ಮಾತೃಪೂರ್ಣ ಯೋಜನೆ: ಅವಿಭಜಿತ ಜಿಲ್ಲೆಯಲ್ಲಿ ಶೇ. 25ರಷ್ಟು ಪ್ರಗತಿ!

Team Udayavani, Jan 24, 2020, 6:30 AM IST

kaa-49
ಉಡುಪಿ: ಗರ್ಭಿಣಿ ಮತ್ತು ಬಾಣಂತಿಯರಿಗೆ ಅಂಗನವಾಡಿ ಕೇಂದ್ರಗಳಲ್ಲಿ ಪೌಷ್ಟಿಕ ಆಹಾರ ವಿತರಿಸುವ ಮಾತೃಪೂರ್ಣ ಯೋಜನೆ ಅವಿಭಜಿತ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೇವಲ ಶೇ. 25ರಷ್ಟು ಮಾತ್ರ ಪ್ರಗತಿ ಸಾಧಿಸಿದ್ದು ಗುರಿ ಸಾಧಿಸುವಲ್ಲಿ ಹಿನ್ನಡೆಯಾಗಿದೆ. ಉಡುಪಿ ಜಿಲ್ಲೆಯಲ್ಲಿ 10,188 ಫ‌ಲಾನುಭವಿಗಳು ನೋಂದಾಯಿಸಿ ಕೊಂಡಿದ್ದು, 4,921 ಗರ್ಭಿಣಿಯರಲ್ಲಿ 1,143 ಮಂದಿ; 5,267 ಬಾಣಂತಿಯ ರಲ್ಲಿ 895 ಮಂದಿ ಬಿಸಿಯೂಟ ಸ್ವೀಕರಿಸುತ್ತಿದ್ದಾರೆ. ದ.ಕ. ಜಿಲ್ಲೆಯಲ್ಲಿ ಒಟ್ಟು 12,208 ಫ‌ಲಾನುಭವಿಗಳಿದ್ದು, ಅವರಲ್ಲಿ 1157 ಫ‌ಲಾನುಭವಿಗಳು ಬಿಸಿಯೂಟ ಸ್ವೀಕರಿಸುತ್ತಿದ್ದಾರೆ.  ಮಾತೃಪೂರ್ಣ ಯೋಜನೆಗೆ ಚಾಲನೆ ನೀಡುವ ಸಂದರ್ಭ ಅಂಗನ ವಾಡಿ ಕಾರ್ಯಕರ್ತೆಯರ ಒತ್ತಾಯದ ಮೇರೆಗೆ ಗರ್ಭಿಣಿ, ಬಾಣಂತಿ ಯರು ಅಂಗನವಾಡಿಗಳಿಗೆ ಬಂದು ಆಹಾರ ಸ್ವೀಕರಿಸಿದ್ದರು. ಆದರೆ ಅನಂತರದ ದಿನಗಳಲ್ಲಿ ಬಹಳಷ್ಟು ಫಲಾನುಭವಿಗಳು ಅಂಗನವಾಡಿ ಕೇಂದ್ರಗಳಲ್ಲಿ ಬಂದು ಸೇವಿಸುತ್ತಿಲ್ಲ.
ಮನೆಯಲ್ಲೇ ಇದೆ ಪೌಷ್ಟಿಕ ಆಹಾರ
ಮಾತೃಪೂರ್ಣ ಯೋಜನೆಯಲ್ಲಿ ಬಿಸಿಯೂಟದೊಂದಿಗೆ ಮೊಟ್ಟೆಯನ್ನು ಮಾತ್ರ ವಿತರಣೆ ಮಾಡಲಾಗುತ್ತದೆ. ಆದರೆ ಕರಾವಳಿಯ ಹೆಚ್ಚಿನ ಮನೆಗಳಲ್ಲಿ ಮೀನು ಸಾರು ಹಾಗೂ ಉತ್ತಮ ಪೌಷ್ಟಿಕಾಂಶಯುಕ್ತ ಆಹಾರ ಇರುವುದು ಫಲಾನುಭವಿಗಳು ಅಂಗನವಾಡಿಯಿಂದ ದೂರವಿರಲು ಪ್ರಮುಖ ಕಾರಣ ಎನ್ನುತ್ತಾರೆ ಅಂಗನವಾಡಿ ಶಿಕ್ಷಕಿಯರು.
ಮನೆಗೇ ವಿತರಿಸಿ: ಸರಕಾರಕ್ಕೆ ಮನವಿ 
ಪ್ರತಿ ತಿಂಗಳು ಶೇಕಡ ವಾರು ಪ್ರಗತಿಯ ಪರಿ ಶೀಲನೆ ನಡೆಯುತ್ತದೆ. ಅವಿಭಜಿತ ದ.ಕ. ಜಿಲ್ಲೆಯಲ್ಲಿ ಕಡಿಮೆ ಫಲಾನುಭವಿಗಳು ಈ ಯೋಜನೆಯನ್ನು ಬಳಸಿ ಕೊಳ್ಳುತ್ತಿರುವ ಪರಿಣಾಮ ಈ ಯೋಜನೆಯನ್ನು ಪರಿಣಾ ಮಕಾರಿಯಾಗಿ ಜಾರಿ ಮಾಡುವುದು ಕಷ್ಟ. ಗುಡ್ಡಗಾಡು ಪ್ರದೇಶದಿಂದ ಬಂದು ಊಟ ಮಾಡುವುದಕ್ಕೆ ಸಾಧ್ಯವಿಲ್ಲ. ಆದ್ದರಿಂದ ಪೌಷ್ಟಿಕ ಆಹಾರವನ್ನು ತಿಂಗಳಿಗೊಮ್ಮೆ ಮನೆಗೆ ವಿತರಿಸಲು ಅವಕಾಶ ಮಾಡುವಂತೆ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖಾಧಿ ಕಾರಿಗಳು ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಿದ್ದಾರೆ.
ಯೋಜನೆಯಲ್ಲಿ ಏನಿದೆ?
ಮಾತೃಪೂರ್ಣ ಯೋಜನೆ ಯಲ್ಲಿ ಅನ್ನ, ಸಾಂಬಾರ್‌, ಪಲ್ಯದ ಜತೆ ಬೇಯಿಸಿದ ಮೊಟ್ಟೆ, 200 ಮಿ.ಲೀ. ಹಾಲು ಮತ್ತು ಚಿಕ್ಕಿ ನೀಡಲಾಗುತ್ತದೆ. ತಿಂಗಳಲ್ಲಿ ಕನಿಷ್ಠ 25 ದಿನ ಆಹಾರ ನೀಡುವ ಯೋಜನೆ ಇದಾಗಿದೆ.
ಅವಿಭಜಿತ ದ.ಕ. ಜಿಲ್ಲೆಯಲ್ಲಿ ಮಾತೃ ಪೂರ್ಣ ಯೋಜನೆಯನ್ನು ಫಲಾನುಭವಿಗಳು ಹೆಚ್ಚಿನ ಪ್ರಮಾಣದಲ್ಲಿ ಸದ್ಬಳಕೆ ಮಾಡಿಕೊಳ್ಳುತ್ತಿಲ್ಲ. ಉಡುಪಿ ಶೇ. 34 ಹಾಗೂ ದ.ಕ.ದಲ್ಲಿ ಶೇ. 20ರಷ್ಟು ಮಾತ್ರ ಪ್ರಗತಿ ಸಾ ಧಿಸಲಾಗಿದೆ. ಆದ್ದರಿಂದ ತಿಂಗಳಿಗೊಮ್ಮೆ ಪೌಷ್ಟಿಕ ಆಹಾರ ವಿತರಿಸುವಂತೆ ಸರಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗಿದೆ.
-ಶೇಸಪ್ಪ, ಮಹಿಳಾ ಮತ್ತು ಮಕ್ಕಳ ಇಲಾಖೆ ಉಪನಿರ್ದೇಶಕ, ಉಡುಪಿ
– ಉಸ್ಮಾನ್‌, ಮಹಿಳಾ ಮಕ್ಕಳ ಇಲಾಖೆ ನಿರ್ದೇಶಕ ದ.ಕ.
– ತೃಪ್ತಿ ಕುಮ್ರಗೋಡು

ಟಾಪ್ ನ್ಯೂಸ್

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

voter

Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !

1-wqeqewqe

EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Lok Sabha Election: ಉಡುಪಿ ಚಿಕ್ಕಮಗಳೂರಿನಲ್ಲಿ 29.03 % ಮತದಾನ…

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

Dakshina kannada: ದ.ಕ.: 18,18,127 ಮತದಾರರ ಕೈಯಲ್ಲಿ 9 ಅಭ್ಯರ್ಥಿಗಳ ಭವಿಷ್ಯ

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

H. D. Kumaraswamy ಖುದ್ದು ನಾನೇ ಹೋಗಿ ಸುಮಲತಾ ಸಹಕಾರ ಕೋರಿದ್ದೆ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Sumalatha Ambareesh ಮಂಡ್ಯದಲ್ಲಿ ಚುನಾವಣೆ ಪ್ರಚಾರಕ್ಕೆ ನನ್ನನ್ನು ಕರೆದಿಲ್ಲ

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

Lok Sabha Election; ಮತದಾನ ಮಾಡಿದ ಬಳಿಕ 7 ಮಂದಿ ಸಾವು

1-sadasd

Yadgir BJP ಬೃಹತ್ ರೋಡ್ ಶೋ; ದೇಶದ ರಕ್ಷಣೆಗಾಗಿ ಮತ್ತೆ ಬೆಂಬಲಿಸಿ: ನಡ್ಡಾ

1-wqeqqwe

Vote; ಕರ್ನಾಟಕ ಮೊದಲ ಹಂತ: ಶೇಕಡಾವಾರು ಮತದಾನದ ವಿವರ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.