ಮಾತೃಭಾಷಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ಅಗತ್ಯ: ಶೋಭಾ ಕರಂದ್ಲಾಜೆ

ಬೇಳೂರು: ನೆರವಿನ ಕೈಗಳು ಸಮಾರಂಭ ಉದ್ಘಾಟನೆ

Team Udayavani, Jun 11, 2019, 6:00 AM IST

1006TKE1IMP

ತೆಕ್ಕಟ್ಟೆ: ಪೋಷಕರು ಮಕ್ಕಳಿಗೆ ಮಾತೃಭಾಷಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ ನೀಡಬೇಕಾದ ಅನಿವಾರ್ಯತೆ ಇದೆ. ಕನ್ನಡ ಮಾಧ್ಯಮದಲ್ಲಿ ಕಲಿತ ವಿದ್ಯಾರ್ಥಿಗಳಿಗೆ ಸ್ವಂತಿಕೆ ಇರುತ್ತದೆ ಈ ನಿಟ್ಟಿನಲ್ಲಿ ಮಕ್ಕಳ ಆಸಕ್ತಿಗೆ ಅನುಗುಣವಾಗಿ ಕಲಿಕಾ ವಾತಾವರಣ ನಿರ್ಮಿಸಬೇಕಾಗಿದೆ ಎಂದು ಸಂಸದೆ ಶೋಭಾ ಕರಂದ್ಲಾಜೆ ಹೇಳಿದರು.

ಬೇಳೂರು ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಗ್ರಾಮ ಪಂಚಾಯತ್‌ ಬೇಳೂರು, ಸಾರ್ವಜನಿಕ ಶಿಕ್ಷಣ ಇಲಾಖೆ ಉಡುಪಿ, ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿ ಮತ್ತು ಸಮನ್ವಯಾಧಿಕಾರಿ ಕಚೇರಿ ಕುಂದಾಪುರ ಹಾಗೂ ಸರಕಾರಿ ಪ್ರೌಢಶಾಲೆ ಬೇಳೂರು, ಸರಕಾರಿ ಪ್ರಾಥಮಿಕ ಶಾಲೆ ಬೇಳೂರು, ಬಡಾಬೆಟ್ಟು, ಗುಳ್ಳಾಡಿ ಶಾಲೆಗಳ ಸಹಯೋಗದೊಂದಿಗೆ ನೆರವಿನ ಕೈಗಳು ಬೇಳೂರು ಗ್ರಾ.ಪಂ.ವ್ಯಾಪ್ತಿಯ ಶಾಲಾ ವಿದ್ಯಾರ್ಥಿಗಳಿಗೆ ಅನುಕೂಲಕರವಾಗುವಂತೆ ಉಚಿತ ಶಾಲಾ ಬಸ್‌ ಹಾಗೂ ಕುಡಿಯುವ ನೀರಿನ ಘಟಕ ಹಸ್ತಾಂತರ ಮತ್ತು ಉಚಿತ ನೋಟ್‌ ಪುಸ್ತಕ , ಶಾಲಾ ಬ್ಯಾಗ್‌ , ವಾಟರ್‌ ಕ್ಯಾನ್‌ ವಿತರಣೆ, ಪ್ರತಿಭಾ ಪುರಸ್ಕಾರ ಕಾರ್ಯಕ್ರಮಗಳನ್ನು ಉದ್ಘಾಟಿಸಿ ಮಾತನಾಡಿದರು.

ಮಕ್ಕಳ ಪ್ರತಿಭೆಯನ್ನು ಗುರುತಿಸುವ ಜತೆಗೆ ಸರಕಾರದ ಸಹಕಾರವೂ ಕೂಡಾ ಅತೀ ಅಗತ್ಯ. ಈ ನಿಟ್ಟಿನಲ್ಲಿ ಮಾದರಿ ಕನ್ನಡ ಶಾಲೆಯನ್ನಾಗಿಸುವ ನಿಟ್ಟಿನಿಂದ ಸಮಾಜದ ಶಕ್ತಿಯನ್ನು ಜತೆಯಾಗಿ ಕೊಂಡೊಯ್ಯುವ ಬಗ್ಗೆ ಚಿಂತನೆ ಮಾಡಬೇಕಾಗಿದೆ. ಚುನಾವಣೆಯಲ್ಲಿ ಪಕ್ಷದ ಚಿಹ್ನೆಯಲ್ಲಿ ಆಯ್ಕೆಯಾಗುತ್ತೇವೆ. ಆಯ್ಕೆಯಾದ ಮೇಲೆ ನಾವು ಪಕ್ಷವಲ್ಲ ಬದಲಾಗಿ ಜನರ ಪ್ರತಿನಿಧಿಗಳು. ಆದ್ದರಿಂದ ಗ್ರಾಮದಲ್ಲಿರುವ ಕನ್ನಡ ಶಾಲೆಯನ್ನು ಮಾದರಿಯಾಗಿಸುವ ನಿಟ್ಟಿನಿಂದ ರಾಜಕೀಯ ರಹಿತವಾಗಿ ಅಭಿವೃದ್ಧಿ ಮಾಡುವತ್ತ ಚಿಂತನೆ ನಡೆಸಬೇಕು ಎಂದರು.

ಮುಖ್ಯ ಅತಿಥಿ ಶೃಂಗೇರಿ ಗೌರಿಗದ್ದೆ ದತ್ತಾತ್ರೇಯ ಪೀಠದ ಶ್ರೀ ವಿನಯ ಗುರೂಜಿ ಮಾತನಾಡಿ, ಮಕ್ಕಳಲ್ಲಿ ಶಿಸ್ತು ಬಂದರೆ ಮುಂದೆ ದೇಶದಲ್ಲಿ ಶಿಸ್ತು ಬರುತ್ತದೆ ಎನ್ನುವ ನಂಬಿಕೆ ನಮ್ಮದು. ಗ್ರಾಮದಲ್ಲಿ ಜ್ಞಾನದ ಕಿಡಿಯನ್ನು ಹಚ್ಚಿದ್ದೇವೆ. ಇಂದು ಬೇಳೂರು ಗ್ರಾಮ ಬೆಳಕಿನ ಗ್ರಾಮವಾಗುತ್ತಿದೆ. ಕಾಣದ ದೇವರನ್ನು ಕಾಣಲು ಪ್ರಯತ್ನ ಮಾಡೋಣ ಎಂದರು.

ಮಾನವನಿಗೆ ಸಮಾಧಾನವನ್ನು ಕೊಡುವ ದೇವಸ್ಥಾನ ಶಾಲೆ, ಯಾರಿಗೆ ಅವನ ಅಸ್ತಿತ್ವದ ಅರಿವಾಗಬೇಕೋ ಅವರಿಗೆ ಜ್ಞಾನದ ಬೆಳಕು ಅಗತ್ಯ. ಸರಕಾರಿ ಶಾಲೆಗಳ ಇಂತಹ ದುಸ್ಥಿತಿಗೆ ಪೋಷಕರಲ್ಲಿರುವ ಮನಸ್ಥಿತಿಯೇ ಕಾರಣ ಈ ನಿಟ್ಟಿನಲ್ಲಿ ಸರಕಾರಿ ಶಾಲೆಗಳು ಸಹಕಾರಿ ಶಾಲೆಗಳಾಗಬೇಕಾಗಿದೆ ಎಂದು ಹೇಳಿದರು.

ವಿಧಾನ ಪರಿಷತ್‌ ವಿಪಕ್ಷ ನಾಯಕ ಕೋಟ ಶ್ರೀನಿವಾಸ ಪೂಜಾರಿ ಮಾತನಾಡಿ, ಸರಕಾರಿ ಶಾಲೆಗಳು ವ್ಯವಸ್ಥಿತವಾಗಿ ನಡೆಯಬೇಕು ಎನ್ನುವ ಹಂಬಲ ನಮ್ಮದು. ಹೀಗೇ ಮುಂದವರಿದಲ್ಲಿ ಇನ್ನು ಮೂರು ವರ್ಷದಲ್ಲಿ ಏಳು ಸಾವಿರ ಸರಕಾರಿ ಶಾಲೆಗಳನ್ನು ಮುಚ್ಚುವ ಸ್ಥಿತಿ ನಿರ್ಮಾಣವಾಗುವುದರಲ್ಲಿ ಯಾವುದೇ ಸಂದೇಹವಿಲ್ಲ ಎಂದು ಹೇಳಿದರು.

ಉಚಿತ ಬಸ್‌ ಕೊಡುಗೆಯಾಗಿ ನೀಡಿದ ದಾನಿ ಅಕ್ಕಯ್ಯ ಎನ್‌. ಶೆಟ್ಟಿ ಬಾಳ್ಕಟ್ಟುಮನೆ, ಬಯಲ ಸಭಾಭವನ ಕೊಡುಗೆಯಾಗಿ ನೀಡಿದ ಆನಂದ ಸಿ. ಕುಂದರ್‌, ಬೇಳೂರು ಮಡಿಯಾಣ ಮನೆಯವರನ್ನು ಹಾಗೂ ಶಾಲಾ ಬ್ಯಾಗ್‌ ಮತ್ತು ವಾಟರ್‌ ಕ್ಯಾನ್‌ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್‌.ಶೆಟ್ಟಿ ಶುದ್ಧ ಕುಡಿಯುವ ನೀರಿನ ಘಟಕ ಕೊಡುಗೆಯಾಗಿ ನೀಡಿದ ಡಾ| ಬಿ.ಆರ್‌.ಶೆಟ್ಟಿ, ನೋಟ್‌ ಬುಕ್‌ ಕೊಡುಗೆಯಾಗಿ ನೀಡಿದ ಬೇಳೂರು ಕೇದಿಗೆ ಮನೆಯವರು, ಮಹೇಶ್‌ ಶೆಟ್ಟಿ ಹಾಗೂ ತೆಕ್ಕಟ್ಟೆ ರೋಟರಿ ಕ್ಲಬ್‌ ಅಧ್ಯಕ್ಷ ವಿಜಯ ಕುಮಾರ್‌ ಶೆಟ್ಟಿ ಅವರನ್ನು ಸಮ್ಮಾನಿಸಲಾಯಿತು.ಬೇಳೂರು ಗ್ರಾ.ಪಂ.ಅಧ್ಯಕ್ಷ ಕರುಣಾಕರ ಶೆಟ್ಟಿ ಅಧ್ಯಕ್ಷತೆ ವಹಿಸಿದರು.

ಜಿ.ಪಂ. ಸದಸ್ಯೆ ಶ್ರೀಲತಾ ಸುರೇಶ್‌ ಶೆಟ್ಟಿ, ರಾಜ್ಯ ಬಿಜೆಪಿ ಕಾರ್ಯದರ್ಶಿ ಡಾ| ಬಿ.ಆರ್‌. ಶೆಟ್ಟಿ, ಬೆಂಗಳೂರಿನ ಶ್ರೀ ಶಂಕರನಾರಾಯಣ ಕನ್‌ಸ್ಟ್ರಕ್ಷನ್‌ ಕಂಪೆನಿಯ ಪ್ರಶಾಂತ್‌ ಶೆಟ್ಟಿ, ಕಲ್ಪತರು ಪವರ್‌ ಟ್ರಾನ್ಸ್‌ಮಿಷನ್‌ ಲಿ. ಬೆಂಗಳೂರು ಇದರ ಡೆಪ್ಯೂಟಿ ಜನರಲ್‌ ಮ್ಯಾನೇಜರ್‌ ಭಾಸ್ಕರ ಮೊಗೇರ, ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌, ಕ್ಷೇತ್ರ ಸಂಪನ್ಮೂಲ ಕೇಂದ್ರದ ಸಮನ್ವಯಾಧಿಕಾರಿ ಸದಾನಂದ ಬೈಂದೂರು, ಬೇಳೂರು ಗ್ರಾ.ಪಂ.ಸದಸ್ಯರು ಎಸ್‌ಡಿಎಂಸಿ ಸದಸ್ಯರು, ಹಳೆ ವಿದ್ಯಾರ್ಥಿಗಳು ಹಾಗೂ ವಿವಿಧ ಶಾಲಾ ಮುಖ್ಯ ಶಿಕ್ಷಕರು ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ಕ್ಷೇತ್ರ ಶಿಕ್ಷಣಾಧಿಕಾರಿ ಅಶೋಕ್‌ ಕಾಮತ್‌ ಸ್ವಾಗತಿಸಿ, ಬೇಳೂರು ಗ್ರಾ.ಪಂ.ಅಧ್ಯಕ್ಷ ಕರುಣಾಕರ ಶೆಟ್ಟಿ ಪ್ರಾಸ್ತಾವಿಕವಾಗಿ ಮಾತನಾಡಿ, ಬಿಐಆರ್‌ಟಿಇ ಸೀತಾರಾಮ ಶೆಟ್ಟಿ , ಶಿಕ್ಷಕಿ ಸವಿತಾ ಆಚಾರ್‌ ನಿರೂಪಿಸಿದರು. ಗ್ರಾ.ಪಂ. ಸದಸ್ಯೆ ಪ್ರಭಾವತಿ ಟಿ.ಶೆಟ್ಟಿ ವಂದಿಸಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

yaksh

Kundapura: ಕಳಚಿದ ಕೊಂಡಿ: ಭಾಗವತ ಸುಬ್ರಹ್ಮಣ್ಯ ಧಾರೇಶ್ವರ ಇನ್ನಿಲ್ಲ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.