
ಕಸದ ಸಮಸ್ಯೆಗೆ ಎಂಆರ್‌ಎಫ್ ಘಟಕ ಸೂಕ್ತ ಪರಿಹಾರ: ಅಂಗಾರ
Team Udayavani, Jan 25, 2023, 11:43 PM IST

ಮಣಿಪಾಲ: ಗ್ರಾಮ ಪಂಚಾಯತ್ ಎದುರಿಸುತ್ತಿರುವ ತ್ಯಾಜ್ಯ ವಿಲೇವಾರಿ ಸಮಸ್ಯೆಗಳಿಗೆ ಎಂ.ಆರ್.ಎಫ್. ಘಟಕಗಳು ಸೂಕ್ತ ಪರಿಹಾರ ನೀಡಬಲ್ಲವು ಎಂದು ಮೀನುಗಾರಿಕೆ ಸಚಿವ ಎಸ್. ಅಂಗಾರ ಹೇಳಿದರು.
80 ಬಡಗಬೆಟ್ಟು ಗ್ರಾ.ಪಂ.ನ ನೇತಾಜಿ ನಗರ ಮಿನಿ ಎಂಆರ್‌ಎಫ್ ಕೇಂದ್ರದಲ್ಲಿ ಜಿಲ್ಲಾಡಳಿತ, ಜಿ.ಪಂ., ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆ, ತಾ.ಪಂ. ಹಾಗೂ 80 ಬಡಗಬೆಟ್ಟು ಗ್ರಾ.ಪಂ.ಇವುಗಳ ಸಂಯುಕ್ತ ಆಶ್ರಯದಲ್ಲಿ ಸ್ವತ್ಛ ಭಾರತ್ ಮಿಷನ್ (ಗ್ರಾಮೀಣ) ಯೋಜನೆಯಡಿ ಗ್ರಾ.ಪಂ. ವ್ಯಾಪ್ತಿಯಲ್ಲಿ ನಿರ್ಮಾಣವಾದ ಪ್ಲಾಸ್ಟಿಕ್ ತ್ಯಾಜ್ಯ ನಿರ್ವಹಣೆ ಘಟಕ, ಮಲತ್ಯಾಜ್ಯ ನಿರ್ವಹಣೆ ಘಟಕ, ಬೂದು ನೀರು ನಿರ್ವಹಣೆ ಕಾಮಗಾರಿ ಹಾಗೂ ಶಾಂತಿ ನಗರದಲ್ಲಿ ನಿರ್ಮಾಣವಾದ ಸುಸಜ್ಜಿತ ಮೀನು ಮಾರುಕಟ್ಟೆ ಕಟ್ಟಡದ ಉದ್ಘಾಟನೆ ನೆರವೇರಿಸಿ ಅವರು ಮಾತನಾಡಿದರು.
ಇಚ್ಛಾಶಕ್ತಿ ಇದ್ದರೆ ಕಸವನ್ನು ಸಹ ಆದಾಯದ ಮೂಲವನ್ನಾಗಿ ಮಾಡಬಹುದು ಎಂಬುದಕ್ಕೆ ಎಂಆರ್‌ಎಫ್ ಘಟಕಗಳೇ ಸಾಕ್ಷಿಯಾಗಿವೆ. ಎಲ್ಲ ಪಂಚಾಯತ್‌ಗಳು ಸಹ ತಮ್ಮ ವ್ಯಾಪ್ತಿಯಲ್ಲಿ ಸಾರ್ವಜನಿಕರ ಸಹಕಾರದೊಂದಿಗೆ ತ್ಯಾಜ್ಯ ವಿಲೇವಾರಿ ಘಟಕ ಆರಂಭಿಸಬೇಕು ಎಂದರು.
ಶಾಸಕ ಲಾಲಾಜಿ ಆರ್. ಮೆಂಡನ್ ಅಧ್ಯಕ್ಷತೆ ವಹಿಸಿದ್ದರು. ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಕೆ. ಜಯಪ್ರಕಾಶ್ ಹೆಗ್ಡೆ, ಬಡಗಬೆಟ್ಟು ಗ್ರಾ.ಪಂ.ಅಧ್ಯಕ್ಷೆ ಮಾಧವಿ ಎಸ್. ಆಚಾರ್ಯ, ಉಪಾಧ್ಯಕ್ಷೆ ನಿರುಪಮಾ ಹೆಗ್ಡೆ, ಜಿ.ಪಂ. ಸಿಇಒ ಪ್ರಸನ್ನ ಎಚ್., ತರಬೇತಿ ನಿರತ ಐಎಎಸ್ ಅಧಿಕಾರಿ ಯತೀಶ್, ಜಿ.ಪಂ. ಯೋಜನ ನಿರ್ದೇಶಕ ಬಾಬು, ಕರಾವಳಿ ಅಭಿವೃದ್ಧಿ ಪ್ರಾಧಿಕಾರದ ಕಾರ್ಯದರ್ಶಿ ಪ್ರದೀಪ್ ಡಿ’ಸೋಜಾ, ಮಾಜಿ ಅಧ್ಯಕ್ಷ ಮಟ್ಟಾರು ರತ್ನಾಕರ ಹೆಗ್ಡೆ, ತಾ.ಪಂ. ಇಒ ವಿಜಯಾ, ಪಿಡಿಒ ಅಶೋಕ್, ರಾಷ್ಟ್ರೀಯ ಮಹಿಳಾ ಆಯೋಗದ ಮಾಜಿ ಸದಸ್ಯೆ ಶ್ಯಾಮಲಾ ಕುಂದರ್ ಹಾಗೂ ಮತ್ತಿತರರು ಉಪಸ್ಥಿತರಿದ್ದರು. ಜಿ.ಪಂ. ಮುಖ್ಯ ಯೋಜನಾಧಿಕಾರಿ ಶ್ರೀನಿವಾಸ ರಾವ್ ಸ್ವಾಗತಿಸಿದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH

ಪಾಕ್ ಆಕ್ರಮಿತ ಪ್ರದೇಶದಲ್ಲಿ ತಲೆಯೆತ್ತಿದ ಶಾರದಾ ಪೀಠ | ಏನಿದರ ಹಿನ್ನೆಲೆ ?

Balasore Train Tragedy; ಎರಡೂ ರೈಲುಗಳನ್ನು ದುರಸ್ತಿ ಮಾಡಲಾಗಿದೆ: ಅಶ್ವಿನಿ ವೈಷ್ಣವ್

ಶುಚಿ ರುಚಿಗೆ ಹೆಸರುವಾಸಿ ಅರ್ಚನಾ ಹೋಟೆಲ್ ಇನ್ನಂಜೆ

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ
ಹೊಸ ಸೇರ್ಪಡೆ

ಪಿಎಸ್ ಜಿ ತೊರೆದು ಅಮೆರಿಕದ ಕ್ಲಬ್ ಸೇರಲಿದ್ದಾರೆ ಫುಟ್ಬಾಲ್ ದಿಗ್ಗಜ ಲಿಯೋನೆಲ್ ಮೆಸ್ಸಿ

Click Cinema: ಚಿತ್ರರಂಗಕ್ಕೆ ಎಂಟ್ರಿಕೊಟ್ಟ ರವಿ ಬಸ್ರೂರ್ ಪುತ್ರ ಪವನ್ ಬಸ್ರೂರು

WC 23 ”ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಾವು ಆಡುವುದಿಲ್ಲ”: ಹೊಸ ರಾಗ ಎಳೆದ ಪಾಕಿಸ್ಥಾನ

ರಾಮನಗರ: ಇನ್ನೂ ರೈತರ ಕೈ ಸೇರದ ಕ್ಷೀರಧಾರೆ ಹಣ!

ಅಂಡರ್‌ಪಾಸ್ ನಿರ್ವಹಣೆ ಯಾರೆಂಬುದೇ ಗೊತ್ತಿಲ್ಲ!