ಜೂ. 11 : ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರದ ಮುಂಬಯಿ ಸಮಿತಿ ರಚನೆಗೆ ಪೂರ್ವಬಾವಿ ಸಭೆ

Team Udayavani, Jun 5, 2022, 8:08 PM IST

ಜೂ. 11 : ಕಾಪು ಶ್ರೀ ಹೊಸ ಮಾರಿಗುಡಿ ಜೀರ್ಣೋದ್ಧಾರದ ಮುಂಬಯಿ ಸಮಿತಿ ರಚನೆಗೆ ಪೂರ್ವಬಾವಿ ಸಭೆ

ಕಾಪು : ಇತಿಹಾಸ ಪ್ರಸಿದ್ಧವಾಗಿರುವ ಕಾಪು‌ ಶ್ರೀ ಹೊಸ ಮಾರಿಗುಡಿ ದೇವಸ್ಥಾನವು ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಮಗ್ರವಾಗಿ ಜೀರ್ಣೋದ್ಧಾರಗೊಳ್ಳುತ್ತಿದ್ದು ಜೀರ್ಣೋದ್ಧಾರ ಕಾರ್ಯಗಳು ಭರದಿಂದ ಸಾಗುತ್ತಿವೆ. ಸಮಸ್ತ ಭಕ್ತರ ಸಹಕಾರದೊಂದಿಗೆ ವಾಸ್ತುವಿಗೆ ಬದ್ಧವಾಗಿ ಸಂಪೂರ್ಣ ಶಿಲಾಮಯ ನಿರ್ಮಾಣದೊಂದಿಗೆ ಅದ್ವಿತೀಯ ಎಂಬಂತೆ ಮಾರಿಯಮ್ಮ ದೇವಿಯ ಸಾನಿಧ್ಯವು ಪುನರುತ್ಥಾನಗೊಳ್ಳುತ್ತಿದೆ.

ಸಂಪೂರ್ಣ ಶಿಲಾಮಯವಾಗಿ ನಡೆಯುತ್ತಿರುವ ಕಾಪು ಶ್ರೀ ಹೊಸ ಮಾರಿಗುಡಿ ದೇವಸ್ಥಾನದ ಗರ್ಭ ಗುಡಿಯ ಪುನರ್ ನಿರ್ಮಾಣ ಯೋಜನೆಯು ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿದ್ದು, ಇದಕ್ಕೆ‌ ಪೂರಕವಾಗಿ ಮಾರಿಯಮ್ಮನ‌ ಭಕ್ತರು ತಮ್ಮ ಶಕ್ತ್ಯಾನುಸಾರವಾಗಿ ಶಿಲಾ ಸೇವೆಯನ್ನು ನೀಡುವ ಮೂಲಕ ಸಮಗ್ರ ಜೀರ್ಣೋದ್ಧಾರಕ್ಕೆ ಕೈ ಜೋಡಿಸುತ್ತಿದ್ದಾರೆ.

ಈ ಜೀರ್ಣೋದ್ಧಾರ ಕಾರ್ಯಗಳಿಗೆ ಮುಂಬಯಿಯ ಭಕ್ತರನ್ನೂ ಸೇರಿಸಿಕೊಳ್ಳಬೇಕೆಂಬ ಮಾರಿಯಮ್ಮನ ಅಪೇಕ್ಷೆಯಂತೆ ಮುಂಬಯಿ ನಗರ ಮತ್ತು ಇತರ ಕಡೆಗಳಲ್ಲಿ ನೆಲೆಸಿರುವ ಕಾಪುವಿನ ಅಮ್ಮನ ಭಕ್ತರನ್ನು ಸೇರಿಸಿಕೊಂಡು ಮುಂಬಯಿಯಲ್ಲಿ ಜೀರ್ಣೋದ್ಧಾರ ಸಮಿತಿಯನ್ನು ರಚಿಸಲು ತೀರ್ಮಾನಿಸಲಾಗಿದ್ದು ಅದಕ್ಕೆ ಪೂರ್ವಭಾವಿಯಾಗಿ ಜೂ. 11 ರಂದು ಶನಿವಾರ ಸಂಜೆ 3.30 ಕ್ಕೆ ಮುಂಬೈ ಅಂಧೇರಿ ಪೂರ್ವದ ಚಕಾಲದಲ್ಲಿರುವ ಹೋಟೆಲ್ ಸಾಯಿ ಪ್ಯಾಲೇಸ್ ನಲ್ಲಿ ಎಲ್ಲಾ ಸಮಾಜದವರನ್ನೊಳಗೊಂಡಿರುವ ಸದ್ಭಕ್ತರ ಸಭೆ ಕರೆಯಲಾಗಿದೆ.

ಇದನ್ನೂ ಓದಿ : ಪೀರಪಾಷಾ ಬಂಗಲೆಯಲ್ಲಿರುವ ಮಂಟಪ ಸಂರಕ್ಷಿಸಿ :ಸಿಎಂ ಭೇಟಿಯಾದ ಮಠಾಧೀಶರು

ಮುಂಬಯಿಯಲ್ಲಿ ನೆಲೆಸಿರುವ ಕಾಪು ಸಾವಿರ ಸೀಮೆ ಹಾಗೂ ಉಡುಪಿ, ದಕ್ಷಿಣ ಕನ್ನಡ ಮತ್ತು ಮಹಾರಾಷ್ಟ್ರ ದ ವಿವಿಧೆಡೆಗಳಲ್ಲಿರುವ ಎಲ್ಲಾ ಸಮಾಜದವರನ್ನೊಳಗೊಂಡ ಕಾಪುವಿನ ಅಮ್ಮನ ಭಕ್ತರು ಹೆಚ್ಚಿನ ಸಂಖ್ಯೆಯಲ್ಲಿ ಸಭೆಯಲ್ಲಿ ಪಾಲ್ಗೊಂಡು ಮುಂಬಯಿ ಸಮಿತಿ ರಚನೆಗೆ ಸಹಕರಿಸಿ ಮಾರಿಯಮ್ಮ ದೇವಿಯ ಸಾನಿಧ್ಯ ಜೀರ್ಣೋದ್ಧಾರ ಕಾರ್ಯದಲ್ಲಿ ತಮ್ಮನ್ನು ತಾವು ತೊಡಗಿಸಿಕೊಳ್ಳಬೇಕೆಂದು ಜೀರ್ಣೋದ್ಧಾರ ಸಮಿತಿಯ ಅಧ್ಯಕ್ಷ ಕೆ. ವಾಸುದೇವ ಶೆಟ್ಟಿ ಮತ್ತು ಕಾರ್ಯಾಧ್ಯಕ್ಷ ಸುರೇಶ್ ಪಿ. ಶೆಟ್ಟಿ ಗುರ್ಮೆ ಮತ್ತು ಪ್ರಚಾರ ಸಮಿತಿಯ ಸಂಚಾಲಕರಾದ ಯೋಗೀಶ್ ಶೆಟ್ಟಿ ಬಾಲಾಜಿ ಪ್ರಕಟಣೆಯ ಮೂಲಕ ವಿನಂತಿಸಿದ್ದಾರೆ.

ಟಾಪ್ ನ್ಯೂಸ್

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

T20 ವಿಶ್ವಕಪ್ ಗೆ ಬಲಿಷ್ಠ ತಂಡವನ್ನು ಪ್ರಕಟಿಸಿದ ನ್ಯೂಜಿಲೆಂಡ್; ಮರಳಿದ ಸ್ಫೋಟಕ ಆಟಗಾರ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಸಾವು, 22 ಮಂದಿಗೆ ಗಾಯ

Tragedy: ಛತ್ತೀಸ್‌ಗಢದಲ್ಲಿ ಭೀಕರ ಅಪಘಾತ… ಮಕ್ಕಳು ಸೇರಿ 8 ಮಂದಿ ಮೃತ್ಯು, 22 ಮಂದಿಗೆ ಗಾಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

Srinivas Prasad: ದ. ಕರ್ನಾಟಕದ ʼದಲಿತ ಸೂರ್ಯʼ ಎಂದು ಖ್ಯಾತರಾಗಿದ್ದ ಶ್ರೀನಿವಾಸ ಪ್ರಸಾದ್‌

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ

ನಾರಿಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

ನಾರಿ ಶಕ್ತಿ ವಿರೋಧಿಸುವ ಕಾಂಗ್ರೆಸ್‌ಗೆ ಚುನಾವಣೆಯಲ್ಲಿ ಪಾಠ ಕಲಿಸಬೇಕು: ಗಾಯತ್ರಿ ಸಿದ್ದೇಶ್ವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.