ಶೈಕ್ಷಣಿಕ ಸಾಧನೆಯೊಂದಿಗೆ ಮಾನವೀಯತೆ ರೂಢಿಸಿಕೊಳ್ಳಿ

Team Udayavani, Jul 23, 2017, 8:30 AM IST

roodisikolli.jpg

ಉಡುಪಿ: ಶೈಕ್ಷಣಿಕ ಕ್ಷೇತ್ರದಲ್ಲಿ ಸಾಧನೆ ಮಾಡಿದರೆ ಮಾತ್ರ ಸಾಲದು ಮಾನವೀಯತೆಯನ್ನು ಮೈಗೂಡಿಸಿಕೊಂಡು ಇತರರಿಗೆ ಆದರ್ಶರಾಗಬೇಕು ಎಂದು ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಅಧ್ಯಕ್ಷ ನಾಡೋಜ ಡಾ| ಜಿ. ಶಂಕರ್‌ ಕರೆ ನೀಡಿದರು.

ಅವರು ಶನಿವಾರ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ವತಿಯಿಂದ ಶ್ಯಾಮಿಲಿ ಸಭಾ ಭವನದದಲ್ಲಿ ಜರಗಿದ 2017- 18ನೇ ಸಾಲಿನ ವಿದ್ಯಾರ್ಥಿವೇತನ, ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯ ಹಿರಿಯ ಅಶಕ್ತ ಯಕ್ಷಗಾನ ಕಲಾವಿದರಿಗೆ ಸಹಾಯಧನ ವಿತರಣೆ ಹಾಗೂ ಪ್ರತಿಭಾ ಪುರಸ್ಕಾರ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಸುಮಾರು 25 ಲ. ರೂ. ವೆಚ್ಚದಲ್ಲಿ ಪ್ರತಿಭಾ ಪುರಸ್ಕಾರ ಮತ್ತು ವಿದ್ಯಾರ್ಥಿ ವೇತನ ವಿತರಣೆ ನಡೆಯುತ್ತದೆ ಎಂದು ಹೇಳಿದರು.

ಅಶಕ್ತ ಕಲಾವಿದರಿಗೆ 25,000 ರೂ.
ಜೀವನದ ಉದ್ದಕ್ಕೂ ಮನೋರಂಜನೆ ನೀಡಿ, ಶುದ್ಧ ಕಲಾ ಸಂಪ್ರದಾಯವನ್ನು ಮುಂದುವರಿಸಿಕೊಂಡು ಬರುವ ಯಕ್ಷಗಾನ ಕಲಾವಿದರು ಅಶಕ್ತರಾದಾಗ ಅವರನ್ನು ಸಮರ್ಪಕವಾಗಿ ಗುರುತಿಸು ವುದೂ ಇಲ್ಲ. ಇದರಿಂದ ಪ್ರೇರಿತವಾದ ನಮ್ಮ ಸಂಸ್ಥೆ ಅನೇಕ ವರ್ಷಗಳಿಂದ ಅಶಕ್ತ ಕಲಾವಿದರನ್ನು ಗುರುತಿಸಿ ಸಹಾಯ ಮಾಡುತ್ತಿದೆ. ಈ ಬಾರಿ ಅವರಿಗೆ ನೀಡುವ ನೆರವನ್ನು 10,000 ರೂ. ಬದಲು 25,000 ರೂಪಾಯಿಗೆ ಏರಿಸಲಾಗಿದೆ ಎಂದೂ ಡಾ| ಜಿ. ಶಂಕರ್‌ ಹೇಳಿದರು.

ಅಧ್ಯಕ್ಷತೆ ವಹಿಸಿದ್ದ ಉಡುಪಿ ಜಿಲ್ಲಾ ಮೊಗವೀರ ಯುವ ಸಂಘಟನೆ ಅಧ್ಯಕ್ಷ ಗಣೇಶ್‌ ಕಾಂಚನ್‌ ಮಾತನಾಡಿ, ವಿದ್ಯಾರ್ಥಿ ಗಳು ಮೊಬೈಲ್‌ ಪ್ರೇಮಿ ಗಳಾಗಿ ಭವಿಷ್ಯ ವನ್ನು ಹಾಳು ಮಾಡಿ ಕೊಳ್ಳ ಬೇಡಿ ಎಂದರು. ಉಡುಪಿ ಜಿಲ್ಲಾ ಮೊಗವೀರ ಯುವ ಸಂಘ ಟನೆ ಮಾಜಿ ಅಧ್ಯಕ್ಷ ಜಯ ಸಿ. ಕೋಟ್ಯಾನ್‌, ಮೊಗವೀರ ಮುಖಂಡ ಶಿವಪ್ಪ ಡಿ. ಅಮೀನ್‌ ವೇದಿಕೆಯಲ್ಲಿದ್ದರು.

ಎಸ್‌ಎಸ್‌ಎಲ್‌ಸಿ ಮತ್ತು ಪಿಯುಸಿ ಯಲ್ಲಿ ಸಾಧನೆ ಮಾಡಿದ ಶ್ರೀವತ್ಸ ರಾವ್‌, ಮಂಜೇಶ್‌ ಎಸ್‌., ರಂಜಿತಾ, ಅದಿತಿ ಕಿರಣ್‌, ಉತ್ಪಲ್‌ ಶೆಣೈ, ಎಂ. ರಾಧಿಕಾ ಪೈ, ಶ್ಯಾಮಿಲಿ ಪ.ಪೂ. ಕಾಲೇಜಿನಲ್ಲಿ ಅತ್ಯಧಿಕ ಅಂಕ ಗಳಿಸಿದ ಅಂಜನಾ ಹಾಗೂ ಅಮೃತ ಅವರನ್ನು ಇದೇ ಸಂದರ್ಭದಲ್ಲಿ ಸಮ್ಮಾನಿಸಲಾಯಿತು.

ಹಿರಿಯ ಯಕ್ಷಗಾನ ಕಲಾವಿದರಾದ ಕೊಪ್ಪಾಲೆ ಮುತ್ತ, ಜನ್ನಾಡಿ ಬಸವ ಬಳೆಗಾರ, ಕಪ್ಪಕೆರೆ ಮಹಾದೇವ ಹೆಗಡೆ, ನಾಗೇಶ್‌ ಭಂಡಾರಿ, ಸುಜನ ಸುಳ್ಯ, ಮುಡಿಪು ಕೃಷ್ಣ , ಬೇತ ಕುಂಞಿ ಕುಲಾಲ ಅವರನ್ನು ತಲಾ 25,000 ರೂ. ನೀಡಿ ಸಮ್ಮಾನಿಸಲಾಯಿತು. ಮಟಪಾಡಿ ನಾರಾಯಣ ನಾಯ್ಕ, ಯೋಗೀಶ್‌ ಕುಮಾರ್‌ ಹೆಬ್ಬೆ„ಲ್‌ ಹಾಗೂ ಸುಂದರ ರೈ ಬಜಪೆ ಅವರ ಪರವಾಗಿ ಸಂಬಂಧಿಕರು ಧನಸಹಾಯ ವನ್ನು ಸ್ವೀಕರಿಸಿದರು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಶಾಲಿನಿ ಶಂಕರ್‌, ಶ್ಯಾಮಿಲಿ ಶಂಕರ್‌, ಯಕ್ಷಗಾನ ಕಲಾರಂಗದ ಅಧ್ಯಕ್ಷರಾದ ಕೆ. ಗಣೇಶ್‌ ರಾವ್‌, ಕಾರ್ಯದರ್ಶಿ ಮುರಳಿ ಕಡೆಕಾರು ಉಪಸ್ಥಿತರಿದ್ದರು.

2,290 (ಉಡುಪಿ: 1,590, ಶಿವಮೊಗ್ಗ: 700) ವಿದ್ಯಾರ್ಥಿಗಳಿಗೆ 2017-18ನೇ ಸಾಲಿನ ವಿದ್ಯಾರ್ಥಿ ವೇತನವನ್ನು ವಿತರಿಸಲಾಯಿತು. ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ನ ಸದಸ್ಯ ಆನಂದ ಎಸ್‌.ಕೆ. ಸ್ವಾಗತಿಸಿ, ಮೊಗವೀರ ಸಂಘಟನೆಯ ಪ್ರಧಾನ ಕಾರ್ಯದರ್ಶಿ ರಾಘವೇಂದ್ರ ಸುವರ್ಣ ವಂದಿಸಿದರು. ಯಕ್ಷಗಾನ ಕಲಾರಂಗದ ನಾರಾಯಣ ಹೆಗಡೆ ಕಲಾವಿದರ ಪಟ್ಟಿ ವಾಚಿಸಿದರು. ಕೆ.ಎಂ. ಶಿವರಾಮ ಕಾರ್ಯಕ್ರಮ ನಿರ್ವಹಿಸಿದರು.

ಟಾಪ್ ನ್ಯೂಸ್

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

Davanagere; ಅಧಿಕಾರ ಇರುವವರೆಗೂ ಸಿದ್ದರಾಮಯ್ಯನವರೇ ಮುಖ್ಯಮಂತ್ರಿ: ಎಚ್.ಆಂಜನೇಯ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Padubidri; ಓವರ್ ಟೇಕ್ ತಗಾದೆ: ಬಸ್ಸಿನೊಳಗೆ ನುಗ್ಗಿ ಚಾಲಕನ ಮೇಲೆ ಹಲ್ಲೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

D.K,Udupi ಸಿಎನ್‌ಜಿ ಇಂಧನ ಕೊರತೆ: ಬಂಕ್‌ಗಳ ಮುಂದೆ ನಿತ್ಯ ಕಿ.ಮೀ.ಗಟ್ಟಲೆ ವಾಹನಗಳ ಸಾಲು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Malpe ಸಮುದ್ರಕ್ಕೆ ಬಿದ್ದು ಮೀನುಗಾರ ಸಾವು

Brahmavar

Padubidri: ಅಪಘಾತದ ಗಾಯಾಳು ಸಾವು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Shocking: ಮಸೀದಿಗೆ ನುಗ್ಗಿ ಧರ್ಮಗುರುವನ್ನೇ ದೊಣ್ಣೆಯಿಂದ ಹೊಡೆದು ಕೊಂದ ಮುಸುಕುಧಾರಿಗಳು

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Hubli; ಬಿಜೆಪಿಯವರು 400 ಸೀಟುಗಳನ್ನು ಕೇಳುತ್ತಿರುವುದು ಸಂವಿಧಾನ ಬದಲಿಸಲು: ಎಚ್. ಎಂ.ರೇವಣ್ಣ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Chitradurga; ನ್ಯಾಯಾಲಯಕ್ಕೆ ಶರಣಾದ ಮುರುಘಾ ಶ್ರೀ

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

Video: ಸಹೋದರಿಯ ಮದುವೆಯಲ್ಲಿ ಕುಣಿಯುತ್ತಿದ್ದ ವೇಳೆ ಕುಸಿದು ಬಿದ್ದು 18ರ ಯುವತಿ ಮೃತ್ಯು

ಮದುವೆ ನಂತರವೂ ಸಿನಿಮಾ ಮಾಡ್ತೀನಿ…; ಮಾನ್ವಿತಾ ಕಾಮತ್

Manvita Kamath; ಮದುವೆ ನಂತರವೂ ಸಿನಿಮಾ ಮಾಡ್ತೀನಿ ಎಂದ ಟಗರುಪುಟ್ಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.