ಕಾಪು: ಪೊಲಿಪು ಬಾಡಿಗೆ ಮನೆಯಲ್ಲಿ ಬೆಂಕಿ; ಲಕ್ಷಾಂತರ ರೂ. ನಷ್ಟ
Team Udayavani, Aug 12, 2022, 2:39 PM IST
ಕಾಪು: ಪೊಲಿಪು ಸರ್ಕಲ್ ಬಳಿಯ ಬಾಡಿಗೆ ಮನೆಯೊಂದರಲ್ಲಿ ವಿದ್ಯುತ್ ಶಾರ್ಟ್ ಸರ್ಕ್ಯೂಟ್ ಉಂಟಾಗಿ ಲಕ್ಷಾಂತರ ರೂಪಾಯಿ ವೆಚ್ಚದ ಸೊತ್ತು ನಷ್ಟವುಂಟಾಗಿದೆ.
ಪೊಲಿಪು ಲಕ್ಷ್ಮೀ ನಾರಾಯಣ ಕಾಂಪ್ಲೆಕ್ಸ್ ನಲ್ಲಿ ವಾಸವಿರುವ ಗುರುರಾಜ್ ಮತ್ತು ಶಕೀಲಾ ಎಂಬವರ ಮನೆಯಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಪಕ್ಕದ ಕೃಷ್ಣರಾಜ್ ಅವರ ಮನೆಗೂ ಬೆಂಕಿಯ ಕೆನ್ನಾಲಗೆ ಚಾಚಿದೆ. ಘಟನೆಯಿಂದಾಗಿ ಗುರುರಾಜ್ ಅವರ ಮನೆಯೊಳಗಿನ ವಸ್ತುಗಳೆಲ್ಲಾ ಸಂಪೂರ್ಣ ಭಸ್ಮವಾಗಿದ್ದು, ಲಕ್ಷಾಂತರ ರೂಪಾಯಿ ಸೊತ್ತು ನಷ್ಟ ಅಂದಾಜಿಸಲಾಗಿದೆ.
ಕೃಷ್ಟರಾಜ್ ಅವರ ಮನೆಯ ಫ್ಯಾನ್, ವಿದ್ಯುತ್ ವಯರಿಂಗ್ ಸಂಪೂರ್ಣ ಸುಟ್ಟು ಹೋಗಿದ್ದು ಸಾವಿರಾರು ರೂಪಾಯಿ ಮೌಲ್ಯದ ಸೊತ್ತು ನಷ್ಟ ಉಂಟಾಗಿದೆ.
ಇದನ್ನೂ ಓದಿ: ಉಳ್ಳಾಲ: ಕಾರ್ಮಿಕರಿಗೆ ಅಪರಿಚಿತ ವಾಹನ ಢಿಕ್ಕಿ; ಓರ್ವ ಸಾವು
ಅಗ್ನಿಶಾಮಕ ದಳ ಮತ್ತು ಸ್ಥಳೀಯರ ಸಕಾಲಿಕ ಕಾರ್ಯಾಚರಣೆಯಿಂದಾಗಿ ಬೆಂಕಿ ನಿಯಂತ್ರಣಕ್ಕೆ ಬಂದಿದ್ದು, ಅಪಾರ ಹಾನಿಯನ್ನು ತಪ್ಪಿಸಿದೆ. ಗ್ರಾಮ ಕರಣಿಕ ಅವಿನಾಶ್, ಪುರಸಭಾ ಸದಸ್ಯರಾದ ರಾಧಿಕಾ ಸುವರ್ಣ, ಫರ್ಜಾನ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Udupi ಶ್ರೀಕೃಷ್ಣ ಮಠ ; ಸುಂದರಕಾಂಡ ಪ್ರವಚನಕ್ಕೆ ಚಾಲನೆ
ಜಯಪ್ರಕಾಶ್ ಹೆಗ್ಡೆ ಗೆಲುವು ಖಚಿತ: ಕೆಪಿಸಿಸಿ ವಕ್ತಾರ ಸುಧೀರ್ ಕುಮಾರ್ ಮುರೊಳ್ಳಿ
ಓಲೈಕೆ ರಾಜಕಾರಣ ಮಾಡುವ ಕಾಂಗ್ರೆಸ್ಗೆ ಜನ ತಕ್ಕ ಪಾಠ ಕಲಿಸಲಿದ್ದಾರೆ: ಮಂಜು
ಕಾರ್ಗಿಲ್ ಯೋಧ ಮೆಲ್ವಿನ್ ಆಳ್ವರಿಗೆ ಮಿಲಿಟರಿ ಗೌರವ ಸಹಿತ ಅಂತ್ಯಸಂಸ್ಕಾರ
MUST WATCH
ಹೊಸ ಸೇರ್ಪಡೆ
Rain: ಉಡುಪಿ ಜಿಲ್ಲೆಗೆ ತಂಪೆರೆದ ಮಳೆರಾಯ, ಜಿಲ್ಲಾದ್ಯಂತ ಗುಡುಗು ಸಹಿತ ಧಾರಾಕಾರ ಮಳೆ
Daily Horoscope: ಉದ್ಯೋಗ ಸ್ಥಾನದಲ್ಲಿ ನೆಮ್ಮದಿಯ ವಾತಾವರಣ, ಅಕಸ್ಮಾತ್ ಧನಪ್ರಾಪ್ತಿ
Heavy Rain; ದುಬಾೖ ಪ್ರಯಾಣ ಬೇಡ: ಸಲಹೆ
Ban in Singapore; ಎವರೆಸ್ಟ್ ಮಸಾಲಾದಲ್ಲಿ ಕ್ರಿಮಿನಾಶಕ ಅಂಶ?
ಇಂದು ಚಿಕ್ಕಬಳ್ಳಾಪುರ, ಬೆಂಗಳೂರಲ್ಲಿ ಮೋದಿ ಗರ್ಜನೆ: ಒಂದೂವರೆ ಲಕ್ಷ ಜನ ಸೇರುವ ನಿರೀಕ್ಷೆ