ಇಬ್ಬರು ಹೊಸಬರೊಳಗೆೆ ಚಕ್ರವ್ಯೂಹ ಭೇದಿಸುವರಾರು ?


Team Udayavani, May 6, 2023, 7:50 AM IST

ಇಬ್ಬರು ಹೊಸಬರೊಳಗೆೆ ಚಕ್ರವ್ಯೂಹ ಭೇದಿಸುವರಾರು ?

ಉಡುಪಿ: ಜಿಲ್ಲಾ ಕೇಂದ್ರದ ವಿಧಾನಸಭಾ ಕ್ಷೇತ್ರವಾಗಿರುವ ಉಡುಪಿ ಸದ್ಯ ಬಿಜೆಪಿ ಶಾಸಕರನ್ನೇ ಹೊಂದಿದ್ದರೂ ಈ ಚುನಾವಣೆಯಲ್ಲಿ ಬಿಜೆಪಿ ಮತ್ತು ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆಯಿದೆ.
ಬಿಜೆಪಿ ಅಭ್ಯರ್ಥಿ ಯಶ್‌ಪಾಲ್‌ ಸುವರ್ಣ ಮತ್ತು ಕಾಂಗ್ರೆಸ್‌ ಅಭ್ಯರ್ಥಿ ಪ್ರಸಾದ್‌ ರಾಜ್‌ ಕಾಂಚನ್‌ ಇಬ್ಬರೂ ಹೊಸಬರು. ದಶಕಗಳಿಂದ ಕಾಂಗ್ರೆಸ್‌ ಈ ಕ್ಷೇತ್ರದಲ್ಲಿ ಮೊಗವೀರ ಸಮುದಾಯಕ್ಕೆ ಅವಕಾಶ ನೀಡುತ್ತಿದೆ. ಈ ಚುನಾವಣೆಯಲ್ಲೂ ಅದೇ ಸಂಪ್ರದಾಯ ಮುಂದುವರಿಸಿದೆ. ಬಿಜೆಪಿ ಇಲ್ಲಿ ಬ್ರಾಹ್ಮಣ, ಬಂಟ ಸಮುದಾಯಕ್ಕೆ ಹಿಂದೆ ಟಿಕೆಟ್‌ ನೀಡಿದ್ದು, ಈ ಬಾರಿ ಮೊಗವೀರ ಸಮುದಾಯಕ್ಕೆ ಮಣೆ ಹಾಕಿದೆ. ಒಂದೇ ಸಮುದಾಯದ ಇಬ್ಬರು ಅಭ್ಯರ್ಥಿಗಳ ಮಧ್ಯೆ ಸೆಣಸಾಟ ಇದೇ ಮೊದಲು.

ಬಿಜೆಪಿ ಅಭ್ಯರ್ಥಿಗೆ ಹಾಲಿ ಶಾಸಕರ ಬಲದ ಜತೆಗೆ ಕಳೆದ ಐದು ವರ್ಷಗಳಲ್ಲಿ ಆಗಿರುವ ಅಭಿವೃದ್ಧಿ ಕಾರ್ಯಗಳು, ಕೇಂದ್ರ ಹಾಗೂ ರಾಜ್ಯ ಸರಕಾರದ ಯೋಜನೆಗಳೇ ಶ್ರೀರಕ್ಷೆ. ಕಾಂಗ್ರೆಸ್‌ ಅಭ್ಯರ್ಥಿ ಪಕ್ಷದ ಗ್ಯಾರಂಟಿ ಕಾರ್ಡ್‌ ಜತೆಗೆ ಬಿಜೆಪಿ ಸರಕಾರದ ಭ್ರಷ್ಟಾಚಾರ, ಕಮಿಷನ್‌ ಆರೋಪ, ವಿವಿಧ ನೇಮಕಾತಿ ಹಗರಣಗಳೇ ಮತ ಗಳಿಸಲು ಆಧಾರ. ನಗರಸಭೆ ಸದಸ್ಯರಾಗಿದ್ದದ್ದು, ಸಹಕಾರಿ ಕ್ಷೇತ್ರದಲ್ಲೂ ಗುರುತಿಸಿಕೊಂಡಿರುವುದು ಯಶ್‌ಪಾಲ್‌ ಅವರಿಗೆ ಅನುಕೂಲಕರ ಅಂಶಗಳಾಗಬಹುದು. ಇನ್ನು ಪ್ರಸಾದ್‌ರಾಜ್‌ ಕಾಂಚನ್‌ ಅವರು ಕಾಂಗ್ರೆಸ್‌ ಕುಟುಂಬದಿಂದಲೇ ಬಂದವರು. ಅವರ ತಾಯಿ ಸರಳಾ ಕಾಂಚನ್‌ ಅವರು ಬ್ರಹ್ಮಾವರ ಕ್ಷೇತ್ರವಿದ್ದಾಗ ಅಲ್ಲಿಂದ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದರು. ಜತೆಗೆ ಉದ್ಯಮಿ ಯಾಗಿಯೂ ಪರಿಚಿತರು. ಜೆಡಿಎಸ್‌ನಿಂದ ದಕ್ಷತ್‌ ಶೆಟ್ಟಿ ಕಣದಲ್ಲಿದ್ದಾರೆ.

ಜಾತಿ ಲೆಕ್ಕಾಚಾರ
ಕ್ಷೇತ್ರದಲ್ಲಿ ಬಿಜೆಪಿ ಹಾಗೂ ಕಾಂಗ್ರೆಸ್‌ ಮಧ್ಯೆ ನೇರ ಸ್ಪರ್ಧೆಯಿದ್ದರೂ ಎರಡೂ ಪಕ್ಷದಿಂದಲೂ ಮೊಗವೀರ ಸಮುದಾಯದವರೇ ಸ್ಪರ್ಧಿಗಳು. ಮೊಗವೀರ ಮತ್ತು ಬಿಲ್ಲವರ ಮತಗಳು ಹೆಚ್ಚಿವೆ. ಬಂಟ, ಅಲ್ಪಸಂಖ್ಯಾಕರ ಹಾಗೂ ಬ್ರಾಹ್ಮಣ ಮತದಾರರೂ ಇದ್ದಾರೆ. ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಮತದಾರರು ಕ್ಷೇತ್ರದ ಗ್ರಾಮೀಣ ಭಾಗದಲ್ಲಿ ಅಧಿಕವಿದ್ದಾರೆ. ಮೊಗವೀರ ಹಾಗೂ ಬಿಲ್ಲವ ಸಮುದಾಯದ ಮತಗಳನ್ನು ಹೆಚ್ಚು ಯಾರು ಪಡೆಯಲಿದ್ದಾರೋ ಅವರಿಗೆ ಜಯಲಕ್ಷ್ಮೀ ಒಲಿಯಬಹುದು. ಎರಡು ಪಕ್ಷದಿಂದಲೂ ಬಿರುಸಿನ ಪ್ರಚಾರ ನಡೆಯುತ್ತಿದೆ. ರಾಜ್ಯ ನಾಯಕರೂ ಪ್ರಚಾರ ನಡೆಸಿದ್ದಾರೆ. ಇಬ್ಬರಿಗೂ ಇದು ಸ್ವಕ್ಷೇತ್ರವಾದ್ದರಿಂದ, ಮತದಾರರು ಯಾರ ಕಡೆ ಒಲವು ತೋರುವರೋ ಕಾದು ನೋಡಬೇಕಿದೆ.

ಚರ್ಚೆಯ ವಿಷಯ
ಇಬ್ಬರೂ ಹೊಸಬರಾದ ಕಾರಣ ಕ್ಷೇತ್ರದಲ್ಲಿ ತಮ್ಮದೇ ಹಿಡಿತ ಹೊಂದಿಲ್ಲ. ಶಾಸಕ ರಘುಪತಿ ಭಟ್‌, ಮಾಜಿ ಸಚಿವ ಪ್ರಮೋದ್‌ ಮಧ್ವರಾಜ್‌ ಒಟ್ಟಿಗೆ ಇರುವುದು ಬಿಜೆಪಿ ಗೆ ಪ್ಲಸ್‌. ಕಾಂಗ್ರೆಸ್‌ ನಾಯಕಿ ಸರಳಾ ಕಾಂಚನ್‌ ಅವರು ಬ್ರಹ್ಮಾವರ ಭಾಗದಲ್ಲಿ ತಮ್ಮದೇ ಪ್ರಭಾವ ಹೊಂದಿರುವುದು ಕಾಂಗ್ರೆಸ್‌ ಅಭ್ಯರ್ಥಿಗೆ ಸಹಕಾರಿಯಾಗಬಹುದು. ಎರಡೂ ಪಕ್ಷಗಳು ತಮ್ಮದೇ ಸಾಂಪ್ರದಾಯಿಕ ಮತಗಳನ್ನು ಹೊಂದಿವೆ. ಬಿಜೆಪಿ ಅಭಿವೃದ್ಧಿ, ಹಿಂದುತ್ವ ಎನ್ನುತಿದ್ದರೆ, ಕಾಂಗ್ರೆಸ್‌ ವಿದ್ಯಾವಂತ ಅಭ್ಯರ್ಥಿ, ಸರಕಾರ ಭ್ರಷ್ಟಾಚಾರವನ್ನು ಮುಂದಿಟ್ಟುಕೊಂಡು ಪ್ರಚಾರದಲ್ಲಿ ನಿರತವಾಗಿದೆ.

ಕಣದಲ್ಲಿರುವ ಅಭ್ಯರ್ಥಿಗಳು 7
-  ಯಶ್‌ಪಾಲ್‌ ಎ. ಸುವರ್ಣ (ಬಿಜೆಪಿ)
- ಪ್ರಸಾದ್‌ ರಾಜ್‌ ಕಾಂಚನ್‌(ಕಾಂಗ್ರೆಸ್‌)
- ದಕ್ಷತ್‌ ಶೆಟ್ಟಿ (ಜೆಡಿಎಸ್‌)
-  ಪ್ರಭಾಕರ ಪೂಜಾರಿ (ಎಎಪಿ)
-  ನಿತಿನ್‌ ವಿ. ಪೂಜಾರಿ (ಉತ್ತಮ ಪ್ರಜಾಕೀಯ ಪಕ್ಷ‌)
- ರಾಮದಾಸ ಭಟ್‌ (ಕರ್ನಾಟಕ ರಾಷ್ಟ್ರ ಸಮಿತಿ)
-  ಶೇಖರ್‌ ಹಾವಂಜೆ (ರಿಪಬ್ಲಿಕನ್‌ ಪಾರ್ಟಿ ಆಫ್ ಇಂಡಿಯಾ)

ಲೆಕ್ಕಾಚಾರ ಏನು?
ಕಳೆದ ಬಾರಿ ಆಡಳಿತ ವಿರೋಧಿ ಅಲೆ, ಹಿಂದುತ್ವ, ಮೋದಿ ಭೇಟಿ ಬಿಜೆಪಿಗೆ ವರದಾನವಾಗಿತ್ತು. ಈ ಬಾರಿ ಆಡಳಿತ ವಿರೋಧಿ ಅಲೆಯ ಕಾವು ತಡೆಯಲು ಬಿಜೆಪಿ ಅಭ್ಯರ್ಥಿಯನ್ನು ಬದಲಾಯಿಸಿದೆ. ಅದು ಫ‌ಲ ಕೊಡು ತ್ತದೋ ಕಾದು ನೋಡಬೇಕಿದೆ.

– ರಾಜು ಖಾರ್ವಿ ಕೊಡೇರಿ

ಟಾಪ್ ನ್ಯೂಸ್

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-sadasdasd

China ದಿಂದ 10 ಲಕ್ಷ ಎಕರೆ ಅತಿಕ್ರಮವಾಗಿದೆ: ಮೋದಿ ವಿರುದ್ಧ ಪ್ರಕಾಶ್ ರಾಜ್ ವಾಗ್ದಾಳಿ

1-eewqeqwe

Davanagere;ಬೆಣ್ಣೆದೋಸೆಯೊಂದಿಗೆ ವಿಜಯೋತ್ಸವ ಆಚರಿಸಲು ಸಿದ್ಧತೆ ಮಾಡಿಕೊಳ್ಳಿ: ಮೋದಿ

1-dasdas

PM Modi ಪ್ರತಿ ಬಾರಿ ಭಯಾನಕ ಸುಳ್ಳು ಹೇಳಿ ಹೋಗ್ತಾರೆ: ಸಿದ್ದರಾಮಯ್ಯ ಕಿಡಿ

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

ʼಬಂಗಾರಂʼನಲ್ಲಿ ರಕ್ತಸಿಕ್ತ ಅವತಾರ ತಾಳಿದ ಸಮಂತಾ: ಹುಟ್ಟುಹಬ್ಬಕ್ಕೆ ಹೊಸ ಸಿನಿಮಾ ಅನೌನ್ಸ್

1—dsdasd

Chikkamagaluru:ದತ್ತಪೀಠದಲ್ಲಿ ಪ್ರವಾಸಿ ಬಸ್ ಪಲ್ಟಿಯಾಗಿ 30 ಮಂದಿಗೆ ಗಾಯ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.