Karkala ಕೆರೆಗೆ ಹಾರಿ ವ್ಯಕ್ತಿ ಆತ್ಮಹತ್ಯೆ
Team Udayavani, Aug 30, 2023, 10:01 PM IST
ಕಾರ್ಕಳ: ಕೆರೆಗೆ ಹಾರಿ ವ್ಯಕ್ತಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಮಾಳ ಗ್ರಾಮದಲ್ಲಿ ನಡೆದಿದೆ.
ಮಾಳ ಗ್ರಾಮದ ನೆಕ್ಕರ ಪಲ್ಕೆ ನಿವಾಸಿ ಕೊರಗ ಮೂಲ್ಯ (73) ಮೃತ ವ್ಯಕ್ತಿ. ಇವರು ತನ್ನ ಪತ್ನಿಯ ಮರಣದ ಅನಂತರ ಮಾನಸಿಕವಾಗಿ ನೊಂದುಕೊಂಡಿದ್ದು, ಬುಧವಾರ ತಮ್ಮ ತೋಟದಲ್ಲಿರುವ ಕೆರೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎನ್ನಲಾಗಿದೆ.
ಕಾರ್ಕಳ ಗ್ರಾಮಾಂತರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.