ಕಾವ್ಯ ಸಾವು: ಸಿಬಿಐ ತನಿಖೆಗೆ ಆಗ್ರಹಿಸಿ ಎಬಿವಿಪಿ ಪ್ರತಿಭಟನೆ


Team Udayavani, Aug 3, 2017, 7:50 AM IST

pratibatane.jpg

ಉಡುಪಿ: ಆಳ್ವಾಸ್‌ ವಿದ್ಯಾರ್ಥಿನಿ, ರಾಷ್ಟ್ರಮಟ್ಟದ ಪ್ರತಿಭಾವಂತ ಕ್ರೀಡಾಪಟು ಕಾವ್ಯ ಅಸಹಜ ಸಾವಿನ ಬಗ್ಗೆ ಹಲವು ಅನುಮಾನಗಳಿದ್ದು, ಸರಿಯಾದ ತನಿಖೆ ನಡೆಸಿ ಈ ಪ್ರಕರಣದ ಹಿಂದಿರುವ ನಿಗೂಢತೆಯನ್ನು ಬಯಲಿಗೆಳೆಯಬೇಕಿದೆ. ಅದಕ್ಕಾಗಿ ಈ ಸಾವಿನ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಬೇಕು ಎಂದು ಎಬಿವಿಪಿ ನಾಯಕ ಕೀರ್ತನ್‌ ಆಗ್ರಹಿಸಿದರು.

ಕಾವ್ಯಾ ಅಸಹಜ ಸಾವಿನ ಪ್ರಕರಣದ ಕುರಿತು ನಿಷ್ಪಕ್ಷಪಾತ ತನಿಖೆಗೆ ಆಗ್ರಹಿಸಿ ಜಿಲ್ಲಾ ಅಖೀಲ ಭಾರತ ವಿದ್ಯಾರ್ಥಿ (ಎಬಿವಿಪಿ) ಘಟಕದ ವತಿಯಿಂದ ಎಬಿವಿಪಿ ನಗರ ಕಾರ್ಯದರ್ಶಿ ಸುಭೋದ್‌ ರೆಡ್ಡಿ ನೇತೃತ್ವದಲ್ಲಿ ಬುಧವಾರ ಉಡುಪಿಯ ಕ್ಲಾಕ್‌ ಟವರ್‌ ಮುಂಭಾಗ ನಡೆದ ಬೃಹತ್‌ ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. 

ರಾಜ್ಯದ ಪ್ರತಿಷ್ಠಿತ ವಿದ್ಯಾಸಂಸ್ಥೆಯ ಹಾಸ್ಟೆಲ್‌ನಲ್ಲಿ ನಡೆದ ಈ ಸಾವಿನ ಕುರಿತು ಆಕೆಯ ಹೆತ್ತವರು ಅನುಮಾನ ವ್ಯಕ್ತಪಡಿಸಿದ್ದು, ಅದಲ್ಲದೆ ಆಕೆಯ ಸಾವಿನ ಬಳಿಕ ಆ ಶಿಕ್ಷಣ ಸಂಸ್ಥೆಯ ಆಡಳಿತ ಮಂಡಳಿ ನಡೆದಕೊಂಡ ರೀತಿ ನೋಡಿದರೆ ಅನೇಕ ಪ್ರಶ್ನೆಗಳು ಹುಟ್ಟಿಕೊಳ್ಳುತ್ತಿವೆ. ಇದರಿಂದ ಉನ್ನತ ಮಟ್ಟದ ತನಿಖೆಯಿಂದ ಮಾತ್ರ ಸತ್ಯಾಂಶ ಹೊರಬರಲು ಸಾಧ್ಯ ಎಂದು ಅವರು ಹೇಳಿದರು. 

ರಾಷ್ಟ್ರಮಟ್ಟದ ಕ್ರೀಡಾಪಟುವಾಗಿರುವ ಕಾವ್ಯ ಆತ್ಮಹತ್ಯೆ ಮಾಡಿಕೊಳ್ಳುವಷ್ಟು ಹೀನಮನಸ್ಸಿನವಳಲ್ಲ. ಹೆತ್ತವರು ಬರುವ ಮೊದಲೇ ಶವವನ್ನು ಯಾಕೆ ಶವಗಾರಕ್ಕೆ ಸಾಗಿಸಿದ್ದು, ದೈಹಿಕ ಶಿಕ್ಷಣ ಶಿಕ್ಷಕ ಪ್ರವೀಣ್‌ ವಿರುದ್ಧ ಯಾಕೆ ಕ್ರಮ ತೆಗೆದುಕೊಂಡಿಲ್ಲ. ಈ ಸಾವಿನ ಹಿಂದೆ ಹಲವು ಅನುಮಾನ ಮೂಡಿದ್ದು, ನಿಷ್ಪಕ್ಷಪಾತ ತನಿಖೆ ನಡೆಸಿ ಆಕೆಯ ಹೆತ್ತವರಿಗೆ ನ್ಯಾಯ ದೊರಕಿಸಿಕೊಡಬೇಕಿದೆ ಎಂದು ಎಬಿವಿಪಿ ನಾಯಕ ರಕ್ಷಿತ್‌ ಭಂಡಾರಿ ಬೆಳಪು ಹೇಳಿದರು.

ಎಬಿವಿಪಿ ನಾಯಕರಾದ ಸಂಧ್ಯಾ, ಸಚಿನ್‌ ಮತ್ತಿತರರು ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದರು. ಪ್ರತಿಭಟನೆಯಲ್ಲಿ ಎಬಿವಿಪಿ ನಾಯಕರಾದ ಮಂಜುನಾಥ್‌, ಪ್ರಸಾದ್‌, ಶ್ರವಣ್‌, ನಿಖೀಲ್‌, ಪ್ರತೀಶ್‌ ಮತ್ತಿತರರು ಉಪಸ್ಥಿತರಿದ್ದರು. 

ಮಣಿಪಾಲದ ಟಿ.ಎಂ.ಎ. ಪೈ ಪಾಲಿಟೆಕ್ನಿಕ್‌ ಕಾಲೇಜು, ಎಂಪಿಎಂಸಿ ಕಾಲೇಜು, ಉಡುಪಿಯ ಪೂರ್ಣಪ್ರಜ್ಞ ಕಾಲೇಜು, ಕುಂಜಿಬೆಟ್ಟಿನ ಉಪೇಂದ್ರ ಪೈ ಮೆಮೋರಿಯಲ್‌ ಕಾಲೇಜಿನ ನೂರಾರು ವಿದ್ಯಾರ್ಥಿಗಳು ಪ್ರತಿಭಟನೆ ಯಲ್ಲಿ ಪಾಲ್ಗೊಂಡಿದ್ದರು. 

ವಿಡಿಯೋ : ಪ್ರಶಾಂತ್‌ ಪಾದೆ 

ABVP Urges for CBI Probe into Suspicious Death of Alva’s Student>> Read in English

ಟಾಪ್ ನ್ಯೂಸ್

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

1-wwewqe

Archery World Cup: ಭಾರತದ ರಿಕರ್ವ್‌ ತಂಡಕ್ಕೆ 14 ವರ್ಷಗಳ ಬಳಿಕ ಬಂಗಾರ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wc

Women’s T20; ಬಾಂಗ್ಲಾದೇಶ ವಿರುದ್ಧ ಭಾರತಕ್ಕೆ 44 ರನ್‌ ಜಯ

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.