ಮಲ್ಪೆ -ಸಿಟಿಜನ್‌ ರಸ್ತೆ: ಬಾಯ್ದೆರೆದು ನಿಂತ ಭಾರೀ ಹೊಂಡ

Team Udayavani, Aug 15, 2019, 7:16 AM IST

ಮಲ್ಪೆ: ಮಲ್ಪೆಯಿಂದ ಸಿಟಿಜನ್‌ ಸರ್ಕಲ್ಗೆ ಹೋಗುವ ಪೆಟ್ರೋಲ್ ಬಂಕ್‌ ಸಮೀಪದ ರಸ್ತೆಯಲ್ಲಿ ಭಾರಿ ಪ್ರಮಾಣದ ಹೊಂಡ ನಿರ್ಮಾಣವಾಗಿದ್ದು ವಾಹನ ಮತ್ತು ಜನಸಂಚಾರಕ್ಕೆ ತೊಂದರೆ ಉಂಟಾಗಿದೆ.

ಮಳೆಗೆ ರಸ್ತೆಯ ಜೆಲ್ಲಿ ಎದ್ದು ಹೋಗಿ ಭೀಮಗಾತ್ರದ ಹೊಂಡ ಬಾಯ್ತೆರೆದು ನಿಂತು ಮೃತ್ಯುವಿಗೆ ಅಹ್ವಾನ ನೀಡುವಂತಿದೆ.

ಇದು ಮಲ್ಪೆ ಬೀಚ್ ಸಂಪರ್ಕ ಕಲ್ಪಿಸುವ ಪ್ರಮುಖ ರಸ್ತೆಯಾಗಿದ್ದು, ಮಳೆಗೆ ಕೆಸರು ನೀರು ತುಂಬಿದ್ದು ಹೊಂಡ ತಪ್ಪಿಸಲು ಹೋಗಿ ವಾಹನ ಸವಾರರು ಅಡ್ಡಾದಿಡ್ಡಿ ಚಲಾಯಿಸಿ, ಅಪಘಾತಗಳು ಸಂಭವಿಸು ವಂತಾಗಿದೆ. ಈಗಾಗಲೇ ದ್ವಿಚಕ್ರ ಸವಾರರು ಹಲವು ಬಾರಿ ವಾಹನ ಸಮೇತ ಬಿದ್ದು ಗಾಯಗೊಂಡ ಘಟನೆ ನಡೆದಿವೆ..

ಮಳೆಗಾಲಕ್ಕೆ ಮೊದಲು ಸ್ಥಳೀಯರು ಒಂದಷ್ಟು ಸಿಮೆಂಟ್ ಜಲ್ಲಿ ಹುಡಿ ಹೊಂಡಕ್ಕೆ ಸುರಿದು ಹೊಂಡ ಮುಚ್ಚುವ ಕಾರ್ಯಕ್ಕೆ ಮುಂದಾಗಿದ್ದರೂ ಮಳೆನೀರು ಹರಿದು ಹೋಗಲು ಇಲ್ಲಿನ ಚರಂಡಿಯಲ್ಲಿದ್ದ ಹೂಳನ್ನು ತೆರವುಗೊಳಿಸದ ಕಾರಣ ನೀರು ರಸ್ತೆಯಲ್ಲಿ ಹರಿದು ಮತ್ತೆ ರಸ್ತೆಯಲ್ಲಿ ಹೊಂಡ ಬಿದ್ದಿದೆ. ಸಾರ್ವಜನಿಕರು ಇದರಿಂದ ನಿತ್ಯ ತೊಂದರೆ ಅನುಭವಿಸುವಂತಾಗಿದೆ.

ಇಷ್ಟೊಂದು ಬೃಹದಾಕಾರವಾಗಿ ಹೊಂಡ ಬಿದ್ದರೂ ಸಂಬಂಧಪಟ್ಟವರು ಹೊಂಡ ಮುಚ್ಚುವ ಕಾರ್ಯ ಕೈಗೊಂಡಿಲ್ಲ. ನಗರಸಭೆ ಚುನಾವಣೆ ನಡೆದು ವರುಷ ಕಳೆದರೂ ನಗರಸಭೆಯ ಅಧ್ಯಕ್ಷ, ಉಪಾಧ್ಯಕ್ಷ ಮೀಸಲಾತಿ ನಿಗದಿಯಾಗದ ಕಾರಣ ಸಾರ್ವಜನಿಕರು ಚುನಾಯಿತ ಪ್ರತಿನಿಧಿಗಳನ್ನು ಪ್ರಶ್ನಿಸುವಂತಿಲ್ಲ. ಸಂಬಂಧಪಟ್ಟ ಅಧಿಕಾರಿಗಳು ಇತ್ತ ಗಮನಹರಿಸುತ್ತಿಲ್ಲ ಎಂಬುದು ನಾಗರಿಕರ ಆರೋಪ.

ಹೊಂಡ ಕಾಣದೆ ಅಪಘಾತ

ಸೋಮವಾರ ರಾತ್ರಿ ಬಿದ್ದ ನಿರಂತರ ಮಳೆಯಿಂದಾಗಿ ಮಂಗಳವಾರ ಬೆಳಗ್ಗೆ ಇಲ್ಲಿನ ರಸ್ತೆ ಸಂಪೂರ್ಣ ಜಲಾವೃತವಾಗಿದ್ದು ಇಲ್ಲಿರುವ ಹೊಂಡ ಕಾಣದೆ ಕೆಲವರು ಬೈಕ್‌ ಮೇಲಿಂದ ಬಿದ್ದು ಇನ್ನು ಕೆಲವರು ಮುಂದೆ ಹೋಗಲು ಭಯಪಟ್ಟು ವಾಪಸ್‌ ತೆರಳಿದ್ದಾರೆ.

ಅಪಘಾತದ ಸಾಧ್ಯತೆ ಹೆಚ್ಚಳ

ಇಲ್ಲಿನ ಹೊಂಡದ ಗಾತ್ರ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು ಮುಂದೆ ಪ್ರಾಣಾಪಾಯದ ಸಾಧ್ಯತೆಯೂ ಇದೆ. ಈ ಬಗ್ಗೆ ನಗರಸಭೆಯ ಅಧಿಕಾರಿಗಳಿಗೆ ಸರಿಪಡಿಸುವಂತೆ ಈಗಾಗಲೇ ದೂರು ನೀಡಿದ್ದೇವೆ. ಸಂಬಂಧಪಟ್ಟವರು ತಾತ್ಕಾಲಿಕವಾಗಿ ಹೊಂಡ ಮುಚ್ಚುವ ಕಾಯಕಕ್ಕೆ ಮುಂದಾಗಬೇಕಾಗಿದೆ, -ಮಧು ಬಿ. ಇ., ಮಲ್ಪೆ ಠಾಣಾಧಿಕಾರಿ

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ

  • ಮಡಿಕೇರಿ: ದಕ್ಷಿಣ ಕೊಡಗಿನ ವಿವಿಧಡೆ ಹುಲಿ ಕಾಣಿಸಿಕೊಂಡು ಆತಂಕ ಸೃಷ್ಟಿಯಾಗುತ್ತಿರುವ ವಿಷಯ ಹಸಿರಾಗಿರು ವಾಗಲೇ ಬಿಟ್ಟಂಗಾಲ ಸಮೀಪದ ವಿ.ಬಾಡಗದಲ್ಲಿ ಹುಲಿ ಹೆಜ್ಜೆ...

  • ಈ ವಾರ ಬೆಂಗಳೂರಿನಲ್ಲಿ ಪ್ರತೀವರ್ಷದಂತೆ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವ ಆರಂಭವಾಗುತ್ತಿದೆ. ಸುಮಾರು 200ಕ್ಕಿಂತಲೂ ಹೆಚ್ಚಿನ ದೇಶವಿದೇಶಗಳ ಚಿತ್ರಗಳನ್ನೂ...

  • ಉಡುಪಿ: ಪಡುಅಲೆವೂರು ಶ್ರೀ ದುರ್ಗಾಪರಮೇಶ್ವರೀ ದೇಗುಲದ ನವೀಕರಣ ಬ್ರಹ್ಮಕಲಶಾಭಿಷೇಕ ಪೂರ್ವಕ ಶತಚಂಡಿಕಾ ಯಾಗ, ಶೈವೋ ತ್ಸವ, ರಂಗಪೂಜೆ ಮಹೋತ್ಸವವು ಫೆ. 24ರಿಂದ 29ರ...

  • ಗರ್ಭಧಾರಣೆ ಎಂಬುದು ಶಿಶು ಜನನವನ್ನು ನಿರೀಕ್ಷಿಸುತ್ತಿರುವ ತಾಯಿ ಮಾತ್ರವಲ್ಲದೆ ಇಡೀ ಕುಟುಂಬವೇ ಹರ್ಷೋಲ್ಲಾಸದಲ್ಲಿ ಇರುವ ಸಮಯ. ಗರ್ಭಧಾರಣೆಯ ಒಂಬತ್ತು ತಿಂಗಳುಗಳ...

  • ಪ್ಲಾಸ್ಟಿಕ್‌ ಇಂದು ಮನುಷ್ಯನ ಜೀವನದ ಅವಿಭಾಜ್ಯ ಅಂಗವಾಗಿದೆ ಎಂದರೆ ತಪ್ಪಾಗಲಾರದು. ಕಡಿಮೆ ವೆಚ್ಚದಲ್ಲಿ ತಯಾರಿಕೆ ಹಾಗೂ ಕೈಗೆಟಕುವ ದರದಲ್ಲಿ ಈ ಪ್ಲಾಸ್ಟಿಕ್‌...