ಹಿಜಾಬ್‌ ವಿವಾದ: ವಿದ್ಯಾರ್ಥಿನಿಯರು ಒಪ್ಪದಿದ್ದರೆ ಆನ್‌ಲೈನ್‌ ತರಗತಿ: ಶಾಸಕ ರಘುಪತಿ ಭಟ್‌


Team Udayavani, Jan 26, 2022, 6:31 PM IST

ಹಿಜಾಬ್‌ ವಿವಾದ: ವಿದ್ಯಾರ್ಥಿನಿಯರು ಒಪ್ಪದಿದ್ದರೆ ಆನ್‌ಲೈನ್‌ ತರಗತಿ: ಶಾಸಕ ರಘುಪತಿ ಭಟ್‌

ಉಡುಪಿ: ಸರಕಾರಿ ಬಾಲಕಿಯರ ಪ. ಪೂ ಕಾಲೇಜಿನ ಹಿಜಾಬ್‌ ವಿವಾದಕ್ಕೆ ಸಂಬಂಧಿಸಿ ಆರು ಮಂದಿ ವಿದ್ಯಾರ್ಥಿನಿಯರಿಗೆ ಹಿಜಾಬ್‌ ಹಾಕದೆ ತರಗತಿಗೆ ಹಾಜರಾಗುವಂತೆ ಮನವಿ ಮಾಡಲಾಗುವುದು. ಒಪ್ಪದಿದ್ದರೆ ಅವರಿಗೆ ಪ್ರತ್ಯೇಕ ಆನ್‌ಲೈನ್‌ ತರಗತಿ ಕಲ್ಪಿಸಿ, ಪರೀಕ್ಷೆ ಕುಳಿತುಕೊಳ್ಳುವ ವ್ಯವಸ್ಥೆ ಮಾಡಲಾಗುವುದು ಎಂದು ಶಾಸಕ ಹಾಗೂ ಕಾಲೇಜು ಅಭಿವೃದ್ಧಿ ಸಮಿತಿ ಅಧ್ಯಕ್ಷ ಕೆ. ರಘುಪತಿ ಭಟ್‌ ತಿಳಿಸಿದರು.

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ  ವಿಚಾರವಾಗಿ ಸರಕಾರ ಯಥಾಸ್ಥಿತಿ ಕಾಪಾಡುವಂತೆ ಹೊರಡಿಸಿದ ಆದೇಶ ಹಿನ್ನೆಲೆಯಲ್ಲಿ ಕಾಲೇಜು ಅಭಿವೃದ್ಧಿ ಸಮಿತಿಯ ಸಭೆ ಬಳಿಕ ನಿವೃತ್ತ ಪೊಲೀಸ್‌ ಅಧಿಕಾರಿ ಜಿ.ಎ. ಬಾವ ನೇತೃತ್ವದಲ್ಲಿ ಮುಸ್ಲಿಮ್‌ ಮುಖಂಡರು ಭೇಟಿ ಮಾಡಿ ಚರ್ಚಿಸಿದ್ದರು. ಆ ಬಳಿಕ ಕಾಲೇಜು ಅಭಿವೃದ್ಧಿ ಸಮಿತಿ ಈ ನಿರ್ಧಾರ ತೆಗೆದುಕೊಂಡಿದೆ ಎಂದರು. ಜಿಲ್ಲೆಯಲ್ಲಿ ಕೋಮು ಸೌಹಾರ್ದತೆಗೆ ಇದುವರೆಗೆ ಧಕ್ಕೆ ಬಂದಿಲ್ಲ. ಸ್ಕಾರ್ಫ್ ಹಾಕಲು ಒಂದು ಕಾಲೇಜಿನಲ್ಲಿ ಅವಕಾಶ ನೀಡಿದರೆ ಮುಂದೆ ಎಲ್ಲ ಕಾಲೇಜಿನಲ್ಲಿ ಇದು ಆರಂಭವಾಗುತ್ತದೆ.  ಇದಕ್ಕೆ ಪ್ರತಿರೋಧವಾಗಿ ಕೇಸರಿ ಶಾಲು, ಕೇಸರಿ ಪೇಟ ಧರಿಸಿ ಬರುವುದು ಆರಂಭವಾಗುತ್ತದೆ. ಸಣ್ಣ ವಿಚಾರದಿಂದ ಸೌಹಾರ್ದತೆಗೆ ಧಕ್ಕೆಯಾಗದಂತೆ ಮುಖಂಡರಿಗೆ ಮನವಿ ಮಾಡಿದ್ದೇವೆ. ಅವರು ಪೋಷಕರೊಂದಿಗೆ ಮಾತನಾಡಿ ಎರಡು ದಿನಗಳಲ್ಲಿ ಮತ್ತೆ ನಮ್ಮನ್ನು ಭೇಟಿಯಾಗುವುದಾಗಿ ತಿಳಿಸಿದ್ದಾರೆ ಎಂದು ರಘುಪತಿ ಭಟ್‌ ತಿಳಿಸಿದರು.

ಪೋಷಕರನ್ನು ಪ್ರಾಂಶುಪಾಲರು ಕರೆದು, ಹಿಜಾಬ್‌ ಧರಿಸದೆ ತರಗತಿ ಬರುವಂತೆ ಮನವಿ ಮಾಡಿಕೊಳ್ಳಲಿದ್ದಾರೆ. ವಿದ್ಯಾರ್ಥಿನಿಯರು ಹಾಗೂ ಪೋಷಕರು ಹಿಜಾಬ್‌ ಇಲ್ಲದೆ ಬರಲು ಒಪ್ಪದಿದ್ದರೆ ನಾವು ತರಗತಿ ಪ್ರವೇಶಕ್ಕೆ ಅವಕಾಶ ನೀಡುವುದಿಲ್ಲ. ಅವರಿಗೆ ಬೇಕಾದರೆ ಆನ್‌ಲೈನ್‌ ತರಗತಿ ಮಾಡಿ ಪರೀಕ್ಷೆಗೆ ಅವಕಾಶ ಮಾಡಿಕೊಡಲಾಗುವುದು. ಮುಂದಿನ ವರ್ಷ ಯಾವ ಕಾಲೇಜಿಗೆ ಬೇಕಾದರೂ ಅವರು  ಸೇರಬಹುದು. ಕಾಲೇಜಿನಲ್ಲಿ ಶಿಸ್ತು ಎಂಬುದು ಅಗತ್ಯ. ಕಾಲೇಜು ಮತ್ತು ಮಕ್ಕಳ ಭವಿಷ್ಯದ ಹಿನ್ನೆಲೆಯಲ್ಲಿ ಪೋಷಕರು ಮಕ್ಕಳಿಗೆ ತಿಳಿಹೇಳಿ ಹಿಂದೆ ಇದ್ದ ಪದ್ಧತಿ ಮುಂದುವರೆಸಲು ಅವಕಾಶ ಕಲ್ಪಿಸಬೇಕು. ನಾವು ಯಾವುದೇ ಕಾರಣಕ್ಕೂ ಆ ಪದ್ಧತಿಯನ್ನು ಬದಲಾಯಿಸುವುದಿಲ್ಲ ಎಂದು ರಘುಪತಿ ಭಟ್‌ ಸ್ಪಷ್ಟಪಡಿಸಿದರು.

ವರದಿ ಆಧಾರದಲ್ಲಿ ಕ್ರಮ: ಸಚಿವ ಎಸ್‌. ಅಂಗಾರ :

ಹಿಜಾಬ್‌ ವಿವಾದಕ್ಕೆ ಸಂಬಂಧಿಸಿ ಪ್ರತಿಕ್ರಿಯಿಸಿದ ಸಚಿವ ಎಸ್‌ ಅಂಗಾರ, ಎಲ್ಲರ ಇಚ್ಚೆಗೆ ಬೇಕಾದಂತೆ ಸರಕಾರ ಕ್ರಮ ಕೈಗೊಳ್ಳಲು ಸಾಧ್ಯವಿಲ್ಲ. ಸಮಾನತೆಯನ್ನು ಕಾಪಾಡಲು ಸರಕಾರ ನಿರ್ಧಾರ ತೆಗೆದುಕೊಳ್ಳುತ್ತದೆ. ಪ. ಪೂ ಕಾಲೇಜು ವಸ್ತ್ರ ಸಂಹಿತೆ ಸಂಬಂಧಿಸಿ ಸರಕಾರ ಸಮಿತಿಯನ್ನು ರಚನೆ ಮಾಡಲಿದ್ದು, ಸಮಿತಿ ವರದಿ ಆಧಾರದಲ್ಲಿ ಕ್ರಮ ಕೈಗೊಳ್ಳಲಾಗುತ್ತದೆ ಸಚಿವರು ತಿಳಿಸಿದರು.

ಟಾಪ್ ನ್ಯೂಸ್

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

1-aewr

DRDO; ನಿರ್ಭಯ್‌ ಪರೀಕ್ಷಾರ್ಥ ಉಡಾವಣೆ ಯಶಸ್ವಿ

1eewqe

Iran ವಶದಲ್ಲಿದ್ದ ಹಡಗಿನ ಮಹಿಳಾ ಸಿಬಂದಿ ವಾಪಸ್‌

vachanananda

Panchamasali ಎಂಬ ಕಾರಣಕ್ಕೆ ಯತ್ನಾಳ್‌ಗೆ ಸಿಎಂ ಅವಕಾಶ ನಿರಾಕರಣೆ: ವಚನಾನಂದ ಶ್ರೀ

police crime

Chitradurga: ಅನ್ಯಕೋಮಿನ ಯುವತಿಗೆ ಡ್ರಾಪ್ ನೀಡಿದ್ದಕ್ಕೆ ಹಲ್ಲೆ

1-wewq-eqwe

IPL; ರೋಚಕ ಪಂದ್ಯದಲ್ಲಿ ಪಂಜಾಬ್‌ ಎದುರು 9 ರನ್ ಜಯ ಸಾಧಿಸಿದ ಮುಂಬೈ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ

8

Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ

4

ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು

7-thekkatte

Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

Manipal ಕೌಶಲ ಅಭಿವೃದ್ಧಿ ಕೇಂದ್ರ -ಭುವನೇಂದ್ರ ಕಾಲೇಜು ಒಡಂಬಡಿಕೆ

MUST WATCH

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

udayavani youtube

ದ್ವಾರಕೀಶ್ ನಿಧನಕ್ಕೆ ನಟ ಶಿವರಾಜ್ ಕುಮಾರ್ ಸಂತಾಪ

udayavani youtube

ದೇವೇಗೌಡರಿದ್ದ ವೇದಿಕೆಗೆ ನುಗ್ಗಿದ ಕಾಂಗ್ರೆಸ್‌ ಕಾರ್ಯಕರ್ತೆಯರು

udayavani youtube

ಮಂಗಳೂರಿನಲ್ಲಿ ಪ್ರಧಾನಿ ಶ್ರೀ Narendra Modi ಅವರ ಬೃಹತ್‌ ರೋಡ್‌ ಶೋ

ಹೊಸ ಸೇರ್ಪಡೆ

30

CET Exam: ಮೊದಲ ದಿನ ಸುಸೂತ್ರವಾಗಿ ನಡೆದ ಸಿಇಟಿ

1-wqeqwe

Maharashtra; ರತ್ನಾಗಿರಿ- ಸಿಂಧುದುರ್ಗದಲ್ಲಿ ರಾಣೆ vs ಠಾಕ್ರೆ ಕಾದಾಟ

1-HM

Mathura ನನ್ನನ್ನು ಗೋಪಿಕೆಯೆಂದು ಭಾವಿಸುವೆ: ಬಿಜೆಪಿ ಅಭ್ಯರ್ಥಿ ಹೇಮಾ

Rahul Gandhi 3

BJP ಮಾಧ್ಯಮಗಳಿಂದ ನನಗೆ ನಿತ್ಯ ನಿಂದನೆ: ರಾಹುಲ್‌ ಗಾಂಧಿ ಆರೋಪ

1-qewqeqwe

TIME; ವಿಶ್ವದ 100 ಪ್ರಭಾವಿಗಳ ಪೈಕಿ ಆಲಿಯಾ, ಪ್ರಿಯಂವದ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.