ಜಿ. ಶಂಕರ್‌ ಮಣಿಪಾಲ ಆರೋಗ್ಯ ಕಾರ್ಡ್‌ಗಳ ನೋಂದಣಿ ಆರಂಭ

Team Udayavani, Jan 16, 2023, 12:17 AM IST

ಜಿ. ಶಂಕರ್‌ ಮಣಿಪಾಲ ಆರೋಗ್ಯ ಕಾರ್ಡ್‌ಗಳ ನೋಂದಣಿ ಆರಂಭ

ಉಡುಪಿ: ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಯೋಜನೆ – 2023 ನೋಂದಣಿ ಕಾರ್ಯ ಆರಂಭಗೊಂಡಿದೆ.

ಅಂಬಲಪಾಡಿ ಜಿ. ಶಂಕರ್‌ ಫ್ಯಾಮಿಲಿ ಟ್ರಸ್ಟ್‌ ಪ್ರವರ್ತಕರಾದ ಜಿ. ಶಂಕರ್‌ ಅವರು ಕಸ್ತೂರ್ಬಾ ಆಸ್ಪತ್ರೆ ಮತ್ತು ಮಾಹೆ ಮಣಿಪಾಲ ಸಹಕಾರದೊಂದಿಗೆ ರೂಪಿಸಲಾದ ಜಿ. ಶಂಕರ್‌ ಮಣಿಪಾಲ್‌ ಆರೋಗ್ಯ ಸುರಕ್ಷಾ ಕಾರ್ಡ್‌ ಯೋಜನೆ ಇದಾಗಿದೆ. ಎಲ್ಲ ಬಡ ಜನರ ಆರೋಗ್ಯ ಸುರಕ್ಷೆಗಾಗಿ ಹಮ್ಮಿಕೊಂಡ ಈ ಕಾರ್ಡ್‌ಗಳನ್ನು ಮೊಗವೀರ ಯುವ ಸಂಘಟನೆ ಉಡುಪಿ ಹಾಗೂ ಇದರ ಘಟಕಗಳ ಮೂಲಕ ನೋಂದಣಿ ಮಾಡಿ ವಿತರಿಸಲಾಗುವುದು. ಈ ಯೋಜನೆಯು ಮಣಿಪಾಲ ಸಮೂಹ ಆಸ್ಪತ್ರೆಗಳಿಗೆ ಮಾತ್ರ ಸೀಮಿತವಾಗಿರುತ್ತದೆ. ಜನರಲ್‌ ವಾರ್ಡ್‌ಗಳಿಗೆ ಒಳರೋಗಿಗಳಾಗಿ ದಾಖಲಾತಿ ಪಡೆಯುವ ಯಾವುದೇ ಕಾಯಿಲೆಗಳ ರೋಗಿಯ ಆಸ್ಪತ್ರೆಯ ಒಟ್ಟು ಬಿಲ್‌ ಮೊತ್ತದಲ್ಲಿ ಶೇ. 35 ರಿಯಾಯಿತಿ ಸವಲತ್ತು ಹೊಂದಿದೆ.

ಕೆಎಂಸಿ ಆಸ್ಪತ್ರೆ ಮಣಿಪಾಲ, ಅತ್ತಾವರ
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.30 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ. 20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.12ರ ವರೆಗೆ ರಿಯಾಯಿತಿ.

ಟಿಎಂಎ ಪೈ ಆಸ್ಪತ್ರೆ ಉಡುಪಿ/ಟಿಎಂಎ ಪೈ ರೋಟರಿ ಆಸ್ಪತ್ರೆ ಕಾರ್ಕಳ
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ. 20 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ. 20 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ. 20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ. 20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ.10ರವರೆಗೆ ರಿಯಾಯಿತಿ.

ದುರ್ಗಾ ಸಂಜೀವಿನಿ ಮಣಿಪಾಲ ಆಸ್ಪತ್ರೆ ಕಟೀಲು
ತಜ್ಞ ಅಥವಾ ಸೂಪರ್‌ ಸ್ಪೆಷಾಲಿಸ್ಟ್‌ ವೈದ್ಯರ ಸಮಾಲೋಚನೆಯಲ್ಲಿ ಶೇ.50 ರಿಯಾಯಿತಿ, ಪ್ರಯೋಗಾಲಯ ಪರೀಕ್ಷೆಯಲ್ಲಿ ಶೇ.20 ರಿಯಾಯಿತಿ, ಸಿಟಿ, ಎಂಆರ್‌ಐ, ಅಲ್ಟ್ರಾ ಸೌಂಡ್‌ಗಳಲ್ಲಿ ಶೇ.20 ರಿಯಾಯಿತಿ, ಹೊರರೋಗಿ ವಿಭಾಗಗಳಲ್ಲಿ ಮತ್ತು ಮಧುಮೇಹ ಪಾದ ತಪಾಸಣೆಯಲ್ಲಿ ಶೇ.20 ರಿಯಾಯಿತಿ, ಔಷಧಾಲಯಗಳಲ್ಲಿ ಶೇ. 10ರ ವರೆಗೆ ರಿಯಾಯಿತಿ.

ಯಾವುದೇ ಷರತ್ತುಗಳಿಲ್ಲದೆ ಎಲ್ಲರಿಗೂ ಹೊಸದಾಗಿ ಕಾರ್ಡ್‌ ಪಡೆಯಲು ಈ ಯೋಜನೆಯಲ್ಲಿ ಅವಕಾಶವಿದೆ. ಈ ಹಿಂದೆ ಜಿ. ಶಂಕರ್‌ ಮಣಿಪಾಲ ಆರೋಗ್ಯ ಸುರಕ್ಷಾ ಕಾರ್ಡ್‌ ಹೊಂದಿದ್ದ ಯಾವುದೇ ಕುಟುಂಬ/ಸದಸ್ಯರೂ ಹೊಸ ಕಾರ್ಡ್‌ ಪಡೆಯಬಹುದಾಗಿದೆ. ನೋಂದಣಿಗೆ ಒಳಪಡುವ ಎಲ್ಲ ಸದಸ್ಯರ ಆಧಾರ್‌ ಕಾರ್ಡ್‌ ಮತ್ತು ಕುಟುಂಬದ ರೇಷನ್‌ ಕಾರ್ಡ್‌ ಪ್ರತಿಯೊಂದಿಗೆ ಜ.17ರಿಂದ 31ರ ಒಳಗೆ ಮೊಗವೀರ ಯುವ ಸಂಘಟನೆಯ ಜಿಲ್ಲಾ ಕಚೇರಿ, ಮಾಧವ ಮಂಗಲ ಸಮುದಾಯ ಭವನ, ಶ್ಯಾಮಿಲಿ ಸಭಾಂಗಣ ಅಂಬಲಪಾಡಿ ಅಥವಾ ಮೊಗವೀರ ಯುವ ಸಂಘಟನೆಯ ಘಟಕಗಳನ್ನು ಸಂಪರ್ಕಿಸಿ ಈ ಯೋಜನೆಯನ್ನು ನೋಂದಾಯಿಸಿಕೊಂಡು ಸೌಲಭ್ಯ ಪಡೆಯಬಹುದು.

ಹೆಚ್ಚಿನ ಮಾಹಿತಿಗೆ ದೂ.ಸಂ.: 0820-2532099 ಸಂಪರ್ಕಿಸಬಹುದು ಎಂದು ಮೊಗವೀರ ಯುವ ಸಂಘಟನೆಯ ಜಿಲ್ಲಾಧ್ಯಕ್ಷ ರಾಜೇಂದ್ರ ಹಿರಿಯಡ್ಕ ತಿಳಿಸಿದ್ದಾರೆ.

ಒಂದು ಕುಟುಂಬ ಅಥವಾ ಕುಟುಂಬದ ಸದಸ್ಯರು ಯಾವುದೇ ಒಂದು ಘಟಕದಲ್ಲಿ ರಿಯಾಯಿತಿ ಸೌಲಭ್ಯ ಯೋಜನೆಯನ್ನು ನೋಂದಾಯಿಸಿಕೊಳ್ಳಬಹುದು. ಒಂದಕ್ಕಿಂತ ಹೆಚ್ಚು ಘಟಕಗಳಲ್ಲಿ ನೋಂದಾಯಿಸಿಕೊಂಡರೆ ಅಂತಹ ವ್ಯಕ್ತಿಯ ಅಥವಾ ಕುಟುಂಬದ ರಿಯಾಯಿತಿ ಸೌಲಭ್ಯ ಯೋಜನೆಯ ಸದಸ್ಯತ್ವವನ್ನು ರದ್ದುಪಡಿಸಲಾಗುವುದು. ಈ ಯೋಜನೆಯ ಸವಲತ್ತುಗಳು ಜನರಲ್‌ ವಾರ್ಡ್‌ ಗಳಿಗೆ ಮಾತ್ರ ಸೀಮಿತವಾಗಿದೆ.

ಟಾಪ್ ನ್ಯೂಸ್

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mollywood: ಸೂಪರ್‌ ಹಿಟ್ ‘ಮಂಜುಮ್ಮೆಲ್ ಬಾಯ್ಸ್’ ಓಟಿಟಿ ರಿಲೀಸ್‌ ಗೆ ಡೇಟ್‌ ಫಿಕ್ಸ್

Mamata Banerjee: ಹೆಲಿಕಾಪ್ಟರ್ ಹತ್ತುವಾಗ ಬಿದ್ದು ಮತ್ತೆ ಗಾಯ ಮಾಡಿಕೊಂಡ ಮಮತಾ ಬ್ಯಾನರ್ಜಿ

Mamata Banerjee: ಮತ್ತೆ ಎಡವಿ ಬಿದ್ದ ಮಮತಾ ಬ್ಯಾನರ್ಜಿ… ಕಾಲಿಗೆ ಸಣ್ಣ ಗಾಯ

siddaramaiah

Kalaburagi; ಪ್ರಧಾನಿ ಮೋದಿ ಸುಳ್ಳು ಮಾರಾಟ ಮಾಡುವ ವ್ಯಾಪಾರಿ: ಸಿಎಂ ಸಿದ್ದರಾಮಯ್ಯ

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ʼರಾಮಾಯಣʼ ಸೆಟ್‌ನಿಂದ ʼರಾಮ – ಸೀತೆʼಯಾದ ರಣ್ಬೀರ್-‌ ಸಾಯಿಪಲ್ಲವಿ ಪಾತ್ರದ ಫೋಟೋ ಲೀಕ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

2-padubidri

Padubidri: ಹೆದ್ದಾರಿ ಮಧ್ಯೆ ಕೆಟ್ಟು ನಿಂತ ಲಾರಿ; ಸಂಚಾರಕ್ಕೆ ಅಡಚಣೆ

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

“ಪಾರಿಜಾತದ ಸುಗಂಧ ಮಾತನಾಡಿದೆ…”: ಶಿವುಲಿ ಹೂವಿನ ಬಗ್ಗೆ ನಿಮಗೆಷ್ಟು ಗೊತ್ತು?

19

Shahapura: ಎರಡು ಕೆಟ್ಟ ಕಾನೂನು ಜಾರಿಗೆ ಕಾಂಗ್ರೆಸ್ ಸಿದ್ಧತೆ: ಯತ್ನಾಳ ಆರೋಪ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

Desi Swara: ಮಸ್ಕತ್‌- ಮಕ್ಕಳ ಕನ್ನಡ ಭಾಷಾ ಪಾಠ ಶಾಲೆ

18-

UV Fusion: ತೇರು ಬೀದಿಗೆ ಬಂದಿದೆ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

ಬಹ್ರೈನ್‌: ಕೆಎನ್‌ಆರ್‌ಐ ನಿಯೋಗ -ಭಾರತ ರಾಯಭಾರಿ ಭೇಟಿ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.