ಸರಕಾರಿ ಶಾಲೆಗಳಲ್ಲಿ ಅನುಮತಿ ಇಲ್ಲದೆ ಎಲ್‌ಕೆಜಿ, ಯುಕೆಜಿ: ವಿದ್ಯಾರ್ಥಿಗಳ ಪೋಷಕರಿಗೆ ಹೊರೆ


Team Udayavani, Jun 28, 2022, 7:23 AM IST

ಸರಕಾರಿ ಶಾಲೆಗಳಲ್ಲಿ ಅನುಮತಿ ಇಲ್ಲದೆ ಎಲ್‌ಕೆಜಿ, ಯುಕೆಜಿ: ವಿದ್ಯಾರ್ಥಿಗಳ ಪೋಷಕರಿಗೆ ಹೊರೆ

ಸಾಂದರ್ಭಿಕ ಚಿತ್ರ.

ಉಡುಪಿ: ಸರಕಾರದ ಅನುಮತಿ ಇಲ್ಲದೆ ಸರಕಾರಿ ಶಾಲೆಯಲ್ಲಿ ಎಲ್‌ಕೆಜಿ, ಯುಕೆಜಿ ಜತೆಗೆ ಆಂಗ್ಲ ಮಾಧ್ಯಮ ಆರಂಭಿಸಿ ಮಕ್ಕಳಿಂದಲೇ ಶುಲ್ಕ ವಸೂಲಿ ಮಾಡುವ ಪ್ರವೃತ್ತಿ ಹೆಚ್ಚಾಗುತ್ತಿದೆ.

ಸರಕಾರಿ ಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಸಮವಸ್ತ್ರ, ಪಠ್ಯಪುಸ್ತಕ, ಮಧ್ಯಾಹ್ನದ ಬಿಸಿಯೂಟ ಸಹಿತ ಎಲ್ಲ ಸೌಲಭ್ಯವನ್ನು ಸರಕಾರವೇ ಒದಗಿಸುತ್ತಿದೆ. ಜತೆಗೆ ಪೂರ್ವ ಪ್ರಾಥಮಿಕ ಶಾಲೆಗಳನ್ನು, ಆಂಗ್ಲ ಮಾಧ್ಯಮ ತರಗತಿಗಳನ್ನು ಹಂತ ಹಂತವಾಗಿ ಆರಂಭಿಸುತ್ತಿದೆ. ಆದರೆ ಕೆಲವೊಂದು ಶಾಲೆಗಳಲ್ಲಿ ಸಾರ್ವಜನಿಕ ಶಿಕ್ಷಣ ಇಲಾಖೆಯ ಅನುಮತಿ ಇಲ್ಲದೇ ಪೂರ್ವ ಪ್ರಾಥಮಿಕ ತರಗತಿಗಳನ್ನು, ಆಂಗ್ಲಮಾಧ್ಯಮ ಆರಂಭಿಸಿ, ಅದಕ್ಕಾಗುವ ಹೆಚ್ಚುವರಿ ಹೊರೆಯನ್ನು ವಿದ್ಯಾರ್ಥಿಗಳ ಪಾಲಕ, ಪೋಷಕರ ಮೇಲೆ ಹೊರಿಸಲಾಗುತ್ತಿದೆ.

ಕೆಲವು ಸರಕಾರಿ ಶಾಲೆಗಳಲ್ಲಿ ಹಳೇ ವಿದ್ಯಾರ್ಥಿಗಳ ಸಂಘ, ಶಾಲಾಭಿವೃದ್ಧಿ ಮತ್ತು ಮೇಲುಸ್ತುವಾರಿ ಸಮಿತಿ (ಎಸ್‌ಡಿಎಂಸಿ) ಜತೆ ಸೇರಿ ಚರ್ಚೆ ನಡೆಸಿ, ತಮ್ಮಲ್ಲಿರುವ ಅನುಕೂಲತೆ, ಸೌಕರ್ಯದ ಆಧಾರದಲ್ಲಿ ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ತೆರೆಯುತ್ತಿದ್ದಾರೆ. ಇದಕ್ಕೆ ತಗಲುವ ವೆಚ್ಚವನ್ನು ಹಳೇ ವಿದ್ಯಾರ್ಥಿಗಳ ಸಂಘ, ಎಸ್‌ಡಿಎಂಸಿ, ದಾನಿಗಳ ಮೂಲಕ ಭರಿಸಲಾಗುತ್ತಿದೆ. ಆದರೆ ಆಂಗ್ಲ ಮಾಧ್ಯಮಕ್ಕೆ ಕಡ್ಡಾಯವಾಗಿ ಅನುಮತಿ ಪಡೆಯಲೇ ಬೇಕು. ಇಲ್ಲವಾದರೆ ಮುಂದೆ ವಿದ್ಯಾರ್ಥಿಗಳಿಗೆ ಪ್ರಮಾಣಪತ್ರ ಪಡೆಯುವಾಗ ಸಮಸ್ಯೆಯಾಗಲಿದೆ.

ಶಾಲೆಯೇ ಹೊಣೆ
ಸರಕಾರಿ ಶಾಲೆಗಳಲ್ಲಿ ಎಲ್‌ಕೆಜಿ, ಯುಕೆಜಿ ಆರಂಭಿಸಬೇಕು ಎಂಬ ಚಿಂತನೆ ಸರಕಾರದ ಹಂತದಲ್ಲಿದೆ. ಶಾಲಾ ಕಾಂಪೌಂಡ್‌ ಒಳಗೆ ಇರುವ ಅಂಗನವಾಡಿಗಳನ್ನು ಎಲ್‌ಕೆಜಿ, ಯುಕೆಜಿಯಾಗಿ ಪರಿವರ್ತಿಸಿ, ಬೋಧನೆ ಮತ್ತು ಪೌಷ್ಟಿಕಾಹಾರವನ್ನು ಕ್ರಮವಾಗಿ ಶಿಕ್ಷಣ ಇಲಾಖೆ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ನೋಡಿಕೊಳ್ಳುವ ಬಗ್ಗೆಯೂ ಚರ್ಚೆ ನಡೆಯುತ್ತಿದ್ದು, ಯಾವುದೇ ತೀರ್ಮಾನ ಆಗಿಲ್ಲ. ಹೀಗಾಗಿ ಈವರೆಗೂ ಕರ್ನಾಟಕ ಪಬ್ಲಿಕ್‌ ಶಾಲೆಗಳಲ್ಲಿ ಮಾತ್ರ ಅಧಿಕೃತವಾಗಿ ಎಲ್‌ಕೆಜಿ, ಯುಕೆಜಿ ತೆರೆಯಲು ಅನುಮತಿ ನೀಡಲಾಗಿದೆ. ಆಂಗ್ಲ ಮಾಧ್ಯಮ ತರಗತಿ ನಡೆಸಲು ಕೆಲವು ಶಾಲೆಗಳಿಗೆ ಅಲ್ಲಿನ ಸೌಲಭ್ಯ, ಶಿಕ್ಷಕರ ಲಭ್ಯತೆ ಆಧಾರದಲ್ಲಿ ಅನುಮತಿ ಕಲ್ಪಿಸಲಾಗಿದೆ. ಸರಕಾರದ ಅನುಮತಿ ಪಡೆಯದೆ ಎಲ್‌ಕೆಜಿ, ಯುಕೆಜಿ ಆರಂಭಿಸಿರುವ ಶಾಲೆಗಳಲ್ಲಿ ಈ ತರಗತಿಯ ಮಕ್ಕಳಿಗೆ ಶಿಕ್ಷಣ ಬೋಧಿಸಲು ಅತಿಥಿ ಶಿಕ್ಷಕರನ್ನು ಸರಕಾರ ನೀಡುವುದಿಲ್ಲ. ಆಯಾ ಶಾಲೆ ಅಥವಾ ಎಸ್‌ಡಿಎಂಸಿಯೇ ವ್ಯವಸ್ಥೆ ಮಾಡಬೇಕು. ಇದರ ಸಂಪೂರ್ಣ ಜವಾಬ್ದಾರಿ ಆ ಶಾಲೆಗೆ ಸೇರಿರುತ್ತದೆ ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದರು.

ಹೆಚ್ಚುವರಿ ವಸೂಲಾತಿ ಸರಿಯಲ್ಲ
ಇಲಾಖೆಯಿಂದ ಹೆಚ್ಚುವರಿ ಕಾರ್ಯಭಾರಕ್ಕೆ ಅನುಗುಣವಾಗಿ ಅತಿಥಿ ಶಿಕ್ಷಕರ ನೇಮಕಕ್ಕೆ ಅವಕಾಶ ನೀಡುತ್ತದೆ. ಅಲ್ಲದೆ ಆ ಶಿಕ್ಷಕರ ಗೌರವಧನವನ್ನು ಸರಕಾರವೇ ಭರಿಸುತ್ತದೆ. ಹೀಗಾಗಿ ಅತಿಥಿ ಶಿಕ್ಷಕರಿಗೆ ಮಕ್ಕಳಿಂದ ಶುಲ್ಕ ವಸೂಲಿ ಮಾಡಲು ಅವಕಾಶ ಇಲ್ಲ. ಇಲಾಖೆಯ ಗಮನಕ್ಕೆ ಬಾರದೇ ಅತಿಥಿ ಶಿಕ್ಷಕರನ್ನು ನೇಮಿಸಿಕೊಂಡಿದ್ದಲ್ಲಿ ಆಗ ಎಸ್‌ಡಿಎಂಸಿ ಅನುಮತಿ ಪಡೆದಿರಬೇಕು ಮತ್ತು ಅಂತಹ ಶಿಕ್ಷಕರಿಗೆ ಶಾಲೆಯಿಂದಲೇ ವೇತನ ನೀಡಬೇಕು. ಆಗಲೂ ಮಕ್ಕಳಿಂದ ಶುಲ್ಕ ಪಡೆಯುವಂತಿಲ್ಲ.

110ಕ್ಕೂ ಅಧಿಕ ಶಾಲೆಗಳಲ್ಲಿ …
ದ.ಕ. ಜಿಲ್ಲೆಯಲ್ಲಿ ಎಸ್‌ಡಿಎಂಸಿ ಬೆಂಬಲ ದೊಂದಿಗೆ ಸುಮಾರು 70 ಹಾಗೂ ಉಡುಪಿ ಜಿಲ್ಲೆಯಲ್ಲಿ 40ಕ್ಕೂ ಅಧಿಕ ಸರಕಾರಿ ಶಾಲೆಯಲ್ಲಿ ಪೂರ್ವ ಪ್ರಾಥಮಿಕ ತರಗತಿ ನಡೆಯುತ್ತಿದೆ.

ಸರಕಾರದ ಅನುಮತಿ ಇಲ್ಲದೇ ಆಂಗ್ಲ ಮಾಧ್ಯಮ ಹಾಗೂ ಎಸ್‌ಡಿಎಂಸಿ ಯಲ್ಲಿ ತೀರ್ಮಾ ನಿ ಸದೆ, ಅಗತ್ಯ ವ್ಯವಸ್ಥೆ ಮಾಡಿ ಕೊಳ್ಳದೆ ಎಲ್‌ಕೆಜಿ, ಯುಕೆಜಿ ತರಗತಿ ಗಳನ್ನು ನಡೆ ಸುವುದು ಸರಿಯಲ್ಲ. ಮುಂದೆ ವಿದ್ಯಾರ್ಥಿಗಳಿಗೆ ಸಮಸ್ಯೆ ಆಗದಂತೆ ಎಚ್ಚರ ವಹಿಸಬೇಕು.
– ಗೋವಿಂದ ಮಡಿವಾಳ ಮತ್ತು ಸುಧಾಕರ,
ಉಡುಪಿ, ದ.ಕ. ಡಿಡಿಪಿಐಗಳು

ಕರ್ನಾಟಕ ಪಬ್ಲಿಕ್‌ ಶಾಲೆ ಸಹಿತ ಸರಕಾರದಿಂದ ಅನುಮತಿ ಪಡೆದ ಸರಕಾರಿ ಶಾಲೆ ಗಳಲ್ಲಿ ಅಲ್ಲಿನ ಶಿಕ್ಷಕರೆ ಎಲ್‌ಕೆಜಿ, ಯುಕೆಜಿಗೆ ಬೋಧನೆ ಮಾಡಲಿದ್ದಾರೆ. ಕೆಲವರಿಗೆ ಈಗಾಗಲೇ ತರಬೇತಿಯನ್ನೂ ನೀಡಲಾಗಿದೆ. ಆದರೆ ಎಲ್‌ಕೆಜಿ, ಯುಕೆಜಿ ಬೋಧನೆಗೆ ಸರಕಾರದಿಂದ ಅತಿಥಿ ಶಿಕ್ಷಕರನ್ನು ನೀಡುವುದಿಲ್ಲ. ಒಂದೊಮ್ಮೆ ಅತಿಥಿ ಶಿಕ್ಷಕರನ್ನು ಈ ತರಗತಿಗಳಿಗೆ ನೇಮಿಸಿ ಕೊಂಡಿದ್ದಲ್ಲಿ ಎಸ್‌ಡಿಎಂಸಿ ನಿರ್ಧಾರದಂತೆ ಅವರ ವೇತನ ಇತ್ಯಾದಿ ಇರಲಿದೆ.
-ಡಾ| ವಿಶಾಲ್‌,
ಸಾರ್ವಜನಿಕ ಶಿಕ್ಷಣ ಇಲಾಖೆಯ ಆಯುಕ್ತ

 

ಟಾಪ್ ನ್ಯೂಸ್

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ

accident

Gangavathi: ಎರಡು ಪ್ರತ್ಯೇಕ ಅಪಘಾತದಲ್ಲಿ ಮೂರು ಜನ ಸಾವು

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ

Sumalatha Ambareesh: ಟ್ವೀಟ್‌ನಲ್ಲಿ ಸಂಸದೆ ಸುಮಲತಾ ಅಂಬರೀಶ್‌ ವಿವೇಕದ ಪಾಠ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

28

Athletics: ಕಿರಿಯರ ಏಷ್ಯನ್‌ ಆ್ಯತ್ಲೆಟಿಕ್ಸ್‌  ಜಾವೆಲಿನ್‌ನಲ್ಲಿ ದೀಪಾಂಶುಗೆ ಬಂಗಾರ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Gukesh: ಚಾಂಪಿಯನ್‌ ಗುಕೇಶ್‌ಗೆ ಭವ್ಯ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.