ಉಡುಪಿ: ಮಾಸ್ಕ್ ಧರಿಸದವರಿಗೆ ಕಡ್ಡಾಯ ಪರೀಕ್ಷೆ
Team Udayavani, Aug 20, 2021, 8:00 AM IST
ಉಡುಪಿ: ಕೋವಿಡ್ ಹರಡು ವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಇನ್ನು ಮುಂದೆ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲು ಜಿಲ್ಲಾಡಳಿತ ನಿರ್ಧರಿಸಿದೆ.
ಸಾರ್ವಜನಿಕರು, ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವುದು, ಸಾಮಾಜಿಕ ಅಂತರ ಕಾಪಾಡುವುದು ಹಾಗೂ ಇನ್ನಿತರ ಕೋವಿಡ್-19 ರ ನಿಯಮಗಳನ್ನು ಕಟ್ಟುನಿಟ್ಟಾಗಿ ಪಾಲಿಸುವುದು ಅತೀ ಅನಿವಾರ್ಯವಾಗಿದೆ. ಹೀಗಾಗಿ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸುವವಂತೆ ಮಾಡಲು, ಇನ್ನು ಮುಂದೆ ಮಾಸ್ಕ್ ಧರಿಸದೆ ಸಾರ್ವಜನಿಕ ಸ್ಥಳಗಳಲ್ಲಿ ಓಡಾಡುವ ಜನರನ್ನು ಕಡ್ಡಾಯವಾಗಿ ಕೋವಿಡ್-19 ಪರೀಕ್ಷೆಗೆ ಒಳಪಡಿಸಲಾಗುವುದು. ಪ್ರತಿರೋಧ ಒಡುವವರ ವಿರುದ್ಧ ಪೊಲೀಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣ ದಾಖಲಿಸಲಾಗುವುದು ಮತ್ತು ಕಠಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಜಿ. ಜಗದೀಶ್ ಎಚ್ಚರಿಸಿದ್ದಾರೆ.
ಪ್ರಾಥಮಿಕ ಸಂಪರ್ಕಿತರು :
ಜಿಲ್ಲೆಯಲ್ಲಿ ಕೋವಿಡ್19 ಹರಡುವಿಕೆಯನ್ನು ಪರಿಣಾಮಕಾರಿಯಾಗಿ ತಡೆಗಟ್ಟಲು ಹಾಗೂ ಜಿಲ್ಲೆಯ ಜನರನ್ನು ಕೋವಿಡ್ ನಿಂದ ರಕ್ಷಿಸುವ ಉದ್ದೇಶದಿಂದ ,ಇನ್ನು ಮುಂದೆ ಕಂಟೈನ್ಮೆಂಟ್ ವಲಯಗಳಲ್ಲಿ ವಾಸಿಸುವವರನ್ನು ಪ್ರಾಥಮಿಕ ಸಂಪರ್ಕಿತರು ಎಂದು ಪರಿಗಣಿಸಿ, ಅಂತಹ ಎಲ್ಲ ಪ್ರಾಥಮಿಕ ಸಂಪರ್ಕಿತ ವ್ಯಕ್ತಿಗಳನ್ನು ಕಡ್ಡಾಯವಾಗಿ ಕೋವಿಡ್ 19 ಪರೀಕ್ಷೆಗೆ ಒಳಪಡಿಸಲಾಗುವುದು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ
Kapu Assembly constituency: ನಕಲಿ ಮತದಾನ;ಆರೋಪ
Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ