ಕಾರ್ಕಳ: ಇದ್ದೂ ಇಲ್ಲದಂತಾದ ಕೆಎಸ್‌ಆರ್‌ಟಿಸಿ

ಪೇಟೆಗೆ ಬಾರದ ಬಸ್‌; ಕಚೇರಿಯಿದ್ದರೂ ಸಿಬಂದಿ ಇಲ್ಲ

Team Udayavani, Mar 6, 2020, 4:32 AM IST

karkala-KSRTC

ಕಾರ್ಕಳ: ಉಡುಪಿ ಹಾಗೂ ದ.ಕ. ಜಿಲ್ಲೆಯ ನಗರ ಮತ್ತು ಗ್ರಾಮೀಣ ಪ್ರದೇಶಗಳ ಕೊಂಡಿಯಾಗಿ ಪಾತ್ರ ನಿರ್ವಹಿಸುತ್ತಿರುವ ಕೆಎಸ್‌ಆರ್‌ಟಿಸಿ ಕಾರ್ಕಳ ಪಾಲಿಗೆ ಮಾತ್ರ ಇದ್ದೂ ಇಲ್ಲದಂತಿದೆ. ಬಂಡಿಮಠದಲ್ಲಿ ಬಸ್‌ ನಿಲ್ದಾಣ ನಿರ್ಮಾಣವಾಗಿದ್ದಾಗ್ಯೂ ಹೆಚ್ಚಿನ ಕೆಎಸ್‌ಆರ್‌ಟಿಸಿ ಬಸ್‌ಗಳು ಅಲ್ಲಿಗೆ ತೆರಳದೇ ನೇರವಾಗಿ ಬೈಪಾಸ್‌ ಮೂಲಕವೇ ಸಾಗುತ್ತಿವೆ.

ಕಾರ್ಕಳದಲ್ಲಿ ಐರಾವತ, ರಾಜಹಂಸ ಸಹಿತ ಸುಮಾರು 150 ಬಸ್‌ಗಳು ದಿನಂಪ್ರತಿ ಓಡಾಟ ನಡೆಸುತ್ತಿದ್ದರೂ ಬಸ್‌ ಕುರಿತು ಮಾಹಿತಿ ಪಡೆಯಲು ಅಥವಾ ದೂರದೂರಿಗೆ ಪ್ರಯಾಣ ಬೆಳೆಸುವ ನಿಟ್ಟಿನಲ್ಲಿ ಮುಂಗಡವಾಗಿ ಟಿಕೆಟ್‌ ಪಡೆಯಲು ಇಲ್ಲಿ ಕೌಂಟರೇ ಇಲ್ಲವಾಗಿದೆ.

ಉಪಯೋಗಕ್ಕಿಲ್ಲ ಕೌಂಟರ್‌
ಬಂಡಿಮಠ ಬಸ್‌ ನಿಲ್ದಾಣ ಬಳಿ ಪುರಸಭೆ ಕಟ್ಟಡದಲ್ಲಿ ಹೆಸರಿಗೆ ಎಂಬಂತೆ ಕೆಎಸ್‌ಆರ್‌ಟಿಸಿ ಕಚೇರಿಯೊಂದಿದೆ. ಪಕ್ಕನೆ ನೋಡುವಾಗ ಇದೊಂದು ಖಾಲಿ ಕೋಣೆ. ಅದೂ ಕೂಡ ಹೆಚ್ಚಿನ ದಿನಗಳಲ್ಲಿ ಮುಚ್ಚಿರುತ್ತದೆ. ರಾತ್ರಿ ವೇಳೆ ಬಸ್‌ ಚಾಲಕ- ನಿರ್ವಾಹಕರು ಇದರಲ್ಲಿ ವಾಸ್ತವ್ಯ ಹೂಡಲು ಮಾತ್ರವೇ ಬಳಕೆಯಾಗುತ್ತಿರುವ ಈ ಕಚೇರಿಗೆ ಕಾಯಕಲ್ಪ ದೊರೆಯಬೇಕಿದೆ. ಟಿಸಿ (ಟ್ರಾಫಿಕ್‌ ಕಂಟ್ರೋಲರ್‌)ಯೊಬ್ಬರು ಕಾರ್ಯನಿರ್ವಹಿಸುತ್ತಿದ್ದರೂ ಹೆಚ್ಚಿನ ದಿನ ಆರೋಗ್ಯ ಸಮಸ್ಯೆ ಯಿಂದಾಗಿ ಅವರು ರಜೆಯಲ್ಲಿರುತ್ತಾರೆ. ಹೀಗಿರುವಾಗ ಪರ್ಯಾಯ ವ್ಯವಸ್ಥೆ ಮಾಡುವಲ್ಲಿ ಕೆಎಸ್‌ಆರ್‌ಟಿಸಿ ಆಸ್ಥೆ ವಹಿಸದೇ ನಿರ್ಲಕ್ಷ್ಯ ಧೋರಣೆ ತಾಳಿದೆ ಎಂದು ಸ್ಥಳೀಯರು ದೂರುತ್ತಾರೆ.

ಮೂಲಸೌಕರ್ಯವೇ ಇಲ್ಲಿಲ್ಲ
ಕಚೇರಿಗೆ ಅಗತ್ಯವಾಗಿ ಬೇಕಾಗಿರುವ ಫೋನ್‌, ಕಂಪ್ಯೂಟರ್‌, ಇಂಟರ್‌ ನೆಟ್‌ ವ್ಯವಸ್ಥೆಯಿದ್ದರೂ ಯಾವೊಂದು ಸಮರ್ಪಕವಾಗಿಲ್ಲ. ವೇಳಾಪಟ್ಟಿಯೂ ಅಲ್ಲಿಲ್ಲ. ಬಸ್‌ ವೇಳಾಪಟ್ಟಿ ತಿಳಿಸುವ ಪಿಎಎಸ್‌(ಪಬ್ಲಿಕ್‌ ಅನೌನ್ಸ್‌ಮೆಂಟ್‌ ಸಿಸ್ಟಂ) ಕೂಡ ಕೆಟ್ಟು ಹೋಗಿದೆ.

ಡಿಪೋ ಬೇಡಿಕೆಯಿದೆ
ಪ್ರವಾಸಿ ತಾಣವಾಗಿ ಕಾರ್ಕಳ ಅಭಿವೃದ್ಧಿ ಹೊಂದುತ್ತಿದ್ದರೂ ಕಾರ್ಕಳದಲ್ಲಿ ಕೆಎಸ್‌ಆರ್‌ಟಿಸಿ ಡಿಪೋ ಇಲ್ಲ. ಡಿಪೋ ಇರುತ್ತಿದ್ದಲ್ಲಿ ಗ್ರಾಮೀಣ ಭಾಗಕ್ಕೆ ಹೆಚ್ಚಿನ ಬಸ್‌ ವ್ಯವಸ್ಥೆ ಕಲ್ಪಿಸಿಕೊಡಬಹುದಿತ್ತು. ಕೆಎಸ್‌ಆರ್‌ಟಿಸಿ ಡಿಪೋ ಸ್ಥಾಪಿಸಲು ಸುಮಾರು 5 ಎಕ್ರೆ ನಿವೇಶನದ ಅಗತ್ಯವಿದ್ದು, ತೋಟಗಾರಿಕೆ ಇಲಾಖೆ ಸಮೀಪವಿರುವ ಸರಕಾರಿ ಜಾಗವನ್ನು ಡಿಪೋಗಾಗಿ ಒದಗಿಸಿ ಕೊಡುವ ನಿಟ್ಟಿನಲ್ಲಿ ಸರ್ವೆ ಕಾರ್ಯ ನಡೆದಿತ್ತು.

ಹೈಮಾಸ್ಟ್‌ ಲೈಟ್‌ ಉರಿಯುತ್ತಿಲ್ಲ
ಬಸ್‌ ನಿಲ್ದಾಣದಲ್ಲಿ ಅಂದು ಅಳವಡಿಸಿದ್ದ ಹೈಮಾಸ್ಟ್‌ ಲೈಟ್‌ ಇದೀಗ ಉರಿಯುತ್ತಿಲ್ಲ. ಕೆಟ್ಟು ಹೋದ ಲೈಟ್‌ ಸರಿಪಡಿಸುವಲ್ಲಿ ಸಂಬಂಧಪಟ್ಟವರು ಗಮನ ಹರಿಸಿಲ್ಲ. ಈ ಕುರಿತು ಸ್ಥಳೀಯರು ಪುರಸಭೆಗೆ ಮಾಹಿತಿ ನೀಡಿದ್ದರೂ ಪುರಸಭೆ ವತಿಯಿಂದ ದುರಸ್ತಿ ಕಾರ್ಯವಾಗಿಲ್ಲ.

ನಿಲ್ಲದ ಬಸ್‌
ಬೆಂಗಳೂರು, ಮೈಸೂರು, ಹಾಸನ, ಚಿಕ್ಕಮಗಳೂರು, ಹುಬ್ಬಳ್ಳಿ, ಧಾರವಾಡದಿಂದ ಕಾರ್ಕಳ ಮೂಲಕವೇ ಬಸ್‌ ಓಡಾಟವಿದೆ. ಕೆಲವೊಂದು ಬಸ್‌ಗಳು ಬಂಡಿಮಠ ನಿಲ್ದಾಣಕ್ಕೆ ಬಂದರೂ ಒಂದೈದು ನಿಮಿಷ ನಿಲುಗಡೆ ನೀಡದೇ ತೆರಳುತ್ತಿವೆ. ಹೀಗಾಗಿ ಪ್ರಯಾಣಿಕರಿಗೆ ಬಸ್‌ ತಪ್ಪುವ ಸಾಧ್ಯತೆ ಅಧಿಕವಾಗಿದ್ದು, ಇದಕ್ಕೆ ಸೂಕ್ತ ಕ್ರಮ ಕೈಗೊಳ್ಳಬೇಕೆಂದು ಸಾರ್ವಜನಿಕರು ಆಗ್ರಹಿಸುತ್ತಿದ್ದಾರೆ.
ಕೆಎಸ್‌ಆರ್‌ಟಿಸಿ ಕಚೇರಿ ಇಲ್ಲದ ಪರಿಣಾಮ ವಿದ್ಯಾರ್ಥಿಗಳ ಬಸ್‌ ಪಾಸ್‌, ಹಿರಿಯ ನಾಗರಿಕರ ಬಸ್‌ ಪಾಸ್‌ಗೆ ಸಂಬಂಧಿಸಿದ ಕೆಲಸ ಕಾರ್ಯಗಳಿಗೆ ದೂರದ ಉಡುಪಿಯನ್ನೇ ಅವಲಂಬಿಸಬೇಕಿದೆ.

ಬಂಡಿಮಠ ಬಸ್‌ ನಿಲ್ದಾಣ
ಪುರಸಭೆಯ 5ನೇ ವಾರ್ಡ್‌ನ ಬಂಡಿಮಠದಲ್ಲಿ 2011-12ರ ವೇಳೆ 2.18 ಎಕ್ರೆ ಜಾಗವನ್ನು ಬಸ್‌ ನಿಲ್ದಾಣಕ್ಕಾಗಿ ಕಾದಿರಿಸಲಾಗಿದ್ದು, 1.78 ಎಕ್ರೆ ವಿಸ್ತೀರ್ಣದಲ್ಲಿ ಅಂದು 2 ಕೋಟಿ ರೂ. ವೆಚ್ಚದಲ್ಲಿ ಕಾಂಕ್ರೀಟ್‌ ಕಾಮಗಾರಿ ನಡೆಸಿ, ಅಭಿವೃದ್ಧಿಪಡಿಸಲಾಗಿತ್ತು. ಅಂದಿನ ಸಿಎಂ. ಡಿ.ವಿ. ಸದಾನಂದ ಗೌಡರು ಬಸ್‌ ನಿಲ್ದಾಣ ಉದ್ಘಾಟಿಸಿದ್ದರು. ಇಷ್ಟೊಂದು ವೆಚ್ಚದಲ್ಲಿ ವಿಶಾಲವಾದ ಪ್ರದೇಶದಲ್ಲಿ ಬಸ್‌ ನಿಲ್ದಾಣವಾಯಿತೇ ವಿನಃ ಇದರಿಂದ ಸಾರ್ವಜನಿಕರಿಗೆ ಯಾವೊಂದು ಪ್ರಯೋಜವಾಗಿಲ್ಲ.

ಕ್ರಮ ಕೈಗೊಳ್ಳಲಾಗುವುದು
ಕೆಎಸ್‌ಆರ್‌ಟಿಸಿ ಬಸ್‌ಗಳು ನೇರವಾಗಿ ಬೈಪಾಸ್‌ ಮೂಲಕ ಸಾಗದೇ ಬಂಡಿಮಠ ಬಸ್‌ ನಿಲ್ದಾಣಕ್ಕೆ ಆಗಮಿಸಿ ತೆರಳಬೇಕು. ಅಲ್ಲಿಯ ಸಮಸ್ಯೆಗಳನ್ನು ಬಗೆಹರಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲಾಗುವುದು. ಪ್ರಸ್ತುತ ಕಾರ್ಕಳದಲ್ಲಿ ಖಾಸಗಿ ಏಜೆನ್ಸಿಯವರು ಕೆಎಸ್‌ಆರ್‌ಟಿಸಿ ಮುಂಗಡ ಟಿಕೆಟ್‌ ನೀಡುತ್ತಿದ್ದಾರೆ.
-ಉದಯ ಶೆಟ್ಟಿ, ಡಿಪೋ ಮ್ಯಾನೇಜರ್‌, ಉಡುಪಿ

ಪರದಾಡುವಂತಹ ಪರಿಸ್ಥಿತಿ
ಬಂಡಿಮಠ ಬಸ್‌ ನಿಲ್ದಾಣಕ್ಕೆ ಸರಿಯಾದ ಸಮಯಕ್ಕೆ ಬಸ್‌ ಆಗಮಿಸುತ್ತಿಲ್ಲ. ಪ್ರಯಾಣಿಕರಿಗೆ ಬಸ್‌ ಕುರಿತು ಮಾಹಿತಿ ಪಡೆಯಲು ಇಲ್ಲಿ ಕಚೇರಿ, ಸಿಬಂದಿಯಿರುವುದಿಲ್ಲ. ಜನರು ಇದರಿಂದಾಗಿ ಪರದಾಡುವಂತಹ ಪರಿಸ್ಥಿತಿಯಿದೆ.
-ಚಂದ್ರಶೇಖರ್‌ ಆಚಾರ್‌, ಬಂಡಿಮಠ

2011-12ರ ಸಂದರ್ಭ
2.18 ಬಸ್‌ ನಿಲ್ದಾಣಕ್ಕೆ ಕಾದಿರಿಸಲಾದ ಜಾಗ (ಎಕ್ರೆಗಳಲ್ಲಿ)
1.78 ಅಭಿವೃದ್ಧಿಪಡಿಸಲಾದ ಜಾಗ (ಎಕ್ರೆ)
02 ಕೋಟಿ ರೂ. ವೆಚ್ಚ

ರಾಮಚಂದ್ರ ಬರೆಪ್ಪಾಡಿ

ಟಾಪ್ ನ್ಯೂಸ್

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

1-MB

Note Ban ವೇಳೆ ಮಹಿಳೆಯರು ಮಂಗಳಸೂತ್ರ ಅಡವಿಟ್ಟಾಗ ಮೋದಿ ಮೌನ: ಭಂಡಾರಿ

Exam

Udupi; ಪಿಯುಸಿ ಪರೀಕ್ಷೆ-2 : ನಿಷೇಧಾಜ್ಞೆ ಜಾರಿ

IMD

Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.