30 ವರ್ಷಗಳಿಂದ ಅಭಿವೃದ್ಧಿ ಕಾಣದ ಮಣ್ಣಿನ ರಸ್ತೆ

Team Udayavani, Dec 4, 2019, 4:32 AM IST

rt-31

ಗೋಳಿಯಂಗಡಿ: “ಈ ರಸ್ತೆಯಾಗಿ ಸರಿ ಸುಮಾರು 30 ವರ್ಷಗಳಾಗಿವೆ. ಈಗಲೂ ಮಣ್ಣಿನ ರಸ್ತೆಯಾಗಿಯೇ ಇದೆ. ಇಷ್ಟು ವರ್ಷಗಳು ಕಾದದ್ದು ಸಾಕು. ಇನ್ನು ಈ ರಸ್ತೆ ಡಾಮರೀಕರಣವಾಗುವವರೆಗೆ ನಾವು ಯಾರೂ ಯಾವುದೇ ಚುನಾವಣೆಯಲ್ಲಿ ಮತದಾನ ಹಾಕದೇ ಬಹಿಷ್ಕರಿಸುತ್ತೇವೆ’.
ಇದು ಹೆಂಗವಳ್ಳಿ ಗ್ರಾ.ಪಂ. ವ್ಯಾಪ್ತಿಯ ಕಂಕಂಗೋಳಿ ಹಾಗೂ ಸುರ್ಗಿಜೆಡ್ಡು ಗ್ರಾಮಸ್ಥರು ತಮ್ಮ ಹದಗೆಟ್ಟ ರಸ್ತೆಯ ದುಃಸ್ಥಿತಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ ರೀತಿ. ಈ ರಸ್ತೆಯ ಡಾಮರೀಕರಣ ಆಗುವವರೆಗೆ ನಾವು ಯಾವುದೇ ಚುನಾವಣೆಯಲ್ಲಿ ಪಾಲ್ಗೊಳ್ಳುವುದಿಲ್ಲ. ಇಲ್ಲಿನ ಎಲ್ಲರೂ ಕೂಡ ಎಲ್ಲ ಮತದಾನವನ್ನು ಬಹಿಷ್ಕರಿಸುತ್ತೇವೆ ಎನ್ನುವುದಾಗಿ ಎಚ್ಚರಿಕೆ ಸಂದೇಶ ಸಾರುವ ಬ್ಯಾನರ್‌ ಅನ್ನು ಕೂಡ ಅಳವಡಿಸಿದ್ದಾರೆ.

ಯಾವ ರಸ್ತೆ?
ಹೆಂಗವಳ್ಳಿ ಗ್ರಾ.ಪಂ. ವ್ಯಾಪ್ತಿಯ ಯಳಂತೂರು ಸಮೀಪದ ಸೇತುವೆಯಿಂದ ಸ್ವಲ್ಪ ಮುಂದಕ್ಕೆ ತೆರಳಿದಾಗ ಸಿಗುವ ಕಂಕಂಗೋಳಿ ಳಿ, ಸುರ್ಗಿಜೆಡ್ಡುವಿಗೆ ಸಂಚರಿಸುವ ಸುಮಾರು 3 ಕಿ.ಮೀ. ಉದ್ದದ ರಸ್ತೆ ಇದಾಗಿದೆ. ರಸ್ತೆ ನಿರ್ಮಾಣಗೊಂಡು 30 ವರ್ಷಗಳಾಗಿದ್ದು, ಇನ್ನೂ ಕೂಡ ಈ ರಸ್ತೆಗೆ ಡಾಮರು ಭಾಗ್ಯ ಒದಗಿ ಬಂದಿಲ್ಲ.

100ಕ್ಕೂ ಮಿಕ್ಕಿ ಮನೆಗಳು
ಹೆಂಗವಳ್ಳಿ ಗ್ರಾಮದಲ್ಲಿ ಬರುವ ಈ ಕಂಕಂಗೋಳಿ ಳಿ ಹಾಗೂ ಸುರ್ಗಿಜೆಡ್ಡುವಿನಲ್ಲಿ ಅಂದಾಜು 100 ಕ್ಕೂ ಮಿಕ್ಕಿ ಮನೆಗಳಿದ್ದು, ಸಾವಿರಾರು ಮಂದಿ ಇದೇ ಮಾರ್ಗವನ್ನು ಆಶ್ರಯಿಸಿದ್ದಾರೆ. ಇವರಿಗೆ ಗೋಳಿಯಂಗಡಿ ಪೇಟೆ, ಹೆಂಗವಳ್ಳಿ ಗ್ರಾ.ಪಂ. ಕಚೇರಿ, ಹಾಲಾಡಿ, ಕುಂದಾಪುರಕ್ಕೆ ತೆರಳಲು ಇದೇ ರಸ್ತೆಯನ್ನು ಅವಲಂಬಿಸಿದ್ದಾರೆ.

ಇಲ್ಲಿನ ಗ್ರಾಮ ಪಂಚಾಯತ್‌ನವರು ವರ್ಷಕ್ಕೊಂದು ಬಾರಿ ರಸ್ತೆಯ ಹೊಂಡಗಳಿಗೆ ಮಣ್ಣು ಹಾಕಿ, ನಮ್ಮ ಕಣ್ಣಿಗೆ ಮಣ್ಣೆರಚಿ ಹೋಗುತ್ತಾರೆ. ಆದರೆ ಮತ್ತೆ ಈ ಕಡೆ ಗಮನವೇ ಕೊಡುವುದಿಲ್ಲ. ಜನಪ್ರತಿನಿಧಿಗಳು ಚುನಾವಣೆ ಸಂದರ್ಭ ಬಂದಾಗ ಮಾಡಿಕೊಡುತ್ತೇವೆ ಎಂದು ಹೇಳುತ್ತಾರೆ. ಮತ್ತೆ ಈ ಕಡೆ ಬರುವುದೇ ಇಲ್ಲ ಎನ್ನುವುದಾಗಿ ಗ್ರಾಮಸ್ಥರು ಆರೋಪಿಸಿದ್ದಾರೆ.

ಬ್ಯಾನರ್‌ ಹರಿದ ಕಿಡಿಗೇಡಿಗಳು
ರಸ್ತೆಯ ಅವ್ಯವಸ್ಥೆಯನ್ನು ಖಂಡಿಸಿ, ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳ ಕಾರ್ಯವೈಖರಿಯನ್ನು ವಿರೋಧಿಸಿ, ಈ ರಸ್ತೆ ಅಭಿವೃದ್ಧಿಯಾಗುವವರೆಗೆ ನಾವು ಯಾವ ಚುನಾವಣೆ ಬಂದರೂ ಮತ ಹಾಕುವುದಿಲ್ಲ ಎನ್ನುವ ಎಚ್ಚರಿಕೆ ಸಂದೇಶ ಸಾರುವ ಬ್ಯಾನರ್‌ವೊಂದನ್ನು ರವಿವಾರ ಇಲ್ಲಿನ ಗ್ರಾಮಸ್ಥರು ಹಾಕಿದ್ದರು. ಆದರೆ ಸೋಮವಾರ ಬೆಳಗ್ಗೆಯಷ್ಟರಲ್ಲಿ ಈ ಬ್ಯಾನರನ್ನು ಯಾರೋ ಕಿಡಿಗೇಡಿಗಳು ಹರಿಹಾಕಿದು ವಿಕೃತಿ ಮೆರೆದಿದ್ದಾರೆ.

ಹೊತ್ತುಕೊಂಡೇ ಹೋಗಬೇಕು
ಈ ರಸ್ತೆಯ ದುಃಸ್ಥಿತಿಯಿಂದಾಗಿ ಯಾವ ವಾಹನದವರು ಕೂಡ ಇಲ್ಲಿಗೆ ಬಾಡಿಗೆಗೆ ಬರುವುದಿಲ್ಲ. ಯಾರಿಗಾದರೂ ಅನಾರೋಗ್ಯ ಉಂಟಾದರೆ ಅವರನ್ನು ಸುಮಾರು 3 ಕಿ.ಮೀ. ವರೆಗೆ ಹೊತ್ತುಕೊಂಡೇ ಹೋಗಬೇಕು. ಮಳೆಗಾಲದಲ್ಲಂತೂ ಭಾರೀ ಕಷ್ಟವಾಗುತ್ತದೆ. ಈ ಬಗ್ಗೆ ಶಾಸಕರಿಗೆ 3-4 ಬಾರಿ ಮನವಿ ಮಾಡಿದ್ದೇವೆ. ಇನ್ನು ಹೀಗೆ ಆದಲ್ಲಿ ನಾವು ಮತದಾನ ಬಹಿಷ್ಕರಿಸುತ್ತೇವೆ.
– ರಾಜೇಶ್‌ ಸುರ್ಗಿಜೆಡ್ಡು, ಸ್ಥಳೀಯರು

ಮೀಸಲು ಅರಣ್ಯ: ಸರಕಾರಕ್ಕೆ ಪತ್ರ
ಈ ರಸ್ತೆಯ ಅಭಿವೃದ್ಧಿಗೆ ಸಾಕಷ್ಟು ಬಾರಿ ಪ್ರಯತ್ನಗಳನ್ನು ಮಾಡಲಾಗಿದೆ. ಮೀಸಲು ಅರಣ್ಯ ಪ್ರದೇಶದಲ್ಲಿ ಬರುವುದರಿಂದ ಡಾಮರೀಕರಣ ಕಷ್ಟ. ಈ ಕಾರಣದಿಂದಾಗಿಯೇ ಕಳೆದ ಬಾರಿ 5 ಕೋ.ರೂ. ಮಂಜೂರಾಗಿತ್ತು. ಆದರೆ ಈ ಸಮಸ್ಯೆಯಿಂದ ತಡೆ ಹಿಡಿಯಲಾಗಿದೆ. ಈ ಬಗ್ಗೆ ಹಿಂದಿನ ಜಿಲ್ಲಾಧಿಕಾರಿಗಳನ್ನು ಭೇಟಿಯಾಗಿ ಸಮಸ್ಯೆಯನ್ನು ತಿಳಿಸಲಾಗಿದೆ. ಅವರು ಸರಕಾರಕ್ಕೆ ಪತ್ರ ಬರೆಯುವುದಾಗಿ ತಿಳಿಸಿದ್ದಾರೆ. ಪಂಚಾಯತ್‌ನಿಂದಲೂ ಸರಕಾರಕ್ಕೆ ಪತ್ರ ಬರೆಯಲು ತಿಳಿಸಿದ್ದೇನೆ. ಸರಕಾರದ ಮಧ್ಯಪ್ರವೇಶದ ನಿರೀಕ್ಷೆಯಲ್ಲಿದ್ದೇವೆ.
– ಸುಪ್ರೀತಾ ಉದಯ ಕುಲಾಲ್‌, ಜಿ.ಪಂ. ಸದಸ್ಯರು

ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ತಮಿಳುನಾಡು ಬಿಜೆಪಿ ಅಧ್ಯಕ್ಷ ಅಣ್ಣಾಮಲೈ

Puttur; ಚೌಟರನ್ನು ದಾಖಲೆಯ ಅಂತರದಿಂದ ಗೆಲ್ಲಿಸಿ: ಅಣ್ಣಾಮಲೈ

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

Lok Sabha Election ಕಾಂಗ್ರೆಸ್‌ಗೆ 20ಕ್ಕೂ ಅಧಿಕ ಸ್ಥಾನ: ದಿನೇಶ್‌

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

Kota: ಬೈಕ್‌ ಅಪಘಾತ; ಯುವಕ ಸಾವು

Kota: ಬೈಕ್‌ ಅಪಘಾತ; ಯುವಕ ಸಾವು

12

Theft; ಕೊಲ್ಲೂರು: ಮಹಿಳೆಯ ಚಿನ್ನ, ನಗದು ಕಳವು

11-udyavara

Sand Mining; ಉದ್ಯಾವರ: ಚುನಾವಣ ಚೆಕ್‌ಪೋಸ್ಟ್‌ ಬಳಿ ಅಕ್ರಮ ಮರಳು ಸಾಗಾಟ ಪತ್ತೆ

10-shirva

ಮೂಡುಬೆಳ್ಳೆ ಶ್ರೀಮಹಾಲಿಂಗೇಶ್ವರ, ಶ್ರೀ ಮಹಾಗಣಪತಿ, ಶ್ರೀ ಸೂರ್ಯನಾರಾಯಣ ದೇಗುಲ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Congress ಗೆದ್ದರೆ ದಲಿತರ ಮೀಸಲು ಮುಸ್ಲಿಂ ಪಾಲು: ಮೋದಿ ಮತ್ತೆ ವಾಗ್ಬಾಣ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Dakshina Kannada: 5 ಸಿಎಪಿಎಫ್‌/ಕೆಎಸ್‌ಆರ್‌ಪಿ ತುಕಡಿ, 3,100 ಸಿಬಂದಿ ನಿಯೋಜನೆ

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Election: ಮಂಗಳೂರು-ಶೋರ್ನೂರು-ಬೆಂಗಳೂರು ಮಧ್ಯೆ ವಿಶೇಷ ರೈಲು

Udupi-Chikmagalur Lok Sabha constituency: ಯುವ ಮತದಾರರ ಚುನಾವಣೆ ಉತ್ಸಾಹ

Udupi-Chikmagalur: ಯುವ ಮತದಾರರ ಚುನಾವಣೆ ಉತ್ಸಾಹ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

ಪರಿಹಾರ ತಾರತಮ್ಯ ಕಾಂಗ್ರೆಸ್‌ನ ನರೇಟಿವ್‌: ಅಣ್ಣಾಮಲೈ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.