ಸುನಿಲ್‌ಗೆ ಹಿಂದುತ್ವದ ಸವಾಲು; ಕಾಂಗ್ರೆಸ್‌ ಅಭ್ಯರ್ಥಿ ಕುತೂಹಲ


Team Udayavani, Feb 27, 2023, 6:25 AM IST

ಸುನಿಲ್‌ಗೆ ಹಿಂದುತ್ವದ ಸವಾಲು; ಕಾಂಗ್ರೆಸ್‌ ಅಭ್ಯರ್ಥಿ ಕುತೂಹಲ

ಉಡುಪಿ: ರಾಜ್ಯಕ್ಕೆ ಮುಖ್ಯಮಂತ್ರಿಯನ್ನು ನೀಡಿದ ಕ್ಷೇತ್ರ ಕಾರ್ಕಳ. ಈಗ ಕಾರ್ಕಳ ಉತ್ಸವ, ಪರಶುರಾಮ ಪ್ರತಿಮೆಯ ಅನಾವರಣ ಮೂಲಕ ಕೊಂಚ ಸುದ್ದಿಯಾಗಿದೆ. ವಿಧಾನಸಭೆ ಚುನಾವಣೆ ಹತ್ತಿರವಾಗಿರುವ ಹಿನ್ನೆಲೆಯಲ್ಲಿ ಈ ಕ್ಷೇತ್ರ ಮತ್ತೆ ಸದ್ದು ಮಾಡತೊಡಗಿದೆ.

ಕೇಂದ್ರದ ಮಾಜಿ ಸಚಿವ ಕಾಂಗ್ರೆಸ್‌ನ ಡಾ| ಎಂ. ವೀರಪ್ಪ ಮೊಯ್ಲಿಯವರು 1972ರಿಂದ 1994ರ ವರೆಗೂ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದರು. ಸಚಿವರಾಗಿ, ಮುಖ್ಯಮಂತ್ರಿಯೂ ಆದರು. ಬಳಿಕ ಈ ಕ್ಷೇತ್ರವನ್ನು ಪ್ರತಿನಿಧಿಸಿದ್ದು ಅದೇ ಪಕ್ಷದ ಗೋಪಾಲ ಭಂಡಾರಿಯವರು. 2004ರ ಚುನಾವಣೆಯಲ್ಲಿ ಸುನಿಲ್‌ ಕುಮಾರ್‌ ಗೆದ್ದು ಬಿಜೆಪಿಗೆ ಈ ಕ್ಷೇತ್ರವನ್ನು ತಂದುಕೊಟ್ಟರು. ಆದರೆ 2008ರಲ್ಲಿ ಗೋಪಾಲ ಭಂಡಾರಿ ವಿರುದ್ಧ ಸುನಿಲ್‌ ಸೋತರು. 2013 ಮತ್ತು 2018ರಲ್ಲಿ ಸುನಿಲ್‌ ಮತ್ತೆ ಗೆದ್ದು ಈಗ ಸಚಿವರಾಗಿದ್ದಾರೆ.

ಹಿಂದುತ್ವ ವರ್ಸಸ್‌ ಹಿಂದುತ್ವ
ಉಡುಪಿ ಜಿಲ್ಲೆಯಲ್ಲೇ ಹೆಚ್ಚು ಚರ್ಚಿತವಾಗುತ್ತಿರುವ ಕ್ಷೇತ್ರ ಕಾರ್ಕಳ. ಬಿಜೆಪಿಯಲ್ಲಿ ಸದ್ಯ ಸುನಿಲ್‌ ಕುಮಾರ್‌ ಹೊರತು ಪಡಿಸಿ ಬೇರೆಯವರ ಹೆಸರು ಕೇಳಿ ಬರುತ್ತಿಲ್ಲ. ಸಮುದಾಯದ ಬೆಂಬಲದ ಜತೆಗೆ ಹಿಂದೂ ಸಂಘಟನೆಗಳೊಂದಿಗೆ ಸಕ್ರಿಯವಾಗಿದ್ದಾರೆ. ಹಿಂದು ತ್ವದ ಆಧಾರದಲ್ಲೇ ಚುನಾವಣೆ ಎದುರಿಸುವುದಾಗಿ ಹೇಳಿದ್ದಾರೆ. ಕಾರ್ಕಳ ಉತ್ಸವ, ಉಮಿಕ್ಕಲ್‌ ಬೆಟ್ಟದಲ್ಲಿ ಪರಶುರಾಮನ ಪ್ರತಿಮೆ ಪ್ರತಿಷ್ಠಾಪನೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಮೂಲಕ ಹಲವು ಕಾರ್ಯಕ್ರಮಗಳನ್ನು ಆಯೋಜಿಸಿ ಗಮನ ಸೆಳೆದಿದ್ದಾರೆ.

ಆದರೆ ಇವರ ವಿರುದ್ಧ ಶ್ರೀರಾಮ ಸೇನೆಯ ಸಂಸ್ಥಾಪಕ ಪ್ರಮೋದ್‌ ಮುತಾಲಿಕ್‌ ಸ್ಪರ್ಧೆ ಘೋಷಿಸಿರುವುದು ಕುತೂ ಹಲಕ್ಕೆ ಕಾರಣವಾಗಿದೆ. ಈಗಾಗಲೇ ಕ್ಷೇತ್ರದಲ್ಲಿ ಝಾಂಡಾ ಹೂಡಿ, ಪ್ರಚಾರ, ಸುತ್ತಾಟ, ಸಭೆಗಳಲ್ಲಿ ತೊಡಗಿದ್ದಾರೆ. ಇವರಿಬ್ಬರ ಮಧ್ಯೆ ವಾಕ್ಸಮರವೂ ಜೋರಾಗುತ್ತಿದೆ.

ಸಾಮಾಜಿಕ ಜಾಲತಾಣಗಳಲ್ಲೂ ಚರ್ಚೆ ಕಾವೇರತೊಡಗಿದೆ. ಒಂದುವೇಳೆ ಇವರಿಬ್ಬರ ಮಧ್ಯೆ ಜಿದ್ದಾಜಿದ್ದಿಯ ಸ್ಪರ್ಧೆ ನಡೆದರೆ ಅದು ಹಿಂದುತ್ವ ವರ್ಸಸ್‌ ಹಿಂದುತ್ವದ ನಡುವಿನ ಹಣಾಹಣಿಯಾಗಿ ಬದಲಾಗಲಿದೆ.

ಅಭ್ಯರ್ಥಿ ಹುಡುಕಾಟದಲ್ಲಿ ಕಾಂಗ್ರೆಸ್‌
ಉಳಿದಂತೆ ಕಾಂಗ್ರೆಸ್‌ ಸಹ ಬಿಜೆಪಿ ಓಟಕ್ಕೆ ಅಡ್ಡಿಯಾಗಲು ಸೂಕ್ತ ಅಭ್ಯರ್ಥಿಯ ಹುಡುಕಾಟದಲ್ಲಿದೆ. ಇಬ್ಬರ ಜಗಳದ ಲಾಭ ಪಡೆಯಲೂ ಎಲ್ಲ ರೀತಿಯ ತಂತ್ರಗಾರಿಕೆಯನ್ನು ಮಾಡುತ್ತಿದೆ. ಮುತಾಲಿಕ್‌ ಅವರು ಸ್ವಲ್ಪ ಮಟ್ಟಿಗೆ ಬಿಜೆಪಿ ಮತಬುಟ್ಟಿಗೆ ಕೈ ಹಾಕಿದರೆ ತನಗೆ ಎಷ್ಟು ಅನುಕೂಲ ವಾದೀತು? ಅದರ ಲಾಭ ಪಡೆಯಲು ಯಾರನ್ನು, ಯಾವ ಸಮು ದಾಯದವರನ್ನು ಸ್ಪರ್ಧಿಯಾಗಿಸಿದರೆ ಒಳ್ಳೆಯದು ಎಂಬ ಆಲೋಚನೆಯಲ್ಲಿ ಕಾಂಗ್ರೆಸ್‌ ನಿರತವಾಗಿದೆ.
ಪ್ರಸ್ತುತ ಡಿ.ಆರ್‌. ರಾಜು, ಸುರೇಂದ್ರ ಶೆಟ್ಟಿ, ಮಂಜುನಾಥ ಪೂಜಾರಿ ಹಾಗೂ ನೀರೆ ಕೃಷ್ಣ ಶೆಟ್ಟಿಯವರು ಟಿಕೆಟ್‌ ಕೋರಿ ಕೆಪಿಸಿಸಿಯಲ್ಲಿ ನಿರ್ದಿಷ್ಟ ಠೇವಣಿಯಿಟ್ಟು ಬಂದಿದ್ದಾರೆ. ಇದರ ಮಧ್ಯೆ ಗುತ್ತಿಗೆದಾರರಾದ ಮುನಿಯಾಲು ಉದಯ ಕುಮಾರ್‌ ಶೆಟ್ಟಿಯವರ ಹೆಸರು ಚಾಲ್ತಿಯಲ್ಲಿದೆ. ಆದರೆ ಮುನಿಯಾಲು ಅವರ ವಿರುದ್ಧವೇ ಪಕ್ಷದ ಕೆಲವರು ಆಕ್ಷೇಪವೆತ್ತಿ ಬಹಿರಂಗ ಹೇಳಿಕೆ ನೀಡಿದ್ದಾರೆ.

ಕ್ಷೇತ್ರದಲ್ಲಿ ಈಗಲೂ ವೀರಪ್ಪ ಮೊಲಿಯವರು ಪ್ರಭಾವ ಹೊಂದಿದ್ದು, ತಮ್ಮ ಬೆಂಬಲಿಗರಿಗೆ ಟಿಕೆಟ್‌ ಕೊಡಿಸಲೂ ಪ್ರಯತ್ನಿಸಬಹುದು. ಹೀಗಾಗಿ ಕಾಂಗ್ರೆಸ್‌ನಲ್ಲಿ ಅಭ್ಯರ್ಥಿ ಆಯ್ಕೆಯೇ ಕೊಂಚ ಕಗ್ಗಂಟು. ಆಕಸ್ಮಾತ್‌ ಕಾಂಗ್ರೆಸ್‌ಗೆ ಸಮರ್ಥ ಅಭ್ಯರ್ಥಿ ಸಿಕ್ಕು, ಪ್ರಮೋದ್‌ ಮುತಾಲಿಕ್‌ ಸಹ ಪ್ರಬಲ ಪೈಪೋಟಿ ಕೊಟ್ಟರೆ ಸುನಿಲ್‌ ಕುಮಾರ್‌ ಗೆಲುವಿಗೆ ಸ್ವಲ್ಪ ಹೆಚ್ಚು ಬೆವರು ಸುರಿಸಬೇಕಾದೀತು.

ಜಯಪ್ರಕಾಶ್‌ ಹೆಗ್ಡೆ ಸೆಳೆಯುವ ಯತ್ನ
ಈ ಹಿಂದೆ ಕಾಂಗ್ರೆಸ್‌ನಲ್ಲಿದ್ದ, ಪ್ರಸ್ತುತ ಬಿಜೆಪಿಯಲ್ಲಿರುವ ಮಾಜಿ ಸಂಸದ ಜಯಪ್ರಕಾಶ್‌ ಹೆಗ್ಡೆ ಅವರನ್ನು ಸೆಳೆಯುವ ಪ್ರಯತ್ನದಲ್ಲಿ ಕಾಂಗ್ರೆಸ್‌ ಇದೆ. ಈ ಮೂಲಕ ಕಾರ್ಕಳ ಕ್ಷೇತ್ರದಲ್ಲಿ ಪ್ರಬಲ ಅಭ್ಯರ್ಥಿಯನ್ನು ಕಣಕ್ಕಿಳಿಸುವ, ಜಿದ್ದಾಜಿದ್ದಿನ ಹೋರಾಟಕ್ಕೆ ಅಣಿಯಾಗುವ ತಯಾರಿಯಲ್ಲಿದೆ. ಆದರೆ ಜಯಪ್ರಕಾಶ್‌ ಹೆಗ್ಡೆ ಅವರು ಮತ್ತೆ ಕಾಂಗ್ರೆಸ್‌ ಪಕ್ಷದತ್ತ ವಾಲುವ ಸಾಧ್ಯತೆಗಳ ಬಗ್ಗೆ ಇನ್ನೂ ಸ್ಪಷ್ಟತೆ ಮೂಡಿಲ್ಲ. ಇದೇ ಸಂದರ್ಭದಲ್ಲಿ ವಿಧಾನಸಭೆಯ ಚುನಾವಣೆಗಿಂತ ಹೆಚ್ಚಾಗಿ ಲೋಕಸಭೆಯ ಚುನಾವಣೆಯಲ್ಲಿ ಸ್ಪರ್ಧಿಸುವ ಕುರಿತಂತೆ ಜಯಪ್ರಕಾಶ್‌ ಹೆಗ್ಡೆ ಅವರ ಒಲವು ಹೆಚ್ಚಾಗಿದೆ ಎಂದು ಹೇಳಲಾಗುತ್ತಿದೆ.

-ಬಾಲಕೃಷ್ಣ ಭೀಮಗುಳಿ

ಟಾಪ್ ನ್ಯೂಸ್

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.