ಬಿಜೆಪಿ ಅಧ್ಯಕ್ಷ ಜೆ.ಪಿ.ನಡ್ಡಾ ಉಡುಪಿಗೆ ಆಗಮನ; ಕೃಷ್ಣ ಮಠ ಭೇಟಿ, ಸಂತರೊಂದಿಗೆ ಸಭೆ
Team Udayavani, Feb 20, 2023, 10:56 AM IST
ಉಡುಪಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ.ನಡ್ಡಾ ಅವರು ಸೋಮವಾರ ಉಡುಪಿಗೆ ಆಗಮಿಸಿದ್ದು, ಶ್ರೀಕೃಷ್ಣ ಮಠಕ್ಕೆ ಭೇಟಿ ನೀಡಿ ದೇವರ ದರ್ಶನ ಮಾಡಿದರು.
ಮಠಕ್ಕೆ ಆಗಮಿಸಿದ ನಡ್ದಾ ಅವರನ್ನು ಮಠದ ದಿವಾನ ವರದರಾಜ ಆಚಾರ್ಯ ಮಾಲಾರ್ಪಣೆ ಮಾಡಿ ಸ್ವಾಗತಿಸಿದರು.
ಕೇಂದ್ರ ಸಚಿವೆ ಶೋಭಾ ಕರಂದ್ಲಾಜೆ, ಬಿಜೆಪಿ ರಾಷ್ಟ್ರೀಯ ಪ್ರ. ಕಾರ್ಯದರ್ಶಿ ಸಿ. ಟಿ. ರವಿ, ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್, ಸಚಿವ ಸುನಿಲ್ ಕುಮಾರ್, ಶಾಸಕ ಕೆ. ರಘುಪತಿ ಭಟ್ ಮುಖಂಡರಾದ ಪ್ರದೀಪ ರಾವ್, ಸುಪ್ರಸಾದ್ ಶೆಟ್ಟಿ ಮೊದಲಾದವರು ಉಪಸ್ಥಿತರಿದ್ದರು.
ಇದನ್ನೂ ಓದಿ:ಭಾರತ ವಿರುದ್ಧದ ಟೆಸ್ಟ್ ಸರಣಿಯ ನಡುವೆಯೇ ಆಸ್ಟ್ರೇಲಿಯಾಗೆ ತೆರಳಿದ ಪ್ಯಾಟ್ ಕಮಿನ್ಸ್!
ಉಡುಪಿ ಜಿಲ್ಲಾ ಪೊಲೀಸ್ ಅಧೀಕ್ಷಕ ಅಕ್ಷಯ್ ಹಾಕೆ ಮಚ್ಚಿಂದ್ರ ಅವರ ನೇತೃತ್ವದಲ್ಲಿ ಭದ್ರತೆ ವಹಿಸಲಾಗಿತ್ತು.
ಶ್ರೀ ಕೃಷ್ಣ ಸನ್ನಿಧಿಯಲ್ಲಿ ಪೂಜೆ ಸಲ್ಲಿಸಿದ ಬಳಿಕ ಪೇಜಾವರ ಮಠಕ್ಕೆ ತೆರಳಿದ ನಡ್ಡಾ ಅವರು ಅಷ್ಟಮಠಾಧೀಶರು ಹಾಗೂ ಕರಾವಳಿ ಭಾಗದ ವಿವಿಧ ಮಠಾಧೀಶರೊಂದಿಗೆ ಮಾತುಕತೆ ನಡೆಸಿದರು ಕರಾವಳಿ ಭಾಗದ ಹತ್ತಕ್ಕೂ ಅಧಿಕ ಮಠಾಧೀಶರು, ಹಿಂದು ಸಮುದಾಯದ ಮುಖಂಡರು ಭಾಗಿಯಾಗಿದ್ದು ಕರಾವಳಿ ಭಾಗದ ಬೇಡಿಕೆಗಳ ಕುರಿತು ಸಮಾಲೋಚನೆ ನಡೆಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ