
ಮಹಿಳೆಯರಿಗೂ ಸೇನಾ ಪೂರ್ವ ತರಬೇತಿ ಶಾಲೆ: ಸಚಿವ ಕೋಟ
Team Udayavani, Sep 6, 2022, 9:17 AM IST

ಉಡುಪಿ : ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಮಹಿಳೆಯರಿಗೂ ಆರಂಭಿಸುವ ಬಗ್ಗೆ ಚಿಂತನೆ ನಡೆಸುತ್ತಿದ್ದೇವೆ ಎಂದು ಸಮಾಜ ಕಲ್ಯಾಣ ಹಾಗೂ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಹೇಳಿದರು.
ಜಿಲ್ಲಾಡಳಿತ, ಜಿ.ಪಂ., ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ ಸೋಮವಾರ ಉಡುಪಿಯಲ್ಲಿ ನಡೆದ ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆ ಉದ್ಘಾಟನ ಸಮಾರಂಭದಲ್ಲಿ ಅವರು ಮಾತನಾಡಿದರು.
ಅಗ್ನಿಪಥ್ ಪೂರ್ಣಗೊಳಿಸಿದವರಿಗೆ ಸರಕಾರಿ ಶಾಲೆಯ ದೈಹಿಕ ಶಿಕ್ಷಣ ಶಿಕ್ಷಕರ ನೇಮಕಾತಿಯಲ್ಲಿ ಶೇ. 50ರಷ್ಟು ಮೀಸಲಾತಿ ನೀಡುವ ಬಗ್ಗೆಯೂ ಚಿಂತನೆ ನಡೆಸುತ್ತಿದ್ದೇವೆ. ದ.ಕ., ಉಡುಪಿ, ಉ.ಕ. ಮಾದರಿಯಲ್ಲಿ ರಾಜ್ಯದ ಎಲ್ಲ ಜಿಲ್ಲೆಗಳಲ್ಲೂ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ತೆರೆಯಲಿದ್ದೇವೆ. ಸದ್ಯ ಪ್ರತೀ ಶಾಲೆಗೆ 100 ಪುರುಷ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುವುದು. ನಾಲ್ಕು ತಿಂಗಳ ತರಬೇತಿ ಇರಲಿದೆ. ವಸತಿ, ಊಟ ಸಹಿತ ಎಲ್ಲವನ್ನು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ನೋಡಿಕೊಳ್ಳಲಿದೆ. ರಾಜ್ಯದ ಪ್ರತೀ ಮನೆ ಯಿಂದಲೂ ಒಬ್ಬರು ಸೇನೆಗೆ ಸೇರಬೇಕು ಎಂಬುದು ಇದರ ಉದ್ದೇಶ. ಇಲ್ಲಿ ತರಬೇತಿ ಪಡೆದವರಿಗೆ ಶೇ. 99ರಷ್ಟು ಅಗ್ನಿಪಥ್ ಯೋಜನೆಯಲ್ಲಿ ಸೇವೆ ಸಲ್ಲಿಸಲು ಅವಕಾಶ ಸಿಗಲಿದೆ ಎಂದರು.
ದೇಶ, ಸಮಾಜದ ರಕ್ಷಣೆ
ಶಾಲೆ ಉದ್ಘಾಟಿಸಿದ ಜಿಲ್ಲಾ ಉಸ್ತುವಾರಿ ಸಚಿವ ಎಸ್. ಅಂಗಾರ ಮಾತನಾಡಿ, ದೇಶಕ್ಕಾಗಿ ತ್ಯಾಗ ಮಾಡಿದಾಗ ದೇಶದ ರಕ್ಷಣೆಯ ಜತೆಗೆ ಸಮಾಜದ ರಕ್ಷಣೆಯೂ ಆಗುತ್ತದೆ. ಜಾತಿಯ ಹೆಸರಿನಲ್ಲಿ ಏನೇ ಮಾಡಿದರೂ ನೀತಿ ಇರಬೇಕು. ನೀತಿ ಇಲ್ಲದೇ ಜಾತಿ ಹೆಸರಿನಲ್ಲಿ ಏನೇ ಮಾಡಿದರೂ ಅದಕ್ಕೆ ಅರ್ಥ ಇರುವುದಿಲ್ಲ. ಸೇನಾಪೂರ್ವ ತರಬೇತಿಯು ಸ್ವಾಭಿಮಾನದಿಂದ ಬೆಳೆಯಲು ಪೂರಕವಾಗಲಿದೆ ಎಂದರು.
ಇದನ್ನೂ ಓದಿ : ನವಲಗುಂದದಲ್ಲಿ ಮಳೆಯ ಆವಾಂತರ : ಭೋಗಾನೂರ ಗ್ರಾಮದ 40 ಮನೆಗಳು ಜಲಾವೃತ
ಸ್ವಾಗತಾರ್ಹ
ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಜಯ ಪ್ರಕಾಶ್ ಹೆಗ್ಡೆ ಮಾತನಾಡಿ, ಕೋಟಿ ಚೆನ್ನಯ ಸೇನಾ ಆಯ್ಕೆ ಪೂರ್ವ ತರಬೇತಿ ಶಾಲೆಯನ್ನು ಬಾರಕೂರಿನಲ್ಲಿ ಆರಂಭಿಸುತ್ತಿರುವುದು ಸ್ವಾಗತಾರ್ಹ ಎಂದರು.
ವಿಧಾನ ಪರಿಷತ್ ಮಾಜಿ ಸದಸ್ಯ ಕ್ಯಾ| ಗಣೇಶ್ ಕಾರ್ಣಿಕ್ ಅಗ್ನಿಪಥ್ ಬಗ್ಗೆ ಮಾಹಿತಿ ನೀಡಿದರು. ಅಭ್ಯರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಲಾಯಿತು.
ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ಮೈಸೂರು ಎಲೆಕ್ಟ್ರಿಕಲ್ ಇಂಡಸ್ಟ್ರೀಸ್ ಲಿ. ಅಧ್ಯಕ್ಷ ಉದಯ ಕುಮಾರ್ ಶೆಟ್ಟಿ, ನಗರಸಭೆ ಅಧ್ಯಕ್ಷೆ ಸುಮಿತ್ರಾ ಆರ್. ನಾಯಕ್, ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಮನೋಹರ ಎಸ್. ಕಲ್ಮಾಡಿ, ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಪ್ರಧಾನ ಕಾರ್ಯದರ್ಶಿ ತುಳಸಿ ಮದ್ದಿನೇನಿ, ಜಂಟಿಕಾರ್ಯದರ್ಶಿ ಪ್ರದೀಪ್, ಜಿಲ್ಲಾಧಿಕಾರಿ ಕೂರ್ಮಾ ರಾವ್ ಎಂ., ಜಿ.ಪಂ. ಸಿಇಒ ಪ್ರಸನ್ನ ಎಚ್., ರಾಜ್ಯ ಆಹಾರ ನಿಗಮದ ಉಪಾಧ್ಯಕ್ಷ ಕಿರಣ್ ಕೊಡ್ಗಿ ಉಪಸ್ಥಿತರಿದ್ದರು.
ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯ ಜಿಲ್ಲಾ ಅಧಿಕಾರಿ ಸಚಿನ್ ಕುಮಾರ್ ಸ್ವಾಗತಿಸಿ, ವಂದಿಸಿದರು. ತಿಮ್ಮಪ್ಪ ಶೆಟ್ಟಿ ಆರೂರು ನಿರೂಪಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಜಿ.ಶಂಕರ್ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್: ಫೆ.10ರ ತನಕ ನೋಂದಣಿ ಅವಧಿ ವಿಸ್ತರಣೆ

ಶಿರ್ವ ಆರೋಗ್ಯ ಮಾತಾ ದೇವಾಲಯ :ವಾರ್ಷಿಕ ಮಹೋತ್ಸವಕ್ಕೆ ಚಾಲನೆ

ಉಡುಪಿ: ನಾಗಬನದಲ್ಲಿ ಶ್ರೀಗಂಧ ಮರ ಕಳವು… ಆರೋಪಿ ಬಂಧನ, ಸೊತ್ತು ವಶ

ಕಾರ್ಕಳ: ಗೇರು ಬೀಜ ಫ್ಯಾಕ್ಟರಿಯಲ್ಲಿ ಲಾರಿ ಚಾಲಕನ ಕೊಲೆ

ಉಡುಪಿ ಸಂತೆಕಟ್ಟೆ: ವಿದ್ಯಾರ್ಥಿಗಳಿದ್ದ ಕಾರಿಗೆ ಲಾರಿ ಢಿಕ್ಕಿ; ಲಾರಿ ಸಹಿತ ಚಾಲಕ ಪರಾರಿ
MUST WATCH

ಕಾಫಿನಾಡಲ್ಲಿ ಮುಂದುವರಿದ ಮತದಾನ ಬಹಿಷ್ಕಾರದ ಕೂಗು

ಅನುದಾನ ನೀಡಿ ವರ್ಷವಾದರೂ ಆರಂಭವಾಗದ ಕಾಮಗಾರಿ ; ಗ್ರಾಮಸ್ಥರಿಂದ ಚುನಾವಣಾ ಬಹಿಷ್ಕಾರದ ಎಚ್ಚರಿಕೆ

ಮರಳಿನಲ್ಲಿ ಅರಳಿತು ತುಳುನಾಡ ನಾಗಾರಾಧನೆ | Malpe Beach Uthsava 2023 | Udupi – Udayavani

Beach Utsavaದಲ್ಲಿ ತರ ತರಹದ ಸ್ಪರ್ಧೆ, ಚಟುವಟಿಕೆಗಳು !ರಘುಪತಿ ಭಟ್ಟರು ಹೇಳಿದ್ದೇನು ?
