ಕಡ್ತಲ: ಕಾಮಗಾರಿ ಅಪೂರ್ಣ; ಪಿಲ್ಲರ್‌ ಹಂತದಲ್ಲೇ ಉಳಿದ ದರ್ಬುಜೆ ಸೇತುವೆ

2019ರ ಫೆಬ್ರವರಿಯಲ್ಲಿ ಪಿಲ್ಲರ್‌ ಕಾಮಗಾರಿ ಆರಂಭ; ವಿಳಂಬ ಧೋರಣೆಗೆ ಗ್ರಾಮಸ್ಥರ ಆಕ್ರೋಶ

Team Udayavani, Dec 23, 2019, 4:55 AM IST

wd-23

ಅಜೆಕಾರು: ಕಡ್ತಲ, ಮರ್ಣೆ ಗ್ರಾಮ ಪಂಚಾಯತ್‌ಗಳ ನಡುವೆ ಸಂಪರ್ಕ ಕಲ್ಪಿಸುವ ದರ್ಬುಜೆ ಸೇತುವೆ ಕಾಮಗಾರಿ ಅರ್ಧಕ್ಕೆ ಸ್ಥಗಿತಗೊಂಡು ಸ್ಥಳೀಯರಿಗೆ ಸಂಕಷ್ಟ ಉಂಟಾಗಿದೆ. ಕಾಮಗಾರಿ ಆರಂಭಗೊಂಡು ವರ್ಷ ಕಳೆದರೂ ಇನ್ನೂ ಪಿಲ್ಲರ್‌ ಹಂತದಲ್ಲಿಯೇ ಸೇತುವೆ ಕಾಮಗಾರಿ ಇದ್ದು ಸ್ಥಳೀಯರ ಬಹುದಿನದ ಬೇಡಿಕೆ ಇನ್ನೂ ಈಡೇರುವ ಹಂತದಲ್ಲಿಲ್ಲ.

2016-17ನೇ ಸಾಲಿನ ಕೇಂದ್ರ ರಸ್ತೆ ನಿಧಿ ಯೋಜನೆಯ ಕ್ರಿಯಾ ಯೋಜನೆಯಲ್ಲಿ ದಬುìಜೆ ಸೇತುವೆಗೆ
1 ಕೋ.ರೂ. ಅನುದಾನ ಮಂಜೂರು ಗೊಂಡಿತ್ತಾದರೂ ಕೆಲ ಸಮಯ ಟೆಂಡರ್‌ ಪ್ರಕ್ರಿಯೆ ವಿಳಂಬದಿಂದಾಗಿ ಕಾಮಗಾರಿ ಆರಂಭಗೊಂಡಿರಲಿಲ್ಲ. 2018ರ ಡಿಸೆಂಬರ್‌ ವೇಳೆಗೆ ಸೇತುವೆಯ ಕಾಮಗಾರಿ ಆರಂಭಗೊಂಡು ಪಿಲ್ಲರ್‌ ಅಳವಡಿಸಲಾಗಿತ್ತಾದರೂ ಅನಂತರದ ಕಾಮಗಾರಿ ನಡೆಯದೇ ಸೇತುವೆ ಅರ್ಧಕ್ಕೆ ಸ್ಥಗಿತಗೊಂಡಿದೆ.

ಕಡ್ತಲ ಗ್ರಾ.ಪಂ.ನ ದರ್ಬುಜೆ ಭಾಗ, ಮರ್ಣೆ ಗ್ರಾಮ ಪಂಚಾಯತ್‌ನ ದೆಪ್ಪುತ್ತೆ ಭಾಗದ ಸುಮಾರು 500ರಷ್ಟು ಮನೆ ಗಳಿಗೆ ಅತ್ಯಾವಶ್ಯಕವಾಗಿರುವ ಈ ಸೇತುವೆ ಇನ್ನೂ ಸಹ ಮರೀಚಿಕೆಯಾಗಿದೆ ಅಲ್ಲದೆ ಅಜೆಕಾರು ಭಾಗದಿಂದ ಕಡ್ತಲ ಕೈಕಂಬ ಮಾರ್ಗವಾಗಿ ಪೆರ್ಡೂರು, ಉಡುಪಿ ಸಂಪರ್ಕಿಸಲು ಅತಿ ಹತ್ತಿರದ ರಸ್ತೆ ಇದಾಗಿದ್ದು ಸೇತುವೆ ಇಲ್ಲದ ಪರಿಣಾಮ ಸುತ್ತುಬಳಸಿ ಸಂಚರಿಸಬೇಕಾದ ಅನಿವಾರ್ಯತೆ ಇಲ್ಲಿಯವರದ್ದಾಗಿದೆ. ಮಳೆಗಾಲದಲ್ಲಿ ನದಿ ತುಂಬಿ ಹರಿಯುವುದರಿಂದ ವಿದ್ಯಾರ್ಥಿಗಳಿಗೂ ಶಾಲೆಗೆ ತೆರಳಲು ಸಮಸ್ಯೆಯಾಗಿದೆ. ಸ್ಥಳೀಯರು ದಬುìಜೆ ಸೇತುವೆ ನಿರ್ಮಾಣಕ್ಕೆ ದಶಕಗಳಿಂದ ಮನವಿ ಮಾಡುತ್ತಾ ಬಂದಿದ್ದು 2016-17ನೇ ಸಾಲಿನಲ್ಲಿ ಜನಪ್ರತಿನಿಧಿಗಳು ಸರಕಾರದ ಮೇಲೆ ಒತ್ತಡ ತಂದು ಅನುದಾನ ಮಂಜೂರುಗೊಳಿಸಿದ್ದರು.

ಸ್ಥಳೀಯಾಡಳಿತವು ಸೇತುವೆ ನಿರ್ಮಾಣಕ್ಕೆ ಹೆಚ್ಚಿನ ಮುತುವರ್ಜಿ ವಹಿಸಿತ್ತಾದರೂ ಅಧಿಕಾರಿಗಳು, ಗುತ್ತಿಗೆದಾರರ ವಿಳಂಬ ಧೋರಣೆಯಿಂದಾಗಿ ಕಾಮಗಾರಿ ಅಪೂರ್ಣಗೊಂಡಿದೆ. 2019ರ ಫೆಬ್ರವರಿಯಲ್ಲಿ ಪಿಲ್ಲರ್‌ ಹಾಕುವ ಕಾಮಗಾರಿ ಪ್ರಾರಂಭಗೊಂಡಿದ್ದು ಎಪ್ರಿಲ್‌, ಮೇ ತಿಂಗಳಿನಲ್ಲಿ ಸ್ಥಗಿತಗೊಂಡ ಸೇತುವೆ ಕಾಮಗಾರಿ ಈವರೆಗೆ ಆರಂಭಗೊಂಡಿಲ್ಲ. 2020ರ ಫೆಬ್ರವರಿ ಅಂತ್ಯದೊಳಗೆ ಕಾಮಗಾರಿ ಮುಕ್ತಾಯಗೊಳಿಸುವ ಅವಧಿ ಯಾಗಿದೆ. ಅವಧಿ ಮುಕ್ತಾಯಗೊಳ್ಳಲು ಕೇವಲ ಎರಡು ತಿಂಗಳು ಬಾಕಿಯಿದ್ದು ಕಾಮಗಾರಿ ಇನ್ನೂ ಆರಂಭಗೊಳ್ಳದೇ ಇರುವುದರಿಂದ ಅವಧಿಯೊಳಗೆ ಕಾಮಗಾರಿ ಪೂರ್ಣಗೊಳ್ಳುವುದು ಅಸಾಧ್ಯವಾಗಿದೆ. ಕಾಮಗಾರಿ ಶೀಘ್ರ ಆರಂಭಿಸಿ ಸೇತುವೆ ಪೂರ್ಣಗೊಳಿಸದಿದ್ದಲ್ಲಿ ಪ್ರತಿಭಟನೆ ನಡೆಸುವ ಎಚ್ಚರಿಕೆ ನೀಡಿದ್ದಾರೆ.

ಸ್ಥಳೀಯರಿಗೆ ಸಂಕಷ್ಟ
ಹಲವು ವರ್ಷಗಳಿಂದ ಸೇತುವೆ ನಿರ್ಮಾಣಕ್ಕೆ ಸ್ಥಳಿಯರು ಮನವಿ ಮಾಡುತ್ತಾ ಬಂದಿದ್ದು ಮನವಿಗೆ ಸ್ಪಂದಿಸಿದ ಜನಪ್ರತಿನಿಧಿಗಳು ಅನುದಾನ ಒದಗಿಸಿದ್ದರೂ ಗುತ್ತಿಗೆದಾರರು, ಅಧಿಕಾರಿಗಳು ವಿಳಂಬ ಧೋರಣೆ ಅನುಸರಿಸುತ್ತಿದ್ದು ಸ್ಥಳೀಯರಿಗೆ ಸಂಕಷ್ಟ ಉಂಟಾಗಿದೆ.
-ಸಂಜೀವ ನಾಯ್ಕ, ಸ್ಥಳೀಯರು

ಪಿಲ್ಲರ್‌ ಹಂತದಲ್ಲೇ ಸ್ಥಗಿತ
ಅನುದಾನ ಮಂಜೂರುಗೊಂಡು ಎರಡು ವರ್ಷ ಕಳೆದರೂ ಇಲಾಖಾಧಿಕಾರಿಗಳ, ಗುತ್ತಿಗೆದಾರರ ನಿರ್ಲಕ್ಷ್ಯದಿಂದ ಸೇತುವೆ ಕಾಮಗಾರಿ ಪಿಲ್ಲರ್‌ ಹಂತದಲ್ಲೇ ಸ್ಥಗಿತಗೊಂಡಿದೆ. ಸ್ಥಳೀಯರ ಸಮಸ್ಯೆ ಮನಗಂಡು ಶೀಘ್ರ ಸೇತುವೆ ಕಾಮಗಾರಿ ಪೂರ್ಣಗೊಳಿಸಬೇಕಿದೆ.
-ಅರುಣ್‌ ಕುಮಾರ್‌ ಹೆಗ್ಡೆ,, ಅಧ್ಯಕ್ಷರು, ಗ್ರಾಮಪಂಚಾಯತ್‌, ಕಡ್ತಲ

ಕಾಮಗಾರಿ ಶೀಘ್ರ ಪೂರ್ಣ
2016-17ರ ಕ್ರಿಯಾ ಯೋಜನೆಯಲ್ಲಿ ಅನುದಾನ ಮಂಜೂರುಗೊಂಡಿದ್ದರೂ ಟೆಂಡರ್‌ ವಿಳಂಬದಿಂದಾಗಿ 2019ರ ಫೆಬ್ರವರಿಯಲ್ಲಿ ಕಾಮಗಾರಿ ಆರಂಭಗೊಂಡಿದೆ. ಅನಂತರ ಮಳೆ ಬಂದ ಕಾರಣ ಕಾಮಗಾರಿ ಸ್ಥಗಿತಗೊಂಡಿದ್ದು ಶೀಘ್ರದಲ್ಲೇ ಕಾಮಗಾರಿ ಆರಂಭಿಸಿ ಸೇತುವೆ ಪೂರ್ಣಗೊಳಿಸಲಾಗುವುದು.
-ನಾಗರಾಜ ನಾಯಕ್‌, ಎಂಜಿನಿಯರ್‌

– ಜಗದೀಶ ಅಜೆಕಾರು

ಟಾಪ್ ನ್ಯೂಸ್

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

ಅಶ್ಲೀಲ ವಿಡಿಯೋ ಮಾದರಿಯಲ್ಲಿ ಲೈಂಗಿಕ ಕ್ರಿಯೆಗೆ ಒತ್ತಾಯಿಸಿದ್ದಕ್ಕೆ ಮಹಿಳೆಯನ್ನು ಕೊಂದ ಟೆಕಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

Udupi Chikmagalur Lok Sabha Constituency: ಕಾಫಿನಾಡಲ್ಲಿ ಕೈ-ಕಮಲ ತೀವ್ರ ಪೈಪೋಟಿ

1-aaaa

Scrap mafia ದರೋಡೆಕೋರ ರವಿ ಕಾನಾ ಮತ್ತು ಪ್ರೇಯಸಿ ಕಾಜಲ್ ಥಾಯ್ಲೆಂಡ್‌ ನಲ್ಲಿ ಬಂಧನ

1-qqwqe

Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್‌ ಗೆಲುವು ಕಾಣುವಾಸೆ..

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

DCvsGT; ಪಂತ್‌ ನಾಯಕತ್ವಕ್ಕೆ ಅಗ್ನಿಪರೀಕ್ಷೆ:  ತವರಿನ “ಕೋಟ್ಲಾ’ದಲ್ಲಿ ಗುಜರಾತ್‌ ಎದುರಾಳಿ

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಬಸ್ರೂರಿನ ಶಾಸನಗಳನ್ನು ಉಳಿಸುವವರಾರು?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಶೋಧ ಕಾರ್ಯಾಚರಣೆಯ ಬಿಸಿಗೆ ತಣ್ಣಗಾದರೇ?

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

ಉಡುಪಿ-ಚಿಕ್ಕಮಗಳೂರು ಲೋಕಸಭಾ ಕ್ಷೇತ್ರ: 405 ಸೂಕ್ಷ್ಮ ಮತಗಟ್ಟೆ : ಕೆ. ವಿದ್ಯಾಕುಮಾರಿ

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Lok Sabha Election ; ಪ್ರಚಾರ ಜೋರು, ಚರ್ಚಾ ವಿಷಯ ಮೂರು!

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Arrested: ವಿಳಾಸ ಕೇಳುವ ನೆಪದಲ್ಲಿ ಮೊಬೈಲ್‌ ಸುಲಿಗೆ; ಮೂವರ ಬಂಧನ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Gold Theft: ಕೆಲಸಕ್ಕಿದ್ದ ಮನೆಯಲ್ಲಿ 50 ಲಕ್ಷ ರೂ.; ಒಡವೆ ಕದ್ದಿದ್ದವ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಖಾಕಿ ಸೋಗಿನಲ್ಲಿ ಗುಜರಿ ವ್ಯಾಪಾರಿ ಸುಲಿಗೆ: ಪೊಲೀಸ್‌ ಬಾತ್ಮೀದಾರ ಸೆರೆ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: ಸುಲಿಗೆ ಸೇರಿ 42 ಕೇಸ್‌ಗಳಲ್ಲಿ ಭಾಗಿಯಾಗಿದ್ದ ರೌಡಿ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Arrested: 17 ಕೇಸ್‌ನಲ್ಲಿ ಭಾಗಿಯಾಗಿದ್ದ ರೌಡಿಶೀಟರ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.