Udayavni Special

ಪ್ರವಾಸಿಗರಿಗೆ ಮಲ್ಪೆ  ಬೀಚ್‌ ಮುಕ್ತ : ವಾಟರ್‌ ಸ್ಪೋರ್ಟ್ಸ್ ಆರಂಭ


Team Udayavani, Sep 21, 2021, 7:50 AM IST

Untitled-1

ಮಲ್ಪೆ:  ಆಕರ್ಷಣೀಯ ವಿಹಾರ ತಾಣ ಮಲ್ಪೆ ಬೀಚ್‌ ಇದೀಗ ಪ್ರವಾಸಿಗರಿಗೆ ತೆರೆದುಕೊಂಡಿದೆ. ಮಳೆಗಾಲದಲ್ಲಿ ಸಮುದ್ರಕ್ಕೆ ಇಳಿಯದಂತೆ ಹಾಕಲಾಗಿದ್ದ ತಡೆಬೇಲಿಯನ್ನು ರವಿವಾರ ತೆರವುಗೊಳಿಸಲಾಗಿದೆ.

ಮುನ್ನೆಚ್ಚರಿಕೆ ಕ್ರಮ:

ಸಾಮಾನ್ಯವಾಗಿ ಮಳೆಗಾಲದಲ್ಲಿ ಕಡಲಬ್ಬರ ಹೆಚ್ಚಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಪ್ರವಾಸಿಗರು ನೀರಿಗೆ ಇಳಿಯದಂತೆ ಪ್ರತೀ ವರ್ಷ ಮಳೆಗಾಲದಲ್ಲಿ ಬೀಚ್‌ನ ಉದ್ದಕ್ಕೂ ರಿಫ್ಲೆಕ್ಟೆಡ್‌ ಪಟ್ಟಿ ಮತ್ತು ಫಿಶ್‌ನೆಟ್‌ ತಡೆಬೇಲಿಯನ್ನು ಕಟ್ಟಿ ಮುನ್ನೆಚ್ಚರಿಕೆ ವಹಿಸಲಾಗುತ್ತದೆ.  ಅಲ್ಲಲ್ಲಿ ಎಚ್ಚರಿಕೆ ಫಲಕಗಳನ್ನೂ ಅಳವಡಿಸಲಾಗುತ್ತದೆ. ಅದಾಗಿಯೂ ನಿಯಮ ಉಲ್ಲಂಘಿಸಿ ನೀರಿಗಿಳಿದವರಿಗೆ ದಂಡವನ್ನು ವಿಧಿಸಲಾಗುತ್ತಿತ್ತು. ಇದೀಗ ಬೀಚ್‌ ಬಯಲು ರಂಗ ಮಂದಿರದ ನೇರ ಸಮುದ್ರಕ್ಕಿಳಿಯುವಲ್ಲಿ ಅಪಾ ಕಾರಿ ಸುಳಿಗಳಿರುವುದರಿಂದ ಆ ಪ್ರದೇಶವ‌ನ್ನು ಹೊರತುಪಡಿಸಿ ಉಳಿದೆಲ್ಲಡೆ ತಡೆಬೇಲಿಯನ್ನು ತೆರವು ಮಾಡಲಾಗಿದೆ.

ಪ್ರವಾಸಿಗರ ಕಲರವ:

ರಾಜ್ಯಾದ್ಯಂತ ಅನ್‌ಲಾಕ್‌ ಆದ ಬೆನ್ನಲ್ಲೆ ಕರಾವಳಿಯ ಪ್ರವಾಸಿ ತಾಣಗಳಲ್ಲಿ ಪ್ರವಾಸಿಗರ ಸಂಖ್ಯೆ ಹೆಚ್ಚಾಗುತ್ತಿದೆ. ಚೌತಿ ಹಬ್ಬದ ಬಳಿಕ ಹೊರ ಜಿಲ್ಲೆ ಮತ್ತು ಹೊರ ರಾಜ್ಯಗಳಿಂದ ಸಾವಿರಾರು  ಪ್ರವಾಸಿಗರು ಅಗಮಿಸುತ್ತಿದ್ದಾರೆ. ವೀಕೆಂಡ್‌ಗಳಲ್ಲಿ ಹೆಚ್ಚಿನ ಸಂಖ್ಯೆಯ ಪ್ರವಾಸಿಗರು, ಸಂಜೆ ವೇಳೆಗೆ ಸ್ಥಳೀಯರು ವಿಹಾರಕ್ಕೆ ಬರುವುದರಿಂದ ಜನಸಂದಣಿ ಹೆಚ್ಚಾಗುವುದರೊಂದಿಗೆ ಪಾರ್ಕಿಂಗ್‌ ಏರಿಯಾಗಳಲ್ಲಿ ವಾಹನ ನಿಲುಗಡೆಗೆ ಜಾಗದ ಸಮಸ್ಯೆ ಉಂಟಾಗುತ್ತಿದೆ.

ವಾರದೊಳಗೆ ಎಲ್ಲ  ಸಾಹಸ ಕ್ರೀಡೆಗಳು ಆರಂಭ :

ಲಾಕ್‌ಡೌನ್‌ನಿಂದಾಗಿ ಮಳೆಗಾಲಕ್ಕೆ ಮೊದಲೇ ಸ್ಥಗಿತಗೊಂಡಿದ್ದ ಬೀಚ್‌ ವಾಟರ್‌ ನ್ಪೋರ್ಟ್ಸ್ ರವಿವಾರದಿಂದ ಮತ್ತೆ ಆರಂಭಗೊಂಡಿದೆ. ಪ್ಯಾರಾ ಸೈಲಿಂಗ್‌, ಬನಾನಾ ರ್ಯಾಪ್ಟಿಂಗ್‌, ಬಂಪಿ ರೈಡ್‌, ಝೋರ್ಬಿಂಗ್‌, ಪವರ್‌ ಬೈಕ್‌, ಕ್ರಿಕೆಟ್‌, ಶೂಟಿಂಗ್‌, ಗಾಳಿಪಟ ಮೊದಲಾದವುಗಳೂ ಆರಂಭಗೊಂಡಿದೆ. ಉಳಿದ ಸಾಹಸ ಕ್ರೀಡೆಗಳು ಒಂದು ವಾರದಲ್ಲಿ ಪೂರ್ಣ ಪ್ರಮಾಣದಲ್ಲಿ ಆರಂಭಗೊಳ್ಳಲಿದೆ ಎನ್ನಲಾಗಿದೆ.

ಸ್ವಚ್ಛತ ಕಾರ್ಯ :

ಸುರಕ್ಷತೆಯ ಹಿನ್ನೆಲೆಯಲ್ಲಿ ಈಗಾಗಲೇ ನಾಲ್ವರು ಜೀವರಕ್ಷಕರು ಕರ್ತವ್ಯ ನಿರ್ವಹಿಸುತ್ತಿದ್ದಾರೆ. ಬೀಚ್‌ನ ಮುಖ್ಯ ಭಾಗದ ಸ್ವಚ್ಛತ ಕಾರ್ಯ ನಡೆಸಲಾಗಿದೆ. ಉತ್ತರ ಮತ್ತು ದಕ್ಷಿಣ ಭಾಗದಲ್ಲಿ ಕ್ಲೀನಿಂಗ್‌ ಮಾಡಲಾಗುತ್ತಿದೆ. ಕೆಲವೊಂದು ದೀಪಗಳು ಕೆಟ್ಟು ಹೋಗಿದ್ದು ಅದನ್ನು ದುರಸ್ತಿಗೊಳಿಸಲಾಗುತ್ತದೆ. ಒಟ್ಟಿನಲ್ಲಿ ಅಕ್ಟೋಬರ್‌ 1ರಿಂದ ಬೀಚ್‌ ಪೂರ್ಣ ಪ್ರಮಾಣದಲ್ಲಿ ತೆರೆದುಕೊಳ್ಳಲಿದೆ.

ಟಾಪ್ ನ್ಯೂಸ್

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

ಶತಕೋಟಿ  ಡೋಸ್‌ ದಾಖಲೆ

ಶತಕೋಟಿ ಡೋಸ್‌ ದಾಖಲೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಜನರ ಒಗ್ಗಟ್ಟಿನಿಂದಲೇ ಶತಕೋಟಿ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಲಸಿಕೆ ನೀಡಿಕೆಯಲ್ಲಿ ದೇಶದ ಚರಿತ್ರಾರ್ಹ ಸಾಧನೆ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಸವಾಲಿನ ನಡುವೆಯೂ ಬಿಸಿಯೂಟ ಸಾಂಗ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಮೊದಲ ದಿನ ಸಿಹಿಯೊಂದಿಗೆ ಬಿಸಿಯೂಟ

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಪೊಲೀಸರ ತ್ಯಾಗ, ಬಲಿದಾನ ಸದಾ ಅವಿಸ್ಮರಣೀಯ :  ಜಿಲ್ಲಾಧಿಕಾರಿ ಕೂರ್ಮಾರಾವ್‌

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಮಹರ್ಷಿ ವಾಲ್ಮೀಕಿ ಸಾಧನೆ ಸರ್ವರಿಗೂ ಪ್ರೇರಣೆ:ಡಿಸಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

ಪೆಟ್ರೋಲ್‌ 45 ರೂ.ಗೆ ನೀಡಲು ಸಾಧ್ಯ: ವೀರಪ್ಪ ಮೊಯ್ಲಿ

MUST WATCH

udayavani youtube

Video Viral : ಜಾನಪದ ಶೈಲಿಯ ಹಾಡಿನ ಮೂಲಕ ಒಡ್ಡೋಲಗದ ಆಮಂತ್ರಣ

udayavani youtube

ದುಬಾರಿ ಗಿಫ್ಟ್ ಗಳನ್ನು ಮಾರಿ ತಿಂದರೆ ಪಾಕ್ ಪ್ರಧಾನಿ ಇಮ್ರಾನ್ ಖಾನ್ ?

udayavani youtube

Brazilian Golden Spoon Cherry ಸುಲಭವಾಗಿ ಬೆಳೆಸಿ ಕೈತುಂಬಾ ಸಂಪಾದಿಸಿ

udayavani youtube

ಶ್ರೀರಂಗಪಟ್ಟಣ ಬಾರಿ ಮಳೆಗೆ ಕೊಚ್ಚಿ ಹೋದ ರೈತರ ಬದುಕು

udayavani youtube

ಅಬ್ಬಾ ಬದುಕಿದೆ ಬಡ ಜೀವ ! ಚಿರತೆ ಬಾಯಿಯಿಂದ ತಪ್ಪಿಸಿಕೊಂಡ ಶ್ವಾನದ ಕಥೆ

ಹೊಸ ಸೇರ್ಪಡೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ನಾಲಗೆ ಬಿಗಿ ಹಿಡಿಯಿರಿ: ನೇತಾರರಿಗೆ ಚುನಾವಣ ಆಯೋಗ ಸೂಚನೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಬೆಂಗಳೂರಿನ ವಿಜ್ಞಾನಿಗಳ ಮಹತ್ವದ ಸಂಶೋಧನೆ: ಬಸವನಹುಳು ಹೊಸ ಪ್ರಭೇದ ಪತ್ತೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

ಭಾರತ, ತಾಲಿಬಾನ್‌ ಪ್ರತಿನಿಧಿಗಳ ಚರ್ಚೆ

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

12 ವರ್ಷದ ಬಾಲಕಿಯಿಂದ ಸ್ಕಾಟ್ಲೆಂಡ್‌ ಜೆರ್ಸಿ ವಿನ್ಯಾಸ!

Untitled-1

100 ಕೋಟಿ ಡೋಸ್‌ ದಾಖಲೆ: ಹೊಸ ಮೈಲಿಗಲ್ಲು; ದೇಶಾದ್ಯಂತ ಸಂಭ್ರಮ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.