ಮಣಿಪಾಲ: ಟಿಪ್ಪರ್ ಬ್ರೇಕ್ ವೈಫಲ್ಯ – ಹಲವು ವಾಹನಗಳಿಗೆ ಢಿಕ್ಕಿ ; ತಪ್ಪಿದ ಭಾರೀ ದುರಂತ
Team Udayavani, Dec 13, 2019, 8:02 PM IST
ಉಡುಪಿ: ಮಣಿಪಾಲದ ಐನಾಕ್ಸ್ ಚಿತ್ರಮಂದಿರದ ಬಳಿ ಶುಕ್ರವಾರ ಮಧ್ಯಾಹ್ನ ಟಿಪ್ಪರ್ ಲಾರಿಯೊಂದು ಬ್ರೇಕ್ ವೈಫಲ್ಯಕ್ಕೀಡಾಗಿ ಹಲವು ವಾಹನಗಳಿಗೆ ಢಿಕ್ಕಿ ಹೊಡೆದಿದೆ. ಅದೃಷ್ಟವಶಾತ್ ಯಾರಿಗೂ ಗಂಭೀರ ಗಾಯಗಳಾಗಿಲ್ಲ.
ಮಣಿಪಾಲದಿಂದ ಉಡುಪಿ ಕಡೆಗೆ ಕಲ್ಲು ತುಂಬಿಸಿಕೊಂಡು ಬರುತ್ತಿದ್ದ ಟಿಪ್ಪರ್ ವಾಹನವು ಐನಾಕ್ಸ್ ಚಿತ್ರ ಮಂದಿರದ ಎದುರಿನ ಇಳಿಜಾರು ರಸ್ತೆಯಲ್ಲಿ ಬ್ರೇಕ್ ವೈಫಲ್ಯಕ್ಕೀಡಾಯಿತು. ಪರಿಣಾಮ ಚಾಲಕನ ನಿಯಂತ್ರಣ ತಪ್ಪಿದ ಟಿಪ್ಪರ್ ಎದುರಿನಿಂದ ಸಾಗುತ್ತಿದ್ದ ಎಕ್ಸ್ಪ್ರೆಸ್ ಬಸ್ಸಿಗೆ ಢಿಕ್ಕಿ ಹೊಡೆಯಿತು. ಆ ಬಳಿಕ ಮುಂದೆ ಸಾಗಿ ಎದುರಿನಲ್ಲಿದ್ದ ಆಟೋ ರಿಕ್ಷಾ ಹಾಗೂ ಬೈಕಿಗೆ ಢಿಕ್ಕಿಯಾಗಿದೆ.
ಢಿಕ್ಕಿಯ ರಭಸಕ್ಕೆ ಟಿಪ್ಪರ್ ನಡಿಯಲ್ಲಿ ಸಿಲುಕಿದ್ದ ಬೈಕ್ ಸಂಪೂರ್ಣ ನಜ್ಜುಗುಜ್ಜಾಗಿದೆ. ಸವಾರ ಬೈಕಿನಿಂದ ಜಿಗಿದ ಪರಿಣಾಮ ಸಣ್ಣಪುಟ್ಟ ಗಾಯಗಳೊಂದಿಗೆ ಪಾರಾಗಿದ್ದಾನೆ. ಟಿಪ್ಪರ್ನಡಿಯಲ್ಲಿ ಬೈಕ್ ಸಿಲುಕಿಕೊಂಡ ಕಾರಣ ಮತ್ತಷ್ಟು ವಾಹನಗಳು ಅಪಘಾತದಿಂದ ಪಾರಾದವು ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಐನಾಕ್ಸ್ ಚಿತ್ರಮಂದಿರ ಎದುರಿನ ಇಳಿಜಾರು ರಸ್ತೆಯಲ್ಲಿ ಈಗ ಕಾಮಗಾರಿ ಬಿರುಸಿನಿಂದ ನಡೆಯುತ್ತಿದ್ದು, ವಾಹನಗಳು ಏಕಮುಖ ರಸ್ತೆಯಲ್ಲಿ ಸಾಗುವೆತ್ತಿದೆ. ಇಲ್ಲಿ ಟಿಪ್ಪರ್ ಬ್ರೇಕ್ ವೈಫಲ್ಯಕ್ಕೀಡಾಗಿದ್ದು, ಸ್ವಲ್ಪ ಹೊತ್ತು ಆತಂಕದ ಸ್ಥಿತಿ ನೆಲೆಸಿತ್ತು. ಮಣಿಪಾಲ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
AAP ‘ಮಹಾರ್ಯಾಲಿ’ಯಲ್ಲಿ ಭಾಗಿಯಾಗಲಿರುವ ರಾಹುಲ್,ಖರ್ಗೆ,ಪವಾರ್, ಅಖಿಲೇಶ್
Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ
Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’
ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?
JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು