ಕಾಪು: ಸ್ಕೂಟಿ ಸ್ಕಿಡ್‌ ಆಗಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಚಿತ್ರಗ್ರಾಹಕ ಸಾವು

Team Udayavani, Feb 9, 2023, 9:14 PM IST

ಕಾಪು: ಸ್ಕೂಟಿ ಸ್ಕಿಡ್‌ ಆಗಿ ಗಂಭೀರ ಗಾಯಗೊಂಡಿದ್ದ ಯುವ ಛಾಯಾಚಿತ್ರಗ್ರಾಹಕ ಸಾವು

ಕಾಪು : ಐದು ದಿನಗಳ ಹಿಂದೆ ಸ್ಕೂಟರ್‌ ಸ್ಕಿಡ್‌ ಆಗಿ ಬಿದ್ದು ತೀವ್ರ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿದ್ದ ಸಹಸವಾರ, ಕಾಪು ಪೊಲಿಪು ನಿವಾಸಿ, ಯುವ ಛಾಯಾಗ್ರಾಹಕ ಪ್ರೀತೇಶ್‌ (38) ಅವರು ಚಿಕಿತ್ಸೆ ಫಲಕಾರಿಯಾಗದೆ ಗುರುವಾರ ಮುಂಜಾನೆ ಉಡುಪಿಯ ಜಿಲ್ಲಾಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.

ಮೃತರು ತಂದೆ, ತಾಯಿ, ಪತ್ನಿ ಮತ್ತು ಮೂರು ವರ್ಷದ ಹೆಣ್ಣು ಮಗುವನ್ನು ಅಗಲಿದ್ದಾರೆ. ಪ್ರೀತೇಶ್‌ ಛಾಯಾಚಿತ್ರಗ್ರಾಹಕ ವೃತ್ತಿಯ ಬಿಡುವಿನ ವೇಳೆ ಮಲ್ಪೆಗೆ ಮೀನುಗಾರಿಕೆಗೆ ತೆರಳುತ್ತಿದ್ದು, ಫೆ. 4ರಂದು ಸಂಜೆ ಪಡುಕರೆ – ಕಾಪು ರಸ್ತೆಯಲ್ಲಿ ಸ್ನೇಹಿತ ಪ್ರಶಾಂತ್‌ ಕುಮಾರ್‌ ಅವರೊಂದಿಗೆ ದ್ವಿಚಕ್ರ ವಾಹನದಲ್ಲಿ ಸಂಚರಿಸುತ್ತಿದ್ದ ವೇಳೆ ಸ್ಕೂಟಿ ಸವಾರನ ನಿಯಂತ್ರಣ ತಪ್ಪಿ ರಸ್ತೆಗೆ ಮಗುಚಿ ಬಿದ್ದಿತ್ತು. ರಸ್ತೆಗೆ ಬಿದ್ದು ತಲೆಗೆ ಗಂಭೀರ ಏಟಾಗಿ, ಪ್ರಜ್ಞೆ ತಪ್ಪಿ ಬಿದ್ದಿದ್ದ ಪ್ರಿತೇಶ್‌ ಮತ್ತು ಸಣ್ಣಪುಟ್ಟ ಗಾಯಗೊಂಡಿದ್ದ ಪ್ರಶಾಂತ್‌ ಅವರನ್ನು ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಅಲ್ಲಿಂದ ವೈದ್ಯರ ಸೂಚನೆಯಂತೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಚಿಕಿತ್ಸಾ ವೆಚ್ಚ ಹೆಚ್ಚಿದ ಪರಿಣಾಮ ಅಲ್ಲಿಂದ ಮತ್ತೆ ಉಡುಪಿ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಐದು ದಿನಗಳ ಕಾಲ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಗುರುವಾರ ಮುಂಜಾನೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಯುವ ಕ್ರಿಯಾಶೀಲ ಛಾಯಾಚಿತ್ರಗ್ರಾಹಕನಾಗಿದ್ದ ಪ್ರೀತೇಶ್‌ ಸುವರ್ಣ ಸೌತ್‌ ಕೆನರಾ ಫೋಟೋಗ್ರಾಫರ್ ಅಸೋಸಿಯೇಷನ್‌ನ ಅಜೀವ ಸದಸ್ಯರಾಗಿ, ಕಾಪು ವಲಯದ ಪದಾಧಿಕಾರಿಯಾಗಿಯೂ ಸೇವೆ ಸಲ್ಲಿಸಿದ್ದರು. ಸ್ಥಳೀಯ ಸರ್ಕಲ್‌ ಫ್ರೆಂಡ್ಸ್‌, ಪೊಲಿಪು ಗಣೇಶೋತ್ಸವ ಸಮಿತಿ ಸಹಿತ ವಿವಿಧ ಸಂಘ ಸಂಸ್ಥೆಗಳಲ್ಲಿಯೂ ಕ್ರಿಯಾಶೀಲರಾಗಿದ್ದರು.

ಪ್ರೀತಿಸಿ ವಿವಾಹ
ಪ್ರಿತೇಶ್‌ ತಂದೆ-ತಾಯಿಗೆ ಒಬ್ಬನೇ ಮಗನಾಗಿದ್ದು, ನಾಲ್ಕು ವರ್ಷಗಳ ಹಿಂದೆ ಪ್ರೀತಿಸಿ ವಿವಾಹವಾಗಿದ್ದರು. ಮದುವೆಯ ಬಳಿಕವೂ ಪತ್ನಿಯ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಪ್ರೋತ್ಸಾಹ ನೀಡುತ್ತಿದ್ದರು. ಆಕೆ ಪ್ರಸ್ತುತ ಕಾಪು ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಅಂತಿಮ ವರ್ಷದ ಬಿಎ ವ್ಯಾಸಂಗ ಮಾಡುತ್ತಿದ್ದಾರೆ. ಅವರಿಗೆ ಮೂರು ವರ್ಷದ ಪುಟ್ಟ ಬಾಲೆ ಇದ್ದಾಳೆ.

ಗಣ್ಯರ ಸಂತಾಪ
ಪ್ರಿತೇಶ್‌ ಅವರ ನಿಧನಕ್ಕೆ ಕಾಪು ಶಾಸಕ ಲಾಲಾಜಿ ಆರ್‌. ಮೆಂಡನ್‌, ಮಾಜಿ ಸಚಿವ ವಿನಯ ಕುಮಾರ್‌ ಸೊರಕೆ, ಬಿಜೆಪಿ ರಾಜ್ಯ ಕಾರ್ಯಕಾರಣಿ ಸದಸ್ಯ ಸುರೇಶ್‌ ಪಿ. ಶೆಟ್ಟಿ ಗುರ್ಮೆ, ಬಿಜೆಪಿ ಹಿಂದುಳಿದ ವರ್ಗದ ಮೋರ್ಚಾದ ಪ್ರಧಾನ ಕಾರ್ಯದರ್ಶಿ ಯಶ್‌ಪಾಲ್‌ ಸುವರ್ಣ, ಎಸ್‌ಕೆಪಿಎ ಕಾಪು ವಲಯ ಅಧ್ಯಕ್ಷ ವಿನೋದ್‌ ಕಾಂಚನ್‌, ಪೊಲಿಪು ಮೊಗವೀರ ಮಹಾಸಭಾದ ಅಧ್ಯಕ್ಷ ವಿಜಯ ಕರ್ಕೇರ, ಕಾಪು ಬಿಲ್ಲವರ ಸಹಾಯಕ ಸಂಘದ ಅಧ್ಯಕ್ಷ ವಿಕ್ರಂ ಕಾಪು ಸಹಿತ ಹಲವು ಗಣ್ಯರು ಸಂತಾಪ ಸೂಚಿಸಿದ್ದಾರೆ.

ಇದನ್ನೂ ಓದಿ: ಕಾರ್ಕಳದಲ್ಲಿ ಆಪ್ಟಿಕಲ್‌ ಫೈಬರ್‌ ಪರ್ಫಾಮ್‌ ಉತ್ಪಾದನ ಘಟಕ: ಸಚಿವರಿಂದ ಸಭೆ

ಟಾಪ್ ನ್ಯೂಸ್

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.