ಉಡುಪಿ: ಶಿಕ್ಷಣ ತಜ್ಞ ಕೆ.ಎ.ಪಿ.ಭಟ್ ನಿಧನ
Team Udayavani, Apr 8, 2021, 2:24 PM IST
ಉಡುಪಿ: ಶಿಕ್ಷಣ ತಜ್ಞ, ನಿಟ್ಟೂರು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯ ಮಾಜಿ ಮುಖ್ಯೋಪಾಧ್ಯಾಯ, ಮಾಜಿ ಉದಯವಾಣಿ ಉದ್ಯೋಗಿ ಕೆ.ಎ.ಪಿ. ಭಟ್ (83) ಗುರುವಾರ ಬೆಳಗ್ಗೆ ನಿಧನ ಹೊಂದಿದರು.
ನಿಟ್ಟೂರು ಎಜುಕೇಶನಲ್ ಸೊಸೈಟಿಯ ಅಧ್ಯಕ್ಷರಾಗಿಯೂ ಇವರು ಸೇವೆ ಸಲ್ಲಿಸಿದ್ದರು. ಉತ್ತಮ ವಾಲಿಬಾಲ್ ಪಟುವಾಗಿದ್ದು, ನಾಟಕ ರಂಗದಲ್ಲಿ ನಟನೆ ಮತ್ತು ನಿರ್ದೇಶನದಲ್ಲಿಯೂ ತೊಡಗಿಸಿಕೊಂಡಿದ್ದರು. ಆದಿಉಡುಪಿ ಹಿರಿಯ ಪ್ರಾಥಮಿಕ ಶಾಲೆಯ ಹಳೆವಿದ್ಯಾರ್ಥಿ ಸಂಘದ ಚಟುವಟಿಕೆಯಲ್ಲಿ ಸಕ್ರಿಯವಾಗಿ ತೊಡಗಿಕೊಂಡಿದ್ದರು.
ಮೃತರು ಪತ್ನಿ, ಇರ್ವರು ಪುತ್ರರು ಹಾಗೂ ಓರ್ವ ಪುತ್ರಿಯನ್ನು ಅಗಲಿದ್ದಾರೆ. ಕೆ.ಎ.ಪಿ.ಭಟ್ ಅವರ ಅಂತಿಮ ಸಂಸ್ಕಾರವು ಗುರುವಾರ ಸಂಜೆ 5.30 ಗಂಟೆಗೆ ನಡೆಯಲಿದೆ.
ಇವರ ನಿಧನಕ್ಕೆ ಶಾಲಾ ಆಡಳಿತ ಮಂಡಳಿಯ ಅಧ್ಯಕ್ಷರಾದ ಕೆ. ರಘುಪತಿ ಭಟ್, ಕಾರ್ಯದರ್ಶಿ ಮುರಳಿ ಕಡೆಕಾರ್ ಮತ್ತು ಮುಖ್ಯೋಪಾಧ್ಯಾಯರು ಅಧ್ಯಾಪಕ ವೃಂದ, ಹಳೆವಿದ್ಯಾರ್ಥಿ ಸಂಘದ ಅಧ್ಯಕ್ಷ ಯೋಗೀಶ್ಚಂದ್ರಾಧರ್ ಸಂತಾಪ ವ್ಯಕ್ತಪಡಿಸಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ