ಪಡುಕರೆಯ ವ್ಯಕ್ತಿ ಕತಾರ್ನಲ್ಲಿ ಕುಸಿದು ಬಿದ್ದು ಸಾವು
Team Udayavani, Dec 30, 2022, 11:56 PM IST
ಕೋಟ : ಕತಾರ್ನಲ್ಲಿ ಉದ್ಯೋಗದಲ್ಲಿ ಇದ್ದ ಕೋಟ ಸಮೀಪ ಕೋಟ ತಟ್ಟು ಪಡುಕರೆ ನಿವಾಸಿ ಮುಹಮ್ಮದ್ (45) ಕತಾರ್ನಲ್ಲಿ ಗುರುವಾರ ಬೆಳಗ್ಗೆ ಮಿದುಳು ನಿಷ್ಕ್ರಿಯಗೊಂಡು ಮೃತಪಟ್ಟಿದ್ದಾರೆ.
ಮೃತರು ತಾಯಿ, ಪತ್ನಿಯನ್ನು ಅಗಲಿದ್ದಾರೆ. ಕತಾರ್ನ ಸನಯ್ಯ ಎಂಬಲ್ಲಿ 14 ವರ್ಷಗಳಿಂದ ಕಂಪೆನಿಯೊಂದರಲ್ಲಿ ಉದ್ಯೋಗಿಯಾಗಿದ್ದ ಅವರು ನಾಲ್ಕು ದಿನಗಳ ಹಿಂದೆ ಕೆಲಸ ನಿರ್ವಹಿಸುತಿದ್ದಾಗ ಕುಸಿದು ಬಿದ್ದು, ಮಿದುಳು ನಿಷ್ಕ್ರಿಯೆಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತಿದ್ದರು. ಚಿಕಿತ್ಸೆಗೆ ಫಲಕಾರಿಯಾಗದೆ ಗುರುವಾರ ಮೃತಪಟ್ಟಿದ್ದಾರೆ.
ಅವರು ಕೋಟತಟ್ಟು ಪಡುಕರೆ ಹಿದಾಯತುಲ್ ಇಸ್ಲಾಂ ಮದ್ರಸ ಕಾರ್ಯದರ್ಶಿಯಾಗಿ, ಕೆಸಿಎಫ್ ಕತಾರ್ ರಾಷ್ಟ್ರೀಯ ಸಮಿತಿಯ ಅಝೀಝಿಯಾ ಝೇನ್ ಸನಯ್ನಾ ಯುನಿಟ್ ಅಧ್ಯಕ್ಷರಾಗಿದ್ದರು.