ಅಭಿವೃದ್ಧಿಯತ್ತ ಮಣ್ಣಪಳ್ಳ ಕೆರೆ

Team Udayavani, May 22, 2019, 6:20 AM IST

mannapalla

ಉಡುಪಿ: ಮಣಿಪಾಲದ ಮಣ್ಣಪಳ್ಳ ಕೆರೆಯ ಅಭಿವೃದ್ಧಿಗೆ ಜಿಲ್ಲಾಡಳಿತ ಯೋಜನೆ ರೂಪಿಸಿದೆ. ಈ ಪ್ರದೇಶವನ್ನು ತುರ್ತು ಸಂದರ್ಭದಲ್ಲಿ ನಗರಕ್ಕೆ ನೀರು ಪೂರೈಸುವ ಜಲಮೂಲವನ್ನಾಗಿಸುವ ಜತೆಗೆ ಸಾರ್ವಜನಿಕರಿಗೆ ವಿವಿಧ ಸೌಲಭ್ಯಗಳನ್ನು ಒದಗಿಸುವ ನಿಟ್ಟಿನಲ್ಲಿ 2.50 ಕೋ.ರೂ.ವೆಚ್ಚದಲ್ಲಿ ಅಭಿವೃದ್ಧಿ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲು ಸಿದ್ಧತೆ ನಡೆಸಲಾಗಿದೆ.

ಈ ಬಗ್ಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಮಣ್ಣಪಳ್ಳ ಅಭಿವೃದ್ಧಿ ಸಮಿತಿ ಈ ಯೋಜನೆಗೆ ಅನುಮತಿ ನೀಡಿದ್ದು, ಅಂದಾಜುಪಟ್ಟಿ ತಯಾರಿಸುವಂತೆ ಸಮಿತಿಯು ನಗರಾಭಿವೃದ್ಧಿ ಪ್ರಾಧಿಕಾರಕ್ಕೆ ಸೂಚನೆ ನೀಡಿದೆ. ಅದರಂತೆ ಕಾಮಗಾರಿ ಪರಿಶೀಲನೆ ನಡೆಸಿ ಅಂದಾಜು ಪಟ್ಟಿ ಸಿದ್ಧಗೊಳ್ಳಲಿದೆ.

ನಗರಾಭಿವೃದ್ಧಿ ಪ್ರಾಧಿಕಾರವು 60 ಲ.ರೂ. ಅಂದಾಜು ಪಟ್ಟಿ ತಯಾರಿಸಿದೆ. ಕೆರೆಯ ಹೂಳು ತೆಗೆಯುವುದು ಮತ್ತು ಲ್ಯಾಟರೈಟ್‌ ಕಲ್ಲನ್ನು ಅಗೆಯಲಾಗುತ್ತದೆ. ಈ ಮೂಲಕ ಕೆರೆಯನ್ನು ಇನ್ನಷ್ಟು ಆಳ ಮಾಡಿ ನೀರಿನ ಸಂಗ್ರಹ ಹೆಚ್ಚಿಸಲಾಗುತ್ತದೆ.

ಮಣ್ಣಪಳ್ಳ ಕೆರೆಯ ಸುತ್ತ ಈಗಾಗಲೆ ನಿರ್ಮಾಣವಾಗಿರುವ ಸುಮಾರು 3 ಕಿ.ಮೀ. ಉದ್ದದ ವಾಕಿಂಗ್‌ ಟ್ರ್ಯಾಕ್‌ ವಿಸ್ತರಿಸಲು ಯೋಜಿಸಲಾಗಿದೆ. ಕೆರೆಯ ಸುತ್ತ ವಿದ್ಯುದೀಕರಣದ ವ್ಯವಸ್ಥೆ ಕಲ್ಪಿಸಲಾಗುತ್ತದೆ. ಕೆರೆಗೆ ಪೈಪ್‌ಲೈನ್‌ ವ್ಯವಸ್ಥೆ ಮಾಡಿ ನೀರು ಸರಬರಾಜು ಕಾಮಗಾರಿ ಕೂಡ ನಡೆಸಲಾಗುತ್ತದೆ.
ಇದಕ್ಕಾಗಿ 98 ಲ.ರೂ. ಅಂದಾಜು ಮೊತ್ತ ಮೀಸಲಿರಿಸಲಾಗಿದೆ. ವಾಕಿಂಗ್‌ ಟ್ರ್ಯಾಕ್‌ ಪಕ್ಕದಲ್ಲೇ ಜಿಲ್ಲೆಯಲ್ಲೇ ಪ್ರಥಮ ಬಾರಿಗೆ ಕೆರೆಯ ಸುತ್ತ 59 ಲ.ರೂ. ವೆಚ್ಚದಲ್ಲಿ ಸುಮಾರು 4 ಕಿ.ಮೀ. ಉದ್ದದ ಸೈಕ್ಲಿಂಗ್‌ ಟ್ರ್ಯಾಕ್‌ ನಿರ್ಮಿಸಲಾಗುತ್ತಿದೆ.

ಬೃಹತ್‌ಕೆರೆ
ಮಣ್ಣಪಳ್ಳ ಕೆರೆ ಅಂತರ್ಜಲ ಮಟ್ಟವನ್ನು ವೃದ್ಧಿಸಿ ತನ್ನದೇ ಆದ ವಿಶಿಷ್ಟ ಕೊಡುಗೆ ನೀಡಿದೆ. ಸುಮಾರು 123 ಎಕರೆ ವ್ಯಾಪ್ತಿ ಹೊಂದಿದ್ದು, ಸುತ್ತಲಿನ ಪ್ರದೇಶದಲ್ಲಿ ಸುರಿಯುವ ಮಳೆ ನೀರು ನೈಸರ್ಗಿಕವಾಗಿ ಹರಿದು ಸುಮಾರು 44 ಎಕರೆ ಪ್ರದೇಶದಲ್ಲಿ ಸಂಗ್ರಹಗೊಂಡು ಬೃಹತ್‌ಕೆರೆಯಾಗಿ ನಿರ್ಮಾಣಗೊಂಡಿದೆ. ಮಳೆಗಾಲದಲ್ಲಿ ಅಪಾರ ಸಂಖ್ಯೆಯ ಪ್ರವಾಸಿಗರನ್ನು ಆಕರ್ಷಿಸುತ್ತಿದೆ. ಈ ಕೆರೆ 29.90 ಹೆಕ್ಟೇರ್‌ ವಿಸ್ತೀರ್ಣ ಹೊಂದಿದೆ. ಈ ಪ್ರದೇಶಕ್ಕೆ ಪ್ರತಿನಿತ್ಯ ನೂರಾರು ಮಂದಿ ವಿಶ್ರಾಂತಿ, ವಾಕಿಂಗ್‌ ಮಾಡಲು ಆಗಮಿಸುತ್ತಿದ್ದಾರೆ.

ಪ್ರಸ್ತಾವನೆ ಸಲ್ಲಿಕೆ
ಮಣ್ಣಪಳ್ಳ ಕೆರೆಯ ಅಭಿವೃದ್ಧಿ ಬಗ್ಗೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ. ನಗರಸಭೆ ಮತ್ತು ನಗರಾಭಿವೃದ್ಧಿ ಪ್ರಾಧಿಕಾರದ ವತಿಯಿಂದ ಕೆರೆಯ ಹೂಳೆತ್ತುವಿಕೆ ಕಾಮಗಾರಿ ನಡೆಯಲಿದೆ.
-ವಿದ್ಯಾಕುಮಾರಿ, ಎಡಿಸಿ

ಟಾಪ್ ನ್ಯೂಸ್

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

Politics: ಡಿ.ಕೆ.ಶಿವಕುಮಾರ್‌ ಸಿಎಂ ಆಗುತ್ತಾರೆ: ಎಚ್‌.ವಿಶ್ವನಾಥ್‌

13

Politics: ಸಿದ್ದರಾಮಯ್ಯ ಸರಕಾರ ಬಂದ ಬಳಿಕ ಮುಸ್ಲಿಂ ಮೂಲಭೂತವಾದಿಗಳು ಹೆಚ್ಚಳ; ಅಶೋಕ್‌

1-qeqeqwe

Congress ಸರ್ಕಾರ ಪತನ ದೇವೇಗೌಡರ ಭ್ರಮೆ: ಸಿದ್ದರಾಮಯ್ಯ ವಾಗ್ದಾಳಿ

1-aaa-1

Rain; ರಾಜ್ಯದ ವಿವಿಧೆಡೆ ಸಿಡಿಲಬ್ಬರದ ಮಳೆ; ಕುಷ್ಟಗಿಯಲ್ಲಿ ರೈತ ಬಲಿ, ಅಪಾರ ನಷ್ಟ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

LS Polls 2024: ಸುಮಲತಾ ಪ್ರಚಾರಕ್ಕೆ ಬರುವುದು ರಾಜ್ಯ ನಾಯಕರ ತೀರ್ಮಾನ: ನಿಖಿಲ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

R. Ashok: ಬಿಜೆಪಿಯಲ್ಲಿ ಈಶ್ವರಪ್ಪನವರದು ಮುಗಿದ ಅಧ್ಯಾಯ: ಅಶೋಕ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

Dr. K Sudhakar: ಭ್ರಷ್ಟಾಚಾರದಿಂದಲೇ ಸಿದ್ದು ಸೋತಿದ್ದಾ?: ಸುಧಾಕರ್‌

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

CN Ashwath Narayan: ಕಾಂಗ್ರೆಸ್‌ನಿಂದ ನಿತ್ಯ ತುಷ್ಟೀಕರಣ ರಾಜಕಾರಣ; ಅಶ್ವತ್ಥನಾರಾಯಣ

1-qwwqeqw

Thirthahalli;ಮಳೆಯ ಅಬ್ಬರಕ್ಕೆ ಮೊದಲ ಬಲಿ: ಆಗುಂಬೆ ಘಾಟಿಯಲ್ಲಿ ಟ್ರಾಫಿಕ್ ಜಾಮ್

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.