ಉಡುಪಿಗೆ ಮೋದಿ, ಚಿಕ್ಕಮಗಳೂರಿಗೆ ಯೋಗಿ

Team Udayavani, Apr 2, 2019, 6:30 AM IST

ಉಡುಪಿ: ಲೋಕಸಭಾ ಚುನಾವಣೆ ಪ್ರಚಾರಾರ್ಥ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಎ. 13ರಂದು ಉಡುಪಿಗೆ ಆಗಮಿಸುವುದು ಖಚಿತವಾಗಿದೆ. ಚಿಕ್ಕಮಗಳೂರಿಗೆ ಎ. 15ರಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್‌ ಆಗಮಿಸಲಿದ್ದಾರೆ.

ಉಡುಪಿಯಲ್ಲಿ ಎಂಜಿಎಂ ಕಾಲೇಜಿನ ಮೈದಾನದಲ್ಲಿ ಕಾರ್ಯಕ್ರಮ ನಡೆಯಲಿದ್ದು ಸಮಯವಿನ್ನೂ ನಿರ್ಧಾರವಾಗಿಲ್ಲ.

ನರೇಂದ್ರ ಮೋದಿ, ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್‌ ಶಾ, ಕೇಂದ್ರ ಸಚಿವರಾದ ರಾಜನಾಥ್‌ ಸಿಂಗ್‌, ಸ್ಮತಿ ಇರಾನಿ, ಪ್ರಕಾಶ್‌ ಜಾಬ್ಡೇಕರ್‌ ಮೊದಲಾದ ಆರೇಳು ಮಂದಿ ರಾಷ್ಟ್ರೀಯ ಮಟ್ಟದ ಪ್ರಚಾರಕರು ಬಿಜೆಪಿಯಲ್ಲಿದ್ದು ಒಬ್ಬರು ಹೋದ ಕಡೆ ಇನ್ನೊಬ್ಬರು ಹೋಗುವುದಿಲ್ಲ. ಈ ಬಾರಿ ಮೋದಿಯವರ ಕಾರ್ಯಕ್ರಮ ಎ. 7 ಮತ್ತು 13ರಂದು ಖಚಿತವಾಗಿದ್ದು ಎರಡನೆಯ ಹಂತದ ಚುನಾವಣೆ ನಡೆಯುವಲ್ಲಿಗೆ ಮತ್ತೆ ರಾಜ್ಯಕ್ಕೆ ಆಗಮಿಸುವ ಸಾಧ್ಯತೆ ಇದೆ. ಎರಡು ಮೂರು ಲೋಕಸಭಾ ಕ್ಷೇತ್ರಗಳ ವ್ಯಾಪ್ತಿಯಲ್ಲಿ ಮೋದಿ ಅವರ ಕಾರ್ಯಕ್ರಮ ನಡೆಯಲಿದ್ದು ಉಡುಪಿಯ ಕಾರ್ಯಕ್ರಮ ಉಡುಪಿ ಚಿಕ್ಕಮಗಳೂರು, ದ.ಕ., ಶಿವಮೊಗ್ಗ, ಉ.ಕ. ಜಿಲ್ಲೆಯ ಆಂಶಿಕ ಭಾಗವನ್ನು ಒಳಗೊಂಡಿರುತ್ತದೆ.

ಶ್ರೀ ಅಷ್ಠ ಲಕ್ಷ್ಮೀ ಜೋತಿಷ್ಯ ಮಂದಿರ,
ಉದ್ಯೋಗ, ಮದುವೆ ವಿಳಂಬ, ಸತಿ-ಪತಿ ಕಲಹ, ಶತ್ರುಪೀಡೆ, ಅತ್ತೆ-ಸೊಸೆ ಕಲಹ, ವಶೀಕರಣ, ವ್ಯವಹಾರದಲ್ಲಿ ನಷ್ಟ, ಇನ್ನೂ ನಿಮ್ಮಸಮಸ್ಯೆ ಯಾವುದೇ ಇರಲಿ, ಎಷ್ಟೇ ಕಠಿಣವಾಗಿರಲಿ ಶಾಶ್ವತ ಪರಿಹಾರ ಶತಃ ಶಿದ್ದ , ನಿಮ್ಮ ಯಾವುದೇ ಇಷ್ಟಾರ್ಥ ಕಾರ್ಯಗಳಿದ್ದರೂ ಕೇವಲ 5 ದಿನಗಳಲ್ಲಿ ನೇರವೆರಿಸಿ ಕೋಡುತ್ತಾರೇ. ಇಂದೇ ಭೇಟಿ ನೀಡಿ.
ಶ್ರೀ ಶ್ರೀ ಬಿ ಹೆಚ್ ಆಚಾರ್ಯ ಗೂರುಜೀ
ಜಯನಗರ ಬೆಂಗಳೂರು, ಮೋ- 8884889444

ಈ ವಿಭಾಗದಿಂದ ಇನ್ನಷ್ಟು

ಹೊಸ ಸೇರ್ಪಡೆ