ಕುಂದಾಪುರ: ಹಾಲಾಡಿ ಸ್ಪರ್ಧೆಗೆ ವಿರೋಧ

Team Udayavani, Apr 11, 2018, 8:37 AM IST

haladi.jpg

ಕುಂದಾಪುರ: ಕುಂದಾಪುರದಲ್ಲಿ ಬಿಜೆಪಿ ಅಭ್ಯರ್ಥಿಯಾಗಿ ಹಾಲಾಡಿ ಶ್ರೀನಿವಾಸ ಶೆಟ್ಟರ ಹೆಸರು ಘೋಷಣೆಯಾಗುತ್ತಲೇ ಅವರ ಸ್ಪರ್ಧೆ ವಿರೋಧಿಸುತ್ತಿದ್ದ ಆರು ಮಂದಿ ಮಂಗಳವಾರ ಪಕ್ಷದ ವಿವಿಧ ಜವಾಬ್ದಾರಿಗಳಿಗೆ ರಾಜೀನಾಮೆ ನೀಡಿದ್ದಾರೆ. ಆದರೆ ಪಕ್ಷ ತೊರೆಯುವುದಿಲ್ಲ ಎಂಬುದಾಗಿ ಈ ಆರು ಮಂದಿ ಸ್ಪಷ್ಟಪಡಿಸಿದ್ದಾರೆ.

ಕಳೆದ ಬಾರಿಯ ಬಿಜೆಪಿ ಅಭ್ಯರ್ಥಿ, ಬಿಜೆಪಿ ಜಿಲ್ಲಾ ಉಪಾಧ್ಯಕ್ಷ ಕಿಶೋರ್‌ ಕುಮಾರ್‌ ಬಿ., ಹಿಂದುಳಿದ ವರ್ಗಗಳ ವಿಭಾಗ ಜಿಲ್ಲಾ ಕಾರ್ಯದರ್ಶಿ ವಿಠಲ ಪೂಜಾರಿ, ಕೋಶಾಧಿಕಾರಿ ಶ್ರೀನಿವಾಸ ಕುಂದರ್‌, ಸದಸ್ಯ ಚಂದ್ರಮೋಹನ ಪೂಜಾರಿ, ಕೈಗಾರಿಕಾ ಪ್ರಕೋಷ್ಠ ಸಹ ಸಂಚಾಲಕ ಮೇರ್ಡಿ ಸತೀಶ್‌ ಹೆಗ್ಡೆ, ಜಿಲ್ಲಾ ಕಾರ್ಯಕಾರಿಣಿ ಸದಸ್ಯ ರವಿ ದೊಡ್ಮನೆ ಅವರು ಜಿಲ್ಲಾ ಬಿಜೆಪಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ ಅವರ ಮನೆಗೆ ತೆರಳಿ ರಾಜೀನಾಮೆ ಸಲ್ಲಿಸಿದ್ದಾರೆ.

ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಕಿಶೋರ್‌ ಕುಮಾರ್‌, ಕಳೆದ ಬಾರಿ ಹಾಲಾಡಿಯವರು ಪಕ್ಷ ತೊರೆದು ಸ್ವತಂತ್ರವಾಗಿ ಸ್ಪರ್ಧಿಸಿದ್ದರು, ಆಗ ಗೆಲ್ಲಲಾರೆ ಎಂದು ಗೊತ್ತಿದ್ದರೂ ಹಿರಿ ಯರ ಸೂಚನೆ ಮೇರೆಗೆ ಸ್ಪರ್ಧಿಸಿದ್ದೆ. ಆದರೆ ಈ ಬಾರಿ ಬಿಜೆಪಿಗೆ ಗೆಲುವಿನ ವಾತಾವರಣ ಇದೆ. ಈ ಸಂದರ್ಭ ದಲ್ಲಿ ಹಾಲಾಡಿ ಯವರಿಗೆ ಟಿಕೆಟ್‌ ನೀಡಿರುವುದಕ್ಕೆ ನಮ್ಮ ವಿರೋಧವಿದೆ. ಹುದ್ದೆಗಳಿಗೆ ಮಾತ್ರ ರಾಜೀನಾಮೆ, ನಾವು ಪಕ್ಷ ತೊರೆಯುವುದಿಲ್ಲ. ಹಾಲಾಡಿ ಪರ ಪ್ರಚಾರ ಮಾಡುವು ದಿಲ್ಲ. ಬೇರೆ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಪರವಾಗಿ ಮತ ಯಾಚಿಸು  ತ್ತೇವೆ. 2019ರಲ್ಲಿ ಲೋಕಸಭಾ ಚುನಾ ವಣೆಗೆ ಕುಂದಾಪುರದಲ್ಲಿ ಪ್ರಚಾರ ನಡೆಸುತ್ತೇವೆ ಎಂದರು.

ರಾಜೇಶ್‌ ಕಾವೇರಿ ಮಾತನಾಡಿ, ಬಿಜೆಪಿ ನಮ್ಮದು, ಮೋದಿ ನಮ್ಮವರು. ಹಾಲಾಡಿಯವರನ್ನು ಹೊರತಾದ ಬಿಜೆಪಿಗೆ ನಮ್ಮ ಬೆಂಬಲ ಇದೆ. ಕಷ್ಟಕಾಲದಲ್ಲಿ ಅಭ್ಯರ್ಥಿಯಾಗಿದ್ದ ಕಿಶೋರ್‌ ಅವರಿಗೆ ಅಥವಾ ಜಯಪ್ರಕಾಶ್‌ ಹೆಗ್ಡೆ ಅವರಿಗೆ ಟಿಕೆಟ್‌ ನೀಡಬೇಕಿತ್ತು ಎಂದರು. 

ಭಿನ್ನಾಭಿಪ್ರಾಯ ಬಗೆಹರಿಸುವೆ: ಮಟ್ಟಾರು
ರಾಜೀನಾಮೆ ಕುರಿತು ಪತ್ರಿಕೆಗೆ ಪ್ರತಿಕ್ರಿಯಿಸಿದ ಮಟ್ಟಾರು ರತ್ನಾಕರ ಹೆಗ್ಡೆ, ಪಕ್ಷದ ಹುದ್ದೆಗೆ ರಾಜೀನಾಮೆ ನೀಡಿದ್ದಾರೆ ವಿನಾ ಪಕ್ಷ ತೊರೆದಿಲ್ಲ. ಅದರರ್ಥ ಅವರು ಪಕ್ಷದಲ್ಲಿಯೇ ಮುಂದುವರಿದು ಪಕ್ಷಕ್ಕಾಗಿ ದುಡಿದು ಹಾಲಾಡಿಯವರನ್ನು ಗೆಲ್ಲಿಸುತ್ತಾರೆ ಎಂದು ನಾನು ಭಾವಿಸಿದ್ದೇನೆ. ಅವರ ರಾಜೀನಾಮೆಯನ್ನು ನಾನು ಅಂಗೀಕರಿಸಿಲ್ಲ. ಇವರು ಪಕ್ಷಕ್ಕಾಗಿ ಕೆಲಸ ಮಾಡಿದವರು. ಈಗ ಬಂದಿರುವ ಭಿನ್ನಾಭಿಪ್ರಾಯವನ್ನು ಹಾಲಾಡಿಯವರ ಸಮ್ಮುಖ ಪಕ್ಷದ ಮಂಡಲ ಅಧ್ಯಕ್ಷರ ಜತೆಗೂಡಿ ಪರಿಹರಿಸಲು ಮುಂದಾಗುತ್ತೇನೆ ಎಂದಿದ್ದಾರೆ. 

ಟಾಪ್ ನ್ಯೂಸ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

Hassan ಆಕ್ಷೇಪಾರ್ಹ ವಿಡಿಯೋ ಪ್ರಕರಣ: ಜೆಡಿಎಸ್ ಪಕ್ಷದಿಂದ ಪ್ರಜ್ವಲ್ ರೇವಣ್ಣ ಉಚ್ಛಾಟನೆ

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

ಸುಳ್ಳಿನ ಭರವಸೆ ಮೂಲಕ ಬಿಜೆಪಿ ಖಾಲಿ ಚೊಂಬಿನ ಆಶ್ವಾಸನೆಯನ್ನು ನೀಡಿದೆ: ಜೈ ಕುಮಾರ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Koravadi; ವಿವಾಹಿತೆ ಆತ್ಮಹತ್ಯೆ; ಪತಿ, ಮನೆಯವರಿಂದ ಕಿರುಕುಳ ಆರೋಪ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

Kundapura ಕಾರು ಡಿವೈಡರ್‌ ಏರಿ ಪಲ್ಟಿ; ಮೂವರಿಗೆ ಗಾಯ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Ramanagar: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Ramanagara: ಪ್ರವಾಸಕ್ಕೆ ಬಂದಿದ್ದ ಐವರು ವಿದ್ಯಾರ್ಥಿಗಳು ನೀರುಪಾಲು

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Sirsi: ಮನವಿ ಕೊಟ್ಟ ವಾರದೊಳಗೇ ಕೆಲಸ ಶುರು… 26 ಗುಂಟೆ ಕೆರೆಗೆ ಜೀರ್ಣೋದ್ದಾರ ಭಾಗ್ಯ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Father; ಚಂದ್ರು ನಿರ್ಮಾಣದ ‘ಫಾದರ್‌’ ಚಿತ್ರಕ್ಕೆ ಮುಹೂರ್ತ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thirthahalli: ಇದು ಪಿಕ್ ಪ್ಯಾಕೆಟ್ ಸರ್ಕಾರ… ಕಾಂಗ್ರೆಸ್ ವಿರುದ್ಧ ಕುಮಾರಸ್ವಾಮಿ ಹೇಳಿಕೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.