ರಾಷ್ಟ್ರೀಯ ಲೋಕ್‌ ಅದಾಲತ್‌: ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು!

ಒಂದೇ ದಿನದಲ್ಲಿ ಒಟ್ಟು 30,773 ಪ್ರಕರಣ ಇತ್ಯರ್ಥ

Team Udayavani, Jun 25, 2022, 9:26 PM IST

ರಾಷ್ಟ್ರೀಯ ಲೋಕ್‌ ಅದಾಲತ್‌: ಆಟೋರಿಕ್ಷಾ ಬಳಿ ತೆರಳಿ ಪ್ರಕರಣ ಇತ್ಯರ್ಥಪಡಿಸಿದ ನ್ಯಾಯಾಧೀಶರು!

ಉಡುಪಿ : ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ನಿರ್ದೇಶನದ ಮೇರೆಗೆ ಶನಿವಾರ ಉಡುಪಿ, ಕುಂದಾಪುರ ಹಾಗೂ ಕಾರ್ಕಳದ ವಿವಿಧ ನ್ಯಾಯಾಲಯಗಳಲ್ಲಿ ರಾಷ್ಟ್ರೀಯ ಲೋಕ್‌ ಅದಾಲತ್‌ ಆಯೋಜಿಸಿ ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಈ ವೇಳೆ ಕೋರ್ಟ್ ಮೆಟ್ಟಿಲು ಹತ್ತಲಾಗದೆ ರಿಕ್ಷಾದಲ್ಲೇ ಕುಳಿತ್ತಿದ್ದ 81 ವರ್ಷದ ವೃದ್ಧೆಯ ಪ್ರಕರಣವನ್ನು ನ್ಯಾಯಾಧೀಶರು ರಿಕ್ಷಾದ ಬಳಿ ತೆರಳಿ ಅಲ್ಲಿಯೇ ಇತ್ಯರ್ಥಗೊಳಿಸಿದ ಪ್ರಸಂಗವೂ ನಡೆಯಿತು.

2011 ರ ಅಸಲು ದಾವೆ ಪ್ರಕರಣದಲ್ಲಿ ಲೋಕ್‌ ಅದಾಲತ್‌ನಲ್ಲಿ ಭಾಗಿಯಾಗಲು ಆಟೋ ರಿಕ್ಷಾದಲ್ಲಿ ಬಂದಂತಹ 81 ವರ್ಷದ ವೃದ್ಧೆ ದೇವಕಿ ಶೆಡ್ತಿ ತಮ್ಮ ಮಗಳಾದ ಜಯಂತಿಯವರಿಗೆ ಜಿ.ಪಿ.ಎ. ನೀಡಿದ್ದರು. ಅವರು ನ್ಯಾಯಾಲಯದ ಮೆಟ್ಟಿಲು ಹತ್ತಲಾಗದೇ ಆಟೋದಲ್ಲಿ ಕುಳಿತ್ತಿದ್ದರು. ಆ ಸಂದರ್ಭದಲ್ಲಿ 4ನೇ ಹೆಚ್ಚುವರಿ ಸಿವಿಲ್‌ ನ್ಯಾಯಾಧೀಶರಾದ ಜೀತು ಆರ್‌.ಎಸ್‌., ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಶರ್ಮಿಳಾ ಎಸ್‌., ಸಂಧಾನಕಾರರಾದ ನ್ಯಾಯವಾದಿ ಮಿತೇಶ್‌ ಶೆಟ್ಟಿ ಹಾಗೂ ಉಭಯ ಕಕ್ಷಿದಾರರ ನ್ಯಾಯವಾದಿಗಳು ದೇವಕಿ ಶೆಡ್ತಿರವರ ಬಳಿ ಬಂದು ಜಿ.ಪಿ.ಎ. ನೀಡಿದ್ದರ ಬಗ್ಗೆ ಪರಿಶೀಲಿಸಿ ಅನಂತರ ನ್ಯಾಯಾಲಯದಲ್ಲಿ ವೀಡಿಯೋ ಕಾನ್ಫರೆನ್ಸ್‌ ಮೂಲಕ ಮುಂಬಯಿಯಲ್ಲಿದ್ದ ನಾಲ್ಕು ಜನ ಕಕ್ಷಿದಾರರ ಭಾಗಿಯಾದ ಅನಂತರ ಪ್ರಕರಣವನ್ನು ಇತ್ಯರ್ಥಪಡಿಸಲಾಯಿತು.

ಒಂದೇ ದಿನ 30,773 ಪ್ರಕರಣಗಳನ್ನು ಇತ್ಯರ್ಥಪಡಿಸಿದ್ದು ಇದರಲ್ಲಿ ರಾಜೀಯಾಗಬಲ್ಲ ಅಪರಾಧಿಕ ಪ್ರಕರಣ -26, ಚೆಕ್ಕು ಅಮಾನ್ಯ ಪ್ರಕರಣ-225, ಬ್ಯಾಂಕ್‌ / ಹಣ ವಸೂಲಾತಿ ಪ್ರಕರಣ-19, ಎಂ.ವಿ.ಸಿ. ಪ್ರಕರಣ-185, ಕಾರ್ಮಿಕ ನಷ್ಟ ಪರಿಹಾರ ಪ್ರಕರಣ-1, ಎಂ.ಎಂಆರ್‌.ಡಿ. ಆ್ಯಕ್ಟ್ ಪ್ರಕರಣ-16, ವೈವಾಹಿಕ ಪ್ರಕರಣ-3, ಸಿವಿಲ್‌ ಪ್ರಕರಣ-170, ಇತರ ಕ್ರಿಮಿನಲ್‌ ಪ್ರಕರಣ- 2049 ಹಾಗೂ ವ್ಯಾಜ್ಯ ಪೂರ್ವ ದಾವೆ-28079) ಹೀಗೆ ವಿವಿಧ ಪ್ರಕರಣಗಳನ್ನು ರಾಜೀ ಮುಖಾಂತರ ಇತ್ಯರ್ಥಪಡಿಸಿ 20,50,13,358ರೂ. ಪರಿಹಾರದ ಮೊತ್ತವನ್ನು ಘೋಷಿಸಲಾಯಿತು.

ಇದನ್ನೂ ಓದಿ : ಮೂಲ್ಕಿ: ದ್ವಿಚಕ್ರ ವಾಹನಗಳ ಮುಖಾಮುಖಿ; ಓರ್ವ ವಿದ್ಯಾರ್ಥಿ ಸಾವು, ಇನ್ನೋರ್ವ ಗಂಭೀರ

4 ದಂಪತಿಗಳ ಸಮ್ಮಿಲನ
ಪ್ರಧಾನ ನ್ಯಾಯಾಧೀಶರು ಕೌಟುಂಬಿಕ ನ್ಯಾಯಾಲಯದಲ್ಲಿ ಮೂರು ವರ್ಷಗಳ ಹಿಂದೆ ವೈಮನಸ್ಸಿನಿಂದ ದೂರವಾಗಿದ್ದ 4 ದಂಪತಿಗಳ ಸಮ್ಮಿಲನ ನಡೆಯಿತು.
ಕಾರ್ಕಳದ ನ್ಯಾಯಾಲಯದಲ್ಲಿ 98 ಜನ ಪ್ರತಿವಾದಿಗಳ ಹಾಗೂ ಇಬ್ಬರು ವಾದಿಗಳಿದ್ದ ಅಸಲು ದಾವೆಯಲ್ಲಿ ಉಭಯ ಕಕ್ಷಿದಾರರು ಪಾಲು ದಾವೆಯನ್ನು ರಾಜೀ ಸಂಧಾನದ ಮೂಲಕ ಇತ್ಯರ್ಥಪಡಿಸಿಕೊಂಡಿ¨ªಾರೆ.

ಒಂದೇ ದಿನ 2 ವಾಜ್ಯ ಇತ್ಯರ್ಥಪಡಿಸಿಕೊಂಡ ಅತ್ತೆ, ಸೊಸೆ
2ನೇ ಹೆಚ್ಚುವರಿ ಹಿರಿಯ ಸಿವಿಲ್‌ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯ ಹಾಗೂ 4ನೇ ಹೆಚ್ಚುವರಿ ಹಿರಿಯ ಸಿವಿಲ್‌ ಮತ್ತು ಜೆ.ಎಂ.ಎಫ್.ಸಿ. ನ್ಯಾಯಾಲಯದ ಮುಂದಿದ್ದ ಎರಡೂ ದಾವೆಗಳಲ್ಲಿ ಅತ್ತೆ ಮತ್ತು ಸೊಸೆ ಹಾಗೂ ಇತರರು ಭಾಗಿಯಾಗಿ ವ್ಯಾಜ್ಯ ಇತ್ಯರ್ಥಪಡಿಸಿಕೊಂಡಿದ್ದು ಈ ಅದಾಲತ್‌ನ ವಿಶೇಷವಾಗಿತ್ತು.

ಅಣ್ಣ-ತಂಗಿ ಸಂಧಾನ
ಪ್ರಧಾನ ಹಿರಿಯ ಸಿವಿಲ್‌ ನ್ಯಾಯಾಧೀಶರು ನ್ಯಾಯಾಲಯದಲ್ಲಿ 2014 ರಲ್ಲಿ ಅಣ್ಣ ಮತ್ತು ತಂಗಿಯ ನಡುವೆ ದಾಖಲಾದ ಪಾಲು ವಿಭಾಗದ ದಾವೆ ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದೆ. ಅದೇ ರೀತಿ 2004 ರಲ್ಲಿ ದಾಖಲಾದ ಅಸಲು ದಾವೆ ಪ್ರಕರಣ ಅಫಿಲು ಸಂಖ್ಯೆ 48/2018 ರಲ್ಲಿ ಉಭಯ ಕಕ್ಷಿದಾರರ ನಡುವೆ ಸೌಹಾರ್ದಯುತವಾಗಿ ಇತ್ಯರ್ಥವಾಗಿದೆ.
ಕುಂದಾಪುರದಲ್ಲಿ 31 ವರ್ಷಗಳ ಹಿಂದೆ ಶುರುವಾದ ವೈಮನಸ್ಸು ಈ ಬಾರಿಯ ಲೋಕ ಅದಾಲತ್‌ನಲ್ಲಿ ನ್ಯಾಯಾಧೀಶರು, ನ್ಯಾಯವಾದಿಗಳು ಹಾಗೂ ಸಂಧಾನಕಾರರ ಮಧ್ಯಸ್ಥಿಕೆಯಿಂದ ಎಫ್.ಡಿ.ಪಿ. 11/2008 ರ ಹಳೆಯ ಪ್ರಕರಣದಲ್ಲಿ ಕಕ್ಷಿದಾರರ ನಡುವೆ ರಾಜೀ ಸಂಧಾನದ ಮೂಲಕ ಇತ್ಯರ್ಥವಾಗಿದೆ.

ನ್ಯಾಯಾಂಗ ಇಲಾಖೆ, ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತಾಲೂಕು ಕಾನೂನು ಸೇವೆಗಳ ಸಮಿತಿ, ವಕೀಲರ ಸಂಘ ಉಡುಪಿ, ಕುಂದಾಪುರ ಹಾಗೂ ಕಾರ್ಕಳ, ಅಭಿಯೋಗ ಮತ್ತು ಸರಕಾರಿ ವ್ಯಾಜ್ಯಗಳ ಇಲಾಖೆ, ಪೊಲೀಸ್‌ ಇಲಾಖೆ, ಕಂದಾಯ ಇಲಾಖೆ, ಗಣಿ ಮತ್ತು ಭೂವಿಜ್ಞಾನ ಇಲಾಖೆ, ವಿಮಾ ಕಂಪೆನಿಗಳು, ಬ್ಯಾಂಕ್‌, ಕಕ್ಷಿಗಾರರು ಹಾಗೂ ಇತರ ಸರಕಾರಿ ಇಲಾಖೆಯ ಸಹಕಾರದೊಂದಿಗೆ ಲೋಕ್‌ ಅದಾಲತ್‌ ಯಶಸ್ವಿಯಾಗಿ ನಡೆಯಿತು.

ಟಾಪ್ ನ್ಯೂಸ್

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ‌ ಕಾರ್ಯಕರ್ತರ ಘರ್ಷಣೆ…

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್‌ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.