“ಓದುಗರನ್ನು ಆಕರ್ಷಿಸಲು ಗ್ರಂಥಾಲಯಗಳ ಆಧುನೀಕರಣ ಅತ್ಯಗತ್ಯ’

 ಡಿಜಿಟಲ್‌ ಗ್ರಂಥಾಲಯ ತರಬೇತಿ ಕಾರ್ಯಾಗಾರ - ಸಮಾರೋಪ

Team Udayavani, Feb 4, 2020, 5:57 AM IST

LIBRARY–SAMAROPA-SAMARAMBHA-6

ಉಡುಪಿ: ಗ್ರಂಥಾಲಯಗಳು ಇಂದಿನ ಅತ್ಯಾಧುನಿಕ ಸೌಕರ್ಯಗಳನ್ನು ಅಳವಡಿಸಿಕೊಂಡು ಓದುಗರ ಸ್ನೇಹಿಯಾಗಬೇಕಿದೆ. ಈ ನಿಟ್ಟಿನಲ್ಲಿ ಜಿಲ್ಲಾ ಕೇಂದ್ರ ಗ್ರಂಥಾಲಯ ವ್ಯಾಪ್ತಿಯಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲ ಗ್ರಂಥಾಲಯಗಳನ್ನು ಮೇಲ್ದರ್ಜೆಗೇರಿಸುವ ಚಿಂತನೆ ನಡೆದಿದೆ ಎಂದು ಜಿ.ಪಂ. ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೀತಿ ಗೆಹ್ಲೋತ್‌ ಹೇಳಿದರು.

ಸಾರ್ವಜನಿಕ ಗ್ರಂಥಾಲಯ ಇಲಾಖೆ ಹಾಗೂ ಜಿಲ್ಲಾ ಕೇಂದ್ರ ಗ್ರಂಥಾಲಯದ ಸಹಭಾಗಿತ್ವದಲ್ಲಿ ಜಿಲ್ಲೆಯ ಗ್ರಾ.ಪಂ. ಗ್ರಂಥಾಲಯಗಳ ಮೇಲ್ವಿಚಾರಕರಿಗಾಗಿ ರಜತಾದ್ರಿ ಜಿ.ಪಂ. ಡಾ| ವಿ.ಎಸ್‌.ಆಚಾರ್ಯ ಸಭಾಂಗಣದಲ್ಲಿ ಜರಗಿದ ಡಿಜಿಟಲ್‌ ಗ್ರಂಥಾಲಯ ತರಬೇತಿ ಕಾರ್ಯಾಗಾರದ ಸಮಾರೋಪ ಕಾರ್ಯಾಗಾರದಲ್ಲಿ ಭಾಗವಹಿಸಿದ ಮೇಲ್ವಿಚಾರಕರಿಗೆ ಪ್ರಮಾಣ ಪತ್ರ ವಿತರಿಸಿ ಮಾತನಾಡಿದರು.

ಗ್ರಂಥಾಲಯಗಳಿಗೆ ಮಕ್ಕಳನ್ನು ಆಕರ್ಷಿಸುವ ನಿಟ್ಟಿನಲ್ಲಿ ಮಕ್ಕಳ ಕಥೆಗಳು, ಸ್ಪರ್ಧಾತ್ಮಕ ಪರೀಕ್ಷಾ ಮಾಹಿತಿ ಪುಸ್ತಕಗಳು ಮೊದಲಾದ ಗ್ರಂಥಗಳನ್ನು ಹೊಂದಿರುವ ಅಗತ್ಯವಿದೆ. ಪ್ರಸ್ತುತ ಗ್ರಂಥಾಲಯಗಳನ್ನು ಡಿಜಿಟಲೀಕರಣಗೊಳಿಸುವ ನಿಟ್ಟಿನಲ್ಲಿ ಕಂಪ್ಯೂಟರ್‌, ಕಟ್ಟಡ ಮೊದಲಾದ ಸೌಕರ್ಯಗಳನ್ನು ಕಲ್ಪಿಸಲು ಪ್ರಯತ್ನಿಸಲಾಗುವುದು ಎಂದು ಅವರು ಹೇಳಿದರು.

ಜಿ.ಪಂ. ಯೋಜನಾಧಿಕಾರಿ ಶ್ರೀನಿವಾಸ ರಾವ್‌ ಮಾತನಾಡಿ, ಸರಕಾರಿ ಶಾಲೆಗಳನ್ನು ಉಳಿಸಲು ಎಲ್‌ಕೆಜಿ, ಯುಕೆಜಿ ತರಗತಿಗಳನ್ನು ಆರಂಭಿಸಿರುವಂತೆಯೇ ಇಲಾಖೆ ಉಳಿಯಬೇಕಾದರೆ ಬದಲಾವಣೆ ತರುವುದು ಅಗತ್ಯವಾಗಿದೆ. ಹೀಗಾಗಿ ಗ್ರಂಥಾಲಯಗಳನ್ನು ಉಳಿಸಿ ಬೆಳೆಸುವ ನಿಟ್ಟಿನಲ್ಲಿ ಪಿಡಿಓಗಳ ಜತೆಗೆ ಚರ್ಚಿಸಲಾಗುವುದು ಎಂದರು.

ಎರಡು ದಿನಗಳ ತರಬೇತಿ ಕಾರ್ಯಕ್ರಮದಲ್ಲಿ ಮಣಿಪಾಲ ವಿವಿಯ ಗ್ರಂಥಾಲಯ ಹಾಗೂ ಮಾಹಿತಿ ತಂತ್ರಜ್ಞಾನ ವಿಭಾಗದ ಅಸೋಸಿಯೇಟ್‌ ಪ್ರೊಫೆಸರ್‌ ಡಾ| ಶಿವಾನಂದ ಭಟ್‌ ಅವರಿಂದ ಸಾರ್ವಜನಿಕ ಗ್ರಂಥಾಲಯ ಓದುಗರು ಮತ್ತು ಮಾಹಿತಿ ಆವಶ್ಯಕತೆಗಳು, ಅಸೋಸಿಯೇಟ್‌ ಪ್ರೊಫೆಸರ್‌ ಮಹಾಬಲೇಶ್ವರ ರಾವ್‌ ಅವರಿಂದ ಸ್ಮಾರ್ಟ್‌ ಲೈಬ್ರೇರಿ, ಕಾಪು ಪ್ರಥಮ ದರ್ಜೆ ಕಾಲೇಜಿನ ಗ್ರಂಥಪಾಲಕ ರಾಜಶೇಖರ ಕಂಬಾರ ಅವರು ಸಾರ್ವಜನಿಕ ಮಾಧ್ಯಮ ಪರಿಕರಗಳು ಮತ್ತು ಗ್ರಂಥಾಲಯದಲ್ಲಿ ಅದರ ಉಪಯೋಗಗಳು ವಿಷಯದ ಬಗ್ಗೆ ಹಾಗೂ ಜಗತ್‌ ವೆಂಚರ್ ಬೆಂಗಳೂರು ಸಂಸ್ಥೆಯ ಕೀರ್ತಿ ಅವರಿಂದ ಇ-ಗ್ರಂಥಾಲಯ ಬಗ್ಗೆ ಉಪನ್ಯಾಸ ನಡೆಯಿತು. ಬ್ರಹ್ಮಾವರ ಕ್ರಾಸ್‌ಲ್ಯಾಂಡ್‌ ಕಾಲೇಜಿನ ಸೋಶಿಯಲ್‌ ಸೈನ್ಸ್‌ ವಿಭಾಗದ ಅಸೋಸಿಯೇಟ್‌ ಡಾ| ರೋಬರ್ಟ್‌ ಕ್ಲೈವ್‌ ಜಿ. ಅವರು ಒತ್ತಡ ನಿರ್ವಹಣೆ ಬಗ್ಗೆ ಮಾಹಿತಿ ನೀಡಿದರು. ಜಿಲ್ಲಾ ಕೇಂದ್ರ ಗ್ರಂಥಾಲಯದ ಮುಖ್ಯ ಗ್ರಂಥಾಲಯಾಧಿಕಾರಿ ನಳಿನಿ ಜಿ.ಐ., ಜಿಲ್ಲಾ ಕೇಂದ್ರ ಗ್ರಂಥಾಲಯದ ಶಕುಂತಳಾ ಕುಂದರ್‌ ಉಪಸ್ಥಿತರಿದ್ದರು.

ಟಾಪ್ ನ್ಯೂಸ್

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

1—ewqewqe

IPL; ಅಗ್ರಸ್ಥಾನಿ ರಾಜಸ್ಥಾನ್‌-ಲಕ್ನೋ: ಬಲಿಷ್ಠರ ಸೆಣಸಾಟ

congress

BJP ಅಭ್ಯರ್ಥಿ ಅವಿರೋಧ ಆಯ್ಕೆ: ಸೂರತ್‌ನ ಕಾಂಗ್ರೆಸ್‌ ಅಭ್ಯರ್ಥಿ ಉಚ್ಚಾಟನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Lok Sabha Election 2024; ಉಡುಪಿ-ಚಿಕ್ಕಮಗಳೂರು: ಅಭ್ಯರ್ಥಿಗಳ ದಿನಚರಿ

Kapu Assembly constituency: ನಕಲಿ ಮತದಾನ;ಆರೋಪ

Kapu Assembly constituency: ನಕಲಿ ಮತದಾನ;ಆರೋಪ

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Road Mishap; ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಕಾರು ಢಿಕ್ಕಿ: ಮಹಿಳೆ ಸಾವು

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

VOTE; ನೋಟಾಗೆ ಬಹುಮತ ಬಂದರೆ ಏನು ಮಾಡಬೇಕು?:ಚುನಾವಣ ಆಯೋಗಕ್ಕೆ ಸುಪ್ರೀಂ ನೋಟಿಸ್‌

1-wqeqewqe

Muslim ಆದ್ಯತೆ ಹೇಳಿಕೆ ನೀಡಿಲ್ಲವೆಂದು ಸಾಬೀತುಪಡಿಸಿ: ‘ಕೈ’ಗೆ ಮೋದಿ ಸವಾಲು

1-qweqewqe

IPL;ಮುಂಬೈ ಇಂಡಿಯನ್ಸ್‌ ಎದುರಾಳಿ: ಸೇಡಿನ ತವಕದಲ್ಲಿ ಡೆಲ್ಲಿ

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

SHriramulu (2)

BJP ಶ್ರೀರಾಮುಲುಗೆ ಗೆಲುವು ಅನಿವಾರ್ಯ; ಕ್ಷೇತ್ರ ವಶಕ್ಕೆ ಕೈ ತವಕ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.