ಪುಂಚಲಕಾಡಿನಲ್ಲಿ ಬರ್ಬರ ಕೊಲೆ : ಗೆಳೆಯನನ್ನೇ ಕೊಂದು ಸುಟ್ಟು ಹಾಕಲು ಯತ್ನಿಸಿದ ಕೊಲೆಗಡುಕ


Team Udayavani, Jul 24, 2020, 10:31 PM IST

ಪುಂಚಲಕಾಡಿನಲ್ಲಿ ಬರ್ಬರ ಕೊಲೆ : ಗೆಳೆಯನನ್ನು ಕೊಂದು ಸುಟ್ಟು ಹಾಕಲು ಯತ್ನಿಸಿದ ಕೊಲೆಗಡುಕ

ಕಾಪು: ಉಡುಪಿ ಜಿಲ್ಲೆಯ ಕಾಪು ತಾಲೂಕಿನ ಪುಂಚಲ ಕಾಡು ಎಂಬಲ್ಲಿ ಭೀಕರ ಕೊಲೆ ಘಟನೆಯೊಂದು ನಡೆದಿದೆ.

ಈ ಬರ್ಭರ ಕೊಲೆ ಪ್ರಕರಣದ ವಿಚಾರ ಇಂದು ರಾತ್ರಿ ಬೆಳಕಿಗೆ ಬಂದಿದೆ.

ಕುಡಿದ ಮತ್ತಿನಲ್ಲಿ ತನ್ನ ಸ್ನೇಹಿತನನ್ನೇ ಕೊಲೆಗೈದ ಆರೋಪಿ ಬಳಿಕ ಮೃತದೇಹವನ್ನು ಸುಟ್ಟು ಹಾಕುವ ವಿಫಲ ಯತ್ನವನ್ನು ನಡೆಸಿದ್ದಾನೆ.

ಕಾಪು ತಾಲೂಕಿನ ಕಳತ್ತೂರು ಸಮೀಪದ ಪುಂಚಲಕಾಡಿನಲ್ಲಿ ಶುಕ್ರವಾರ ರಾತ್ರಿ ಈ ಭೀಕರ  ಘಟನೆ ನಡೆದಿದೆ. ಎರ್ಮಾಳು ನಿವಾಸಿ ಹೇಮಂತ್ ಪೂಜಾರಿ (45) ಕೊಲೆಯಾಗಿದ್ದು, ಪುಂಚಲಕಾಡು ನಿವಾಸಿ ಅಲ್ಬರ್ಟ್ ಡಿ ಸೋಜ (50) ಕೊಲೆ ಆರೋಪಿ.

ಆರೋಪಿ ಅಲ್ಬರ್ಟ್ ಕೊಲೆ ನಡೆಸಿದ ಬಳಿಕ ಶವವನ್ನು ಮನೆಯಂಗಳದಲ್ಲೇ ಸುಡಲು ಯತ್ನಿಸಿದ್ದಾನೆ. ಇದಕ್ಕೆ ಕುರುಹಾಗಿ ಮೃತ ಹೇಮಂತ್ ಪೂಜಾರಿಯ ಅರೆಬೆಂದ ಶವ ಸಾಕ್ಷಿಯಾಗಿತ್ತು.

ಕೊಲೆ ಆರೋಪಿಯನ್ನು ಪೊಲೀಸರು ವಶಕ್ಕೆ ತೆಗೆದುಕೊಂಡಿರುವುದಾಗಿ ತಿಳಿದು ಬಂದಿದೆ. ಕೊಲೆಯಾದಾತ ಮತ್ತು ಕೊಲೆಗೈದವ ಇಬ್ಬರೂ ಕೂಡಾ ಸ್ನೇಹಿತರಾಗಿದ್ದು, ಕ್ರಿಮಿನಲ್‌ ಚಟುವಟಿಕೆಯನ್ನು ಹೊಂದಿದವರೂ ಆಗಿದ್ದಾರೆ.

ಇಬ್ಬರೂ ಜತೆಗೂಡಿ ಕುಡಿಯುವ ಚಟ ಹೊಂದಿದ್ದರು. ಶುಕ್ರವಾರ ಸಂಜೆ ಕ್ಷುಲ್ಲಕ ಕಾರಣವೊಂದಕ್ಕೆ ಇಬ್ಬರ ನಡುವೆ ಜಗಳವುಂಟಾಗಿದ್ದು, ಬಳಿಕ ಅದು ಕೊಲೆಯಲ್ಲಿ ಅಂತ್ಯ ಕಂಡಿದೆ.

ಕೊಲೆ ಗಡುಕ ಆರೋಪಿಯು ಪ್ರಕರಣವನ್ನು ಮುಚ್ಚಿ ಹಾಕುವ ಉದ್ದೇಶದಿಂದ ಮನೆಯ ಅಂಗಳದಲ್ಲೇ ಮರದ ತುಂಡುಗಳು ಮತ್ತು ಒಣಗಿದ ಸೋಗೆ ಮಡಲುಗಳನ್ನು ಹಾಕಿ ಶವವನ್ನು ಸುಟ್ಟು ಹಾಕಲು ಯತ್ನಿಸಿದ್ದಾನೆ.

ಈ ಸಂದರ್ಭದಲ್ಲಿ ಘಟನೆಗೆ ಸಂಬಂಧಿಸಿದಂತೆ ಸ್ಥಳೀಯರ ಮೂಲಕ ಮಾಹಿತಿ ಪಡೆದುಕೊಂಡ ಪೊಲೀಸರು ಸ್ಥಳಕ್ಕೆ ಆಗಮಿಸಿ ಇದೀಗ ಈ ಪ್ರಕರಣವನ್ನು ಭೇದಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಘಟನಾ ಸ್ಥಳಕ್ಕೆ ಉಡುಪಿ ಎಸ್ಪಿ ವಿಷ್ಣುವರ್ಧನ್, ಡಿವೈಎಸ್ಪಿ ಭರತ್ ರೆಡ್ಡಿ, ಕಾಪು ಸರ್ಕಲ್ ಮಹೇಶ್ ಪ್ರಸಾದ್, ಶಿರ್ವ ಎಸ್ಸೈ ಶ್ರೀ ಶೈಲ ಮುರಗೋಡ ಮೊದಲಾದವರು ಭೇಟಿ ನೀಡಿದ್ದಾರೆ.

ಟಾಪ್ ನ್ಯೂಸ್

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

7-modi

ರಾಜ್ಯದಲ್ಲಿ ಕಾಂಗ್ರೆಸ್ ಸರಕಾರ ಬಂದ ಬಳಿಕ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ: ಪ್ರಧಾನಿ ಮೋದಿ

1-wqe-qweq

Congress Protest; ಕೇಳಿದ್ದು 18,172 ಕೋಟಿ ರೂ. ಕೊಟ್ಟಿದ್ದು 3,400 ಕೋಟಿ ರೂ. ಮಾತ್ರ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

Bidar; ಕರ್ನಾಟಕಕ್ಕೆ ಬರಲು ಮೋದಿಗೆ ಯಾವುದೇ ನೈತಿಕತೆ ಇಲ್ಲ: ಸುರ್ಜೇವಾಲಾ

6-Fibromyalgia

Fibromyalgia: ಫೈಬ್ರೊಮಯಾಲ್ಜಿಯಾ ಜತೆಗೆ ಜೀವನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Lok Sabha Polls: ಸ್ಟ್ರಾಂಗ್‌ ರೂಂಗಳಲ್ಲಿ ಮತಯಂತ್ರಗಳು ಸುಭದ್ರ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Ajekar ಕೊಳವೆ ಬಾವಿ ಕೊರೆಯುವ ವಿಚಾರ: ಹಲ್ಲೆ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

Road Mishap ಪಡುಬಿದ್ರಿ: ಪಾದಚಾರಿಗೆ ಬೈಕ್‌ ಢಿಕ್ಕಿ: ಇಬ್ಬರಿಗೆ ಗಾಯ

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-qewqewq

BJP Rally; ರಾಮ ಮಂದಿರ ನಿರ್ಮಾಣಕ್ಕೆ 56 ಇಂಚಿನ ಎದೆ ಬೇಕಾಗಿತ್ತು: ಪ್ರಧಾನಿ ಮೋದಿ

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Chikkaballapur: 13.63 ಕೋಟಿ ರೂ. ಚುನಾವಣಾ ಅಕ್ರಮ ಮದ್ಯ ಜಪ್ತಿ!

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Netherlands Trip: ಹೀಗೊಂದು ನಿಶ್ಶಬ್ದ ಪಯಣ!

Netherlands Trip: ಹೀಗೊಂದು ನಿಶ್ಶಬ್ದ ಪಯಣ!

10

ಕುತ್ತಿಗೆಗೇ ಬಂತು… ಕುತ್ತಿಗೆ ಸ್ಪ್ರಿಂಗ್‌ ಇದ್ದಂತೆ…

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.