗೆ ಊಟ, ಮಾಸ್ಕ್ ಮತ್ತು ಸ್ಯಾನಿಟೈಸರ್‌ ಒದಗಿಸುವುದಲ್ಲದೆ ಅಂಗವಿಕಲರು, ಮಹಿಳೆಯರಿಗೆ ಅವಶ್ಯ ಸೌಲಭ್ಯ ಒದಗಿಸಬೇಕೆಂದು ಸೂಚಿಸ ಲಾಗಿದೆ. ಈಗ ಬೆಂಗಳೂರು, ಮುಂಬಯಿ ಮೊದಲಾದ ನಗರಗಳಿಂದ ಊರಿಗೆ ವಲಸೆ ಬಂದವರ ಆರೋಗ್ಯ ವಿಚಾರಣೆ ಮತ್ತು ಅವರಿಗೆ ಅಗತ್ಯದ ಜೀವನ ನಿರ್ವಹಣೆ ಮುಖ್ಯವಾಗಿರುವುದರಿಂದ ಸರಕಾರ ಈ ತೆರನಾಗಿ ಚಿಂತನೆ ನಡೆಸಿದೆ.

ಅರ್ಹ ವ್ಯಕ್ತಿಗಳಿಗೆ ಲಸಿಕೆ ಸ್ವೀಕರಿಸಲು ಉತ್ತೇಜನ ನೀಡುವ ಹೊಣೆಯೂ ಇದೆ. ಸ್ವಯಂಸೇವಕರನ್ನು ಗುರುತಿಸಿ ಅವರ ಸೇವೆಯನ್ನು ಬಳಸಿಕೊಳ್ಳಲಾಗುವುದು. ಮಾಸ್ಕ್, ಸಾಬೂನು, ಸ್ಯಾನಿಟೈಸರ್‌ ಇತ್ಯಾದಿ ಪರಿಕರಗಳು, ಊಟ ಇತ್ಯಾದಿಗಳಿಗೆ 14ನೇ/15ನೇ ಹಣಕಾಸು ಆಯೋಗದ ಉಳಿದ ಅನುದಾನ ಬಳಸುವಂತೆ ಅಥವಾ ಸ್ವಂತ ಸಂಪನ್ಮೂಲ ಉಪಯೋಗಿಸಬಹುದು.

ಗರಿಷ್ಠ ಮಿತಿಯಲ್ಲಿ ನರೇಗಾ ಯೋಜನೆ ಯಡಿ ಕಾರ್ಮಿಕರಿಗೆ ಉದ್ಯೋಗ ದೊರಕಿಸಿಕೊಡಲು ಸೂಚಿಸಲಾಗಿದೆ. ಊರಿನ ಕೆರೆ, ಮದಗ ಇತ್ಯಾದಿಗಳ ಹೂಳೆತ್ತುವಿಕೆ ಜತೆ ವೈಯಕ್ತಿಕ ಕೃಷಿ ಮತ್ತು ತೋಟಗಾರಿಕೆ ಇಲಾಖೆಯ ಕೆಲಸಗಳಿಗೂ ಯೋಜನೆಯನ್ನು ಬಳಸಿಕೊಳ್ಳ ಬಹುದಾಗಿದೆ. ಬಡವರಿಗೆ ಊಟಕ್ಕೆ ತೊಂದರೆಯಾಗಬಾರದೆಂಬ ಕಾರಣಕ್ಕೆ ನರೇಗಾಕ್ಕೆ ಒತ್ತು ನೀಡಲಾಗುತ್ತಿದೆ.
ಪಾಸಿಟಿವ್‌ ಬಂದವರು ಹೋಮ್‌ ಕ್ವಾರಂಟೈನ್‌ನಲ್ಲಿದ್ದರೆ ಅವರನ್ನು ನಿಗಾ ವಹಿಸುವುದು, ಅವರು ನಿಯಮಾವಳಿ ಉಲ್ಲಂಘನೆ ಮಾಡುತ್ತಾರೋ ಎಂಬುದನ್ನು ನೋಡುವುದು ಕಾರ್ಯಪಡೆಯ ಜವಾಬ್ದಾರಿ. ಇದನ್ನು ವಾಚ್‌ಆ್ಯಪ್‌ ಮೂಲಕ ತಾಂತ್ರಿಕವಾಗಿ ಮೇಲ್ವಿಚಾರಣೆ ನಡೆಸಲು ನಿರ್ದೇಶನ ಬಂದಿದೆ.

ಟಾಪ್ ನ್ಯೂಸ್

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

1-sadsadad

CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Bantwal ಕುಮ್ಡೇಲು: ಹಳೆದ್ವೇಷದ ಹಿನ್ನೆಲೆ ಯುವಕನಿಗೆ ಚೂರಿ ಇರಿತ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-adasdsad

Davanagere; ಪ್ರಧಾನಿ ಮೋದಿ ರ್‍ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್‍ಯಾಂಕ್‌ ಪಡೆದ ತೀರ್ಥಹಳ್ಳಿಯ ಸುಚಿಂತ್

1-wewqewqewq

Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ

Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್‌.ವರಲಕ್ಷ್ಮೀ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.