Karnataka Government ಎನ್ನೆಸ್ಸೆಸ್‌ ಮೂಲಕ ಗ್ರಾಮೀಣ ಜೀವನ ಸಮೀಕ್ಷೆಗೆ ಸರಕಾರ ಸಿದ್ಧತೆ

Team Udayavani, Oct 7, 2023, 6:31 AM IST

Karnataka Government ಎನ್ನೆಸ್ಸೆಸ್‌ ಮೂಲಕ ಗ್ರಾಮೀಣ ಜೀವನ ಸಮೀಕ್ಷೆಗೆ ಸರಕಾರ ಸಿದ್ಧತೆ

ಉಡುಪಿ: ಅತಿ ಹಿಂದುಳಿದ ಹಳ್ಳಿಗಳ ಜನರ ಜೀವನ ಪರಿವರ್ತನೆಗೆ ರಾಷ್ಟ್ರೀಯ ಸೇವಾ ಯೋಜನೆ (ಎನ್ನೆಸ್ಸೆಸ್‌)ಯ ಸ್ವಯಂ ಸೇವಕರ ಮೂಲಕ ಹೊಸ ಸಮೀಕ್ಷೆಗೆ ರಾಜ್ಯ ಸರಕಾರ ಮುಂದಾಗಿದೆ.

ಬಡತನ ರೇಖೆಗಿಂತ ಕೆಳಗಿರುವ ಕುಟುಂಬಗಳನ್ನು ರೇಖೆಗಿಂತ ಮೇಲೆ ತರಲು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಮೂಲಕ ರಾಜ್ಯ ಸರಕಾರ ಅಮೃತ ಸಮುದಾಯ ಅಭಿವೃದ್ಧಿ ಯೋಜನೆ ರೂಪಿಸುತ್ತಿದ್ದು, ಪದವಿ ಕಾಲೇಜಿನ ಎನ್ನೆಸ್ಸೆಸ್‌ ಘಟಕದಿಂದ ಅನುಷ್ಠಾನ ಮಾಡಲಾಗುತ್ತದೆ. ಪ್ರತೀ ಕಾಲೇಜಿನ ಎನ್ನೆಸ್ಸೆಸ್‌ ಘಟಕಕ್ಕೆ ಈಗಾಗಲೇ ಒಂದೊಂದು ಗ್ರಾಮ/ಹಳ್ಳಿಯನ್ನು ದತ್ತು ಪಡೆಯುವಂತೆ ಸೂಚಿಸಲಾಗಿದೆ. ದತ್ತು ಪಡೆದ ಹಳ್ಳಿಗಳಲ್ಲಿ ಎನ್ನೆಸ್ಸೆಸ್‌ ಸೇವಾ ಕಾರ್ಯವೂ ನಡೆಯುತ್ತಿದೆ.

ಎನ್ನೆಸ್ಸೆಸ್‌ ಸ್ವಯಂಸೇವಕರು ತಮ್ಮ ಘಟಕ ದತ್ತು ಪಡೆದಿರುವ ಅಥವಾ ಸಾಮಾಜಿಕ/ ಆರ್ಥಿಕವಾಗಿ ಹಿಂದುಳಿದ ಹಳ್ಳಿಗಳಿಗೆ ತೆರಳಿ ಜನರ (ವಿಶೇಷವಾಗಿ ಮಕ್ಕಳ) ಪೌಷ್ಟಿಕಾಂಶ, ಸಾಮಾನ್ಯ ಆರೋಗ್ಯ ತಪಾಸಣೆ ಮತ್ತು ಜಾಗೃತಿ, ಪರಿಸರ ಸಂರಕ್ಷಣೆಯ ಜತೆಗೆ ಮನೆ ಮನೆಗೆ ಭೇಟಿ ನೀಡಿ ಆಧಾರ್‌ ಕಾರ್ಡ್‌, ರೇಷನ್‌ ಕಾರ್ಡ್‌ ಇದೆಯೇ ಎಂಬ ವಿವರದ ಜತೆಗೆ ಶೌಚಾಲಯ ಸಹಿತ ಕನಿಷ್ಠ ಸೌಲಭ್ಯದ ಬಗ್ಗೆಯೂ ಮಾಹಿತಿ ಕಲೆ ಹಾಕಿ ಆನ್‌ಲೈನ್‌ ಮೂಲಕ ಅಪ್‌ಡೇಟ್‌ ಮಾಡಲಿದ್ದಾರೆ. ಸರಕಾರದ ಯೋಜನೆಗಳು ಅರ್ಹ ವ್ಯಕ್ತಿಗೆ ತಲುಪಿದೆಯೇ ಎಂಬುದನ್ನು ಖಚಿತಪಡಿಸಿಕೊಳ್ಳುವುದು ಸಮೀ ಕ್ಷೆಯ ಒಂದು ಭಾಗ.

ಕಾಲೇಜುಗಳಿಗೆ ಸೂಚನೆ
ಈ ಯೋಜನೆಯಲ್ಲಿ ಎಲ್ಲ ಸರಕಾರಿ, ಖಾಸಗಿ, ಅನುದಾನಿತ ಕಾಲೇಜುಗಳ ಎನ್ನೆಸ್ಸೆಸ್‌ ಅಧಿಕಾರಿಗಳು ಮತ್ತು ಸ್ವಯಂ ಸೇವಕರು ಸಕ್ರಿಯವಾಗಿ ಪಾಲ್ಗೊಳ್ಳಬೇಕು. ಸಮೀಕ್ಷೆ ಸಂಪೂರ್ಣ ವಿವರವನ್ನು ಕಾಲೇಜು ಶಿಕ್ಷಣ ಇಲಾಖೆಯ ಮೂಲಕ ಆಯಾ ಕಾಲೇಜುಗಳಿಗ ಪ್ರಾಂಶುಪಾಲರ ಮೂಲಕ ಎನ್ನೆಸ್ಸೆಸ್‌ ಸಂಯೋಜಕರಿಗೆ ಶೀಘ್ರವೇ ತಲುಪಲಿದೆ.

15 ಸಾವಿರ ಸ್ವಯಂಸೇವಕರು
ರಾಜ್ಯದ 750 ಆಯ್ದ ಹಳ್ಳಿಗಳಲ್ಲಿ ಸಮೀಕ್ಷೆ ನಡೆಯಲಿದ್ದು, 46 ಸಾವಿರ ವಿದ್ಯಾರ್ಥಿಗಳು ಭಾಗವಹಿಸುವ ಸಾಧ್ಯತೆಯಿದೆ. ದಕ್ಷಿಣ ಕನ್ನಡದಲ್ಲಿ 64 ಹಾಗೂ ಉಡುಪಿ ಜಿಲ್ಲೆಯಲ್ಲಿ 35 ಎನ್ನೆಸ್ಸೆಸ್‌ ಘಟಕಗಳಿವೆ. ಉಡುಪಿಯಲ್ಲಿ 6 ಸಾವಿರ, ದ.ಕ.ದಲ್ಲಿ 9 ಸಾವಿರ ಸೇರಿದಂತೆ ಉಭಯ ಜಿಲ್ಲೆಯಲ್ಲಿ 15 ಸಾವಿರ ಸ್ವಯಂಸೇವಕರು ಇದ್ದಾರೆ.

ವೆಚ್ಚ ನಿರ್ವಹಣೆ ಕಷ್ಟ
ಸಮೀಕ್ಷೆಗೆ ತಗಲುವ ವೆಚ್ಚ ಮತ್ತು ಸ್ವಯಂಸೇವಕರ ಪ್ರಯಾಣ ವೆಚ್ಚ, ಇತರ ಖರ್ಚಿನ ನಿರ್ವಹಣೆ ಹೇಗೆ ಎಂಬುದರ ಸ್ಪಷ್ಟತೆಯನ್ನು ಸರಕಾರ/ ಇಲಾಖೆ ನೀಡಿಲ್ಲ. ಸಾಮಾನ್ಯವಾಗಿ ಎನ್ನೆಸ್ಸೆಸ್‌ ಶಿಬಿರ ನಡೆಯುವ ಸಂದರ್ಭದಲ್ಲಿ ಸ್ವಚ್ಛತೆ ಹಾಗೂ ಮಾಹಿತಿ ವಿನಿಮಯಕ್ಕೆ ಆದ್ಯತೆ ನೀಡಲಾಗುತ್ತದೆ. ಈ ಹಿಂದೆ ಕೆಲವು ಸಮೀಕ್ಷೆಗಳನ್ನು ನಡೆಸಲಾಗಿದೆ. ಸಮೀಕ್ಷೆ ಪೂರ್ಣಗೊಂಡ ಅನಂತರ ಅದನ್ನು ಕೇಳುವವರು ಇರುವುದಿಲ್ಲ. ಈ ಸಮೀಕ್ಷೆಯೂ ಹಾಗೆ ಆಗದಿರಲಿ ಮತ್ತು ಸರಕಾರದಿಂದ ಇದಕ್ಕೆ ಪೂರಕ ಅನುದಾನವನ್ನೂ ಒದಗಿಸುವಂತಾಗಬೇಕು ಎಂಬುದು ಸ್ವಯಂಸೇವಕರ ಆಗ್ರಹ.

ಎನ್ನೆಸ್ಸೆಸ್‌ ಘಟಕಗಳಿಂದ ಈಗಾಗಲೇ ಹಳ್ಳಿಗಳನ್ನು ದತ್ತು ಪಡೆದು ಅಲ್ಲಿ ಸ್ವತ್ಛತೆ ಸಹಿತ ವಿವಿಧ ಚಟುವಟಿಕೆ ನಡೆಸಲಾಗುತ್ತಿದೆ. ಗ್ರಾಮೀಣ ಜೀವನ ಸುಧಾರಣೆಗೆ ಸಂಬಂಧಿಸಿದ ಸಮೀಕ್ಷೆಯ ಮಾಹಿತಿ ಅಥವಾ ಅಮೃತ ಸಮುದಾಯ ಅಭಿವೃದ್ಧಿ ಯೋಜನೆಯ ವಿವರ ಇನ್ನಷ್ಟೇ ಬರಬೇಕಿದೆ.
– ಡಾ| ನಾಗರತ್ನಾ ಕೆ.ಎ.,
ಎನ್ನೆಸ್ಸೆಸ್‌ ಯೋಜನಾಧಿಕಾರಿಗಳು, ಮಂಗಳೂರು ವಿಶ್ವವಿದ್ಯಾನಿಲಯ

-ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Dina Bhavishya

ಅನಿರೀಕ್ಷಿತ ಯಶಸ್ಸು..ಅನಿರೀಕ್ಷಿತ ಪ್ರಗತಿ… ಅನಿರೀಕ್ಷಿತ ಧನಪ್ರಾಪ್ತಿ

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

ಯಳಬೇರು: ಮರವೇರಿದ ಮೊಬೈಲ್‌!ಮರದ ಎತ್ತರದಲ್ಲಿ ನೆಟ್‌ವರ್ಕ್‌ ಸಂಪರ್ಕ; ಅಲ್ಲಿಂದ ಹಾಟ್‌ಸ್ಪಾಟ್‌

12-madikeri

Madikeri: ಅತ್ಯಾಚಾರಿಗೆ ಕಠಿಣ ಸಜೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

Lok Sabha ಚುನಾವಣೆ ಮುಗಿಯಿತು; ಇನ್ನು ಫ‌ಲಿತಾಂಶದ ಜಪ

6-KAUP

Kaup: ಪಾಂಗಾಳದಲ್ಲಿ ಆಕಸ್ಮಿಕ ಬೆಂಕಿ: ಬೆಂಕಿ ನಂದಿಸಲು ನೆರವಾದ ತಹಶೀಲ್ದಾರ್

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Udupi ಮಲ್ಪೆ ಬೀಚ್‌ನಲ್ಲಿ ವಾಟರ್‌ ಗೇಮ್‌ ಸ್ಥಗಿತ

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

Karkala ಪರಶುರಾಮ ಥೀಂ ಪಾರ್ಕ್‌ ಸಮಾಜದ್ದು: ಸುನಿಲ್‌ ಕುಮಾರ್‌

MUST WATCH

udayavani youtube

ಭಗವಂತನ ಆಣೆ ಯಾವ ಸಂತ್ರಸ್ತೆಯರನ್ನು ನಾನು ಭೇಟಿ ಮಾಡಿಲ್ಲಶ್ರೇಯಸ್‌ಪಟೇಲ್ ಹೇಳಿಕೆ

udayavani youtube

ಉಡುಪಿ ರೈತನ ವಿಭಿನ್ನ ಪ್ರಯತ್ನ : ಕೈ ಹಿಡಿದ ಕೇಸರಿ ಕಲ್ಲಂಗಡಿ

udayavani youtube

ಹಿಮೋಫಿಲಿಯಾ ಈ ರಕ್ತದ ಕಾಯಿಲೆ ಇರುವವರು ಮಾಡಬೇಕಾದ್ದೇನು ?

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

ಹೊಸ ಸೇರ್ಪಡೆ

1——wqwqe

IPL ರಾಜಸ್ಥಾನ ವಿರುದ್ಧ ಗೆದ್ದ ಡೆಲ್ಲಿ ಪ್ಲೇಆಫ್ ಭರವಸೆ ಜೀವಂತ: ಆರ್ ಸಿಬಿಗೆ ಸವಾಲು

15-

Udupi: ಸಾಲ ಪ್ರಕರಣ: ಆರೋಪಿಗಳು ದೋಷಮುಕ್ತ

1-wqewqe

Students; ವಿವಸ್ತ್ರಗೊಳಿಸಿ, ಖಾಸಗಿ ಅಂಗಕ್ಕೆ ಘಾಸಿ!; ಹಿರಿಯ ವಿದ್ಯಾರ್ಥಿಗಳಿಂದ ಚಿತ್ರಹಿಂಸೆ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

IPL 2024; ಲಕ್ನೋ, ಹೈದ್ರಾಬಾದ್‌ ಸೆಣಸು; ಗೆಲ್ಲುವ ತಂಡಕ್ಕೆ ಪ್ಲೇಆಫ್ ಸ್ಥಾನ ಬಹುತೇಕ ಖಚಿತ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

ಜಾನುವಾರುಗಳಿಗೆ ಮೇವು; ಹಸುರು ಹುಲ್ಲಿನ ಬದಲು ತರಕಾರಿ ಸಿಪ್ಪೆ ಬಳಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.