ಹೆಬ್ರಿ ಗ್ರಾ.ಪಂ.ಗೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಭೇಟಿ

ಕುಂದುಕೊರತೆಗಳ ಬಗ್ಗೆ ಮನವಿ: ಶೀಘ್ರ ಈಡೇರಿಸುವ ಭರವಸೆ

Team Udayavani, Sep 23, 2019, 5:47 AM IST

2109HBRE9

ಹೆಬ್ರಿ: ಹೆಬ್ರಿ ತಾಲೂಕು ಕಚೇರಿಗೆ ಸೆ. 21ರಂದು ಮೀನುಗಾರಿಕೆ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರು ಭೇಟಿ ನೀಡಿ ಕುಂದು ಕೊರತೆಗಳ ಬಗ್ಗೆ ವಿಚಾರಿಸಿದರು.

ಈ ಸಂದರ್ಭ ಹೆಬ್ರಿ ತಾಲೂಕಿನ ತಹಶೀಲ್ದಾರ್‌ ಮಹೇಶ್ಚಂದ್ರ ಅವರು ಹೆಬ್ರಿಯ ತಾಲೂಕು ಕಚೇರಿ ಯಲ್ಲಿ ವಿವಿಧ ಇಲಾಖೆಗಳು ನಿರ್ಮಾಣವಾಗದೇ ಇರುವು ದುದರಿಂದ ಕೆಲಸ ಕಾರ್ಯಗಳಿಗೆ ಸಮಸ್ಯೆಯಾಗುತ್ತದೆ. ಅಗತ್ಯವಾಗಿ ಅಟಲ್‌ಜೀ ಸೇವಾ ಕೇಂದ್ರ ಮೊದಲಾದ ಸೇವಾ ಕಚೇರಿಗಳು ಶೀಘ್ರ ನಿರ್ಮಾಣವಾಗಬೇಕು ಎಂದು ಸಚಿವರಿಗೆ ಮನವಿ ಸಲ್ಲಿಸಿದರು.

ಶೀಘ್ರ ಪರಿಶೀಲನೆ
ಸಮಸ್ಯೆಗಳನ್ನು ಆಲಿಸಿ ಉತ್ತರಿಸಿದ ಕೋಟ ಶ್ರೀನಿವಾಸ ಪೂಜಾರಿ ಅವರು, ಆಧಾರ್‌ ಕಾರ್ಡ್‌, ರೇಶನ್‌ ಕಾರ್ಡ್‌, ಪಹಣಿ ಪತ್ರ, 94ಸಿ, ಡೀಮಡ್‌ ಫಾರೆಸ್ಟ್‌ ಸಮಸ್ಯೆಗಳನ್ನು ಶೀಘ್ರವಾಗಿ ಬಗೆಹರಿಸಿ ಹೆಬ್ರಿಯನ್ನು ಪೂರ್ಣ ಪ್ರಮಾಣದ ತಾಲೂಕನ್ನಾಗಿ ಮಾಡಲು ಸಂಬಂಧಪಟ್ಟವರ ಗಮನಕ್ಕೆ ತರುತ್ತೇನೆ ಎಂದರು.

ಕೂಡ್ಲು ರಸ್ತೆ ಅಭಿವೃದ್ಧಿಗೆ ತಡೆ
ಇತ್ತೀಚೆಗೆ ಕೂಡ್ಲು ರಸ್ತೆ ಅಭಿವೃದ್ಧಿ ಕಾಮಗಾರಿಗೆ ಸರಕಾರದಿಂದ ಹಣ ಮಂಜೂರು ಆದರೂ ಕೂಡ ಕಾಮಗಾರಿಗೆ ವನ್ಯಜೀವಿ ಇಲಾಖೆಯವರು ತಡೆ ಯೊಡಿದ್ದಾರೆ.ಈ ಹಿನ್ನೆಲೆ ಕಾಮಗಾರಿಯನ್ನು ನಿಲ್ಲಿಸಲಾಗಿದೆ ಎಂದು ಜಿ.ಪಂ. ಸದಸ್ಯೆ ಜ್ಯೋತಿ ಹರೀಶ್‌ ಸಚಿವರ ಗಮಕ್ಕೆ ತಂದರು. ಅದಕ್ಕೆ ಉತ್ತರಿಸಿದ ಸಚಿವರು ಆ ಬಗ್ಗೆ ಸ್ಥಳದಲ್ಲಿಯೇ ಎಸಿಎಫ್‌ ಅವರಿಗೆ ದೂರವಾಣಿಯಿಂದ ಸಂಪರ್ಕಿಸಿ ನಾಡಾ³ಲು ಭಾಗದಲ್ಲಿ 3,500 ಸೆ.ಮೀ ನಷ್ಟು ಮಳೆಯಾಗುತ್ತಿದೆ. ಇಂತಹ ಪ್ರದೇಶದ ರಸ್ತೆ ಕಾಂಕ್ರೀಟ್‌ ಆದಾಗ ಮಾತ್ರ ಉಳಿಯುತ್ತದೆ. ಈ ಬಗ್ಗೆ ಕೂಡಲೇ ಅನುಮತಿ ನೀಡಿ ಸಮಸ್ಯೆ ಬಗೆಹರಿಸಿ ಎಂದರು.

ಹೆಬ್ರಿ ಗ್ರಾ.ಪಂ. ಸದಸ್ಯ ಎಚ್‌.ಕೆ. ಸುಧಾಕರ, ಕೆರೆಬೆಟ್ಟು ಸಂಜೀವ ಶೆಟ್ಟಿ, ಪಾಂಡುರಂಗ ಪೂಜಾರಿ ಮೊದಲಾದವರು ಹೆಬ್ರಿಯ ಹಲವು ಸಮಸ್ಯೆಗಳನ್ನು ಸಚಿವರ ಗಮನಕ್ಕೆ ತಂದರು.

ನಾನಿದ್ದೇನೆ ಹೆದರಬೇಡ
ತಾಲೂಕು ಕಚೇರಿಯ ಎದುರಿನಲ್ಲಿ ಚಪ್ಪಲ್‌ ಹೊಲಿಯುವ ಅಂಗಡಿ ಇದ್ದು ಇದನ್ನು ಕೂಡಲೇ ತೆರವುಗೊಳಿಸುತ್ತೇವೆ ಎಂದು ಅಧಿಕಾರಿಗಳಿಂದ ಆದೇಶ ಬಂದಿದೆ ಎಂದು ಅಂಗಡಿಯ ಮಾಲಕ ಸಚಿವರ ಗಮನಕ್ಕೆ ತಂದು ಅತ್ತರು. ನಾನು ಬಡವ ಸರ್‌, ನನಗೆ ಇದರಿಂದಲೇ ಜೀವನ ಸಾಗಬೇಕು ದಯವಿಟ್ಟು ಸಹಕರಿಸಿ ಎಂದಾಗ ಸಚಿವರು ನಾನಿದ್ದೇನೆ ಹೆದರಬೇಡ. ಶೀಘ್ರವಾಗಿ ಇದಕ್ಕೆ ಬದಲಿ ವ್ಯವಸ್ಥೆಯನ್ನು ಮಾಡಿ ಸಮಸ್ಯೆಯನ್ನು ಬಗೆಹರಿಸುತ್ತೇನೆ ಎಂದು ಅಭಯ ನೀಡಿದರು.

ಟಾಪ್ ನ್ಯೂಸ್

1-WQEWQEWQ

Eshwarappa ಅವರಿಂದ ನಾನೇನು ಕಲಿಯಬೇಕಾಗಿಲ್ಲ: ಗೀತಾ ಶಿವರಾಜ್ ಕುಮಾರ್

Vijayendra (2)

PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ

Lokayukta

Bellary; ಲೋಕಾಯುಕ್ತ ಬಲೆಗೆ ಬಿದ್ದ 6 ಮಂದಿ ಭ್ರಷ್ಟ ಅಧಿಕಾರಿಗಳು: ಲಕ್ಷ ಲಕ್ಷ ರೂ. ಲಂಚ!

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

Lok Sabha Election: ಮೋದಿಗೆ ಮತ ಕೇಳುವ ಹಕ್ಕಿಲ್ಲ: ಸಿದ್ದರಾಮಯ್ಯ

1-asaa

Heart beats; ಭಾರತದ ಹೃದಯ ಪಾಕಿಸ್ಥಾನದ ಯುವತಿಗೆ ಹೊಸ ಜೀವನ ನೀಡಿತು..

who will be the Indian fast bowlers for t20 world cup

T20 World Cup; ಯಾರಿಲ್ಲ.. ಯಾರಿಲ್ಲ.. ವಿಶ್ವಕಪ್ ಗೆ ವೇಗದ ಬೌಲರ್ ಗಳು ಯಾರೆಲ್ಲಾ?

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಮಾಡುವ ಹಾಗಿಲ್ಲ

ಸಿನಿಮಾದಲ್ಲಿ ಖ್ಯಾತಿ, ಭಾರತೀಯರ ಪ್ರೀತಿಗಳಿಸಿದರೂ ಈ ಸೆಲೆಬ್ರಿಟಿಗಳು ಮತದಾನ ಹಕ್ಕು ಹೊಂದಿಲ್ಲ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್‌ ಕುಮಾರ್‌ ಉದ್ಯಾವರ

15-udupi

Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ

4-annamalai

Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು1

Shimoga: ಈಶ್ವರಪ್ಪ ಪರ ಪ್ರಚಾರ ನಡೆಸಿದ್ದ ಮಹಿಳೆ ಮೇಲೆ ಹಲ್ಲೆ- ದೂರು

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Bird flu: ಕೇರಳದಲ್ಲಿ ಹಕ್ಕಿಜ್ವರ ಭೀತಿ; ಚೆಕ್‌ಪೋಸ್ಟ್‌ಗಳಲ್ಲಿ ತಪಾಸಣೆ

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Transfer order: ರಾಜ್ಯದ 388 ನ್ಯಾಯಾಧೀಶರ ವರ್ಗಾವಣೆ ಮಾಡಿ ಆದೇಶ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.