ಹೆದ್ದಾರಿ ಬದಿ ಕಸ ಎಸೆಯಲು ಯತ್ನ: ಲಾರಿ ಚಾಲಕನಿಗೆ ದಂಡ
Team Udayavani, Sep 1, 2018, 2:25 AM IST
ಕಾಪು: ಇಲ್ಲಿನ ಪುರಸಭಾ ವ್ಯಾಪ್ತಿಯ ಕೊಪ್ಪಲಂಗಡಿಯಲ್ಲಿ ರಸ್ತೆ ಬದಿ ತ್ಯಾಜ್ಯ ಎಸೆದು ಪರಾರಿಯಾಗಲೆತ್ನಿಸಿದ ಲಾರಿಯೊಂದನ್ನು ಪುರಸಭೆ ಮೂಲಕ ತಡೆ ಹಿಡಿದು, ಐದು ಸಾವಿರ ರೂ. ದಂಡ ವಿಧಿಸಿದ ಘಟನೆ ಗುರುವಾರ ಸಂಜೆ ಕಾಪುವಿನಲ್ಲಿ ನಡೆದಿದೆ. ರಾಷ್ಟ್ರೀಯ ಹೆದ್ದಾರಿ 66ರ ಕೊಪ್ಪಲಂಗಡಿ ಬಳಿ ನಿಪ್ಪಾಣಿ ಮೂಲದ ಲಾರಿಯನ್ನು ರಸ್ತೆ ಬದಿ ನಿಲ್ಲಿಸಿದ ಚಾಲಕ, ನಿರ್ವಾಹಕನ ಮೂಲಕವಾಗಿ ಲಾರಿಯಲ್ಲಿದ್ದ ಪ್ಲಾಸ್ಟಿಕ್ ಕಸ – ತ್ಯಾಜ್ಯವನ್ನು ಎಸೆಯಲು ಯತ್ನಿಸಿದ್ದನು. ಈ ವೇಳೆ ಹೆದ್ದಾರಿಯಲ್ಲಿ ಸಂಚರಿಸುತ್ತಿದ್ದ ಉಚ್ಚಿಲ ಜಯ ಕರ್ನಾಟಕ ಘಟಕದ ಅಧ್ಯಕ್ಷ ಹರೀಶ್ ಶೆಟ್ಟಿ, ಕಾರ್ಯದರ್ಶಿ ಸತೀಶ್ ಶೆಟ್ಟಿ ಮತ್ತು ಯಶೋಧರ ಶೆಟ್ಟಿ ಚಾಲಕನನ್ನು ಪ್ರಶ್ನಿಸಿ, ಈ ಬಗ್ಗೆ ಪುರಸಭೆ ಮುಖ್ಯಾಧಿಕಾರಿಗೆ ಮಾಹಿತಿ ರವಾನಿಸಿದ್ದರು.
ಲಾರಿಯಲ್ಲಿ ಕಸ ಎಸೆಯುವ ಸುದ್ದಿ ತಿಳಿಯುತ್ತಲೇ ಸ್ಥಳಕ್ಕೆ ಧಾವಿಸಿದ ಕಾರ್ಯನಿರ್ವಹಿಸುತ್ತಿರುವ ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ಅವರು ತತ್ಕ್ಷಣ ಸ್ಥಳಕ್ಕೆ ಧಾವಿಸಿ, ಕಸ ಎಸೆಯುವುದನ್ನು ಪ್ರಶ್ನಿಸಿ ಲಾರಿ ವಶಕ್ಕೆ ಪಡೆದುಕೊಳ್ಳುವಂತೆ ಪೊಲೀಸರಿಗೆ ಸೂಚನೆ ನೀಡಿದ್ದಾರೆ. ರಾಷ್ಟ್ರೀಯ ಹೆದ್ದಾರಿ 66ರ ಬದಿಯಲ್ಲಿ ಮತ್ತು ಪುರಸಭೆ ವ್ಯಾಪ್ತಿಯಲ್ಲಿ ತ್ಯಾಜ್ಯ ಎಸೆದ ಕಾರಣಕ್ಕೆ ಪುರಸಭೆ ಲಾರಿ ಚಾಲಕನಿಗೆ 5,000 ರೂ. ದಂಡ ವಿಧಿಸಿದ್ದು, ಚಾಲಕನಿಗೆ ಎಚ್ಚರಿಕೆ ನೀಡಿ ಬಿಡುಗಡೆಗೊಳಿಸಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ರಾಯಪ್ಪ ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ
MUST WATCH
ಹೊಸ ಸೇರ್ಪಡೆ
Gadaga ಹತ್ಯೆ ಪ್ರಕರಣ; ಆರೋಪಿಗಳ ಪತ್ತೆಗೆ ಪರಿಶೀಲನೆ ಮುಂದುವರೆದಿದೆ: ಗದಗ ಎಸ್ಪಿ
Vote: ದಾಖಲೆ ಸಂಖ್ಯೆಯಲ್ಲಿ ಮತ ಚಲಾಯಿಸಿ…: ಮತದಾರರಲ್ಲಿ ಮನವಿ ಮಾಡಿದ ಪ್ರಧಾನಿ ಮೋದಿ
Gadaga: ಒಂದೇ ಕುಟುಂಬದ ನಾಲ್ವರ ಭೀಕರ ಹತ್ಯೆ; ದುಷ್ಕರ್ಮಿಗಳು ಪರಾರಿ
Polls: ಇಂದು 102 ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ, ಮತದಾರರ ಕೈಯಲ್ಲಿ ಅಭ್ಯರ್ಥಿಗಳ ಭವಿಷ್ಯ
Hunsur: ನಾಗರಹೊಳೆಯಲ್ಲಿ ದುಷ್ಕರ್ಮಿಗಳ ಗುಂಡೇಟಿಗೆ ಕಾಡುಕೋಣ ಬಲಿ