ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಜೂ. 25 ರಂದು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣೆಗೆ ಚಾಲನೆ

Team Udayavani, Jun 13, 2024, 1:08 PM IST

ಕಾಪು ಹೊಸ ಮಾರಿಗುಡಿ: ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ಸಮರ್ಪಣೆ ಸಂಕಲ್ಪ

ಕಾಪು : ಪ್ರಥಮ ಹಂತದಲ್ಲಿ ಸುಮಾರು 30 ಕೋಟಿ ರೂಪಾಯಿ ವೆಚ್ಚದಲ್ಲಿ ಸಂಪೂರ್ಣ ಶಿಲಾಮಯವಾಗಿ, ಅತ್ಯಾಕರ್ಷವಾದ ಇಳಕಲ್ ಕೆಂಪು ಶಿಲೆಯಿಂದ ನಿರ್ಮಾಣಗೊಳ್ಳುತ್ತಿರುವ ಕಾಪು ಶ್ರೀ ಹೊಸ ಮಾರಿ ದೇವಸ್ಥಾನದಲ್ಲಿ ಪ್ರತಿಷ್ಟಾಪನೆಗೊಳ್ಳಲಿರುವ ಮಾರಿಯಮ್ಮ ಮತ್ತು ಉಚ್ಚಂಗಿ ದೇವಿಗೆ ಸಮರ್ಪಿಸಲ್ಪಡುವ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ ಸ್ವರ್ಣ ಸಮರ್ಪಣೆಗೆ ಜೂ. 25 ರಿಂದ ಅವಕಾಶ ಮಾಡಿಕೊಡಲಾಗುವುದು ಎಂದು ಕಾಪು ಶ್ರೀ ಹೊಸಮಾರಿಗುಡಿ ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ.‌ವಾಸುದೇವ ಶೆಟ್ಟಿ ಹೇಳಿದರು.

ಕಾಪು ಹೊಸ ಮಾರಿಗುಡಿ ದೇವಸ್ಥಾನ ಅಭಿವೃದ್ಧಿ ಸಮಿತಿ ಕಚೇರಿಯಲ್ಲಿ ಗುರುವಾರ ನಡೆದ ಸುದ್ದಿಗೋಷ್ಟಿಯಲ್ಲಿ ಈ ಬಗ್ಗೆ ಮಾಹಿತಿ ನೀಡಿದ ಅವರು, ಕ್ಷೇತ್ರದ ತಂತ್ರಿ ಬ್ರಹ್ಮಶ್ರೀ ವಿದ್ವಾನ್ ಕುಮಾರಗುರು ತಂತ್ರಿ ಮತ್ತು ಅರ್ಚಕ ವೇ.ಮೂ. ಕೆ. ಶ್ರೀನಿವಾಸ ತಂತ್ರಿ ಅವರ ನೇತೃತ್ವದಲ್ಲಿ, ಶಿಲಾ ಸೇವೆ, ಶಿಲಾ ಕಂಬ ಸಮರ್ಪಿಸಿದ ದಾನಿಗಳು, ಭಕ್ತರು ಮತ್ತು ಗಣ್ಯರ ಉಪಸ್ಥಿತಿಯಲ್ಲಿ ಜೂ. 25 ರಂದು ಬೆಳಿಗ್ಗೆ 9.09 ಕ್ಕೆ ಸ್ವರ್ಣ ಗೌರಿ ಪೂಜೆ ನೆರವೇರಿಸಿ, ಬಳಿಕ ಸ್ವರ್ಣ ಸಮರ್ಪಣಾ ಸಮಾರಂಭಕ್ಕೆ ಚಾಲನೆ ನೀಡಲಾಗುವುದು ಎಂದರು.‌

ಪ್ರಥಮ ಹಂತದ ಸ್ವರ್ಣ ಸಮರ್ಪಣಾ ಸಂಕಲ್ಪದಲ್ಲಿ ಭಾಗವಹಿಸುವ ಭಕ್ತರಿಗೆ ಜೂ. 21ರವರೆಗೆ ಹೆಸರು ನೋಂದಾಯಿಸಲು ಅವಕಾಶವಿದೆ. ಸ್ವರ್ಣ ಸಮರ್ಪಣಾ ಸಮಾರಂಭ ಮತ್ತು ಮಾರಿಯಮ್ಮ ದೇವಿಯ ಸನ್ನಿಧಾನದಲ್ಲೇ ಸ್ವರ್ಣ ಸಮರ್ಪಣೆಗೆ ಅವಕಾಶ ಮಾಡಿಕೊಡಲಾಗುವುದು ಎಂದರು.

20 ಕೆಜಿ‌ ಸ್ವರ್ಣ, 160 ಕೆಜಿ ಬೆಳ್ಳಿ : ಕಾಪು ಮಾರಿಯಮ್ಮ ದೇವಿ ಮತ್ತು ಉಚ್ಚಂಗಿ ದೇವಿಯ ನೂತನ ಸ್ವರ್ಣ ಗದ್ದುಗೆ ನಿರ್ಮಾಣಕ್ಕೆ 20 ಕೆಜಿ ಚಿನ್ನ, 160 ಕೆಜಿ ಬೆಳ್ಳಿ ಉಪಯೋಗಿಸಲಾಗುತ್ತದೆ. ಈಗಾಗಲೇ ಪ್ರಸಿದ್ಧ ಜ್ಯುವೆಲ್ಲರಿ ಸಂಸ್ಥೆಯವರಿಂದ ಕೊಟೇಷನ್‌ ಆಹ್ವಾನಿಸಲಾಗಿದ್ದು ಸೂಕ್ತವೆನಿಸುವವರಿಗೆ ಸ್ವರ್ಣ ಗದ್ದುಗೆ ನಿರ್ಮಾಣದ ಗುತ್ತಿಗೆ ವಹಿಸಿ ಕೊಡಲಾಗುವುದು ಎಂದರು

ಸ್ವರ್ಣ ಗದ್ದುಗೆ ಸಮರ್ಪಣಾ ಸಮಿತಿ ಪ್ರಧಾನ ಕಾರ್ಯಾಧ್ಯಕ್ಷ ದೇವಿಪ್ರಸಾದ್ ಶೆಟ್ಟಿ ಬೆಳಪು ಮಾತನಾಡಿ,‌ ಅಯೋಧ್ಯೆ ರಾಮ ಮಂದಿರ ಮಾದರಿಯಲ್ಲಿ ಕಾಪು ಮಾರಿಯಮ್ಮ ದೇವಿಯ ಮಾರಿಗುಡಿ ದೇವಸ್ಥಾನದ ಜೀರ್ಣೋದ್ಧಾರ ಕಾಮಗಾರಿಗಳು ದಕ್ಷಿಣ ಭಾರತದಲ್ಲಿ ಅತ್ಯಪೂರ್ವವೆಂಬಂತೆ ನಡೆಯುತ್ತಿದೆ. ಅದಕ್ಕೆ ಪೂರಕವಾಗಿ ಮಾರಿಯಮ್ಮ, ಉಚ್ಚಂಗಿ ದೇವಿಗೆ ಸ್ವರ್ಣ ಗದ್ದುಗೆ ನಿರ್ಮಿಸಿ ಸಮರ್ಪಿಸಲು ಸಂಕಲ್ಪಿಸಲಾಗಿದ್ದು ಪ್ರಪಂಚದಾದ್ಯಂತ ನೆಲೆಸಿರುವ ಭಕ್ತರು ಸ್ವರ್ಣ ಗದ್ದುಗೆಗೆ ಸ್ವರ್ಣ ಸಮರ್ಪಣಾ ಕಾರ್ಯದಲ್ಲಿ ಪಾಲ್ಗೊಳ್ಳಬೇಕೆನ್ನುವುದು ಸಮಿತಿಯ ಆಶಯವಾಗಿದೆ.

ಬಳಸಿದ ಚಿನ್ನ ಸಮರ್ಪಣೆಗೂ ಅವಕಾಶ : ಗದ್ದುಗೆಯೇ ಪ್ರಧಾನವಾಗಿರುವ ಕಾಪು‌ ಮಾರಿಗುಡಿಯಲ್ಲಿ ಸ್ವರ್ಣ ಗದ್ದುಗೆ ಸಮರ್ಪಣೆಗೆ ಹೊಸ ಚಿನ್ನದೊಂದಿಗೆ ಭಕ್ತರು ತಾವು ಉಪಯೋಗಿಸಿದ, ಬಳಸಿದ ಚಿನ್ನಗಳನ್ನೂ ಹರಕೆಯ ರೂಪದಲ್ಲಿ ಸಮರ್ಪಿಸಲು ಅವಕಾಶವಿದೆ. ಸಮಿತಿಯ ಸಂಕಲ್ಪಕ್ಕೆ ಮಾರಿಯಮ್ಮ ದೇವಿಯ ಅಭಯವೂ ಸಿಕ್ಕಿದ್ದು ಸ್ವರ್ಣ ನೀಡಿದ ಭಕ್ತರ ಕಷ್ಟ ಕಾರ್ಪಣ್ಯಗಳನ್ನು ತನ್ನ ಕಾಲಬುಡಕ್ಕೆ ಹಾಕಿಕೊಳ್ಳುವುದಾಗಿ ಅಮ್ಮನ ನುಡಿಯಾಗಿದೆ ಎಂದರು.

ಕಾಪು ಹೊಸ ಮಾರಿಗುಡಿ ಅಭಿವೃದ್ಧಿ ಸಮಿತಿ ಪ್ರಧಾನ ಕಾರ್ಯದರ್ಶಿ ರಮೇಶ್ ಹೆಗ್ಡೆ ಕಲ್ಯ, ಪ್ರಚಾರ ಸಮಿತಿ ಪ್ರಧಾನ ಸಂಚಾಲಕ ಯೋಗೀಶ್ ಶೆಟ್ಟಿ ಬಾಲಾಜಿ, ಸ್ವರ್ಣ ಸಮರ್ಪಣಾ ಸಮಿತಿ ಕಾರ್ಯಾಧ್ಯಕ್ಷರಾದ ರತ್ನಾಕರ ಶೆಟ್ಟಿ ನಡಿಕೆರೆ, ಪ್ರಸನ್ನ ಆಚಾರ್ಯ, ಕಾರ್ಯದರ್ಶಿ ರವಿ ಭಟ್ ಮಂದಾರ, ಕಚೇರಿ ನಿರ್ವಹಣಾ ಸಮಿತಿಯ ಜಯರಾಮ ಆಚಾರ್ಯ, ಸಂದೀಪ್ ಕು‌ಮಾರ್ ಮೊದಲಾದವರು ಉಪಸ್ಥಿತರಿದ್ದರು.

ಇದನ್ನೂ ಓದಿ: NEET Grace Marks: 1563 ವಿದ್ಯಾರ್ಥಿಗಳ ಕೃಪಾಂಕ ರದ್ದು, ಜೂ.23ರಂದು ಮರುಪರೀಕ್ಷೆ

ಟಾಪ್ ನ್ಯೂಸ್

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Bantwal ಮಂಚಿ: ಅಮಲು ಪದಾರ್ಥ ಸೇವನೆ; ಮೂವರ ಬಂಧನ

Bantwal ಮಂಚಿ: ಅಮಲು ಪದಾರ್ಥ ಸೇವನೆ; ಮೂವರ ಬಂಧನ

Kadaba ಜಾನುವಾರು ಅಕ್ರಮ ಸಾಗಾಟ; ವಾಹನ ವಶ

Kadaba ಜಾನುವಾರು ಅಕ್ರಮ ಸಾಗಾಟ; ವಾಹನ ವಶ

Heavy Rain: ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

Heavy Rain: ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Honor 200 Pro 5G, Honor 200 5G ಫೋನ್ ಗಳು ಭಾರತದಲ್ಲಿ ಬಿಡುಗಡೆ

Kalaburagi ರೈಲ್ವೆ ವಲಯ ಸ್ಥಾಪಿಸುವ ಪ್ರಸ್ತಾವ ಕೇಂದ್ರದ ಮುಂದಿಲ್ಲ: ಕೇಂದ್ರ ಸಚಿವ

Kalaburagi ರೈಲ್ವೆ ವಲಯ ಸ್ಥಾಪಿಸುವ ಪ್ರಸ್ತಾವ ಕೇಂದ್ರದ ಮುಂದಿಲ್ಲ: ಕೇಂದ್ರ ಸಚಿವ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Udupi: ಭಂಡಾರಕೇರಿ ಶ್ರೀಪಾದರಿಗೆ ಶ್ರೀ ಪುತ್ತಿಗೆ ಮಠದ ವತಿಯಿಂದ ಭವ್ಯ ಸ್ವಾಗತ

Udupi: ಭಂಡಾರಕೇರಿ ಶ್ರೀಪಾದರಿಗೆ ಶ್ರೀ ಪುತ್ತಿಗೆ ಮಠದ ವತಿಯಿಂದ ಭವ್ಯ ಸ್ವಾಗತ

Education: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

Muniyal Institute: ಮುನಿಯಾಲು ಯೋಗ ಮತ್ತು ಪ್ರಕೃತಿ ಚಿಕಿತ್ಸಾ ಕಾಲೇಜು ಮಣಿಪಾಲ

c: Self declaration is mandatory every month

Yuva Nidhi Scheme: ಪ್ರತಿ ತಿಂಗಳು ಸ್ವಯಂ ಘೋಷಣೆ ಕಡ್ಡಾಯ

MUST WATCH

udayavani youtube

ಕರ್ಮಫಲ ಶಿಕ್ಷಣದಿಂದ ಆತ್ಮೋನ್ನತಿ

udayavani youtube

ತಪ್ತ ಮುದ್ರಾ ಧಾರಣೆ ವಿಶೇಷ ಮಹತ್ವದ್ದು, ಯಾಕೆ?

udayavani youtube

ಬಾಳೆಯಿಂದ ವಾರ್ಷಿಕ 50-60 ಲಕ್ಷ ರೂ. ಆದಾಯ

udayavani youtube

ಅಘನಾಶಿನಿ ಆರ್ಭಟ

udayavani youtube

ತಾನು ಪ್ರವಾಸಿಸಿದ ಊರಿನ ಹೆಸರುಗಳನ್ನೆಲ್ಲ ನೆನಪಿಸಿಕೊಂಡ ಡಾ. ರಾಜ್‌ಕುಮಾರ್

ಹೊಸ ಸೇರ್ಪಡೆ

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ರೈಲಿನಿಂದ ಬಿದ್ದು ಗಾಯಗೊಂಡಿದ್ದ ವ್ಯಕ್ತಿ ಆಸ್ಪತ್ರೆಗೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Udupi ಆತಂಕ ಸೃಷ್ಟಿಸಿದ್ದ ಯುವಕನ ರಕ್ಷಣೆ

Bantwal ಮಂಚಿ: ಅಮಲು ಪದಾರ್ಥ ಸೇವನೆ; ಮೂವರ ಬಂಧನ

Bantwal ಮಂಚಿ: ಅಮಲು ಪದಾರ್ಥ ಸೇವನೆ; ಮೂವರ ಬಂಧನ

Kadaba ಜಾನುವಾರು ಅಕ್ರಮ ಸಾಗಾಟ; ವಾಹನ ವಶ

Kadaba ಜಾನುವಾರು ಅಕ್ರಮ ಸಾಗಾಟ; ವಾಹನ ವಶ

Heavy Rain: ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

Heavy Rain: ಧಾರವಾಡ ಜಿಲ್ಲೆಯಾದ್ಯಂತ ಜು.25, 26 ರಂದು ಶಾಲಾ ಕಾಲೇಜುಗಳಿಗೆ ರಜೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.