ಉಡುಪಿಯಲ್ಲಿದೆ ಅಂತಾರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರ

ವಿದೇಶದಲ್ಲಿ ಸುರಕ್ಷಿತ ಉದ್ಯೋಗ

Team Udayavani, Feb 15, 2023, 5:12 AM IST

ಉಡುಪಿಯಲ್ಲಿದೆ ಅಂತಾರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರ

ಉಡುಪಿ: ವಿದೇಶದಲ್ಲಿ ಉದ್ಯೋಗ ಮಾಡಲು ಆಸಕ್ತಿ ಇರುವವರಿಗೆ ಸರಕಾರವೇ ಅಗತ್ಯ ಸಹಾಯ ಮಾಡಲಿದೆ.

ವಿದೇಶಕ್ಕೆ ತೆರಳಲು ಇರಬೇಕಾದ ಅರ್ಹತೆ, ಅಲ್ಲಿ ಎದುರಿಸಬೇಕಾದ ಕಾನೂನು ಪ್ರಕ್ರಿಯೆ, ಸಮಸ್ಯೆಯಾದಲ್ಲಿ ಯಾರನ್ನು ಸಂಪರ್ಕಿಸಬೇಕು, ಸುರಕ್ಷಿತವಾಗಿ ವಿದೇಶಕ್ಕೆ ತೆರಳಿ, ಸುಗಮವಾಗಿ ಸ್ವದೇಶಕ್ಕೆ ಮರಳು ಅನುಸರಿಸಬೇಕಾದ ವಿಧಾನ? ಈ ರೀತಿಯ ಹತ್ತಾರು ಸಂದೇಹಗಳಿಗೆ ಉಡುಪಿ ಜಿಲ್ಲೆಯಲ್ಲಿ ಆರಂಭವಾಗಿರುವ ಅಂತಾರಾಷ್ಟ್ರೀಯ ವಲಸೆ ಮಾಹಿತಿ ಕೇಂದ್ರದಲ್ಲಿ ಉಚಿತವಾಗಿ ಪರಿಹಾರ ಪಡೆಯಬಹುದು.

ವಿದೇಶಕ್ಕೆ ತೆರಳುವ ರಾಜ್ಯದ ಕಾರ್ಮಿಕರಿಗೆ ರಾಜ್ಯ ಸರಕಾರ, ಕಾರ್ಮಿಕ ಇಲಾಖೆಯ ಅಸಂಘಟಿತ ಕಾರ್ಮಿಕ ಮಂಡಳಿಯ ಮೂಲಕ ಆರಂಭಿಸಿರುವ 4 ಪ್ರಾಯೋಗಿಕ ಅಂತಾರಾಷ್ಟ್ರೀಯ ವಲಸೆ ಕೇಂದ್ರಗಳಲ್ಲಿ ಒಂದು ಉಡುಪಿ ಜಿಲ್ಲಾಧಿಕಾರಿ ಕಚೇರಿ ಸಂಕೀರ್ಣದ ಕಾರ್ಮಿಕ ಇಲಾಖೆಯಲ್ಲಿದೆ.

ಈ ಕೇಂದ್ರಗಳ ಮೂಲಕ ವಿದೇಶಕ್ಕೆ ತೆರಳಿದ್ದಲ್ಲಿ, ವಿದೇಶದಲ್ಲಿ ಯಾವುದೇ ತುರ್ತು ಸಂದರ್ಭದಲ್ಲಿ ಸರಕಾರದ ವತಿಯಿಂದ ಅಗತ್ಯ ನೆರವು ದೊರೆಯಲಿದ್ದು, ವಿದೇಶದಲ್ಲಿದ್ದರೂ ಸಹ ಎಲ್ಲ ಸಂದರ್ಭದಲ್ಲಿ ಸುರಕ್ಷಿತವಾಗಿ ಇರಲು ಸಾಧ್ಯವಾಗಲಿದೆ. ಅಲ್ಲದೆ ಉದ್ಯೋಗ ನೀಡಿದ ಸಂಸ್ಥೆಯೊಂದಿಗೆ ನಿರಂತರ ಸಂಪರ್ಕದಲ್ಲಿದ್ದು, ಆ ದೇಶದಲ್ಲಿನ ಭಾರತೀಯ ರಾಯಭಾರ ಕಚೇರಿಯಿಂದ ಅಗತ್ಯ ನೆರವು ಒದಗಿಸುವುದರ ಜತೆಗೆ ವಿಮೆ ಪಡೆಯಲು ಮತ್ತು ಕಲ್ಯಾಣ ನಿಧಿಯ ಮೊತ್ತ ದೊರೆಯಲು ಈ ಮಾಹಿತಿ ಕೇಂದ್ರ ಸಹಕರಿಸಲಿದೆ.

ಈ ಕೇಂದ್ರದ ಮೂಲಕ ಉದ್ಯೋಗಕ್ಕೆ ತೆರಳಲು ಇಚ್ಚಿಸಿದ್ದಲ್ಲಿ ಈಗಾಗಲೇ ಇ-ಮೈಗ್ರೇಟ್‌ ಪೋರ್ಟಲ್‌ನಲ್ಲಿ ಉದ್ಯೋಗದ ಬೇಡಿಕೆ ಕೋರಿರುವ, ನೋಂದಣಿ ಮಾಡಿರುವ ವಿದೇಶಿ ಸಂಸ್ಥೆಗಳ ನೈಜತೆ ಪರಿಶೀಲಿಸಿ, ಉದ್ಯೋಗದಾತ ಸಂಸ್ಥೆಯಲ್ಲಿ ಯಾವುದೇ ಸಂದರ್ಭ ಕಾರ್ಮಿಕರಿಗೆ ಅನಗತ್ಯ ತೊಂದರೆಗಳು ಉಂಟಾಗದಂತೆ ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ಕೈಗೊಳ್ಳಲಿದೆ.

ಮಹಿಳೆಯರಿಗೂ ಅವಕಾಶ
ವಿದೇಶದಲ್ಲಿ ಉದ್ಯೋಗಕ್ಕೆ ತೆರಳುವ ಮಹಿಳೆಯರ ಬಗ್ಗೆ ಕೇಂದ್ರವು ಹೆಚ್ಚಿನ ಕಾಳಜಿ ವಹಿಸಲಿದೆ. ವಿದೇಶದಿಂದ ವಾಪಸಾದ ಬಳಿಕ ಕಾರ್ಮಿಕರ ಕೌಶಲ ಸಂಗ್ರಹ ಮತ್ತು ಮರು ವಲಸೆಗೆ ಸಹಾಯ ಮಾಡುವುದರ ಜತೆಗೆ ಪುರ್ನವಸತಿ ಬಗ್ಗೆ ಮಾಹಿತಿ ನೀಡಲಿದ್ದು, ಕುಂದು ಕೊರತೆಗಳನ್ನು ನಿವಾರಿಸಲಿದೆ.

ಸಮಗ್ರ ತರಬೇತಿ
ವಿದೇಶಕ್ಕೆ ತೆರಳುವ ಮೊದಲು 8 ಗಂಟೆಗಳ ಸಮಗ್ರ ತರಬೇತಿಯನ್ನು ಅಭ್ಯರ್ಥಿಗಳಿಗೆ ನೀಡಲಿದ್ದು, ವಿದೇಶ ಪ್ರಯಾಣದ ಅವಧಿಯಲ್ಲಿ ಮತ್ತು ಅನಂತರ ವಹಿಸಬೇಕಾದ ಮುನ್ನೆಚ್ಚರಿಕೆ ವಿಧಾನ, ಸಿದ್ಧತೆ, ವಿಮಾನ ನಿಲ್ದಾಣದಲ್ಲಿ ವ್ಯವಹರಿಸುವ ರೀತಿಯ ಬಗ್ಗೆಯೂ ತರಬೇತಿ ನೀಡಲಾಗುತ್ತದೆ.

ಕೇಂದ್ರ ಎಲ್ಲೆಲ್ಲಿದೆ?
ಪ್ರಸ್ತುತ ರಾಜ್ಯದಲ್ಲಿ ಪ್ರಾಯೋಗಿಕವಾಗಿ ಉಡುಪಿ, ದಾವಣಗೆರೆ, ವಿಜಯಪುರ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಈ ಕೇಂದ್ರಗಳನ್ನು ತೆರೆಯಲಾಗಿದೆ. ಉಡುಪಿ ಕೇಂದ್ರದ ವ್ಯಾಪ್ತಿಗೆ ಉಡುಪಿ, ದ.ಕ., ಶಿವಮೊಗ್ಗ ಮತ್ತು ಚಿಕ್ಕಮಗಳೂರು ಸೇರಲಿದೆ. ಉಡುಪಿ ಮತ್ತು ದ.ಕ. ಜಿಲ್ಲೆಗಳಿಂದ 40,000 ಕ್ಕೂ ಅಧಿಕ ಮಂದಿ ಮಧ್ಯಪ್ರಾಚ್ಯ ದೇಶದಲ್ಲಿ ಕಾರ್ಮಿಕರಾಗಿ ದುಡಿಯುತ್ತಿದ್ದಾರೆ.

ಮಾಹಿತಿಗೆ ದೂ : 0820-2574851 ಅಥವಾ ಕಾರ್ಮಿಕ ಸಹಾಯವಾಣಿ 155214 ಸಂಪರ್ಕಿಸಬಹುದು.

ವಿದೇಶದಲ್ಲಿ ಉದ್ಯೋಗದ ಕುರಿತು ಉದ್ಯೋಗಾಕಾಂಕ್ಷಿ ಗಳೊಂದಿಗಿನ ಸಂವಾದ ಕಾರ್ಯಕ್ರಮದಲ್ಲಿ 130ಕ್ಕೂ ಹೆಚ್ಚು ಮಂದಿ ನೋಂದಣಿ ಮಾಡಿಕೊಂಡಿದ್ದಾರೆ.
– ಕುಮಾರ್‌ ಬಿ. ಆರ್‌., ಜಿಲ್ಲಾ ಕಾರ್ಮಿಕ ಅಧಿಕಾರಿ, ಉಡುಪಿ ಉಪ ವಿಭಾಗ

ಟಾಪ್ ನ್ಯೂಸ್

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

Horoscope Today: ಈ ರಾಶಿಯವರಿಗೆ ಅನಿರೀಕ್ಷಿತ ಧನಾಗಮ ಸಂಭವ

congress

North East Delhi ಅಭ್ಯರ್ಥಿ ಕನ್ಹಯ್ಯ ವಿರುದ್ಧ ಕಾಂಗ್ರೆಸಿಗರ ಪ್ರತಿಭಟನೆ!

IMD

Kerala; ಬಿಸಿಲ ಝಳಕ್ಕೆ ಇಬ್ಬರ ಸಾವು

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.